ಕರ್ನಾಟಕ ಬ್ಯಾಂಕಿನ ಸಿ.ಎಸ್.ಆರ್. ನಿಧಿಯಡಿ ಶ್ರೀ ಕ್ಷೇತ್ರ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ಕೊಡಮಾಡಿದ 5,20,750ರೂ. ವೆಚ್ಚದ 6 ಆಸನಗಳ ವಿದ್ಯುತ್ ಚಾಲಿತ ವಾಹನವನ್ನು ಬ್ಯಾಂಕಿನ ಅಧಿಕಾರಿಗಳು ದ. ಕ. ಮೊಗವೀರ ಮಹಾಜನ ಸಂಘದ ಗೌರವ ಸಲಹೆಗಾರ ನಾಡೋಜ ಡಾ. ಜಿ. ಶಂಕರ್ ಅವರಿಗೆ ಹಸ್ತಾಂತರಿಸಿದರು. ವಾಹನವನ್ನು ಸ್ವೀಕರಿಸಿದ ನಾಡೋಜ ಡಾ| ಜಿ. ಶಂಕರ್
ಉಡುಪಿ: ಜಿಲ್ಲಾ ಪರಿಯಾಳ ಸಮಾಜ ಸುಧಾರಕ ಸಂಘದ ವತಿಯಿಂದ ಅಂದಾಜು 75 ಲಕ್ಷ ರೂ. ವೆಚ್ಚದಲ್ಲಿ ಉಚ್ಚಿಲದಲ್ಲಿ ನಿರ್ಮಿಸಲಾದ ಪರಿಯಾಳ ಸಮಾಜ ಸಮುದಾಯ ಭವನದ ಉದ್ಘಾಟನೆಯು ಮಾ.5ರಂದು ಉಚ್ಚಿಲದಲ್ಲಿ ನಡೆಯಲಿದೆ ಎಂದು ಸಂಘದ ಅಧ್ಯಕ್ಷ ಯು.ಶಂಕರ ಸಾಲ್ಯಾನ್ ತಿಳಿಸಿದ್ದಾರೆ. ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ 15 ಲಕ್ಷರೂ. ನೆರವು ದೊರಕಿದ್ದು, ಉಳಿದಂತೆ ದಾನಿಗಳಿಂದ ಸಂಗ್ರಹಿಸಿ ಕಟ್ಟಡ ನಿರ್ಮಿಸಲಾಗಿದೆ. ಕಟ್ಟಡವನ್ನು
ಬಹಳಷ್ಟು ಅಮಾಯಕರು ಪ್ರಾಣ ಕಳೆದುಕೊಂಡ ಉಚ್ಚಿಲದ ಪಣಿಯೂರು ತಿರುವು ಬಳಿಯ ಡೈವರ್ಷನ್ ಮುಚ್ಚುವ ಮೂಲಕ ನವಯುಗ್ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಗಿದೆ.ಕೆಲ ವರ್ಷಗಳ ಹಿಂದೆ ಸರ್ವಿಸ್ ರಸ್ತೆ ನಿರ್ಮಾಣದ ಬೇಡಿಕೆ ಮುಂದಿರಿಸಿದ ಸಾರ್ವಜನಿಕರು, ಸರ್ವಿಸ್ ರಸ್ತೆ ನಿರ್ಮಾಣ ಮಾಡುವ ವರಗೆ ಪಣಿಯೂರು ಕ್ರಾಸ್ ಬಳಿ ಡೈವರ್ಷನ್ ತೆರೆಯುವಂತೆ ಆಗ್ರಹಿಸಿದ ಹಿನ್ನಲೆಯಲ್ಲಿ ಅನಧಿಕೃತ ಡೈವರ್ಷನ್ ತೆರೆದುಕೊಂಡಿದ್ದು, ಆ ಬಳಿಕ ಆ ಡೈವರ್ಷನ್ ನಲ್ಲಿ ನಡೆದ ದುರಂತ ಒಂದೆರಡಲ್ಲ. ಕೆಲವರು
ಎರಡು ಬಸ್ಸುಗಳ ಓವರ್‌ಟೇಕ್ ಭರದಲ್ಲಿ ಬಸ್ಸೊಂದು ಡಿವೈಡರ್ ಮೇಲೇರಿದ ಘಟನೆ ಉಚ್ಚಿಲ ಸಮಿಪದ ಮೂಳೂರು ವೆಸ್ಟ್‌ಕೋಸ್ಟ್ ನರ್ಸರಿ ಬಳಿ ಸಂಭವಿಸಿದೆ. ರಾಷ್ಟ್ರೀಯ ಹೆದ್ದಾರಿ ೬೬ ರಲ್ಲಿ ಉಡುಪಿ ಕಡೆಯಿಂದ ಮಂಗಳೂರಿನತ್ತ ಚಲಿಸುವ ವಿಶಾಲ್ ಹೆಸರಿನ ಎರಡು ಬಸ್ಸುಗಳು ಓವರ್ಟೇಕ್ ಮಾಡಿಕೊಂಡು ಬಂದು ಮೂಳೂರು ಬಳಿ ಸರ್ವಿಸ್ ರಸ್ತೆಯ ಪಕ್ಕದ ಡಿವೈಡರ್ ಮೇಲೇರಿದೆ.ಘಟನೆಯಿಂದ ಪ್ರಯಾಣಿಕರು ಗಾಯಗೊಂಡಿದ್ದಾರೆ. ಈ ಘಟನೆಯಿಂದ ರೊಚ್ಚಿಗೆದ್ದ ಪ್ರಯಾಣಿಕರು ಬಸ್ಸಿನ ಕಿಟಕಿ ಗಾಜುಗಳನ್ನು
ಉಳ್ಳಾಲ: ಸೋಮೇಶ್ವರ ಉಚ್ಚಿಲ ಕಡಲ ತೀರದಲ್ಲಿ ಚೀನಾದ ಹಡಗು ಮುಳುಗಡೆ ವಿಚಾರಕ್ಕೆ ಸಂಬಂಧಿಸಿದಂತೆ ಬರೋಬ್ಬರಿ ಆರು ತಿಂಗಳ ಬಳಿಕ ಹಡಗಿನ ತೈಲ ತೆರವು ಕಾರ್ಯ ಆರಂಭವಾಗಿದೆ. ಸರಕು ಹಡಗಿನಲ್ಲಿದ್ದ ಸುಮಾರು 220 ಟನ್ ತೈಲ ತೆರವು ಕಾರ್ಯ ನಡೀತಾ ಇದ್ದು, ಚೀನದಿಂದ ಲೆಬನಾನ್‍ಗೆ 8 ಸಾವಿರ ಟನ್ ತೂಕದ ಸ್ಟೀಲ್ ಕಾಯಿಲ್ ಸಾಗಿಸುತ್ತಿದ್ದ ಹಡಗು ಇದಾಗಿತ್ತು. 2022ರ ಜೂನ್ 21ರಂದು ಉಳ್ಳಾಲದ ಬಟ್ಟಪಾಡಿ ಬಳಿ ಮುಳುಗಿದ್ದ ಪ್ರಿನ್ಸೆಸ್ ಮಿರಾಲ್ ಹಡಗು ಮುಳುಗಡೆಯಾಗಿತ್ತು.
ಮೀನುಗಾರಿಕೆಗೆ ತೆರಳಿದ್ದ ದೋಣಿ ಮುಳುಗಡೆಯಾಗಿದ್ದು, 7 ಮಂದಿ ಮೀನುಗಾರರನ್ನು ಸ್ಥಳೀಯರು ರಕ್ಷಣೆ ಮಾಡಿರುವ ಘಟನೆ ಉಚ್ಚಿಲದಲ್ಲಿ ನಡೆದಿದೆ. ಮೀನುಗಾರಿಕೆಗೆ ತೆರಳಿದ್ದ ಸಂದರ್ಭ ಉಚ್ಚಿಲದ ನಿವಾಸಿ ವಿಮಲಾ ಸಿ ಪುತ್ರನ್ ಮಾಲಕತ್ವದ ಶ್ರೀ ಗಿರಿಜಾ ದೋಣಿಯು ಸೋಮವಾರ ಬೆಳಗ್ಗೆ ಸಮುದ್ರದಲ್ಲಿ ಮುಳುಗಿ ಲಕ್ಷಾಂತರ ರೂಪಾಯಿ ನಷ್ಟ ಉಂಟಾದ ಘಟನೆ ನಡೆದಿದೆ. ಸೋಮವಾರ ಬೆಳಗಿನ ಜಾವ ಐದು ಗಂಟೆಯ ಸುಮಾರಿಗೆ ಉಚ್ಚಿಲದ ಶ್ರೀ ಗಿರಿಜಾ ದೋಣಿಯಲ್ಲಿ 7 ಮಂದಿ ಮೀನುಗಾರಿಕೆಗೆ
ಕೇವಲ ಬೆರಳೆಣಿಕೆಯ ಗ್ರಾಮಸ್ಥರ ಮಧ್ಯೆಯೇ 56ನೇ ಉಚ್ಚಿಲ ಬಡಾ ಗ್ರಾಮ ಪಂಚಾಯತಿಯ ಪ್ರಥಮ ಗ್ರಾಮ ಸಭೆ, ಉಚ್ಚಿಲ ಶ್ರೀ ಮಹಾಲಕ್ಷ್ಮಿ ಸಭಾಭವನದಲ್ಲಿ ನಡೆದಿದೆ. ಆರಂಭದಲ್ಲೇ ಸಭಾಭವನದಲ್ಲಿ ಸೂಕ್ತ ಧ್ವನಿವರ್ಧಕದ ವ್ಯವಸ್ಥೆ ಇಲ್ಲದೆ ಸಭೆ ಮಾತುಗಳು ಉಪಸ್ಥಿತರಿದ್ದ ಬೆರಳೆಣಿಕೆ ಮಂದಿಗೂ ಕೇಳದೆ ಸಭೆಯಲ್ಲಿ ಗೊಂದಲದ ಸ್ಥಿತಿ ನಿರ್ಮಾಣವಾಗಿತ್ತು.15 ಮಂದಿ ಗ್ರಾಮಸ್ಥರು, ಆಶಾ ಕಾರ್ಯಕರ್ತೆಯರು, ಅಧಿಕಾರಿ ವರ್ಗ ಮಾತ್ರ ಸಭೆಯಲ್ಲಿ ಕಾಣಿಸುತ್ತಿದ್ದು ಗ್ರಾ.ಪಂ. ಕಾರ್ಯವೈಕರಿ
ಇತ್ತೀಚೆಗೆ ನವಿಕೃತಗೊಂಡ ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನಕ್ಕೆ ರಾಜ್ಯ ಗ್ರೃಹ ಸಚಿವ ಆರಗ ಜ್ಞಾನೇಂದ್ರರವರು ಬುಧವಾರ ಸಂಜೆ ಭೇಟಿ ನೀಡಿ ಶ್ರೀ ಮಹಾಲಕ್ಷ್ಮಿಯ ದರ್ಶನ ಪಡೆದರು.ದೇವಳದ ವತಿಯಿಂದ ಅವರನ್ನು ಪೂರ್ಣ ಕುಂಭದೊಂದಿಗೆ ಸ್ವಾಗತಿಸಲಾಯಿತು.ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನದ ಮುಖ್ಯ ಅರ್ಚಕ ಕೆ ವಿ ರಾಘವೇಂದ್ರ ಉಪಾಧ್ಯಾಯ ಹಾಗೂ ವಿಷ್ಣುಮೂರ್ತಿ ಉಪಾಧ್ಯಾಯರವರು ಶ್ರೀದೇವಿಗೆ ಪೂಜೆ ಸಲ್ಲಿಸಿ ಪ್ರಸಾದ ವಿತರಿಸಿದರು.ದೇವಾಲಯದ ರುವಾರಿ ನಾಡೋಜ ಡಾ. ಜಿ. ಶಂಕರ್
ವೃದ್ಧರೊಬ್ಬರಿಗೆ ಕಾರು ಡಿಕ್ಕಿ ಹೊಡೆದು ಗಂಭೀರ ಗಾಯವಾಗಿ ಆಸ್ಪತ್ರೆಗೆ ಸೇರಿದ್ಧ ಅವರು ಚಿಕಿತ್ಸೆ ಪಲಕಾರಿಯಾಗದೆ ಮೃತಪಟ್ಟ ಘಟನೆ ಉಳ್ಳಾಲ ತಾಲೂಕಿನ ಉಚ್ಚಿಲ ಎಂಬಲ್ಲಿ ನಡೆದಿದೆ.ಉಚ್ಚಿಲ ನಿವಾಸಿ ನಾರಾಯಣ ಪೂಜಾರಿ(82) ಮೃತ ದುರ್ಧೈವಿ ಆಗಿದ್ದು, ಶುಕ್ರವಾರ ಸಂಜೆ ರಸ್ತೆ ದಾಟುತ್ತಿರುವಾಗ ಕೇರಳಕ್ಕೆ ತೆರಳುತ್ತಿದ್ದ ಕಾರು ಡಿಕ್ಕಿ ಹೊಡೆದಿದೆ. ಗಂಭೀರ ಗಾಯಗೊಂಡಿದ್ದ ನಾರಾಯಣ ಪೂಜಾರಿ ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಪಲಕಾರಿಯಾಗಿದೆ
ಉಚ್ಚಿಲ : ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ವತಿಯಿಂದ ಉಚ್ಚಿಲ ಮೊಗವೀರ ಭವನದಲ್ಲಿ ಆಯೋಜಿಸಲಾಗಿದ್ದ ಉಪ್ಪಳದಿಂದ ಶಿರೂರುವರೆಗಿನ ಮೊಗವೀರ ಸಮಾಜದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಮತ್ತು ಗುರಿಕಾರರಿಗೆ ಗೌರವಧನ ವಿತರಣಾ ಕಾರ್ಯಕ್ರಮವನ್ನು ಉಚ್ಚಿಲ ಶ್ರೀ ಮಹಾಲಕ್ಷ್ಮೀ ಕ್ಷೇತ್ರದ ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ನಾಡೋಜ ಜಿ. ಶಂಕರ್ ಅವರು ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ಉಚ್ಚಿಲ ಶ್ರೀ ಮಹಾಲಕ್ಷ್ಮೀ ಕ್ಷೇತ್ರದ ಜೀಣೋದ್ಧಾರ ಸಂದರ್ಭ ಸಮಾಜದ