Home Posts tagged #udupi (Page 61)

ಬೊಮ್ಮಾಯಿ ಪ್ರಮಾಣವಚನ ಸ್ವೀಕಾರ :ಉಡುಪಿಯಲ್ಲಿ ಪಟಾಕಿ ಸಿಡಿಸಿ ಸಂಭ್ರಮ

ಮುಖ್ಯ ಮಂತ್ರಿಯಾಗಿ ಬಸವರಾಜ್ ಬೊಮ್ಮಾಯಿ ಪ್ರಮಾಣವಚನ ಸ್ವೀಕಾರಿಸಿದ ಹಿನ್ನೆಲೆಯಲ್ಲಿ ಉಡುಪಿಯಲ್ಲಿ ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸಿ ಸಂಭ್ರಮಿಸಿದ್ರು, ನಗರ ಬಿಜೆಪಿ ಅಧ್ಯಕ್ಷ ಮಹೇಶ್ ಠಾಕೂರು ನೇತೃತ್ವದಲ್ಲಿ ಉಡುಪಿಯ ಕ್ಲಾಕ್ ಟವರ್ ಬಳಿ ಸೇರಿದ ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸಿ ,ಜೈಕಾರ ಹಾಕಿ ಸಂಭ್ರಮಿಸಿದರು. ಇನ್ನು ಉಡುಪಿ ಜಿಲ್ಲಾ ಉಸ್ತುವಾರಿ

ಉಡುಪಿಯ ಪೆರ್ಣಂಕಿಲದಲ್ಲಿ ಬೋನಿಗೆ ಬಿದ್ದ ಚಿರತೆ

ಪೆರ್ಣಂಕಿಲದಲ್ಲಿ ಗ್ರಾಮಸ್ಥರನ್ನು ಬಹು ದಿನಗಳಿಂದ ಕಾಡುತ್ತಿದ್ದ ಚಿರತೆ ಕೊನೆಗೂ ಬೋನಿಗೆ ಬಿದ್ದಿದೆ. ಗ್ರಾಮದಲ್ಲಿ ಆಗಾಗ್ಗೆ ಕಾಣಿಸಿಕೊಳ್ಳುತ್ತಿದ್ದ ಚಿರತೆ ಕಳೆದ ರಾತ್ರಿ ಪೆರ್ಣಂಕಿಲದ ಗುಂಡುಪಾದೆ ಎಂಬಲ್ಲಿ ಅರಣ್ಯ ಇಲಾಖೆಯ ಅಧಿಕಾರಿಗಳು ಇರಿಸಿದ್ದ ಬೋನಿಗೆ ಬಿದ್ದಿದೆ. ಚಿರತೆಯನ್ನು ಸೆರೆ ಹಿಡಿಯಲು ಗುಂಡುಪಾದೆಯ ಅಶೋಕ್ ನಾಯಕ್ ಎಂಬವರ ತೋಟದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಬೋನು ಇರಿಸಿದ್ದರು. ಕಳೆದ ರಾತ್ರಿ ಚಿರತೆ ಇದರೊಳಗೆ ಸೆರೆಯಾಗಿದೆ. ಇಂದು ಬೆಳಗ್ಗೆ

ವಿಶಾಲ ಗಾಣಿಗ ಕೊಲೆಗೆ ದುಬೈನಲ್ಲಿ ಸ್ಕೆಚ್:ಹಣದ ಪಾರ್ಸೆಲ್ ಕಳುಹಿಸಿ ಕೊಲೆ ಮಾಡಿಸಿದ ಪತಿ

ಉಡುಪಿ : ಕರಾವಳಿಯನ್ನೇ ಬೆಚ್ಚಿಬೀಳಿಸಿದ್ದ ವಿಶಾಲ ಗಾಣಿಗ ಕೊಲೆ ಪ್ರಕರಣವನ್ನು ಒಂದೇ ವಾರದಲ್ಲಿ ಬೇಧಿಸುವಲ್ಲಿ ಉಡುಪಿ ಜಿಲ್ಲಾ ಪೊಲೀಸರು ಯಶಸ್ವಿಯಾಗಿದ್ದಾರೆ. ಪತ್ನಿಯ ಜೊತೆಯಲ್ಲಿದ್ದಾಗಲೇ ಪತಿ ರಾಮಕೃಷ್ಣ ವಿಶಾಲ ಗಾಣಿಗ ಹತ್ಯೆಗೆ ಸುಫಾರಿ ಕೊಟ್ಟಿದ್ದ. ಅಲ್ಲದೇ ಮನೆಗೆ ಹಣದ ಪಾರ್ಸೆಲ್ ಕಳುಹಿಸಿ ಪತ್ನಿಯನ್ನು ಕೊಂದು ಮುಗಿಸಿದ್ದಾನೆ. ಉಡುಪಿ ಜಿಲ್ಲೆಯ ಉಪ್ಪಿನಕೋಟೆಯಲ್ಲಿರುವ ಅಪಾರ್ಟ್‍ಮೆಂಟ್ ನಲ್ಲಿ ಜುಲೈ 12ರಂದು ಕೊಲೆಯಾಗಿದ್ದ ವಿಶಾಲ ಗಾಣಿಗ ಕೊಲೆಯನ್ನು ಪತಿಯೇ

ಉಡುಪಿಯಲ್ಲಿ ಕೃಷಿಯತ್ತ ಮುಖಮಾಡಿದ ಯುವ ಜನಾಂಗ

ಯುವ ಜನಾಂಗ ಮತ್ತೆ ಕೃಷಿಯತ್ತ ಮುಖ ಮಾಡಿದೆ ಅನ್ನೋದಕ್ಕೆ ಈ ಸ್ಟೋರಿಯೇ ಸಾಕ್ಷಿ ಹಡಿಲು ಬಿದ್ದಿರುವ ಭೂಮಿಯನ್ನು ಮತ್ತೆ ಹಸನಾಗಿಸಲು ಇಲ್ಲೊಂದು ಯುವಕರ ಗುಂಪು ಮುಂದಾಗಿದೆ. ಹೀಗೆ..ಭತ್ತದ ಪೈರು ಹಿಡ್ಕೊಂಡು ಗದ್ದೆಗಿಳಿದ ಯುವಕರು, ಉಡುಪಿಯ ಮೂಡುಪೆರಂಪಳ್ಳಿ ಶೀಂಭ್ರಾ ಎಂಬಲ್ಲಿನ ಯುವಕರು.ತನ್ನೂರಲ್ಲಿ ಬೇಸಾಯನೇ ಮಾಡದೇ ಹಡಿಲು ಬಿದ್ದಿದ್ದ ಭೂಮಿಯನ್ನ ಕೃಷಿ ಮಾಡಲು ಮುಂದಾಗಿರುವ ವಿದ್ಯಾವಂತ ಯುವಕರು. ಮೂಡು ಪೆರಂಪಳ್ಳಿಯ ಹಲವು ಎಕ್ರೆ ಕೃಷಿ ಭೂಮಿ ಬೇಸಾಯನೇ ಮಾಡದೇ

ಗದ್ದೆಗಿಳಿದ ಚಿತ್ರನಟ ರಕ್ಷಿತ್ ಶೆಟ್ಟಿ

ಉಡುಪಿಯ ವಾರಂಬಳ್ಳಿ ಗ್ರಾಮದಲ್ಲಿ ಆಯೋಜಿಸಲಾದ ಹಡಿಲು ಭೂಮಿ ಕೃಷಿ ನಾಟಿ ಕಾರ್ಯಕ್ರಮದಲ್ಲಿ ಚಿತ್ರನಟ ರಕ್ಷಿತ್ ಶೆಟ್ಟಿ ಭಾಗಿಯಾದರು. ಶಾಸಕ ರಘುಪತಿ ಭಟ್ ನೇತೃತ್ವದಲ್ಲಿ ಕೇದಾರೋತ್ಥಾನ ಪ್ರತಿಷ್ಠಾನದ ಸಂಯೋಜನೆಯಲ್ಲಿ ಕೃಷಿ ಕಾರ್ಯ ಆಯೋಜಿಸಲಾಗಿತ್ತು. ಬ್ರಹ್ಮಾವರ ತಾಲೂಕು ವ್ಯಾಪ್ತಿಯ ವಾರಂಬಳ್ಳಿ ಬಳಿಯ ಹಡಿಲು ಭೂಮಿ ಕೃಷಿ ನಾಟಿ ಕಾರ್ಯಕ್ಕೆ ನಟ ರಕ್ಷಿತ್ ಶೆಟ್ಟಿ, ಶಾಸಕ ರಘುಪತಿ ಭಟ್ ಮತ್ತು ಸಾಮಾಜಿಕ ಕ್ಷೇತ್ರದ ಗಣ್ಯರು ಭೂ ಮಾತೆಗೆ ಹಾಲನ್ನು ಅರ್ಪಿಸಿ

ಉಡುಪಿ ಜಿಲ್ಲೆಯ ಮೂವರು ಅಧಿಕಾರಿಗಳಿಗೆ ಮುಖ್ಯಮಂತ್ರಿಗಳಿಂದ ಚಿನ್ನದ ಪದಕ ಪ್ರದಾನ

ಅಗ್ನಿ ಶಾಮಕ ದಳ ಹಾಗೂ ತುರ್ತು ಸೇವಾ ಇಲಾಖೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಉಡುಪಿ ಜಿಲ್ಲೆಯ ಮೂವರು ಸಿಬ್ಬಂದಿಗಳಿಗೆ ಕರ್ನಾಟಕ ಸರಕಾರದಿಂದ ನೀಡುವ ಚಿನ್ನದ ಪದಕವನ್ನು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರು ನೀಡಿ ಗೌರವಿಸಿದ್ದಾರೆ.  ಇಂದು ವಿಧಾನ ಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ನಡೆದ ಪದಕ‌ ಪ್ರಧಾನ ಕಾರ್ಯಕ್ರಮದಲ್ಲಿ ಅಗ್ನಿ ಶಾಮಕ ದಳ ಜಿಲ್ಲಾ ಮುಖ್ಯ ಅಧಿಕಾರಿ ಹೆಚ್ ಎಂ ವಸಂತ್ ಕುಮಾರ್, ಅಶ್ವಿನ್ ಸನಿಲ್ ಹಾಗೂ ಎಂ. ಕೇಶವ್ ಇವರಿಗೆ ಮುಖ್ಯಮಂತ್ರಿಗಳಿಂದ

ಉಡುಪಿಯಲ್ಲಿ ಮಗು ಅಪಹರಣ ಪ್ರಕರಣ: ಆರೋಪಿಯ ಬಂಧನ

ಉಡುಪಿಯ ಕರಾವಳಿ ಬೈಪಾಸ್ ಬಳಿ ಶಿವರಾಜ್ ಎನ್ನುವ ಎರಡುವರೆ ವರುಷದ ಮಗುವೊಂದನ್ನ ಅಪಹರಣ ಮಾಡಲಾಗಿತ್ತು.ಕಾರವಳಿ ಬೈಪಾಸ್ ಬಳಿಯ ಭಾರತಿ ಮತ್ತು ಅರುಣ್ ಎನ್ನುವವರ ಮಗುವನ್ನು ಪರಿಚಯದ ವ್ಯಕ್ತಿಯೇ ಅಪಹರಿಸಿದ್ದ. ಮಗುವಿಗೆ ಚಾಹಾ ಕುಡಿಸ್ತೇನೆ ಎಂದು ಕರೆದುಕೊಂಡು ಹೋಗಿದ್ದ ಬಾಗಲಕೋಟೆ ಮೂಲದ ಪರುಶರಾಮ ಎನ್ನುವ ವ್ಯಕ್ತಿ ವಾಪಸ್ಸು ಬಾರದೇ ಇದ್ದಾಗ ಗಾಬರಿಗೊಂಡ ಪೋಷಕರು ಉಡುಪಿ ನಗರ ಠಾಣೆಗೆ ದೂರು ನೀಡಿದ್ದರು. ಈ ಬಗ್ಗೆ ಪ್ರಕರಣ ದಾಖಲಿಸಿ ಕೊಂಡ ನಗರ ಠಾಣಾ ಪೊಲೀಸರು ಕಾರ್ಯ

ಉಡುಪಿಯಲ್ಲಿ ಆ.14ರಂದು ಮೆಘಾ ಲೋಕ ಅದಾಲತ್

ಉಡುಪಿ: ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಉಡುಪಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ತಾಲೂಕು ಕಾನೂನು ಸೇವೆಗಳ ಸಮಿತಿಯಿಂದ ಮೆಘಾ ಲೋಕ ಅದಾಲತ್ ಕಾರ್ಯಕ್ರಮವನ್ನು ಆಗಸ್ಟ್ 14ರಂದು ಉಡುಪಿಯ ಎಲ್ಲಾ ನ್ಯಾಯಾಲಯದಲ್ಲಿ ನಡೆಯಲಿದೆ ಎಂದು ಸೀನಿಯರ್ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶರ್ಮಿಳಾ ಎಸ್. ಹಾಗೂ ಎಡಿಷನಲ್ ಸೀನಿಯರ್ ಸಿವಿಲ್ ಜಡ್ಜ್ ನಟೇಶ್ ಆರ್. ಅವರು ತಿಳಿಸಿದ್ದಾರೆ. ಅವರು

ಕಾಂಗ್ರೆಸ್‌ನಲ್ಲಿ ಸಿಎಂ ಅಭ್ಯರ್ಥಿ ಬಗ್ಗೆ ಚರ್ಚೆ ಮಾಡುವ ಅಗತ್ಯವಿಲ್ಲ: ಉಡುಪಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್

ರಜ್ಯ ಕಾಂಗ್ರೆಸ್‌ನಲ್ಲಿ ಸಿಎಂ ಅಭ್ಯರ್ಥಿ ಬಗ್ಗೆ ಚರ್ಚೆ ನಡೆಯುತ್ತಿದೆ. ನಾನು ಯಾವತ್ತೂ ಯಾರಿಗೂ ನನ್ನನ್ನು ಅಭ್ಯರ್ಥಿ ಮಾಡಿ ಎಂದು ಹೇಳಿಲ್ಲ. ಈಗ ಅದನ್ನು ಚರ್ಚೆ ಮಾಡುವ ಅಗತ್ಯ ಇಲ್ಲ. ಜನರ ಸಮಸ್ಯೆ ಆಲಿಸಿ ನ್ಯಾಯ ಒದಗಿಸೋಣ ಎಂದು ಉಡುಪಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದರು. ಅವರು ಉಡುಪಿಯಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಕೊರೋನಾ ಕಾಲದಲ್ಲಿ ಜೀವ ಇದ್ದರೆ ಜೀವನ ಎಂದು ಹೇಳಿದರು. ಸಿದ್ದರಾಮಯ್ಯ ಬಾದಾಮಿಯಿಂದ ಸ್ಪರ್ಧೆ ವಿಚಾರದ ಬಗ್ಗೆ

ನಮ್ಮ ಗಮನ ಇರುವುದು ಮೇಕೆದಾಟು ವಿಚಾರ ಮಾತ್ರ: ಉಡುಪಿಯಲ್ಲಿ ಡಿಕೆಶಿ

ನನಗೆ ಕುಮಾರಸ್ವಾಮಿ ಸುದ್ದಿನೂ ಬೇಡ… ಸುಮಲತಾ ಅವರ ಸುದ್ದಿನೂ ಬೇಡ. ನಮ್ಮ ಗಮನ ಇರುವುದು ಮೇಕೆದಾಟು ವಿಚಾರ ಮಾತ್ರ ಎಂದು ಉಡುಪಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದರು. ಅವರು ಉಡುಪಿಯಲ್ಲಿ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದರು. ಮೇಕೆದಾಟು ವಿಚಾರದಲ್ಲಿ ಮುಖ್ಯಮಂತ್ರಿಗಳು ಸ್ಟಾಲಿನ್‌ಗೆ ಪತ್ರ ಬರೆದಿರುವುದು ಸರಿಯಲ್ಲ. ಮೊದಲು ಟೆಂಡರ್ ಕರೆದು ಮೇಕೆದಾಟು ಡ್ಯಾಮ್ ಕಟ್ಟುವ ಕೆಲಸ ಮಾಡಿ. ಡ್ಯಾಮ್ ವಿಚಾರದಲ್ಲಿ ಏರುಪೇರು ಇದ್ದರೆ