ಶಿರೂರು : ಈಜಲು ತೆರಳಿದ್ದ ಇಬ್ಬರು ವಿದ್ಯಾರ್ಥಿಗಳು ಕೆರೆಯಲ್ಲಿ ಮುಳುಗಿ ಮೃತಪಟ್ಟ ಘಟನೆ ಬೈಂದೂರಿನಲ್ಲಿ ನಡೆದಿದೆ. ಬೈಂದೂರು ಯೋಜನಾನಗರದ ನಾಗೇಂದ್ರ (13) ಹಾಗೂ ರೈಲ್ವೆ ನಿಲ್ದಾಣದ ಬಳಿ ವಾಸಿಸುವ ಶಾನ್ ಮುಹಮ್ಮದ್ ಶಫಾನ್ (13) ಮೃತ ವಿದ್ಯಾರ್ಥಿಗಳು. ಪರೀಕ್ಷೆ ಮುಗಿಸಿ ಮನೆಯಲ್ಲಿ ಊಟ ಮಾಡಿ ಇಬ್ಬರು ಬೈಂದೂರು ನಗರ ಸಮೀಪದ ಕೆರೆಕಟ್ಟೆ ಕೆರೆಯಲ್ಲಿ ಈಜಲು
ಕರ್ನಾಟಕದ ಕಲ್ಬುರ್ಗಿಯಲ್ಲಿ 2024 ರ ಸೆಪ್ಟೆಂಬರ್ 8 ರಿಂದ 12 ರವರೆಗೆ ನಡೆದ ಸಿಬಿಎಸ್ಇ ದಕ್ಷಿಣ ವಲಯ ಈಜು ಚಾಂಪಿಯನ್‌ಶಿಪ್ ಸಂತ ಅಲೋಶಿಯಸ್ ಗೊನ್ಝಾಗ ಶಾಲೆಯ ವಿದ್ಯಾರ್ಥಿಗಳು ಅದ್ಭುತ ಪ್ರದರ್ಶನ ನೀಡಿದ್ದಾರೆ.17 ವರ್ಷದೊಳಗಿನ ಬಾಲಕರ ವಿಭಾಗದಲ್ಲಿ, 10ನೇ ತರಗತಿಯ ಸಾತ್ವಿಕ್ ನಾಯಕ್ ಸುಜಿರ್ 50 ಮೀ ಮತ್ತು 100 ಮೀ ಫ್ರೀಸ್ಟೈಲ್ ನಲ್ಲಿ ಬೆಳ್ಳಿ ಪದಕ, 400 ಮೀ ಫ್ರೀಸ್ಟೈಲ್‌ನಲ್ಲಿ ಮತ್ತು 50 ಮೀ. ಬ್ರೆಸ್ಟ್‌ಸ್ರೋಕ್ ಸ್ಪರ್ಧೆಗಳಲ್ಲಿ ಕಂಚಿನ ಪದಕಗಳನ್ನು ಪಡೆದರು.
ದೆಹಲಿಯಲ್ಲಿ ನಡೆದ 67ನೇ ಸ್ಕೂಲ್ ಗೇಮ್ಸ್ ಸ್ವಿಮ್ಮಿಂಗ್ ಫೆಡರೇಷನ್ ಆಫ್ ಇಂಡಿಯಾ ವತಿಯಿಂದ ನಡೆದ ರಾಷ್ಟ್ರೀಯ ಈಜು ಚಾಂಪಿಯನ್‌ಶಿಪ್-2023-24ರ ಈಜು ಸ್ಪರ್ಧೆಯಲ್ಲಿ ಮಂಗಳಾ ಈಜು ಕ್ಲಬ್‌ನ ಚಿಂತನ್ ಎಸ್. ಶೆಟ್ಟಿ ಅವರು, 1 ಚಿನ್ನ ಹಾಗೂ 4 ಬೆಳ್ಳಿ ಪದಕಗಳನ್ನು ಮುಡಿಗೇರಿಸಿಕೊಂಡಿದ್ದಾರೆ. ಜನವರಿ 3ರಿಂದ 9ರ ವರೆಗೆ ದೆಹಲಿಯ ಡಾ. ಶ್ಯಾಮ್ ಪ್ರಸಾದ್ ಮುಖರ್ಜಿ ಈಜು ಸಂಕೀರ್ಣದಲ್ಲಿ ನಡೆದ ಸ್ಕೂಲ್ ಗೇಮ್ಸ್ ಸ್ವಿಮ್ಮಿಂಗ್ ಫೆಡರೇಶನ್ ಆಫ್ ಇಂಡಿಯಾ ರಾಷ್ಟ್ರೀಯ ಈಜು
ಮಂಗಳೂರಿನ ಈಜುಪಟುವೊಬ್ಬರು ಇದೀಗ ತನ್ನ ಹೆಸರನ್ನು ಇಂಡಿಯಾ ಬುಕ್ ಆಫ್ ರೆಕಾರ್ಡ್‍ನಲ್ಲಿ ದಾಖಲಿಸುವ ಮೂಲಕ ಹೆಗ್ಗಳಿಕೆ ಮೂಡಿಸಿದ್ದಾರೆ. ಇವರೇ ಕೆ. ಚಂದ್ರಶೇಖರ ರೈ ಸೂರಿಕುಮೇರು. ತನ್ನ 49ರ ಹರೆಯದಲ್ಲಿ ಸೆಪ್ಟೆಂಬರ್ 15ರಂದು ತನ್ನ ಕೌಶಲ್ಯ ತೋರಿದ್ದಾರೆ. ಅವರು ನಗರದ ಪ್ರೆಸ್‍ಕ್ಲಬ್‍ನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದರು. ಮುಂಭಾಗಕ್ಕೆ ಒಂದೇ ಉಸಿರಿನಲ್ಲಿ 29 ಮುಂಭಾಗದ ತಿರುವು ಮಾಡಿದ್ದೇನೆ. ಇದನ್ನು ಇಂಡಿಯನ್ ಬುಕ್ ಆಫ್
ಕುಂದಾಪುರ: ಮೊವಾಡಿ ಸೇತುವೆ ಬಳಿ ನದಿಯಲ್ಲಿ ಸ್ನೇಹಿತನೊಂದಿಗೆ ಈಜುತ್ತಿದ್ದ ಸಂದರ್ಭ ನೀರಿನ ಸೆಳೆತಕ್ಕೆ ಸಿಲುಕಿ ನೀರುಪಾಲಾದ ಯುವಕನ ಮೃತದೇಹ ಎರಡು ದಿನಗಳ ಬಳಿಕ ಬಂಟ್ವಾಡಿ ಸೇತುವೆ ಬಳಿಯ ಸೌಪರ್ಣಿಕ ನದಿಯಲ್ಲಿ ಪತ್ತೆಯಾಗಿದೆ. ಇಲ್ಲಿನ ತ್ರಾಸಿ ಸಮೀಪದ ಹೋಲಿಕ್ರಾಸ್ ನಿವಾಸಿ ಮಹೇಂದ್ರ (24) ಮೃತ ಯುವಕ. ಭಾನುವಾರ ಸಂಜೆ ಮೊವಾಡಿಯ ಸೌಪರ್ಣಿಕಾ ನದಿ ತೀರಕ್ಕೆ ಮಹೇಂದ್ರ, ಆಶಿಕ್ ಹಾಗೂ ಶರತ್ ತೆರಳಿದ್ದರು. ಮಹೇಂದ್ರ ಹಾಗೂ ಆಶಿಕ್ ನೀರಿಗೆ ಇಳಿದಿದ್ದು ಇನ್ನೋರ್ವ