Home Posts tagged #Temple

ಉಪ್ಪುಂದ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಶರನ್ನವರಾತ್ರಿ ಮಹೋತ್ಸವದ ಸಂಭ್ರಮ

ಬೈಂದೂರು:ಬೈಂದೂರು ತಾಲೂಕಿನ ಪ್ರಸಿದ್ಧ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಉಪ್ಪುಂದದಲ್ಲಿ ಶರನ್ನವರಾತ್ರಿ ಮಹೋತ್ಸವ ಕಾರ್ಯಕ್ರಮ ಅಕ್ಟೋಬರ್ 03 ರಿಂದ ಆರಂಭಗೊಂಡು ಅಕ್ಟೋಬರ್ 12 ರ ತನಕ ನಾನಾ ಧಾರ್ಮಿಕ ವಿಧಿವಿಧಾನಗಳೊಂದಿಗೆ ವಿಜೃಂಭಣೆಯಿಂದ ನಡೆಯಲಿದೆ. ಗ್ರಾಮ ದೇವತೆಯಾದ ಶ್ರೀ ಉಪ್ಪುಂದ ದುರ್ಗಾಪರಮೇಶ್ವರಿ ಅಮ್ಮನವರ ದೇವಸ್ಥಾನದಲ್ಲಿ ನವರಾತ್ರಿ ಉತ್ಸವದ ಅಂಗವಾಗಿ

ಪುತ್ತೂರು: ಶ್ರೀ ಮಹಾಲಿಂಗೇಶ್ವರ ದೇವಳದಲ್ಲಿ ಜಾತ್ರೋತ್ಸವದ ಪ್ರಯುಕ್ತ ಧ್ವಜಾರೋಹಣ

ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹತೋಭಾರ ಮಹಾಲಿಂಗೇಶ್ವರ ದೇವರ ವರ್ಷಾವಧಿ ಜಾತ್ರೋತ್ಸವಕ್ಕೆ ಇಂದು ಧ್ವಜಾರೋಹಣದ ಮೂಲಕ ಚಾಲನೆ ನೀಡಲಾಯಿತು. ವೃಷಭ ಲಗ್ನ ಮುಹೂರ್ತದಲ್ಲಿ ಭಕ್ತಾಧಿಗಳ ಜಯಘೋಷದೊಂದಿಗೆ ದೇವಸ್ಥಾನದ ಪ್ರಧಾನ ಅರ್ಚಕರಾದ ವಿಎಸ್ ಭಟ್ ಹಾಗೂ ವಸಂತ ಕೆದಿಲಾಯ ಧ್ವಜಾರೋಹಣ ನೆರವೇರಿಸಿದ್ರು. ಈ ಸಂದರ್ಭದಲ್ಲಿ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ, ವ್ಯವಸ್ಥಾಪನ ಸಮಿತಿಯ ಅಧಯಕ್ಷರು ಸದಸ್ಯರು ಸೇರಿದಂತೆ ಭಕ್ತಾಧಿಗಳು ಪಾಲ್ಗೊಂಡಿದ್ದರು.

ಬೈಂದೂರಿನ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ: ಅಷ್ಠಬಂಧ ಬ್ರಹ್ಮಕಲಶಾಭಿಷೇಕ

ಇತಿಹಾಸ ಪ್ರಸಿದ್ಧ ಬೈಂದೂರು ತಾಲೂಕಿನ ಶ್ರೀ ದುರ್ಗಾಪರಮೇಶ್ವರಿ ಶ್ರೀದೇವಿಯ ಸಾನಿಧ್ಯದಲ್ಲಿಅಷ್ಟಬಂಧ ಬ್ರಹ್ಮಕಲಶಾಭಿಷೇಕ ಹಾಗೂ ಶ್ರೀಮನ್ಮಹಾ ರಥೋತ್ಸವವು ವಿಜೃಂಭಣೆಯಿಂದ ನಡೆಯಿತುತಂತ್ರಿಗಳಾದ ಮಂಜುನಾಥ ಅಡಿಗ ಹಾಗೂ ಪ್ರಧಾನ ಅರ್ಚಕರಾದ ಪ್ರಕಾಶ್ ಐತಾಳ್ ಇವರ ನೇತೃತ್ವದಲ್ಲಿ ಪ್ರತಿದಿನ ತಂತ್ರಿಗಳಾದ ಧಾರ್ಮಿಕ ವಿಧಿ ವಿಧಾನಗಳು ದೇವಿಯ ಸಾನಿಧ್ಯದಲ್ಲಿ ಸಂಪನ್ನಗೊಂಡಿದೆ. ಅಷ್ಟಬಂದ ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷರಾಗಿರುವ ಬಿ.ಎಸ್ .ಸುರೇಶ್ ಶೆಟ್ಟಿ.ಮಾತನಾಡಿ

ಮಾಣಿಲ ಕುಕ್ಕಾಜೆಯ ಶ್ರೀ ಕಾಳಿಕಾಂಬ ಆಂಜನೇಯ ದೇವಸ್ಥಾನ:ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಅಂಗವಾಗಿ ಹಸಿರು ಹೊರೆ ಕಾಣಿಕೆ

ವಿಟ್ಲ: ಮಾಣಿಲ ಕುಕ್ಕಾಜೆ ಶ್ರೀ ಕಾಳಿಕಾಂಬ ಆಂಜನೇಯ ದೇವಸ್ಥಾನದ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಅಂಗವಾಗಿ ಹಸಿರು ಹೊರೆ ಕಾಣಿಕೆ ಭಾನುವಾರ ನಡೆಯಿತು.ಭಾನುವಾರ ಬೆಳಿಗ್ಗೆ 48 ನಾರಿಕೇಳ ಮಹಾಗಣಪತಿ ಹೋಮ ನಡೆಯಿತು. ಮಧ್ಯಾಹ್ನ ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಹಸಿರುವಾಣಿ ಹೊರೆ ಕಾಣಿಕೆ ಮೆರವಣಿಗೆಯನ್ನು ವಿಟ್ಲ ಅರಮನೆಯ ಅನುವಂಶಿಕ ಆಡಳಿತದಾರ ಬಂಗಾರು ಅರಸರು ಉದ್ಘಾಟಿಸಿದರು. ಹಸಿರುವಾಣಿ ಹೊರೆ ಕಾಣಿಕೆ ಮೆರವಣಿಗೆ ವಿಟ್ಲದಿಂದ ಕುದ್ದುಪದವು-

ಶ್ರೀ ಸುಬ್ರಾಯ ವಿಷ್ಣುಮೂರ್ತಿ ನಾವೂರೇಶ್ವರ ದೇವಸ್ಥಾನ ಶ್ರೀ ವ್ಯಾಘ್ರ ಚಾಮುಂಡಿ ದೈವದ ದೈವಸ್ಥಾನದ ಶಿಲಾನ್ಯಾಸ

ಬಂಟ್ವಾಳ: ನಾವೂರು ಶ್ರೀ ಸುಬ್ರಾಯ ವಿಷ್ಣುಮೂರ್ತಿ ನಾವೂರೇಶ್ವರ ದೇವಸ್ಥಾನದ ಹೊರಾಂಗಣದ ನೈಋತ್ಯ ದಿಕ್ಕಿನಲ್ಲಿ ನೂತನವಾಗಿ ನಿರ್ಮಿಸಲ್ಪಡುವ ಶ್ರೀ ವ್ಯಾಘ್ರ ಚಾಮುಂಡಿ ದೈವದ ದೈವಸ್ಥಾನದ ಶಿಲಾನ್ಯಾಸ ಕಾರ್ಯಕ್ರಮ ಕ್ಷೇತ್ರದಲ್ಲಿ ನಡೆಯಿತು. ಬೆಳಗ್ಗಿನ 10.15 ರ ಧನುರ್ಲಗ್ನ ಸುಮುಹೂರ್ತದಲ್ಲಿ ತಂತ್ರಿಗಳಾದ ಶ್ರೀ ಪಾದ ಪಾಂಗಣ್ಣಾಯ ಅವರು ಧಾರ್ಮಿಕ ವಿಧಿ ವಿಧಾನಗಳನ್ನು ನೆರವೇರಿಸಿ ಶಿಲಾನ್ಯಾಸ ನೆರೆವೇರಿಸಿದರು. ಈ ಸಂದರ್ಭ ದೇವಸ್ಥಾನದ ಅರ್ಚಕರಾದ ವೆಂಕಟದಾಸ್ ಭಟ್,

ದೇವಸ್ಥಾನಗಳ ತೆರವು ವಿಚಾರ: ಸರಕಾರ ಈ ಬಗ್ಗೆ ವಿಮರ್ಶೆ ಮಾಡಬೇಕಿದೆ: ದಯಾನಂದ ಕತ್ತಲ್ ಸಾರ್

ರಾಜ್ಯದಲ್ಲಿ ದೇವಸ್ಥಾನಗಳ ತೆರವು ಕಾರ್ಯಾಚರಣೆ ಸರಿಯಲ್ಲ. ಶತಮಾನಗಳ ಹಿಂದೆ ಆರಾಧಿಸಲ್ಪಟ್ಟ ದೇವಸ್ಥಾನಗಳನ್ನು ಕೆಡವುದು ಸರಿಯಲ್ಲ. ಸರ್ಕಾರ ಈ ಬಗ್ಗೆ ಮತ್ತೆ ವಿಮರ್ಶೆ ಮಾಡಬೇಕಿದೆ ಎಂದು ಕರ್ನಾಟಕ ರಾಜ್ಯ ತುಳು ಅಕಾಡೆಮಿಯ ಅಧ್ಯಕ್ಷರಾದ ದಯಾನಂದ ಕತ್ತಲ್ ಸಾರ್ ಹೇಳಿದರು. ಅವರು ಪುತ್ತೂರಿನಲ್ಲಿ ಮಾಧ್ಯಮದೊಂದಿಗೆ ಮಾತನಾಡಿದರು. ಸುಪ್ರೀಂಕೋರ್ಟ್ ಆದೇಶ ಪಾಲನೆ ಮಾಡುವುದು ಎಲ್ಲರ ಕರ್ತವ್ಯ. ಸರಕಾರ ಈ ಬಗ್ಗೆ ನ್ಯಾಯಾಲಯಕ್ಕೆ ಮನವರಿಕೆ ಮಾಡುವ ಕೆಲಸ ಮಾಡಬೇಕು.

ಕೋವಿಡ್ ನಿಯಮ ಪಾಲಿಸಿಕೊಂಡು ದೇವರ ದರ್ಶನ ಪಡೆದ ಭಕ್ತಾದಿಗಳು

ಇಂದಿನಿಂದ ರಾಜ್ಯದಾದ್ಯಂತ ಬಹುತೇಕ ಲಾಕ್‌ಡೌನ್ ಸಡಿಲಿಕೆಯಾಗಿದೆ. ಎರಡು ತಿಂಗಳುಗಳಿಂದ ಭಕ್ತಾದಿಗಳಿಗೆ ಮುಚಿದ್ದ ದೇವಸ್ಥಾನಗಳು ತೆರೆದಿದ್ದು. ಕರಾವಳಿಯಲ್ಲಿ ವಿವಿಧ ದೇವಸ್ಥಾನಗಳಿಗೆ ಭಕ್ತ ಸಾಗರ ಹರಿದಿ ಬಂದಿದ್ದು. ಭಕ್ತರು ದೇವರ ದರ್ಶನ ಪಡೆದು ಪುನೀತರಾದರು. ಸಮಾರು ಎರಡು ತಿಂಗಳುಗಳ ಕಾಲ ಲಾಕ್‌ಡೌನ್‌ನಿಂದಾಗಿದೆ ಭಕ್ತಾದಿಗಳಿಗೆ ಮುಚ್ಚಿದ್ದ ದೇವಸ್ಥಾನಗಳು ಇಂದು ತರೆದಿವೆ. ಸರ್ಕಾರದ ಆದೇಶದಂತೆ ದೇವರ ದರ್ಶನಕ್ಕೆ ಮಾತ್ರ ಅವಕಾಶವಿದ್ದು ಯಾವುದೇ ಸೇವೆಗಳಿಗೆ