Home Posts tagged #thokkottu

ದೇರಳಕಟ್ಟೆಯಲ್ಲಿ ಗೂಡ್ಸ್ ವಾಹನ ಪಲ್ಟಿ: ಚಾಲಕ ಅಪಾಯದಿಂದ ಪಾರು

ದೇರಳಕಟ್ಟೆ: ಗೂಡ್ಸ್ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆಯಲ್ಲೇ ಪಲ್ಟಿಯಾಗಿರುವ ಘಟನೆ ಕುತ್ತಾರು ನಿತ್ಯಾನಂದನಗರ ಬಳಿ ಇಂದು ನಡೆದಿದೆ. ದೇರಳಕಟ್ಟೆ ಕಡೆಯಿಂದ ತೊಕ್ಕೊಟ್ಟು ಕಡೆಗೆ ಹಣ್ಣುಹಂಪಲುಗಳನ್ನು ಸಾಗಾಟ ನಡೆಸುತ್ತಿದ್ದ ಟೆಂಪೋ ಚಾಲಕನ ನಿಯಂತ್ರಣ ತಪ್ಪಿ ರಸ್ತೆಗೆ ಉರಳಿದೆ. ಟೆಂಪೋದಲ್ಲಿ ಚಾಲಕ ಮಾತ್ರ ಇದ್ದು, ಯಾವುದೇ ಗಾಯವಿಲ್ಲದೆ ಪಾರಾಗಿದ್ದಾನೆ.

ಬೀದಿ ಬದಿ ವ್ಯಾಪಾರಸ್ಥರ ಸಂಘ ರಚನೆ

ದ.ಕ ಜಿಲ್ಲಾ ಬೀದಿಬದಿ ವ್ಯಾಪಾರಸ್ಥರ ಶ್ರೇಯೋಭಿವೃದ್ಧಿ ಸಂಘದ ಉಳ್ಳಾಲ ವಲಯ ಸಮಿತಿ ರಚನಾ ಸಭೆಯು ಇಂದು ತೊಕ್ಕೊಟ್ಟು ಕ್ಲಿಕ್ ಸಭಾಂಗಣದಲ್ಲಿ ಜರಗಿತು. ಸಂಘದ ಜಿಲ್ಲಾ ಸಮಿತಿಯ ಗೌರವಾಧ್ಯಕ್ಷ ಬಿ.ಕೆ ಇಮ್ತಿಯಾಜ್  ಕಾರ್ಯಕ್ರಮ ಉದ್ಘಾಟಿಸಿ ಮಾತನಾಡುತ್ತಾ ಬೀದಿ ವ್ಯಾಪಾರಸ್ಥರೂ ಘನತೆಯ  ಬದುಕು ನಡೆಸಲಿಕ್ಕಾಗಿ ಬೀದಿ ವ್ಯಾಪಾರಿಗಳ ಹೋರಾಟದ ಫಲಶ್ರುತಿಯಾಗಿ ಕಾನೂನು ಜಾರಿಗೆ ಬಂದಿದೆ. ಅಧಿಕಾರಿಗಳು ಕಾನೂನನ್ನು ಅಧ್ಯಯನ ಮಾಡಿ ಬೀದಿ ವ್ಯಾಪಾರಸ್ಥರಿಗೆ ಅನುಕೂಲ

ತೊಕ್ಕೊಟ್ಟುವಿನಲ್ಲಿ ಪೊಲೀಸರಿಂದ ಬಿಗಿ ತಪಾಸಣೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್ ನಿಯಂತ್ರಿಸಲು ಈಗಾಗಲೇ ಜಿಲ್ಲಾಧಿಕಾರಿಗಳು ಕಠಿಣ ನಿಯಮಗಳನ್ನು ಜಾರಿಗೊಳಿಸಿದ್ದು, ತೊಕ್ಕೊಟ್ಟುವಿನಲ್ಲಿ ಉಳ್ಳಾಲ ಪೊಲೀಸರಿಂದ ಬಿಗು ತಪಾಸಣೆ ಕೈಗೊಂಡಿದ್ದಾರೆ. ಉಳ್ಳಾಲ ಪಿಎಸ್‌ಐ ರೇವಣ್ಣ ಸಿದ್ದಯ್ಯ ಅವರ ನೇತೃತ್ವದಲ್ಲಿ ತಪಾಸಣೆ ನಡೆಸುತ್ತಿದ್ದಾರೆ. ಹಲವು ವಾಹನಗಳನ್ನು ಪೊಲೀಸರು ಸೀಝ್ ಮಾಡಿದ್ದಾರೆ.