Home Posts tagged #udupi

ಕಾಪು ತಾಲೂಕು ಮಟ್ಟದ ಟಾಸ್ಕ್ ಪೋರ್ಸ್ ಸಭೆ – ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭಾಗಿ

ಕಾಪು ತಾಲೂಕು ಪಂಚಾಯತ್ 16 ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿನ ಕುಡಿಯುವ ನೀರಿನ ಸಮಸ್ಯೆ ಸಂಬಂಧಿಸಿದ ಟಾಸ್ಕ್ ಪೋರ್ಸ್ ಸಭೆ ಇಂದು ದಿನಾಂಕ 06-03-2026 ರಂದು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ಕಾಪು ತಹಶೀಲ್ದಾರರ ಕಚೇರಿಯಲ್ಲಿ ನಡೆಯಿತು. ಸಭೆಯಲ್ಲಿ ಯಾವ ಪಂಚಾಯತ್ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಇದೆ ಅಂತಹ ಪಂಚಾಯತ್

ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅಧ್ಯಕ್ಷತೆಯಲ್ಲಿ ಕಾಪು ತಾಲೂಕು ಬಗರ್ ಹುಕುಂ ಸಾಗುವಳಿ ಸಕ್ರಮೀಕರಣ ಸಮಿತಿ ಸಭೆ

ಕಾಪು:ಕಾಪು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕಾಪು ತಾಲೂಕಿನ ಬಗರ್ ಹುಕುಂ (ಅಕ್ರಮ – ಸಕ್ರಮ) ಸಾಗುವಳಿ ಸಕ್ರಮೀಕರಣ ಸಮಿತಿ ಸಭೆ ಇಂದು 05-03-206 ರಂದು ಕಾಪು ತಹಸೀಲ್ದಾರ ಕಚೇರಿಯಲ್ಲಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯಲ್ಲಿ ನಮೋನೆ 53 ಮತ್ತು 57 ಅಡಿಯಲ್ಲಿ ಸಲ್ಲಿಸಿದ 2 ಕಡತಗಳಿಗೆ ಖಾಯಂ ಮಂಜೂರಾತಿ ನೀಡಲಾಯಿತು. 2 ಕಡತಗಳನ್ನು ಸರ್ವೆ ಪರಿಶೀಲನಾ ವರದಿಗೆ ಹಾಗೂ 2 ಕಡತಗಳಿಗೆ ತಾತ್ಕಾಲಿಕ ಮಂಜೂರಾತಿ ನೀಡಿ 1

ಶೌರ್ಯ ವಿಪತ್ತು ನಿರ್ವಹಣಾ ಸಮಿತಿಯ ಸ್ವಯಂ ಸೇವಕರಿಗೆ ಶ್ರೀ ಕ್ಷೇತ್ರದಿಂದ ಬ್ಯಾಗ್ ವಿತರಣೆ

ಕಾಪು:ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಟ್ರಸ್ಟ್ (ರಿ )ಕಾಪು ತಾಲೂಕು ಇದರ ಸಹಯೋಗದೊಂದಿಗೆ ಬೆಳ್ಳೆ, ಬೆಳ್ಮಣ್ -ಸೂಡ, ಮುದರಂಗಡಿ, ಹಾಗೂ ಮಜೂರು ಘಟಕಗಳ ಶೌರ್ಯ ವಿಪತ್ತು ನಿರ್ವಹಣಾ ಸಮಿತಿಯ ಸ್ವಯಂ ಸೇವಕರಿಗೆಇಂದು ಬ್ಯಾಗ್ ವಿತರಣೆ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ಸಭೆ ನಡೆಸುವ ಮೂಲಕ ಶ್ರೀ ಕ್ಷೇತ್ರದಿಂದ ನೀಡಲ್ಪಟ್ಟ ಬ್ಯಾಗ್ ಗಳನ್ನು ಶೌರ್ಯ ವಿಪತ್ತು ತಂಡದ ಎಲ್ಲಾ ಸ್ವಯಂಸೇವಕರಿಗೆಕರಾವಳಿ ಪ್ರಾದೇಶಿಕ ವಿಭಾಗದ ಜನಜಾಗೃತಿ

ಉಂಡಾರು ವಿಷ್ಣುಮೂರ್ತಿ ದೇವಾಸ್ಥಾನ ವೇದಿಕೆ ನಿರ್ಮಾಣಕ್ಕೆ ಶಾಸಕ ಗುರ್ಮೆ ಸುರೇಶ್ ಗುದ್ದಲಿ ಪೂಜೆ

ಇನ್ನಂಜೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಉಂಡಾರು ಶ್ರೀ ವಿಷ್ಣುಮೂರ್ತಿ ದೇವಾಸ್ಥಾನ ವೇದಿಕೆ ನಿರ್ಮಾಣಕ್ಕೆ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರ ಶಿಫಾರಸ್ಸಿನ ಮೇರೆಗೆ 5 ಲಕ್ಷ ರೂಪಾಯಿ ಅನುದಾನ ಮಂಜೂರಾಗಿದ್ದು ಇದರ ಗುದ್ದಲಿ ಪೂಜೆಯನ್ನು ಇಂದು ದಿನಾಂಕ 03-03-2026 ರಂದು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ನೆರವೇರಿಸಿದರು. ಈ ಸಂದರ್ಭದಲ್ಲಿ ಇನ್ನಂಜೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಮಾಲಿನಿ ಶೆಟ್ಟಿ, ಮಾಜಿ ಉಪಾಧ್ಯಕ್ಷರಾದ ಸುರೇಖಾ ಶೆಟ್ಟಿ, ಮಾಜಿ

ನೇತ್ರ ಜ್ಯೋತಿ ಕಾಲೇಜಿನಲ್ಲಿ ವಸ್ತ್ರ ಸಂಗ್ರಹ ಅಭಿಯಾನ ಕಾರ್ಯಕ್ರಮ

ಉಡುಪಿ:ಉಡುಪಿಯ ಪ್ರತಿಷ್ಠಿತ ನೇತ್ರ ಜ್ಯೋತಿ ಕಾಲೇಜಿನಲ್ಲಿ ನೇತ್ರ ಜ್ಯೋತಿ ಚಾರಿಟಬಲ್ ಟ್ರಸ್ಟ್, ಪ್ರಸಾದ್ ನೇತ್ರಾಲಯ ಉಡುಪಿ, ರಾಮ ಕ್ಷತ್ರಿಯ ಸಂಘ ಉಡುಪಿ, ಇಂಡಿಯನ್ ಮೆಡಿಕಲ್ ಅಸೋಸಿಯೇಷನ್ ಮತ್ತು ದಂತ ವೈದ್ಯರ ಸಂಘ ಉಡುಪಿ ಸಹಯೋಗದೊಂದಿಗೆ ವಸ್ತ್ರ ಸಂಗ್ರಹ ಅಭಿಯಾನ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದ ನೇತ್ರ ಜ್ಯೋತಿ ಕಾಲೇಜಿನ ಅಧ್ಯಕ್ಷೆ ಶ್ರೀಮತಿ ರಶ್ಮಿ ಕೃಷ್ಣಪ್ರಸಾದ್ರವರು ನಾವು ಈ ರೀತಿಯ ಸಮಾಜಮುಖೀ ಕಾರ್ಯಕ್ರಮಗಳನ್ನು

ಪುಣೆ ಸೇವಾ ಸಮಿತಿಯಂದ ಪಡುಬಿದ್ರಿ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ಭಜೀರ್ಣೕೊದ್ಧಾರಕ್ಕೆ 1.5ಕೋಟಿ ರೂ. ದೇಣಿಗೆ

ಪಡುಬಿದ್ರಿ,ಪುಣೆಯ ಶ್ರೀ ಪಡುಬಿದ್ರಿ ಮಹಾಲಿಂಗೇಶ್ವರ ಮಹಾಗಣಪತಿ ಸೇವಾ ಸಮಿತಿಯ ವತಿಯಿಂದ ಶ್ರೀ ದೇವಸ್ಥಾನದ ಸಮಗ್ರ ಜೀರ್ಣೕೊದ್ಧಾರ, ಬ್ರಹ್ಮಕಲಶೋತ್ಸವ ಸಂದರ್ಭದಲ್ಲಿ ಶ್ರೀ ಮಹಾಗಣಪತಿ ದೇವರ ನವೀಕೃತ ಗರ್ಭಗುಡಿಯ ಸುಂದರ ರಚನೆಗಾಗಿ ಮಾ. 1ಭಾನುವಾರದಂದು ಸುಮಾರು 1.5 ಕೋಟಿ ರೂ. ಗಳನ್ನುಬಾಲಾಲಯದಲ್ಲಿ ನಡೆದ ಪ್ರಾರ್ಥನೆಯ ಬಳಿಕ ಈ ಮೊತ್ತವನ್ನು ಪುಣೆ ಉದ್ಯಮಿ ಸಂತೋಷ್‌ ಶೆಟ್ಟಿ ಕರ್ಕಿಲ್‌ ಬೆಟ್ಟಿ, ಸದಾನಂದ ಶೆಟ್ಟಿ ಮತ್ತಿತರರು ಶ್ರೀ ದೇಗುಲದ

ಕುಂದಾಪುರ ಗ್ರಾಮಾಂತರ ಎಸ್‌ಐ ನಾಸೀರ್ ಹುಸೇನ್ ಕುಸಿದು ಬಿದ್ದು ಮೃತ್ಯು

ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಉಡುಪಿಯಲ್ಲಿ ಇಂದು ಬೆಳಗ್ಗೆ ಹಮ್ಮಿಕೊಳ್ಳಲಾದ ಮ್ಯಾರಥಾನ್ ನಲ್ಲಿ ಪಾಲ್ಗೊಂಡಿದ್ದ ಕುಂದಾಪುರ ಗ್ರಾಮಾಂತರ ಎಸ್‌ಐ ನಾಸೀರ್ ಹುಸೇನ್ (58) ಕುಸಿದು ಬಿದ್ದು ಮೃತಪಟ್ಟಿದ್ದಾರೆ. ನಮ್ಮಪೊಲೀಸ್ ನಮ್ಮ ಹೆಮ್ಮೆ ಎಲ್ಲರಿಗೂ ಫಿಟೈಸ್ ಡಬ್ ಫ್ರೀ ಕರ್ನಾಟಕ ಸೈಬರ್ ಜಾಗೃತಿಗಾಗಿ 5ಕಿ.ಮೀ ಮ್ಯಾರಥಾನ್ ಓಟವನ್ನು ಉಡುಪಿ ಅಜ್ಜರಕಾಡು ಮೈದಾನದಲ್ಲಿ ಹಮ್ಮಿಕೊಳ್ಳಲಾಗಿತ್ತು. ಇದರಲ್ಲಿ ಎಸ್‌ಐ ನಾಸೀ‌ರ್ ಹುಸೇನ್ ಸೇರಿದಂತೆ ನೂರಾರು ಪೊಲೀಸರು

ಮೆಸ್ಕಾಂ ಇಲಾಖೆಯ ನಿರ್ಲಕ್ಷ್ಯ: ವಿದ್ಯುತ್ ಕಂಬ ಮುರಿದು ಮೀನುಗಾರಿಕಾ ಕಾರ್ಮಿಕ ಸಾವು

ಕಾಪು:ಮಂಗಳೂರು ನಗರದ ಮೀನುಗಾರಿಕಾ ಧಕ್ಕೆಯಲ್ಲಿ ವಿದ್ಯುತ್ ಕಂಬವೊಂದು ಮುರಿದು ಮೈ ಮೇಲೆ ಬಿದ್ದ ಪರಿಣಾಮ ಮೀನುಗಾರಿಕಾ ಕಾರ್ಮಿಕ, ತಮಿಳುನಾಡು ಮೂಲದ ಮುರುಗನ್ (35) ಭಾನುವಾರದಂದುಮೃತಪಟ್ಟಿದ್ದಾರೆ. ಭಾನುವಾರ ಮುಂಜಾನೆ ಧಕ್ಕೆಯಲ್ಲಿ ಮೀನಿನ ಬಾಕ್ಸ್ ಹೊತ್ತುಕೊಂಡು ಹೋಗುತ್ತಿದ್ದ ಸಂದರ್ಭ ವಿದ್ಯುತ್ ಕಂಬ ಮುರಿದು ಬಿದ್ದ ಪರಿಣಾಮ ಗಂಭೀರ ಗಾಯಗೊಂಡಿದ್ದ ಮುರುಗ ಅವರನ್ನು ಆಸ್ಪತ್ರೆಗೆ ಕರೆದೊಯ್ಯುವಷ್ಟರಲ್ಲಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಪತ್ನಿ ಮೂವರು

ಕೋಟಿ ಚೆನ್ನಯ್ಯ ಜೋಡುಕೆರೆ ಕಂಬಳ ಸಮಿತಿ ಉಡುಪಿ ವತಿಯಿಂದ ಉಡುಪಿ ಕಂಬಳದ ಶಂಕುಸ್ಥಾಪನೆ ಹಾಗೂ ಪೋಸ್ಟರ್ ಅನಾವರಣ

ಕಾಪು: ಕೋಟಿ ಚೆನ್ನಯ್ಯ ಜೋಡುಕೆರೆ ಕಂಬಳ ಸಮಿತಿ ಉಡುಪಿ ವತಿಯಿಂದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರ ನೇತೃತ್ವದಲ್ಲಿ ಉಡುಪಿ ಕಂಬಳ ನಡೆಯಲ್ಲಿದ್ದು ಇದರ ಪೂರ್ವಭಾವಿ ಸಭೆ ದಿನಾಂಕ 23-02-2026 ಸೋಮವಾರ ದಂದು ಶಾಂಭವಿ ಹೋಟೆಲ್ ನಲ್ಲಿ ನಡೆಯಿತು. ಸಭೆಯಲ್ಲಿ ಉಡುಪಿ ಕಂಬಳದ ಶಂಕುಸ್ಥಾಪನೆ ಹಾಗೂ ಪೋಸ್ಟರ್ ಅನಾವರಣ ಸಮಾರಂಭ ಇದೇ ತಿಂಗಳ 28 ರಂದು ಪೂರ್ವಾಹ್ನ 11 ಗಂಟೆಗೆ ನಡೆಯಲಿದೆ ಎಂದು ಶಾಸಕರು, ಕೋಟಿ ಚೆನ್ನಯ್ಯ ಜೋಡುಕೆರೆ ಕಂಬಳ ಸಮಿತಿ ಉಡುಪಿ ಅಧ್ಯಕ್ಷರಾದ

ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದ ಪ್ರಥಮ ವರ್ಧಂತಿ “ಮಾತೃ ವೈಭವ”: ಸುಗಮ ವಾಹನ ಸಂಚಾರ ವ್ಯವಸ್ಥೆ ,ಪಾರ್ಕಿಂಗ್ ವ್ಯವಸ್ಥೆ ಕುರಿತು ಪೂರ್ವಭಾವಿ ಸಭೆ

ಕಾಪು:ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದ ಪ್ರಥಮ ವರ್ಧಂತಿ “ಮಾತೃ ವೈಭವ” ಕಾರ್ಯಕ್ರಮ ದಿನಾಂಕ 28-02-2026 ರಿಂದ 02-03-2026 3 ದಿನಗಳ ಕಾಲ ನಡೆಯಲಿದ್ದು ಇದರ ಪೂರ್ವಭಾವಿಯಾಗಿ ಇಂದು ಜಿಲ್ಲಾಧಿಕಾರಿಗಳ ಕೋರ್ಟ್ ಹಾಲ್ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಶಾಸಕರು ಹಾಗೂ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದ ಜೀರ್ಣೋದ್ಧಾರ ಸಮಿತಿಯ ಕಾರ್ಯಾಧ್ಯಕ್ಷರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿದ್ದರು. ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ