ಮಂಗಳೂರು ಬೋಳಾರದ ಮಂಗಳಾದೇವಿ ದೇವಸ್ಥಾನದ ಹೆಸರನ್ನು ಗೂಗಲ್ ಭೂಪಟದಲ್ಲಿ ಯಾರೋ ಕಿಡಿಗೇಡಿಗಳು ಪೀರ್ ದರ್ಗಾ ಕಾಂಪೌಂಡ್ ಎಂದು ತಿದ್ದಿರುವುದಾಗಿ ತಿಳಿದು ಬಂದಿದೆ. ಇದನ್ನು ಸರಿಪಡಿಸುವಂತೆ ದೇವಾಲಯದ ಆಡಳಿತ ಮಂಡಳಿಯವರು ದೂರು ದಾಖಲಿಸಿದ್ದಾರೆ. ಇದು ಕುಕೃತ್ಯ ಎಂದೂ ಖಂಡಿಸಿದ್ದಾರೆ.
ರಾತ್ರಿ ಹೊತ್ತು ಗ್ಯಾಸ್ ಸಾಗಾಟ ವಾಹನವೊಂದನ್ನು ಅಪಾಯಕಾರಿ ಸ್ಥಿತಿಯಲ್ಲಿ ಹೆದ್ದಾರಿಯಲ್ಲೇ ನಿಲ್ಲಿಸಿ ಮದ್ಯ ಸೇವಿಸಲು ಹೋದ ಚಾಲಕ ಪೊಲೀಸರ ಅತಿಥಿಯಾಗಿದ್ದಾನೆ. ಮೂಡಬಿದರೆಯದ್ದು ಎನ್ನಲಾದ ಎಚ್‌ಪಿ ಅನಿಲ ಸಾಗಾಟ ವಾಹನವನ್ನು ಅದರ ಚಾಲಕ ಕಟಪಾಡಿ ಪೇಟೆಬಳಿ ಹೆದ್ದಾರಿಯಲ್ಲೇ ನಿಲ್ಲಿಸಿ ತೆರಳಿದ್ದು, ಸ್ಥಳಕ್ಕೆ ಬಂದ ಕಟಪಾಡಿಯ ಉಪ ಠಾಣಾ ಪೊಲೀಸ್ ಒರ್ವರು ಸುಮಾರು ಅರ್ಧ ಗಂಟೆ ಕಾದು ಆ ಚಾಲಕನನ್ನು ಪತ್ತೆ ಹಚ್ಚುವಲ್ಲಿ ಯಶಸ್ವಿಯಾದರು. ಕಂಠಪೂರ್ತಿ ಕುಡಿದು ಬಂದ ಚಾಲಕ ತಾನು
ಸಹಕಾರ ರಂಗದ ಅಗ್ರಮಾನ್ಯ ಬ್ಯಾಂಕ್ ಎನಿಸಿರುವ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ (ಎಸ್ ಸಿಡಿಸಿಸಿ ಬ್ಯಾಂಕ್)ಗೆ ಮಹಾರಾಷ್ಟ್ರದ ಅವಿಸ್ ಪಬ್ಲಿಕೇಶನ್ ನೀಡುವ ಪ್ರತಿಷ್ಠಿತ “ಬ್ಯಾಂಕೊ ಬ್ಲೂ ರಿಬ್ಬನ್ – 2023 ಪ್ರಶಸ್ತಿ”ಯನ್ನು ಮುಂಬಯಿಯಲ್ಲಿ ಪ್ರದಾನ ಮಾಡಲಾಯಿತು. ದಮನ್ ನ ಡೆಲ್ಟಿನ್ ರೆಸಾರ್ಟ್ ಸಭಾಂಗಣದಲ್ಲಿ ಆಯೋಜಿಸಲಾದ ಮೂರು ದಿನಗಳ ವಾರ್ಷಿಕ ಶೃಂಗಸಭೆಯಲ್ಲಿ ನಡೆದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದ ಮಾಜಿ
ಸೌಜನ್ಯ ಪ್ರಕರಣ ಮರು ತನಿಖೆಗೆ ಆಗ್ರಹಿಸಿ ರಾಜ್ಯದ ವಿವಿಧೆಡೆ ಪ್ರತಿಭಟನೆಗಳು ನಡೆಯುತ್ತಿರುವ ಬೆನ್ನಲ್ಲೇ ಸಿದ್ದರಾಮಯ್ಯ ನೇತೃತ್ವದ ಸರಕಾರ ಮರು ತನಿಖೆ ಕುರಿತು ಮಹತ್ವದ ನಿರ್ಧಾರ ತಳೆದಿದೆ. ಈ ವಿಚಾರಕ್ಕೆ ಸಂಬಂಧಿಸಿ ಸಿಎಂ ಸಿದ್ದರಾಮಯ್ಯ ಮಹತ್ವದ ಮಾಹಿತಿ ನೀಡಿದ್ದಾರೆ. ಸೌಜನ್ಯ ಪ್ರಕರಣದ ಮರು ತನಿಖೆಗೆ ಒತ್ತಾಯಿಸಿ ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯಲು ರಾಜ್ಯ ಸರ್ಕಾರ ಸಿದ್ಧವಿದ್ದು, ಅದಕ್ಕೂ ಮುನ್ನ ಸೌಜನ್ಯ ಪೋಷಕರು ಮರುತನಿಖೆಗೆ ಕೇಂದ್ರ ಸರ್ಕಾರಕ್ಕೆ ಮನವಿ
ಮಂಗಳೂರಿನ ನಂತೂರಿನಿಂದ ಮೂಡುಬಿದರೆಯ ತನಕ ರಾಷ್ಟ್ರೀಯ ಹೆದ್ದಾರಿಗಾಗಿ ಸ್ವಾಧೀನಪಡಿಸಿದ ಭೂಮಿಗೆ ಸೂಕ್ತ ಪರಿಹಾರ ನೀಡುವಲ್ಲಿ ವಿಳಂಬ ಆರೋಪಿಸಿ ಎನ್.ಎಚ್. 169 ಭೂ ಮಾಲೀಕರ ಹೋರಾಟ ಸಮಿತಿ ವತಿಯಿಂದ ನಂತೂರಿನ ರಾಷ್ಟ್ರೀಯ ಹೆದ್ದಾರಿ ಯೋಜನಾ ನಿರ್ದೇಶಕರ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದರು. ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಭೂ ಮಾಲಕರ ಹೋರಾಟ ಸಮಿತಿ ಅಧ್ಯಕ್ಷೆ ಮರಿಯಮ್ಮ ಥಾಮಸ್ ಅವರು, ರಾ.ಹೆದ್ದಾರಿ 169ರ ಅಗಲೀಕರಣಕ್ಕಾಗಿ ಭೂಸ್ವಾಧೀನಗೊಂಡವರಿಗೆ
ತಲಪಾಡಿ ಗ್ರಾಮ ಪಂಚಾಯಿತಿನಲ್ಲಿ ನಡೆದ ಅಧ್ಯಕ್ಷರ ಚುನಾವಣೆಯಲ್ಲಿ ಎಸ್‍ಡಿಪಿಐ ಅಭ್ಯರ್ಥಿಗಳನ್ನು ಬೆಂಬಲಿಸಿದ ಇಬ್ಬರು ಬಿಜೆಪಿ ಬೆಂಬಲಿತ ಸದಸ್ಯರನ್ನು ಜಿಲ್ಲಾಧ್ಯಕ್ಷರ ಆದೇಶದಂತೆ ತಕ್ಷಣದಿಂದ ಪಕ್ಷದ ಚಟುವಟಿಕೆಗಳಿಂದ ಉಚ್ಛಾಟಿಸಲಾಗುವುದು ಹಾಗೂ ಮುಂದಿನ ಆರು ವರ್ಷಗಳ ಕಾಲ ಪಕ್ಷಕ್ಕೆ ಬರದಂತೆ ನಿರ್ಭಂಧಿಸಲಾಗುವುದು ಎಂದು ಮಂಗಳೂರು ಕ್ಷೇತ್ರ ಬಿಜೆಪಿ ಅಧ್ಯಕ್ಷ ಚಂದ್ರಹಾಸ್ ಪಂಡಿತ್ ಹೌಸ್ ಹೇಳಿದ್ದಾರೆ. ಅವರು ಪಂಡಿತ್ ಹೌಸ್‍ನ ಚುನಾವಣಾ
ರಾಜ್ಯ ಹೆದ್ದಾರಿಯಲ್ಲಿ ಟಿಪ್ಪರ್ ಡಿಕ್ಕಿ ಹೊಡೆದು ಕಾರಿನಲ್ಲಿದ್ದವರ ಪೈಕಿ ಓರ್ವ ಮೃತ ಪಟ್ಟರೆ ಉಳಿದವರು ಗಂಭೀರ ಗಾಯಗೊಂಡು ಆಸ್ಪತ್ರೆ ದಾಖಲಾಗಿದ್ದಾರೆ.ಮೃತರನ್ನು ಮೂಡುಬಿದಿರೆ ಸಮೀಪದ ಬೆಳುವಾಯಿ ನಿವಾಸಿ ರಾಮಣ್ಣ ಎಂದು ಗುರುತಿಸಲಾಗಿದೆ. ಐಕಳ ಕಡೆಯಿಂದ ಕಿನ್ನಿಗೋಳಿ ಕಡೆಗೆ ಹೋಗುತ್ತಿದ್ದ ಟಿಪ್ಪರ್ ಮೂರುಕಾವೇರಿ ಸಮೀಪದ ಮಾರಿಗುಡಿ ಬಳಿ ಕಾರ್ನಾಡ್ ಕಡೆಯಿಂದ ಬೆಳುವಾಯಿ ಕಡೆಗೆ ಹೋಗುತ್ತಿದ್ದ ಕಾರ್ ಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.ಅಪಘಾತದ ರಭಸಕ್ಕೆ ಕಾರು
ಮಂಗಳೂರು: ಹೆಸರಾಂತ 30 ಮಾರ್ಕಿನ ಬೀಡಿಗಳ ತಯಾರಕರಾದ. ಭಾರತ್ ಬೀಡಿ ವರ್ಕ್ಸ್ ಪ್ರೈವೇಟ್ ಲಿಮಿಟೆಡ್ ಇದರ ಸ್ಥಾಪನಾ ದಿನಾಚರಣೆ ಕಾರ್ಯಕ್ರಮವು ರವಿವಾರ ಕದ್ರಿ ಯಲ್ಲಿರುವ ಸಂಸ್ಥೆಯ ಕೇಂದ್ರ ಕಚೇರಿಯಲ್ಲಿ ನಡೆಯಿತು. ಸಂಸ್ಥೆಯ ಕಾರ್ಯದರ್ಶಿ ವಾಸುದೇವ ಪೈ ಸ್ವಾಗತಿಸಿದರು. ಸಂಸ್ಥೆಯ ನಿರ್ದೇಶಕ ಆನಂದ್ ಜಿ. ಪೈ ಸ್ವಾಗತಿಸಿ ಪ್ರಸ್ತಾವನೆಗೈದು ಸಂಸ್ಥೆ ನಡೆದು ಬಂದ ದಾರಿಯನ್ನು ವಿವರಿಸಿದರು. ಇನ್ನೋರ್ವ ನಿರ್ದೇಶಕ ಸುಬ್ರಾಯ ಎಂ. ಪೈ ಅವರು ವರ್ಕ್ ಫ್ರಮ್ ಹೋಮ್
ನಗರದ ಕಾರ್ ಸ್ಟ್ರೀಟ್‌ನಲ್ಲಿರುವ ಮನೋಹರ್ ಶೇಠ್ ಮಾಲೀಕತ್ವದ ಅಂಗಡಿ ಮತ್ತು ಉತ್ತರ ಪ್ರದೇಶ ಮೂಲದ ಬೆಚನ್ ಸೋನಾರ್ ಅವರ ಮಾಲೀಕತ್ವದ ಫಳ್ನೀರ್‌ನಲ್ಲಿರುವ ಮತ್ತೊಂದು ಅಂಗಡಿಯಿಂದ ಚಾಕೊಲೇಟ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಡ್ರಗ್ಸ್ ಲೇಪಿತ ಚಾಕೊಲೇಟ್‌ಗಳ ಬಗ್ಗೆ ದೊರೆತ ಖಚಿತ ಮಾಹಿತಿ ಮೇರೆಗೆ ಮಂಗಳೂರು ದಕ್ಷಿಣ ಪೊಲೀಸರು ಕಾರ್ಯಾಚರಣೆ ನಡೆಸಿದ್ದರು. ಮಾದಕ ದ್ರವ್ಯ ಮಿಶ್ರಿತ ಚಾಕೊಲೇಟ್‌ಗಳನ್ನು ‘ಬ್ಯಾಂಗ್’ ಚಾಕೊಲೇಟ್‌ಗಳ
ಬಂಟ್ವಾಳ ತಾಲೂಕಿನ ನಂದಾವರ ಎಂಬಲ್ಲಿ ಗುಡ್ಡ ಕುಸಿತವಾಗಿದ್ದು, ಅದು ಮನೆಯೊಂದರ ಮೇಲೆ ಬಿದ್ದು ಮಹಿಳೆ ಮೃತಪಟ್ಟ ಘಟನೆ ನಡೆದಿದೆ. ಮಹಮ್ಮದ್ ಎಂಬವರ ಮನೆಯ ಮೇಲೆ ಇಂದು ಬೆಳಿಗ್ಗೆ ಗುಡ್ಡ ಕುಸಿದು ಬಿದ್ದಿದೆ. ಝರೀನಾ ಮತ್ತು ಸಫಾ ಎಂಬವರು ಸಿಲುಕಿಕೊಂಡಿದ್ದು ಸಫಾ ಅವರನ್ನು ರಕ್ಷಿಸಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಝರೀನಾ ಮನೆಯೊಳಗೆ ಅಸುನೀಗಿದ್ದಾರೆ. ಸ್ಥಳಕ್ಕೆ ಎನ್.ಡಿ.ಆರ್.ಎಫ್, ಅಗ್ನಿಶಾಮಕ ಸಿಬಂದಿ ಸ್ಥಳೀಯರೊಂದಿಗೆ ಸುರಿಯುವ ಮಳೆಯಲ್ಲೂ ರಕ್ಷಣಾ




























