Home Posts tagged #ullala (Page 2)

ಧರ್ಮಜಾಗೃತಿಯಿಂದ ಹಿಂದುತ್ವಕ್ಕೆ ಶಕ್ತಿ ಕೊಡುವ ಕಾರ್ಯ ಆಗಬೇಕು:ಸಂಸದ ಕ್ಯಾ. ಬ್ರಿಜೇಶ್ ಚೌಟ ಹೇಳಿಕೆ

ಉಳ್ಳಾಲ: ದೇವಸ್ಥಾನಗಳ ಮುಖಾಂತರ ಧರ್ಮಕೇಂದ್ರದ ಚಟುವಟಿಕೆಗಳು ಹಾಗೂ ಧರ್ಮಜಾಗೃತಿಯ ಮುಖೇನ ಹಿಂದುತ್ವಕ್ಕೆ ಶಕ್ತಿ ಕೊಡುವ ಕಾರ್ಯಗಳಾಗಬೇಕಿದೆ ಎಂದು ಸಂಸದ ಕ್ಯಾ.ಬೃಜೇಶ್ ಚೌಟ ಅಭಿಪ್ರಾಯಪಟ್ಟರು. ತಲಪಾಡಿ ದೇವಿಪುರದ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಹಾಗೂ ತನ್ನ ಕುಟುಂಬದ ದೊಡ್ಡಮನೆಗೆ ನೂತನ ಸಂಸದರಾಗಿ ಆಯ್ಕೆಗೊಂಡು ಆಶೀರ್ವಾದ ಪಡೆಯಲು ಬಂದವರು ತಲಪಾಡಿ

ಮನೆಗೊಂದು ಗೇರುಗಿಡ ಯೋಜನೆ:ನಿಗಮದ ಮಮತಾ ಡಿ.ಎಸ್ ಗಟ್ಟಿ ಹೇಳಿಕೆ

ಉಳ್ಳಾಲ: ಖಾಲಿಯಿರುವ ಗುಡ್ಡಪ್ರದೇಶಗಳನ್ನು ಉಪಯೋಗಿಸಿ ಗೇರು ಬೆಳೆ ಬೆಳೆಸುವ ಕಾರ್ಯಕ್ಕೆ ಮುಂದಾಗಿರಿ. ಕ್ಯಾಷ್ಯೂ ಕಾರ್ಖಾನೆಗಳು ಅನೇಕ ಇದ್ದರೂ ದೇಶಕ್ಕೆ ವಿದೇಶಗಳಿಂದ ಗೋಡಂಬಿ ಆಮದು ಮಾಡಲಾಗುತ್ತಿದೆ. ಶೀಘ್ರವೇ ಮನೆಗೊಂದು ಗೇರುಗಿಡ ಯೋಜನೆಯನ್ನು ನಿಗಮದಿಂದ ಕೈಗೊಳ್ಳಲಾಗುವುದು ಎಂದು ಕರ್ನಾಟಕ ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಮತಾ ಡಿ.ಎಸ್ ಗಟ್ಟಿ ಹೇಳಿದರು. ಅವರು ತೊಕ್ಕೊಟ್ಟುವಿನ ಸೇವಾಸೌಧದಲ್ಲಿರುವ ಉಳ್ಳಾಲ ಪ್ರೆಸ್ ಕ್ಲಬ್ ವತಿಯಿಂದ ಆಯೋಜಿಸಲಾದ ತಿಂಗಳ

ಉಳ್ಳಾಲ: ಸಮುದ್ರಪಾಲಾಗುತ್ತಿದ್ದ ಮೂವರು ಮಹಿಳೆಯರ ರಕ್ಷಣೆ, ಓರ್ವ ಮಹಿಳೆ ಸಾವು

ಉಳ್ಳಾಲ: ಇಲ್ಲಿನ ಸಮುದ್ರತೀರಕ್ಕೆ ವಿಹಾರಕ್ಕೆ ಬಂದಿದ್ದ ಆಂದ್ರಪ್ರದೇಶ ಮೂಲದ ನಾಲ್ವರು ಮಹಿಳೆಯರಲ್ಲಿ ಒಬ್ಬಾಕೆ ಸಮುದ್ರಪಾಲಾಗಿದ್ದು, ಉಳಿದ ಮೂವರನ್ನು ಸ್ಥಳೀಯರು ರಕ್ಷಿಸಿದ್ದಾರೆ‌.ಆಂದ್ರಪ್ರದೇಶದ ಕೊಂಡಾಪುರದ ಸಿರಿಲಿಂಗಪಲ್ಲಿ ನಿವಾಸಿ ಪಿ.ಎಲ್ ಪ್ರಸನ್ನ ಎಂಬವರ ಪತ್ನಿ ಪರಿಮೀ ರತ್ನ ಕುಮಾರಿ (57) ಸಾವನ್ನಪ್ಪಿದವರು. ಉಳ್ಳಾಲ ಬೀಚ್ ಸಮುದ್ರದಲ್ಲಿ ವಿಹರಿಸುತ್ತಿದ್ದ ಸಂದರ್ಭ ಬೃಹತ್ ಗಾತ್ರದ ಅಲೆಯೊಂದು ಅಪ್ಪಳಿಸಿ ನಾಲ್ವರು ಮಹಿಳೆಯರನ್ನು ಎಳೆದೊಯ್ದಿತ್ತು.

ಉಳ್ಳಾಲ : ಶಿಕ್ಷಣ ಕಾಶಿಯಲ್ಲಿ ಉದ್ಯೋಗದ ವಿಚಾರಗಳೇ ಇಲ್ಲ- ದಿನಕರ್ ಉಳ್ಳಾಲ್

ಉಳ್ಳಾಲ: ನೈರುತ್ಯ ಕ್ಷೇತ್ರ ಶಿಕ್ಷಣ ಕಾಶಿಯಾಗಿಯೇ ಮುಂದುವರಿಯುತ್ತಿದೆ ಹೊರತು ಉದ್ಯೋಗ ನೀಡುವ ಯಾವುದೇ ಸಂಸ್ಥೆಗಳು ಇಲ್ಲಿ ಆರಂಭವಾಗುತ್ತಿಲ್ಲ. ಪದವೀಧರರಿಗೆ ನಿರುದ್ಯೋಗದ ಸಮಸ್ಯೆ ಜ್ವಲಂತ ಇದ್ದರೂ ವಿಧಾನಸಭೆಯಲ್ಲಿ ಚರ್ಚೆಗಳೇ ಆಗದೇ ಅನಾವಶ್ಯಕ ವಿಚಾರಗಳೇ ಮೇಳೈಸುತ್ತಿವೆ ಎಂದು ನೈರುತ್ಯ ಪದವೀಧರರ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ದಿನಕರ್ ಉಳ್ಳಾಲ್ ಹೇಳಿದರು. ಕುತ್ತಾರು ಖಾಸಗಿ ಹೊಟೇಲಿನಲ್ಲಿ ಹಮ್ಮಿಕೊಂಡ ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ಅವರು ಹಣ, ಜಾತಿ,

ಮೀನುಗಾರಿಕೆಗೆಂದು ಹಾಕಿದ್ದ ಬಲೆಗೆ ಹಾನಿ

ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಗಾಳಿ ಮಳೆಗೆ ಸಮುದ್ರವೂ ಪ್ರಕ್ಷುಬ್ದಗೊಂಡಿದ್ದು, ದೊಡ್ಡ ದೊಡ್ಡ ಸಮುದ್ರದ ಅಲೆಗಳು ದಡಕ್ಕಪ್ಪಳಿಸುತ್ತಿದ್ದು, ಮೊಗವೀರಪಟ್ಟಣದಲ್ಲಿ ಮೀನುಗಾರಿಕೆಗೆಂದು ಹಾಕಿದ್ದ ಬಲೆ ಕಡಲ್ಕೊರೆತದ ಶಾಶ್ವತ ಕಾಮಗಾರಿಯ ಕಲ್ಲಿಗೆ ಸಿಲುಕಿ ಹಾನಿಯಾಗಿದೆ. ಕಳೆದ ಕೆಲವು ದಿನಗಳಿಂದ ಸಮುದ್ರ ಪ್ರಕ್ಷುಬ್ದಗೊಂಡಿತ್ತು. ಈ ನಡುವೆ ಸ್ಥಳೀಯ ನಾಡದೋಣಿಯಲ್ಲಿ ಮೀನುಗಾರಿಕೆಗೆ ತೆರಲಿದ್ದ ಕೆಲವು ದೋನಿಗಳು ಸಮುದ್ರದ ಅಲೆಗಳ ಕಾರಣದಿಂದ ಸಮುದ್ರದದ ದಡಕ್ಕೆ

ಮಂಗಳೂರು: ಸಿಸಿಬಿ ಕಾರ್ಯಾಚರಣೆ- ಅಕ್ರಮ ಪಿಸ್ತೂಲ್ ಹೊಂದಿದ ಇಬ್ಬರ ಸೆರೆ

ಅಕ್ರಮವಾಗಿ ಪಿಸ್ತೂಲ್ ವಶದಲ್ಲಿರಿಸಿಕೊಂಡು ಕಾರಿನಲ್ಲಿ ಕುಳಿತು ಯಾವುದೋ ದುಷ್ಕೃತ್ಯಕ್ಕೆ ಹೊಂಚು ಹಾಕುತ್ತಿದ್ದ ಇಬ್ಬರು ಆರೋಪಿಗಳನ್ನು ಮಂಗಳೂರು ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ‌ ಉಳ್ಳಾಲ ತಾಲೂಕು ತಲಪಾಡಿ ಗ್ರಾಮದ ಪಿಲಿಕೂರು ಪರಿಸರದಲ್ಲಿ ಇಬ್ಬರು ವ್ಯಕ್ತಿಗಳು ಕಪ್ಪು ಬಣ್ಣದ ಕಾರಿನಲ್ಲಿ ಯಾವುದೇ ಪರವಾನಿಗೆ ಇಲ್ಲದೇ ಅಕ್ರಮವಾಗಿ ಪಿಸ್ತೂಲ್ ಅನ್ನು ವಶದಲ್ಲಿರಿಸಿ ಯಾವುದೋ ದುಷ್ಕೃತ್ಯಕ್ಕೆ ಸಂಚು ನಡೆಸುತ್ತಿದ್ದ ಬಗ್ಗೆ ಖಚಿತ ಮಾಹಿತಿ

ಉಳ್ಳಾಲ : ಲಾರಿ ನಂಬರ್ ಪ್ಲೇಟ್ ಗ್ರೀಸ್ ಹಚ್ಚಿ ಮರಳು ಸಾಗಾಟ

ಮಂಗಳೂರು : ಲಾರಿಗಳ ನಂಬರ್ ಪ್ಲೇಟ್‌ಗೆ ಗ್ರೀಸ್ ಹಚ್ಚಿ ಹಾಗೂ ಸ್ಟಿಕ್ಕರ್ ಬಳಸಿ ಮರೆಮಾಚಿಸಿ ರಾತ್ರಿಯಿಡೀ ವ್ಯಾಪಕವಾಗಿ ಮರಳು ಸಾಗಾಟವನ್ನು ಕೊಣಾಜೆ, ಮಂಗಳೂರು ಗ್ರಾಮಾಂತರ, ಉಳ್ಳಾಲ ಪೊಲೀಸ್ ಠಾಣೆಗಳ ಸರಹದ್ದಿನಲ್ಲಿ ಪೊಲೀಸರ ಸಮ್ಮುಖದಲ್ಲೇ ದಂಧೆ ಅವ್ಯಾಹತವಾಗಿ ನಡೆಯುತ್ತಿದ್ದು, ನಿನ್ನೆ ತಡರಾತ್ರಿ ಅಡ್ಯಾರ್ ಕಣ್ಣೂರು ಸಮೀಪ ನಂಬರ್ ಪ್ಲೇಟ್ ಮಾಸಿದ ಮರಳು ಸಾಗಾಟದ ಲಾರಿ ಡಿವೈಡರಿಗೆ ಢಿಕ್ಕಿ ಹೊಡೆದ ಪರಿಣಾಮ ಸಾರ್ವಜನಿಕರು ಲಾರಿಗಳನ್ನು ತಡೆಹಿಡಿದು ನಡೆಸಿದ

ಉಳ್ಳಾಲ: ಮಾದಕ ವಸ್ತು ಕೋಕೆನ್ ಪತ್ತೆ ಇಬ್ಬರು ಆರೋಪಿಗಳ ಸೆರೆ

ಉಳ್ಳಾಲ: ಗೋವಾ ರಾಜ್ಯದಿಂದ ಮಂಗಳೂರು ನಗರ ಹಾಗೂ ಕೇರಳ ರಾಜ್ಯಕ್ಕೆ ನಿಷೇದಿತ ಮಾದಕ ವಸ್ತುವಾದ ಕೋಕೇನ್ ನ್ನು ಸಾಗಾಟ ಹಾಗೂ ಮಾರಾಟ ಮಾಡುತ್ತಿದ್ದವರನ್ನು ಪತ್ತೆ ಹಚ್ಚಿದ ಸಿಸಿಬಿ ಪೊಲೀಸರ ತಂಡ 35 ಗ್ರಾಂ ಕೋಕೆನ್ ನ್ನು ವಶಪಡಿಸಿಕೊಂಡಿದ್ದಾರೆ‌. ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಇನ್ಸ್ ಪೆಕ್ಟರ್ ಶ್ಯಾಮ್ ಸುಂದರ್ ಹೆಚ್ ಎಂ ನೇತೃತ್ವದ ಸಿಸಿಬಿ ಪೊಲೀಸರು ಉಳ್ಳಾಲ ತಾಲೂಕು ಅಂಬ್ಲಮೊಗರು ಗ್ರಾಮದ ಎಲಿಯಾರ್ ಪದವು ಮೈದಾನದ ಬಳಿಯಲ್ಲಿ ದ್ವಿಚಕ್ರ ವಾಹನದಲ್ಲಿ

ಉಳ್ಳಾಲ: ಬೈಕ್ ಢಿಕ್ಕಿ- ಪಾದಚಾರಿ ಬೇಕರಿ ಮಾಲೀಕ ಸಾವು

ಉಳ್ಳಾಲ: ಪಾದಚಾರಿಗೆ ಬೈಕ್ ಢಿಕ್ಕಿ ಹೊಡೆದು ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ತಲಪಾಡಿಯಲ್ಲಿ ನಡೆದಿದೆ. ತಲಪಾಡಿ ಹಳೆಯ ಬಸ್ಸು ತಂಗುದಾಣ ಬಳಿಯ ನಿವಾಸಿ ರಾಜೇಶ್ ಶೆಟ್ಟಿ(49)ಮೃತರು. ರಾಜೇಶ್ ಅವರಿಗೆ ತಲಪಾಡಿ ಹಳೆ ಬಸ್ಸು ತಂಗುದಾಣದ ಬಳಿ ಬೇಕರಿ ಇದ್ದು, ಎದುರಿನ ಹೆದ್ದಾರಿ ಬದಿಯಲ್ಲೇ ಮನೆಯಿದೆ. ಭಾನುವಾರದಂದು ತಲಪಾಡಿ ದೇವಿಪುರದ ರಥೋತ್ಸವ ಇದ್ದ ಹಿನ್ನಲೆ ರಾಜೇಶ್ ಅವರು ಮನೆಗೆ ಬಂದಿದ್ದ ನೆಂಟರನ್ನು ಉಪಚರಿಸಿ

ನರಿಂಗಾನದ ಕಲ್ಲರಕೋಡಿಯಲ್ಲಿ ಅಂಗನವಾಡಿ ಕೇಂದ್ರದ ಡಿಜಿಟಲ್ ವ್ಯವಸ್ಥೆ ಉದ್ಘಾಟನೆ

ಸ್ವಂತ ಕಟ್ಟಡಗಳು ಇರುವ ಅಂಗನವಾಡಿಗಳಿಗೆ ಡಿಜಿಟಲ್ ವ್ಯವಸ್ಥೆ ಆಗಿದೆ. ಉಳಿದ ಕೇಂದ್ರಗಳಿಗೆ ವ್ಯವಸ್ಥೆ ಮಾಡುವ ನಿಟ್ಟಿನಲ್ಲಿ ಸಲಹೆಗಳನ್ನು ನೀಡಬೇಕಿದೆ. ನರಿಂಗಾನದಲ್ಲಿ ಗ್ರಾಮ ಪಂಚಾಯಿತಿ ಮುತುವರ್ಜಿ ವಹಿಸಿರುವುದು ಉತ್ತಮ ಬೆಳವಣಿಗೆ ಎಂದು ಸ್ಪೀಕರ್ ಯು.ಟಿ.ಖಾದರ್ ತಿಳಿಸಿದರು.ನರಿಂಗಾನದ ಕಲ್ಲರಕೋಡಿಯಲ್ಲಿ ಅಂಗನವಾಡಿ ಕೇಂದ್ರದ ಡಿಜಿಟಲ್ ವ್ಯವಸ್ಥೆ ಶನಿವಾರ ಉದ್ಘಾಟಿಸಿ ಮಾತನಾಡಿದರು.ಸ್ಥಳದಾನಿಗಳಾದ ಮಹಮ್ಮದ್ ಪಾರೆ, ರಝಾಕ್ ಪಾರೆ, ಮಜೀದ್ ಪಾರೆ, ಜನಶಿಕ್ಷಣ