Home Posts tagged v4 news

ರೆ. ಜಾರ್ಜ್ ಎ. ಬೆರ್ನಾಡ್ ಮೆಮೋರಿಯಲ್ ಗಾರ್ಡ್‌ನ್ ಲೋಕಾರ್ಪಣೆ

ಮಂಗಳೂರು : ಕರಾವಳಿ ಜಿಲ್ಲೆಗಳಲ್ಲಿ ವಿದೇಶಿ ಮಿಷನರಿಗಳು ಸಲ್ಲಿಸಿದ ಸೇವೆಗಳು ಸ್ಮರಣೀಯ. ಇದಕ್ಕೆ ಪೂರಕವಾಗಿ ದೇಶೀಯ ಸಭಾ ಪಾಲಕರುಗಳು ಸಭಾ ಪ್ರಾಂತ್ಯದ ಅಭಿವೃದ್ಧಿಗಾಗಿ ಸಭಾ ಸೇವೆಗಾಗಿ ತಮ್ಮ ಜೀವನವನ್ನು ಮುಡುಪಾಗಿಟ್ಟಿದ್ದಾರೆ. ಇಂಥವರಲ್ಲಿ ರೆ. ಜಾರ್ಜ್ ಎ. ಬೆರ್ನಾಡ್ ಕೂಡ ಒಬ್ಬರು. ಇಂಥವರನ್ನು ಸ್ಮರಿಸಿ ಇವರ ಹೆಸರಿನಲ್ಲಿ ಕರ್ನಾಟಕ ಥಿಯಲಾಜಿಕಲ್ ಕಾಲೇಜಿನ

ಪ್ಯಾಸೆಂಜರ್ ರೈಲುಗಳನ್ನು ಪುನಃರಾರಂಭಿಸಬೇಕು : ಎಐಟಿಯುಸಿ ಮಂಜೇಶ್ವರ ಮಂಡಲ ಸಮಿತಿಯಿಂದ ಪ್ರತಿಭಟನೆ

ಮಂಜೇಶ್ವರ: ಕೇಂದ್ರ ಸರಕಾರವು ರೈಲ್ವೆ ಇಲಾಖೆಯನ್ನು ಖಾಸಗಿಕರಣಗೊಳಿಸುವುದನ್ನು ನಿಲ್ಲಿಸಿ, ಪ್ಯಾಸಂಜರ್ ರೈಲುಗಳನ್ನು ಪುನಃರಾರಂಬಿಸಬೇಕು. ಹೆಚ್ಚಿಸಿದ ರೈಲ್ವೆ ಪ್ಲಾಟ್ ಫಾರ್ಮ್ ಶುಲ್ಕ ರದ್ದುಗೊಳಿಸಬೇಕು, ಸೀಸನ್ ಟಿಕೆಟ್ ಮತ್ತು ಯಾತ್ರಾ ಸೌಲಭ್ಯಗಳನ್ನು ಪುನಃ ಸ್ಥಾಪಿಸಬೇಕು ಮೊದಲಾದ ಬೇಡಿಕೆಗಳನ್ನು ಒತ್ತಾಯಿಸಿ ಎಐಟಿಯುಸಿ ಮಂಜೇಶ್ವರ ಮಂಡಲ ಸಮಿತಿ ವತಿಯಿಂದ ಮಂಜೇಶ್ವರ ರೈಲ್ವೆ ಸ್ಟೇಷನ್‌ಗೆ ಮಾರ್ಚ್ ಮತ್ತು ಧರಣಿ ನಡೆಯಿತು. ಎಐಟಿಯುಸಿ ಜಿಲ್ಲಾ ಕೋಶಾಧಿಕಾರಿ ಬಿ.ವಿ

ಮಂಗಳೂರಿನ ಸಂತ ಅಲೋಶಿಯಸ್ ಕಾಲೇಜು: ನಗರದ ಟಾಗೂರ್ ಪಾರ್ಕ್‌ನಲ್ಲಿ ಸ್ವಚ್ಛತಾ ಅಭಿಯಾನ

ಮಂಗಳೂರಿನ ಸಂತ ಅಲೋಶಿಯಸ್ ಸ್ವಾಯುತ್ತ ಕಾಲೇಜಿನ ಅಟೊನಾಮಸ್ ವಿಭಾಗದ ಎನ್‌ಸಿಸಿ ಏರ್‌ವಿಂಗ್ ಕೆಡೆಟ್‌ಗಳಿಂದ ನಗರದ ಟಾಗೂರ್ ಪಾರ್ಕ್‌ನಲ್ಲಿ ಸ್ವಚ್ಛತಾ ಕಾರ್ಯಕ್ರಮ ನಡೆಯಿತು. ಒಟ್ಟು 59 ಕೆಡೆಟ್‌ಗಳಿಂದ ಸ್ವಚ್ಛಾತಾ ಕಾರ್ಯ ನೆರವೇರಿತು. ಎನ್‌ಸಿಸಿ ಏರ್‌ವಿಂಗ್‌ನ ಅಫೀಸರ್ ಅಲ್ವಿನ್ ಸ್ಟೀಪನ್ ಮಿಸ್ಕಿತ್ ಅವರು ನೇತೃತ್ವವನ್ನು ವಹಿಸಿದ್ದರು. ಟಾಗೂರ್ ಪಾರ್ಕ್‌ನಲ್ಲಿದ್ದಂತಹ ಪ್ರತಿಮೆಯನನು ವಿದ್ಯಾರ್ಥಿಗಳು ಸ್ಚಚ್ಚಗೊಳಿಸಿದರು. ಇನ್ನು ವಿದ್ಯಾರ್ಥಿಗಳು ಬ್ಯಾನರ್

ಮೂಡುಬಿದಿರೆಯಲ್ಲಿ ರಾಜ್ಯಮಟ್ಟದ ಕವಿಕಾವ್ಯ ಸಂಗಮ-2021

ಮೂಡುಬಿದಿರೆ: ಕನ್ನಡ ಸಾಹಿತ್ಯ ಪರಿಷತ್ ಮೂಲಕ ಸರ್ಕಾರದ ಮಟ್ಟದಲ್ಲಿ ಸಾಹಿತ್ಯದ ಕೆಲಸವಾಗುತ್ತಿದೆ. ಹಾಗೆಯೇ ರಾಜ್ಯದಲ್ಲಿ ಖಾಸಗಿ ಸಂಘ ಸಂಸ್ಥೆಗಳು ಕೂಡ ಮಾದರಿ ಸಾಹಿತ್ಯ ಸೇವೆಗಳನ್ನು ಮಾಡುತ್ತಿವೆ. ಅಂತಹ ಸಂಸ್ಥೆಗಳನ್ನು ಗುaರುತಿಸಬೇಕು.ಕೊರೊನಾ ಲಾಕ್‌ಡೌನ್ ಸಂದರ್ಭದಲ್ಲಿ ಸ್ತಬ್ಧವಾದ ನಮ್ಮ ಜೀವನಕ್ರಮ ಸಾಹಿತ್ಯ, ಸಾಂಸ್ಕೃತಿಕಗಳ ಮೂಲಕ ಮತ್ತೆ ಚೈತನ್ಯವನ್ನು ಪಡೆಯಲಿ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಅಧ್ಯಕ್ಷ ಡಾ.ಎಂ ಮೋಹನ ಆಳ್ವ ಹೇಳಿದರು. ನವಪರ್ವ ಫೌಂಡೇಶನ್

ಪುತ್ತೂರಿನ ಕೃಷ್ಣನಗರ ಚರ್ಚ್ ಬಳಿಯ ಅಂಗಡಿಗಳಿಂದ ಕಳವು

ಪುತ್ತೂರು: ಪುತ್ತೂರು ಉಪ್ಪಿನಂಗಡಿ ರಸ್ತೆಯ ಕೃಷ್ಣನಗರ ಚರ್ಚ್ ಬಳಿಯ ಎರಡು ಅಂಗಡಿಗಳಿಗೆ ಕಳ್ಳರು ನುಗ್ಗಿದ ಘಟನೆ ಸೆ.23 ರಂದು ಬೆಳಕಿಗೆ ಬಂದಿದೆ. ಕೃಷ್ಣನಗರ ಬಳಿಯ ಗೋಪಾಲ ಎಂಬವರ ಅಂಗಡಿಗೆ ಕಳ್ಳರು ಪಕ್ಕದ ಮರ ಏರಿ ಶೀಟ್ ಜಾರಿಸಿ ಒಳನುಗ್ಗಿ ಅಂಗಡಿಯಲ್ಲಿ ದಾಸ್ತಾನಿದ್ದ 2 ಗೋಣಿ ಸಿಗರೇಟು ಪ್ಯಾಕೇಟ್ ಮತ್ತು ಗುಡ್ಕಾ ಹಾಗು ಡ್ರಾವರ್ ನಲ್ಲಿ ಇದ್ದ ಚಿಲ್ಲರೆ ಹಣವನ್ನು ಕಳವು ಮಾಡಿದ್ದಾರೆ. ಪಕ್ಕದ ಲತೀಫ್ ಎಂಬವರ ತರಕಾರಿ ಅಂಗಡಿಯ ರೋಲಿಂಗ್ ಶೆಟರ್ ಮೂಲಕ ಒಳನುಗ್ಗಿದ

ಕೇಂದ್ರದ ಕೃಷಿ ಮಸೂದೆ ವಿರೋಧಿಸಿ ಭಾರತ್ ಬಂದ್

ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಕೃಷಿ ಮಸೂದೆಯನ್ನು ವಿರೋಧಿಸಿ ಸೆ.27ರಂದು ಭಾರತ್ ಬಂದ್‍ಗೆ ರೈತ ಸಂಘಟನೆಗಳು ಕರೆ ನೀಡಿದ್ದು, ಬಂಟ್ವಾಳದ ಬಿ.ಸಿ. ರೋಡ್‍ನ ಮಿನಿ ವಿಧಾನಸೌಧದರಿಂದ ಕಾಲ್ನಡಿಗೆಯಲ್ಲಿ ಹೊರಟು ಬ್ರಹ್ಮಶ್ರೀ ನಾರಾಯಣಗುರು ವೃತ್ತದ ಬಳಿ ಬೃಹತ್ ಪ್ರತಿಭಟನಾ ಸಭೆ ಹಾಗೂ ರಾಷ್ಟ್ರೀಯ ಹೆದ್ದಾರಿ ಬಂದ್ ಚಳುವಳಿಯನ್ನು ಹಮ್ಮಿಕೊಳ್ಳಲಾಗಿದೆ ಎಂದು ರಾಜ್ಯ ರೈತ ಸಂಘದ ಪ್ರಧಾನ ಕಾರ್ಯದರ್ಶಿ ರವಿಕಿರಣ ಪುಣಚ ಹೇಳಿದರು.ಅವರು ಮಂಗಳೂರಿ ಪ್ರೆಸ್‍ಕ್ಲಬ್‍ನಲ್ಲಿ

ಉಡುಪಿಯಲ್ಲಿ ಅಗತ್ಯ ವಸ್ತುಗಳ ಬೆಲೆ ಏರಿಕೆ ವಿರುದ್ಧ ಜೆಡಿಎಸ್‌ನಿಂದ ಪ್ರತಿಭಟನೆ

ಕೋವಿಡ್ ಮಹಾಮಾರಿಯಿಂದ ಸಂಕಷ್ಟದಲ್ಲಿರುವ ಸಂದರ್ಭದಲ್ಲಿ ರಾಜ್ಯ ಸರ್ಕಾರ ಮತ್ತು ಕೇಂದ್ರ ಸರಕಾರದ ಲಾಕ್ ಡೌನ್ ಘೋಷಿಸಿದ್ದರಿಂದ ಜನ ಸಾಮಾನ್ಯರು ಕೆಲಸ ಕಾರ್ಯಗಳಿಲ್ಲದೆ ಆರ್ಥಿಕ ಸಂಕಷ್ಟದಲ್ಲಿರುವ ಈ ಸಂದರ್ಭದಲ್ಲಿ, ಗ್ಯಾಸ್, ಪೆಟ್ರೋಲ್, ಡಿಸೇಲ್, ವಿದ್ಯುತ್ ಹಾಗೂ ನಿತ್ಯ ಉಪಯೋಗಿ ವಸ್ತುಗಳ ಬೆಲೆ ಏರಿಕೆ ವಿರುದ್ಧ ಉಡುಪಿ ಜಿಲ್ಲಾಧಿಕಾರಿ ಕಛೇರಿ ಎದುರು ಜೆ.ಡಿ.ಎಸ್ ಪ್ರತಿಭಟನೆ ನಡೆಸಿ ಮುಖ್ಯಮಂತ್ರಿಯವರಿಗೆ ಉಡುಪಿ ಜಿಲ್ಲಾಧಿಕಾರಿಗಳ ಮೂಲಕ ಮನವಿ ನೀಡಲಾಯಿತು. ಈ

ದ.ಕ. ಜಿಲ್ಲಾ ಕಾಂಗ್ರೆಸ್ ಕಾರ್ಮಿಕ ವಿಭಾಗದ ಅಧ್ಯಕ್ಷರುಗಳ ಪದಗ್ರಹಣ

ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಕಾರ್ಮಿಕ ವಿಭಾಗದ ನೂತನವಾಗಿ ಆಯ್ಕೆಯಾದ ಬ್ಲಾಕ್ ಅಧ್ಯಕ್ಷರುಗಳಾಗಿ ನೇಮಕರಾದ 15 ಅಧ್ಯಕ್ಷರುಗಳ ಪದಗ್ರಹಣ ಕಾರ್ಯಕ್ರಮ ಜಿಲ್ಲಾ ಕಾಂಗ್ರೆಸ್ ಸಭಾಂಗಣದಲ್ಲಿ ಜಿಲ್ಲಾ ಕಾರ್ಮಿಕ ಘಟಕಗಳ ಅಧ್ಯಕ್ಷರಾದ ಲಾರೆನ್ಸ್ ಡಿಸೋಜ ರವರ ನೇತೃತ್ವದಲ್ಲಿ ಜರುಗಿತು ಈ ಕಾರ್ಯಕ್ರಮದಲ್ಲಿ ಮಾಜಿ ಸಚಿವರಾದ ರಮಾನಾಥ್ ರೈ ಮಾತನಾಡಿ, ಜಿಲ್ಲಾ ಕಾಂಗ್ರೆಸ್ ಕಾರ್ಮಿಕ ಸಂಘಟನೆಗಳು ಪಕ್ಷದ ಚಟುವಟಿಕೆಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ. ಈ