ಉಳ್ಳಾಲ: ಸೋಮೇಶ್ವರ ಕಡಲ ಕಿನಾರೆಯಲ್ಲಿಟ್ಟಿದ್ದ ಎರಡು ದೋಣಿಗಳಿಗೆ ಬೆಂಕಿ ತಗುಲಿದ್ದು ದೋಣಿ ಮತ್ತು ಮೀನಿನ ಬಲೆ ಸುಟ್ಟು ಕರಕಲಾಗಿದ್ದು ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿದ್ದು, ಕಿಡಿಗೇಡಿಗಳ ಕೃತ್ಯವೆಂದು ಶಂಕಿಸಲಾಗಿದೆ. ಸೋಮೇಶ್ವರದ ಮೀನುಗಾರರಾದ ಅನಿಲ್ ಮತ್ತು ಶೇಖರ್ ಎಂಬವರಿಗೆ ಸೇರಿದ ನಾಡ ದೋಣಿಗೆ ಗುರುವಾರ ಮದ್ಯಾಹ್ನ ಬೆಂಕಿ ತಗುಲಿದೆ. ಸೋಮೇಶ್ವರ
ಉಳ್ಳಾಲ: ಒಂದು ರಸ್ತೆ, ಒಂದೇ ಅನುದಾನ, ಆದರೆ ಉದ್ಘಾ ಟನೆ ಮಾತ್ರ ಎರಡು ದಿನ! ಹೀಗೊಂದು ವಿಲಕ್ಷಣ ಪ್ರಕರಣ ಕೋಟೆಕಾರ್ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಬೆಳಕಿಗೆ ಬಂದಿದ್ದು, ಬಿಜೆಪಿ-ಕಾಂಗ್ರೆಸ್ ನಡುವಿನ ರಸ್ತೆ ರಾಜಕೀಯಕ್ಕೆ ಸಾಕ್ಷಿಯಾಗಿದೆ. ಕೋಟೆಕಾರ್ ಪಟ್ಟಣ ಪಂಚಾ ಯತ್ ವ್ಯಾಪ್ತಿಯಲ್ಲಿರುವ ಕುಂಪಲ ಬೈಪಾಸ್‌ನಿಂದ ಬಗಂಬಿಲ ಮೂಲಕ ಯೇನಪೋಯ ಆಸ್ಪತ್ರೆಯನ್ನು ಸಂಪರ್ಕಿಸುವ ರಸ್ತೆ ಬಹುತೇಕ ಕಾಂಕ್ರೀಟ್‌ನಿಂದ ಕೂಡಿದೆ. ಈ ರಸ್ತೆಗೆ ವಿವಿಧ ಹಂತದಲ್ಲಿ ಸರಕಾರದಿಂದ
ಉಳ್ಳಾಲ: ಉಳ್ಳಾಲ ನಗರಸಭೆಯಲ್ಲಿ ಕಾಂಗ್ರೆಸ್ ನೇತೃತ್ವದ ಆಡಳಿತದಲ್ಲಿ ಮೂಲಭೂತ ಸೌಕರ್ಯ ಅಭಿವೃದ್ಧಿ ಕುಂಠಿತಗೊಂಡಿದ್ದು, ಉಳ್ಳಾಲ ನಗರಸಭೆಯ ಪೌರಾಯುಕ್ತೆ ತಕ್ಷಣ ಉಳ್ಳಾಲದ ಮೂಲಭೂತ ಸೌಕರ್ಯದ ಅಭಿವೃದ್ಧಿಗೆ ಕ್ರಮ ಕೈಗೊಳ್ಳಬೇಕು ಮತ್ತು ಕಳೆದ ಎರಡು ವರ್ಷದ ಅವಧಿಯಲ್ಲಿ ನಡೆದ ಭೃಷ್ಟಾಚಾರದ ವಿಚಾರದಲ್ಲಿ ಕೂಲಂಕುಷ ಪರಿಶೀಲನೆ ನಡೆಸಿ ಲೋಕಾಯುಕ್ತ ತನಿಖೆಗೆ ವಹಿಸಿಕೊಡಬೇಕು ಎಂದು ನಗರಸಭೆಯ ಎಸ್‍ಡಿಪಿಐ ಸದಸ್ಯ ರಮೀಝ್ ನಗರಸಭಾ ಪೌರಾಯುಕ್ತೆಯನ್ನು ಆಗ್ರಹಿಸಿದ್ದು,
ಉಳ್ಳಾಲ: ಕೆಟ್ಟು ನಿಂತ ಲಾರಿಗೆ ಎರಡು ಸ್ಕೂಟರ್ ಗಳು ಢಿಕ್ಕಿ ಹೊಡೆದು ಒಂದು ಸ್ಕೂಟರಿನಲ್ಲಿದ್ದ ಸವಾರ ಸಾವನ್ನಪ್ಪಿ ಸಹಸವಾರ ಗಂಭೀರ ಗಾಯಗೊಂಡು, ಇನ್ನೊಂದು ಸ್ಕೂಟರಿನಲ್ಲಿದ್ದ ಸವಾರ ಗಾಯಗೊಂಡ ಘಟನೆ ನೇತ್ರಾವತಿ ಸೇತುವೆಯಲ್ಲಿ ಇಂದು ನಸುಕಿನ ಜಾವ ಸಂಭವಿಸಿದೆ.ಅಂಗರಗುಂಡಿ ನಿವಾಸಿ ಮೊಹಮ್ಮದ್ ನೌಫಾಲ್ (26) ಸಾವನ್ನಪ್ಪಿ ದವರು. ಸಹಸವಾರ ಉಮ್ಮರ್ ಫಾರುಕ್ ಎಂಬವರು ಗಾಯಗೊಂಡಿರುವುದಾಗಿ ತಿಳಿದುಬಂದಿದೆ. ಇನ್ನೊಂದು ಸ್ಕೂಟರಿನಲ್ಲಿದ್ದ ಗಾಯಾಳುಗಳ ವಿವರ
ಉಳ್ಳಾಲ: ಉಳ್ಳಾಲ ನಗರಸಭೆಯ 2023-24 ನೇ ಸಾಲಿನ ಬಜೆಟ್ ಮಂಡನೆಯಾಗಿದ್ದು ಬಜೆಟ್‍ನ್ನು ವಿರೋಧಿಸಿದ ಜೆಡಿಎಸ್ ಕೌನ್ಸಿಲರ್‍ಗಳು ಕಿವಿಗೆ ಹೂವಿಟ್ಟು ಆಡಳಿತ ರೂಢ ಕಾಂಗ್ರೆಸನ್ನು ಅಣಕಿಸಿದ್ದಾರೆ. ಕಳೆದ ರಾಜ್ಯ ಬಜೆಟ್ ಮಂಡನೆ ವೇಳೆ ವಿಪಕ್ಷ ನಾಯಕ ಸಿದ್ಧರಾಮಯ್ಯ ಅವರು ಸದನದಲ್ಲಿ ಕಿವಿಗೆ ಹೂ ಇಟ್ಟು ಬಿಜೆಪಿ ಸರಕಾರವನ್ನ ಅಣಕಿಸಿ ಗಮನ ಸೆಳೆದಿದ್ದರು.ಕಾಂಗ್ರೆಸ್ ಅಸ್ತ್ರವನ್ನೇ ಇದೀಗ ಜೆಡಿಎಸ್ ನ ಉಳ್ಳಾಲ ನಗರ ಸದಸ್ಯರು ಬಳಸಿ ಆಡಳಿತರೂಢ ಕಾಂಗ್ರೆಸ್
ಉಳ್ಳಾಲ: ಒಂಟಿ ಮಹಿಳೆ ಮೃತದೇಹ ಕೊಳೆತ ಸ್ಥಿತಿಯಲ್ಲಿ ತಾನು ವಾಸವಿದ್ದ ಮನೆಯ ಅಡುಗೆಕೋಣೆಯಲ್ಲಿ ಪತ್ತೆಯಾಗಿರುವ ಘಟನೆ ಹರೇಕಳ ಸಮೀಪದ ದೇರಡ್ಕ ಎಂಬಲ್ಲಿ ನಡೆದಿದೆ.ಹರೇಕಳ ದೇರಡ್ಕ ನಿವಾಸಿ ಜೀನಿ ಡಿಸೋಜ ಎಂಬವರ ಪತ್ನಿ ಮಗ್ಗಿ ಮೊಂತೇರೊ (62) ಎಂಬವರ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಫೆ.16 ರಂದು ಪುತ್ರಿ ಮನೆಗೆ ಬಂದು ತಾಯಿ ಜತೆಗೆ ಮಾತನಾಡಿ ತೆರಳಿದ್ದರು. ಆನಂತರ ಮೂರು ದಿನಗಳಿಂದ ಮೊಬೈಲ್ ಕರೆ ಸ್ವೀಕರಿಸದ ಹಿನ್ನೆಲೆಯಲ್ಲಿ ಪುತ್ರಿ ಮನೆಗೆ ಬಂದಾಗ
ಅಸೈಗೋಳಿ ಕೆ ಎಸ್ ಆರ್ ಪಿಯ ಏಳನೇ ಬೆಟಾಲಿಯನ್ ನ ನೂತನ ಬ್ಯಾಚ್ ನ ಪೊಲೀಸ್ ಪೇದೆ ಬಾಡಿಗೆ ರೂಮಿನಲ್ಲಿ ಆತ್ಮಹತ್ಯೆ ನಡೆಸಿಕೊಂಡಿರುವ ಘಟನೆ ಅಸೈಗೋಳಿ ಸೈಟ್ ನಲ್ಲಿ ಇಂದು ಸಂಜೆ ಬೆಳಕಿಗೆ ಬಂದಿದೆ. ಬೆಳಗಾಂ ನಿವಾಸಿ ವಿಮಲನಾಥ ಜೈನ್ (28) ಆತ್ಮಹತ್ಯೆ ಮಾಡಿಕೊಂಡವರು. ತಿಂಗಳ ಹಿಂದಷ್ಟೇ ತಾಯಿ ತೀರಿಕೊಂಡ ನಂತರ ದು:ಖದಲ್ಲಿದ್ದ ಅವರು ಮಾನಸಿಕವಾಗಿ ಖಿನ್ನತೆಗೆ ಒಳಗಾಗಿದ್ದರು. ನೂತನ ಬ್ಯಾಚ್ ನವರಾಗಿದ್ದ ವಿಮಲನಾಥ್ ಇಂದು ಕರ್ತವ್ಯಕ್ಕೆ ಹಾಜರಾಗದೇ ಬಾಡಿಗೆ ರೂಮಿನಲ್ಲಿ
ಉಳ್ಳಾಲ ತಾಲೂಕಿನ ಕಾಪಿಕಾಡ್ ಉಮಾಪುರಿ ಶ್ರೀ ಉಮಾಮಹೇಶ್ವರಿ ದೇವಸ್ಥಾನದಲ್ಲಿ ಶಿವರಾತ್ರಿ ಮಹೋತ್ಸವದ ಪ್ರಯುಕ್ತ ಆಹೋರಾತ್ರಿ ಭಜನೋತ್ಸವ ಆಯೋಜಿಸಲಾಯಿತು. ಶನಿವಾರ ಮುಂಜಾನೆ ಉಮಾಮಹೇಶ್ವರಿ ಕ್ಷೇತ್ರದಲ್ಲಿ ಆಹೋರಾತ್ರಿ ಭಜನೋತ್ಸವಕ್ಕೆ ಉದ್ಯಮಿ ವನಿತಾ ಶೆಟ್ಟಿ ಮತ್ತು ಗಣೇಶ್ ಶೆಟ್ಟಿ ದಂಪತಿಗಳು ದೀಪ ಪ್ರಜ್ವಲನೆ ಮೂಲಕ ಚಾಲನೆ ನೀಡಿದರು. ಶನಿವಾರ ಮುಂಜಾನೆ ಆರಂಭಗೊಂಡ ಭಜನೋತ್ಸವವು ರಾತ್ರಿ ಶಿವರಾತ್ರಿಯ ಜಾಗರಣೆಯೊಂದಿಗೆ ಮುಂದುವರಿದು ಭಾನುವಾರ ಬೆಳಿಗ್ಗೆ ತನಕ
ಉಳ್ಳಾಲ: ಉಳ್ಳಾಲ್ ಕ್ರಿಕೆಟ್ ಬೋರ್ಡ್ ವತಿಯಿಂದ ಎಂಟನೇ ಅವಧಿಯ ಟೆನಿಸ್ ಬಾಲ್ ಓವರ್ ಆರ್ಮ್ ಕ್ರಿಕೆಟ್ ಪಂದ್ಯಾಟ ಉಳ್ಳಾಲ್ ಪ್ರೀಮಿಯರ್ ಲೀಗ್ ಫೆ.20 ರಿಂದ ಫೆ.25 ರವರೆಗೆ ಐದು ದಿನಗಳ ಕಾಲ ವಿವಿಧ ಸಾಮಾಜಿಕ ಜಾಗೃತಿ ಕಾರ್ಯಕ್ರಮಗಳ ಜೊತೆಗೆ ಉಳ್ಳಾಲದ ಸೀಗ್ರೌಂಡ್ ನಲ್ಲಿ ನಡೆಯಲಿದೆ ಎಂದು ಉಳ್ಳಾಲ್ ಕ್ರಿಕೆಟ್ ಬೋರ್ಡ್ ಇದರ ಅಧ್ಯಕ್ಷ ಯು.ಬಿ ಸಲೀಂ ಹೇಳಿದರು. ಅವರು ತೊಕ್ಕೊಟ್ಟುವಿನ ಉಳ್ಳಾಲ ಪ್ರೆಸ್‍ಕ್ಲಬ್ ನಲ್ಲಿ ಆಯೋಜಿಸಿದ ಸುದ್ಧಿಗೋಷ್ಠಿಯನ್ನು ಉದ್ದೇಶಿಸಿ
ಉಳ್ಳಾಲ: ಅಗ್ನಿ ಆಕಸ್ಮಿಕ ನಡೆದ ಪರಿಣಾಮ ಫಾಸ್ಟ್ ಫುಡ್ ಅಂಗಡಿಯೊಂದು ಸುಟ್ಟು ಕರಕಲಾದ ಘಟನೆ ಕುಂಪಲ ಬಾಲಕೃಷ್ಣ ಮಂದಿರದ ಬಳಿ ನಡೆದಿದೆ. ಶಾರ್ಟ್ ಸರ್ಕ್ಯುಟ್ ನಿಂದ ಅಂಗಡಿಗೆ ಬೆಂಕಿ ತಗುಲಿರುವುದಾಗಿ ಶಂಕಿಸಲಾಗಿದೆ. ಕುಂಪಲ ಆಶ್ರಯ ಕಾಲನಿಯ ನಿವಾಸಿಗಳು ಸ್ನೇಹಿತೆಯರಾದ ಮೋಹಿನಿ ಮತ್ತು ದೀಕ್ಷಿತ ಜತೆಯಾಗಿ ಸಾಲ ಮಾಡಿ ಸಂಜೆ ಹೊತ್ತಲ್ಲಿ ಫಾಸ್ಟ್ ಫುಡ್ ವ್ಯಾಪಾರ ನಡೆಸುತ್ತಿದ್ದರು.ಫಾಸ್ಟ್ ಫುಡ್ ವ್ಯಾಪಾರದಲ್ಲೇ ಸ್ವಾವಲಂಬಿ ಬದುಕು ಕಟ್ಟಿಕೊಂಡಿದ್ದ ಸ್ನೇಹಿತೆಯರೀಗ




























