ಮಂಗಳೂರು: ಗ್ರಾಮೀಣ ಪ್ರದೇಶದಲ್ಲಿ ಹುಟ್ಟಿ ಬೆಳೆದವರಲ್ಲಿ ಸಾಹಸ ಹಾಗೂ ಸಾಹಿತ್ಯದ ಗುಣ ಅಡಕವಾಗಿರುತ್ತದೆ. ಅದು ಬರವಣಿಗೆಗೆ ಪೂರಕ. ಬೆವರು ಅದ್ದಿದ ಮಣ್ಣಿನಲ್ಲಿ ಹುಟ್ಟಿದ ಸಾಹಿತ್ಯ ಕೃಷಿ ಎಲ್ಲಕ್ಕಿಂತಲೂ ಶ್ರೇಷ್ಠ ಎಂದು ತುಳು ಜಾನಪದ ವಿದ್ವಾಂಸ ಡಾ.ಗಣೇಶ್ ಅಮೀನ್ ಸಂಕಮಾರ್ ಹೇಳಿದರು. ನಗರದ ಕೆನರಾ ಕಾಲೇಜಿನ ಸೆಮಿನಾರ್ ಹಾಲ್‌ನಲ್ಲಿ ತುಳು ಲಿಪಿ ಶಿಕ್ಷಕಿ, ಲೇಖಕಿ
ಕಾಸರಗೋಡು ಜಿಲ್ಲೆಯ ಶ್ರೀ ಮದ್ ಜಗದ್ಗುರು ಶಂಕರಾಚಾರ್ಯ ಸಂಸ್ಥಾನಂ ಎಡನೀರು ಮಠದಲ್ಲಿ ತುಲು ಲಿಪಿ ನಾಮಫಲಕ ಅನಾವರಣ ಕಾರ್ಯಕ್ರಮ ನಡೆಯಿತು. ಶ್ರೀ ಶಂಕರಾಚಾರ್ಯ ಸಂಸ್ಥಾನಂ ಎಡನೀರು ಮಠ ಕಾಸರಗೋಡು. ಇಲ್ಲಿನ ಶ್ರೀ ವಿಷ್ಣುಮಂಗಲ ದೇವಾಲಯದ ವಾರ್ಷಿಕೋತ್ಸವದ ಸಂಧರ್ಭದಲ್ಲಿ ಶ್ರೀ ಶ್ರೀ ಸಚ್ಚಿದಾನಂದಭಾರತೀ ಶ್ರೀಪಾದಂಗಳವರ ಹಾಗೂ ಶ್ರೀ ಶ್ರೀ ಯೋಗಾನಂದ ಸರಸ್ವತೀ ಸ್ವಾಮೀಜಿ ಅವರ ದಿವ್ಯ ಉಪಸ್ಥಿತಿಯಲ್ಲಿ ಕೇರಳದ ಮಾಜಿ ಕಂದಾಯ ಸಚಿವರಾದ ಶ್ರೀ ಇ ಚಂದ್ರಶೇಖರನ್ ಅವರು ಶ್ರೀ ಮಠದ
ವಿಶ್ವ ತುಳು ಲಿಪಿ ದಿನದ ಅಂಗವಾಗಿ ನಗರದ ಸುರತ್ಕಲ್ ನ ಗೋವಿಂದದಾಸ್ ಕಾಲೇಜು ಮುಂಭಾಗದಲ್ಲಿ ‘ತುಳು ದಿಬ್ಬಣ’ ಕಾರ್ಯಕ್ರಮ ನಡೆಯಿತು. ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ದಯಾನಂದ ಕತ್ತಲ್ ಸಾರ್ ಅವರು ಮಾತನಾಡಿ, ಇಂದು ನಾವು ಮಲಯಾಳಂಗೆ ತುಳುಲಿಪಿಯನ್ನು ಮಾರುವ ಕಾಲ ಬಂದಿದೆ. ಆದರೆ, ಮಲಯಾಳಂಗೆ ಲಿಪಿಯನ್ನು ನೀಡಿರುವ ಭಾಷೆ ತುಳು ಎಂದು ಹೇಳಲು ನಮಗೆ ಹೆಮ್ಮೆಯಾಗುತ್ತದೆ ಎಂದು ಹೇಳಿದರು.