ಉಡುಪಿ: ಉಡುಪಿ ಜಿಲ್ಲೆಯಲ್ಲಿ ಇಂದು ಅರೆಂಜ್ ಅಲೆರ್ಟ್ ಘೋಷಿಸಲಾಗಿದೆ. ತಗ್ಗು ಪ್ರದೇಶಗಳಲ್ಲಿ ಸ್ಥಳಾಂತರ ನಡೆಸಲು ಅಗ್ನಿಶಾಮಕ ದಳ ಸಿದ್ದವಾಗಿದೆ. ಉಡುಪಿಯ 9 ಪ್ರದೇಶಗಳಿಗೆ ಈಗಾಗಲೇ ಬೋಟ್ ವ್ಯವಸ್ಥೆ ಮಾಡಲಾಗಿದೆ. ಉಡುಪಿ ನಗರದ ತಗ್ಗು ಪ್ರದೇಶಗಳಲ್ಲಿ ಕೂಡಾ ನೀರು ಮನೆಗೆ ನುಗ್ಗಿದೆ. ಆದ್ದರಿಂದ ಜನರನ್ನು ಎತ್ತರದ ಪ್ರದೇಶಗಳಿಗೆ ಸ್ಥಳಾಂತರ ಮಾಡುತ್ತಿದ್ದೇವೆ.
ಮಳೆಯಿಂದ ಉಂಟಾಗುವ ನೆರೆ ಸೇರಿದಂತೆ ಪ್ರಕೃತಿ ವಿಕೋಪಗಳಲ್ಲಿ ಜೀವ ಹಾನಿ, ಆಸ್ತಿ ಹಾನಿ ತಪ್ಪಿಸಲು ಅಗತ್ಯ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಬೇಕೆಂದು ಉಡುಪಿ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮೇ 23, 2023 ರ ಮಂಗಳವಾರ ನಡೆದ ಜಿಲ್ಲಾ ವಿಪತ್ತು ನಿರ್ವಹಣ ಸಭೆಯ ಅಧ್ಯಕ್ಷತೆ ವಹಿಸಿದ್ದ ಉಡುಪಿ ಜಿಲ್ಲಾಧಿಕಾರಿ ಕೂರ್ಮಾ ರಾವ್ ಎಂ. ಅಧಿಕಾರಿಗಳಿಗೆ ಸೂಚನೆ ನೀಡಿದರು. ಹಿಂದೆ ಬಾಧಿಸಿದ್ದ ಪ್ರದೇಶಗಳಲ್ಲಿ ಮುಂಜಾಗ್ರತ ಕ್ರಮ ಕೈಗೊಳ್ಳಬೇಕು. ವಿಕೋಪದ ಮುನ್ಸೂಚನೆಗಳು