ಮಂಗಳೂರು ನಗರದಲ್ಲಿ ಲಾಕ್‌ಡೌನ್ ಸಂದರ್ಭ ರಸ್ತೆಯ ದುರಸ್ತಿ ಕಾರ್ಯ ಮಾಡಲು ಸಾಕಷ್ಟು ಸಮಯಾವಕಾಶ ಇದ್ದರೂ, ಇದೀಗ ಅನ್‌ಲಾಕ್ ಆದ ಬಳಿಕ ಹೆದ್ದಾರಿ ಇಲಾಖೆ ಕೂಳೂರು ಬಳಿ ಇಂಟರ್ ಲಾಕ್ ಕಾಮಗಾರಿಯನ್ನು ನಡೆಸುತ್ತಿದ್ದು, ಟ್ರಾಫಿಕ್ ಜಾಮ್‌ಗೆ ಪ್ರತ್ಯಕ್ಷ ಕಾರಣವಾಯಿತು. ಮಳೆ ನೀರು ನಿಂತು ಸೇತುವೆ ದಕ್ಷಿಣ ಭಾಗದಲ್ಲಿ ರಸ್ತೆ ಸಂಪೂರ್ಣ ಹಾಳಾಗಿದ್ದು, ಇಂದಯ ಇಂಟರ್‌ಲಾಕ್
ಮಂಗಳೂರು ನಗರದಲ್ಲಿ ಕಳೆದ ಕೆಲವು ದಿನಗಳಿಂದ ಲಾಕ್‌ಡೌನ್ ವಿನಾಯಿತಿ ಅವಧಿಯಲ್ಲಿ ವಾಹನಗಳ ದಟ್ಟಣೆ ಕಂಡುಬರುತ್ತಿದ್ದ ಹಿನ್ನೆಲೆಯಲ್ಲಿ ಇಂದು ನಗರದಲ್ಲಿ ಹಿರಿಯ ಅಧಿಕಾರಿಗಳ ನೇತೃತ್ವದಲ್ಲಿ ಪೊಲೀಸರು ದಿಢೀರ್ ತಪಾಸಣೆ ನಡೆಸಿದರು. ನಗರದಲ್ಲಿ ಮಧ್ಯಾಹ್ನ 2 ಗಂಟೆಯವರೆಗೆ ಲಾಕ್‌ಡೌನ್ ಅವಧಿಯನ್ನು ವಿಸ್ತರಿಸಲಾಗಿದ್ದು, ಈ ಸಮಯದಲ್ಲಿಯೂ ನಗರಾದ್ಯಂತ ವಾಹನಗಳ ಓಡಾಟ ಹೆಚ್ಚಾಗಿತ್ತು. ಇದರಿಂದಾಗಿ ಇಂದು ಪೊಲೀಸ್ ಆಯುಕ್ತ ಎನ್. ಶಶಿಕುಮಾರ್, ಡಿಸಿಪಿ ಹರಿರಾಂ ಶಂಕರ್,