Home Posts tagged #udupi

ಪಾದೆಬೆಟ್ಟು ಕೋಡ್ದಬ್ಬು ದೈವಸ್ಥಾನದಿಂದ ಸುಬ್ರಮಣ್ಯ ದ್ವಾರದ ರಸ್ತೆ ಅಭಿವೃದ್ಧಿ ಗುದ್ದಲಿ ಪೂಜೆ

ಪಡುಬಿದ್ರಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಪಾದೆಬೆಟ್ಟು ಕೋಡ್ದಬ್ಬು ದೈವಸ್ಥಾನದಿಂದ ಸುಬ್ರಮಣ್ಯ ದ್ವಾರದ ರಸ್ತೆಗೆ ಅಭಿವೃದ್ಧಿಗೆ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರ ಶಿಫಾರಸ್ಸಿನ ಮೇರೆಗೆ ಸಮಾಜ ಕಲ್ಯಾಣ ಇಲಾಖೆಯಿಂದ 50 ಲಕ್ಷ ರೂಪಾಯಿ ಅನುದಾನ ಮಂಜೂರಾಗಿದ್ದು ಇದರ ಗುದ್ದಲಿ ಪೂಜೆಯನ್ನು ಇಂದು ದಿನಾಂಕ 20-09-2025 ರಂದು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ

ಪುತ್ತಿಗೆ ಶ್ರೀಪಾದರ “64 ಜನ್ಮನಕ್ಷತೋತ್ಸವ ಸಂಭ್ರಮ

ಉಡುಪಿ: ಶ್ರೀ ಕೃಷ್ಣ ಮಠದ ರಾಜಾಂಗಣದಲ್ಲಿ ದಿನಾಂಕ 30-08-2025 ಶನಿವಾರದಂದು ನಡೆದ ಪರ್ಯಾಯ ಶ್ರೀಪುತ್ತಿಗೆ ಮಠಾಧೀಶರಾದ ಪರಮಪೂಜ್ಯ ಶ್ರೀ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರ “64 ಜನ್ಮನಕ್ಷತೋತ್ಸವ ಸಂಭ್ರಮ”ದಲ್ಲಿ ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ಜಗದ್ಗುರು ಶ್ರೀಮನ್ಮಧ್ವಾಚಾರ್ಯ ಸ್ಮರಣಾರ್ಥ ಅಂಚೆ ಚೀಟಿ ಬಿಡುಗಡೆ ಸಮಾರಂಭ ನೆರವೇರಿತು. ಅದಮಾರು ಮಠದ ಶ್ರೀ ಶ್ರೀ

ಪಡುಬಿದ್ರಿ:14 ವರ್ಷಗಳಿಂದ ತಲೆಮರಿಸಿಕೊಂಡಿರುವ LPC ವಾರಂಟ್ ಆಸಾಮಿಯ ಬಂಧನ

ಉಡುಪಿ ಜಿಲ್ಲೆಯ ಪಡುಬಿದ್ರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಿನಾಂಕ 22-01-2010 ರಂದು ನಡೆದ ಮನೆ ಕಳ್ಳತನ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸುಮಾರು 14 ವರ್ಷಗಳಿಂದ ಮಾನ್ಯ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರಸಿಕೊಂಡಿದ್ದ ವಾರಂಟು ಆಸಾಮಿ ಮೈಸೂರಿನ ನಿವಾಸಿ ಇಕ್ಬಾಲ್ ಅಹಮದ್ ಅನ್ಸಾರಿ ಎಂಬಾತನನ್ನು ಪಡುಬಿದ್ರಿ ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿ ಉಡುಪಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ಮಾನ್ಯ ನ್ಯಾಯಾಲವು ಆರೋಪಿಗೆ ನ್ಯಾಯಾಂಗ ಬಂಧನವನ್ನು ವಿಧಿಸಿರುತ್ತದೆ.ದಿನಾಂಕ

ಉಡುಪಿ: ಧರ್ಮ, ಪೂಜೆ, ಭಕ್ತಿ ಪ್ರದರ್ಶನದ ವಸ್ತುವಲ್ಲ: ಧರ್ಮವನ್ನು ಉಳಿಸಿಕೊಂಡು ಮುಂದೆ ಸಾಗೋಣ: ಡಿಸಿಎಂ ಡಿಕೆಶಿ

ಧರ್ಮ, ಪೂಜೆ, ಭಕ್ತಿ ಪ್ರದರ್ಶನದ ವಸ್ತುವಲ್ಲ. ಆಚಾರ, ವಿಚಾರವನ್ನು ಎಲ್ಲರೂ ಒಟ್ಟಾಗಿ ಕೊಂಡೊಯ್ಯಬೇಕು.ಮರಕ್ಕೆ ಬೇರು ಎಷ್ಟು ಮುಖ್ಯವೋ ಹಾಗೆಯೇ ಮನುಷ್ಯನಿಗೆ ನಂಬಿಕೆ ಮುಖ್ಯ. ಹೀಗಾಗಿ ಧರ್ಮವನ್ನು ಉಳಿಸಿಕೊಂಡು ನಾವೆಲ್ಲರೂ ಮುಂದೆ ಸಾಗೋಣ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಹೇಳಿದರು. ಪರ್ಯಾಯ ಶ್ರೀ ಪುತ್ತಿಗೆ ಮಠ ಶ್ರೀಕೃಷ್ಣ ಮಠದ ವತಿಯಿಂದ ಪರ್ಯಾಯ ಪುತ್ತಿಗೆ ಮಠಾ ಧೀಶ ರಾದ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರ 64ನೇ ಜನ್ಮ ನಕ್ಷತ್ರೋತ್ಸವ ಸಂಭ್ರಮ

ಉಡುಪಿ:ಆ.30ರಂದು ಉಡುಪಿ ಮಿಷನ್ ಆಸ್ಪತ್ರೆಯಲ್ಲಿ ಸ್ತನ ಕ್ಯಾನ್ಸರ್ ಪರೀಕ್ಷಾ ಘಟಕದ ಉದ್ಘಾಟನೆ

ಉಡುಪಿ: ಉಡುಪಿ ಸಿ.ಎಸ್.ಐ ಲೊಂಬಾರ್ಡ್ ಸ್ಮಾರಕ (ಮಿಷನ್) ಆಸ್ಪತ್ರೆಯ ಸ್ತನ ಕ್ಯಾನ್ಸರ್ ಪರೀಕ್ಷಾ ಘಟಕದ (ಮ್ಯಾಮೋಗ್ರಫಿ ಯುನಿಟ್) ಉದ್ಘಾಟನೆ ಇದೇ ಆಗಸ್ಟ್ 30 ರಂದು ಬೆಳಿಗ್ಗೆ 10 ಗಂಟೆಗೆ ಆಸ್ಪತ್ರೆಯ ಚಾಪೆಲ್ ನಲ್ಲಿ ನಡೆಯಲಿದೆ ಎಂದು ಮಿಷನ್ ಆಸ್ಪತ್ರೆಯ ನಿರ್ದೇಶಕ ಡಾ. ಸುಶೀಲ್ ಜತ್ತನ್ನ ತಿಳಿಸಿದರು.ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ ಅವರು ನೂತನ ಘಟಕವನ್ನು ಉದ್ಘಾಟಿಸಲಿದ್ದಾರೆ. ಸಿಎಸ್‌ಐ, ಕೆಎಸ್ ಡಿ

ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಉಳ್ಳೂರ್ 11 : 25ನೇ ವರ್ಷದ ರಜತ ಮಹೋತ್ಸವದ ಸಂಭ್ರಮ

ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಉಳ್ಳೂರ್ 11 25ನೇ ವರ್ಷದ ರಜತ ಮಹೋತ್ಸವದ ಸಂಭ್ರಮ ನಡೆಯಿತು. ಗಣೇಶೋತ್ಸವ ಸಂಭ್ರಮದಲ್ಲಿ ಗಣೇಶನ ವಿಗ್ರಹವನ್ನು ಭವ್ಯ ಮೆರವಣಿಗೆ ಮೂಲಕ ಕರೆತರಲಾಯಿತು ನಂತರ ಪೂಜಾ ಸ್ಥಳವನ್ನು ಸ್ವಚ್ಛಗೊಳಿಸಿ, ಕಲಶ ಸ್ಥಾಪಿಸಿ, ಅರಿಶಿನ, ಕುಂಕುಮ, ಗಂಧ, ಗರಿಕೆ, ಹೂವು, ಅಗರಬತ್ತಿ, ವೀಳ್ಯದೆಲೆ, ಅಡಿಕೆ, ಬೆಲ್ಲ, ಫಲಪುಷ್ಪ, ಹಾಗೂ 21 ಮೋದಕಗಳನ್ನು ನೈವೇದ್ಯ ಮಾಡಿ ಪೂಜೆಯನ್ನು ನೆರವೇರಿಸಲಾಯಿತು. ಪೂಜೆಯು ಕಾಯಾ, ವಾಚಾ, ಮನಸಾ, ಶೋಡಶೋಪಚಾರ

ಉದ್ಯಾವರ 36ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ

ಉದ್ಯಾವರ: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ, ಉದ್ಯಾವರ ಇದರ 36ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ ಮತ್ತು ಉದ್ಯಾವರ ಯುವಕ ಮಂಡಲ (ರಿ.) ಉದ್ಯಾವರ ಇದರ 62ನೇ ವಾರ್ಷಿಕೋತ್ಸವದ ಸಭಾ ಕಾರ್ಯಕ್ರಮ ಆಗಸ್ಟ್ 27 ಬುಧವಾರ ದಂದು ಗುರ್ಮೆ ಸುರೇಶ್ ಶೆಟ್ಟಿ ಅವರ ಉಪಸ್ಥಿತಿಯಲ್ಲಿ ನೆರವೇರಿತು. ವಾರ್ಷಿಕೋತ್ಸವದ ಸಭಾ ಕಾರ್ಯಕ್ರಮದಲ್ಲಿ ಶಾಸಕರಾದ ಗುರ್ಮೆ ಸುರೇಶ ಶೆಟ್ಟಿ ಅವರು ಭಾಗವಹಿಸಿ ಶುಭಹಾರೈಸಿದರು.

ಉಡುಪಿ:ಕರ್ನಾಟಕ ರಕ್ಷಣಾ ವೇದಿಕೆ ಉಡುಪಿ ಘಟಕದ ವತಿಯಿಂದ ಮಣಿಪಾಲ ಟೈಗರ್ ಸರ್ಕಲ್ ನಿಂದ ಜಿಲ್ಲಾಧಿಕಾರಿ ಕಚೇರಿ ವರೆಗೆ ಜಾಥಾ ಕಾರ್ಯಕ್ರಮ

ಮಣಿಪಾಲ ಟೈಗರ್ ಸರ್ಕಲ್ ನಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಉಡುಪಿ ಜಿಲ್ಲೆಯಲ್ಲಿ ಕೆಂಪು ಕಲ್ಲು ಮತ್ತು ಮರಳು ತೆಗೆಯುವುದು ಮತ್ತು ಸಾಗಾಣಿಕೆಗೆ ನಿರ್ಬಂಧ ಹೇರಿರುವ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ ಉಡುಪಿ ಘಟಕದ ಅ ರಾ ಪ್ರಭಾಕರ ಪೂಜಾರಿ ಮುಂದಾಳತ್ವದಲ್ಲಿ ಇಂದು ಜಾಥಾ ಕಾರ್ಯಕ್ರಮ ಹಾಗೂ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಯಿತು. ಕರ್ನಾಟಕ ರಕ್ಷಣಾ ವೇದಿಕೆಯ ಉಡುಪಿ ಘಟಕದ ಜಿಲ್ಲಾಧ್ಯಕ್ಷರಾದ ಅ ರಾ ಪ್ರಭಾಕರ ಪೂಜಾರಿ ಜಾಥಾ ಕಾರ್ಯಕ್ರಮದಲ್ಲಿ

ಉಡುಪಿ: ಡಿಸ್ಟ್ರಿಕ್ಟ್ ಅಮೆಚೂರ್ ಅಥ್ಲೆಟಿಕ್ ಅಸೋಸಿಯೇಷನ್ (ರಿ.) ಉಡುಪಿ ಇದರ ವತಿಯಿಂದ ನಡೆದ “ಕರ್ನಾಟಕ ರಾಜ್ಯ ಜೂನಿಯರ್ ಮತ್ತು ಅಂಡರ್ 23 ಅಥ್ಲೆಟಿಕ್ ಮೀಟ್ – 2025” ರ ಸಮಾರೋಪ ಸಮಾರಂಭ

ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣ ಉಡುಪಿ ಇಲ್ಲಿ ಉಡುಪಿ ಡಿಸ್ಟ್ರಿಕ್ಟ್ ಅಮೆಚೂರ್ ಅಥ್ಲೆಟಿಕ್ ಅಸೋಸಿಯೇಷನ್ (ರಿ.) ಉಡುಪಿ ಇದರ ವತಿಯಿಂದ ನಡೆದ “ಕರ್ನಾಟಕ ರಾಜ್ಯ ಜೂನಿಯರ್ ಮತ್ತು ಅಂಡರ್ 23 ಅಥ್ಲೆಟಿಕ್ ಮೀಟ್ – 2025” ರ ಸಮಾರೋಪ ಸಮಾರಂಭದಲ್ಲಿ ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿ ಶುಭಹಾರೈಸಿದರು.

ಉಡುಪಿ;ನಿಡಂಬೂರು ಯುವಕ ಮಂಡಲ ರಿ. ಕಡೆಕಾರು ಇದರ ನೂತನ ಕಟ್ಟಡದ ಉದ್ಘಾಟನಾ ಸಮಾರಂಭ

ನಿಡಂಬೂರು ಯುವಕ ಮಂಡಲ ರಿ. ಕಡೆಕಾರು ಇದರ ನೂತನ ಕಟ್ಟಡದ ಉದ್ಘಾಟನಾ ಸಮಾರಂಭದಲ್ಲಿ ಇಂದು ದಿನಾಂಕ 25-08-2025 ರಂದು ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿ ಶುಭ ಹಾರೈಸಿದರು.ಈ ಸಂದರ್ಭದಲ್ಲಿ ಉಡುಪಿ ವಿಧಾನಸಭಾ ಕ್ಷೇತ್ರದಲ್ಲಿ ಶಾಸಕರಾದ ಯಶ್ ಪಾಲ್ ಸುವರ್ಣ, ಜಿ. ಶಂಕರ್ ಫ್ಯಾಮಿಲಿ ಟ್ರಸ್ಟಿನ ಪ್ರವರ್ತಕರಾದ ನಾಡೋಜ ಡಾ. ಜಿ. ಶಂಕರ್, ಅಂಬಲಪಾಡಿ ಶ್ರೀ ಜನಾರ್ದನ ಮಹಾಕಾಳಿ ದೇವಸ್ಥಾನದ ಧರ್ಮದರ್ಶಿಗಳಾದ ಡಾ. ನಿ. ಬೀ. ವಿಜಯ