Home Posts tagged #v4news (Page 4)

ಮಾದಕ ದ್ರವ್ಯ ಮಿಶ್ರಿತ ಚಾಕೊಲೇಟ್‌ಗಳ ಮಾರಾಟ

ನಗರದ ಕಾರ್ ಸ್ಟ್ರೀಟ್‌ನಲ್ಲಿರುವ ಮನೋಹರ್ ಶೇಠ್ ಮಾಲೀಕತ್ವದ ಅಂಗಡಿ ಮತ್ತು ಉತ್ತರ ಪ್ರದೇಶ ಮೂಲದ ಬೆಚನ್ ಸೋನಾರ್ ಅವರ ಮಾಲೀಕತ್ವದ ಫಳ್ನೀರ್‌ನಲ್ಲಿರುವ ಮತ್ತೊಂದು ಅಂಗಡಿಯಿಂದ ಚಾಕೊಲೇಟ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಡ್ರಗ್ಸ್ ಲೇಪಿತ ಚಾಕೊಲೇಟ್‌ಗಳ ಬಗ್ಗೆ ದೊರೆತ ಖಚಿತ ಮಾಹಿತಿ ಮೇರೆಗೆ ಮಂಗಳೂರು ದಕ್ಷಿಣ ಪೊಲೀಸರು ಕಾರ್ಯಾಚರಣೆ

ಬಂಟ್ವಾಳದ ನಂದಾವರ ಎಂಬಲ್ಲಿ ಗುಡ್ಡ ಕುಸಿತ : ಮಹಿಳೆ ಮೃತ್ಯು

ಬಂಟ್ವಾಳ ತಾಲೂಕಿನ ನಂದಾವರ ಎಂಬಲ್ಲಿ ಗುಡ್ಡ ಕುಸಿತವಾಗಿದ್ದು, ಅದು ಮನೆಯೊಂದರ ಮೇಲೆ ಬಿದ್ದು ಮಹಿಳೆ ಮೃತಪಟ್ಟ ಘಟನೆ ನಡೆದಿದೆ. ಮಹಮ್ಮದ್ ಎಂಬವರ ಮನೆಯ ಮೇಲೆ ಇಂದು ಬೆಳಿಗ್ಗೆ ಗುಡ್ಡ ಕುಸಿದು ಬಿದ್ದಿದೆ. ಝರೀನಾ ಮತ್ತು ಸಫಾ ಎಂಬವರು ಸಿಲುಕಿಕೊಂಡಿದ್ದು ಸಫಾ ಅವರನ್ನು ರಕ್ಷಿಸಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಝರೀನಾ ಮನೆಯೊಳಗೆ ಅಸುನೀಗಿದ್ದಾರೆ. ಸ್ಥಳಕ್ಕೆ ಎನ್.ಡಿ.ಆರ್.ಎಫ್, ಅಗ್ನಿಶಾಮಕ ಸಿಬಂದಿ ಸ್ಥಳೀಯರೊಂದಿಗೆ ಸುರಿಯುವ ಮಳೆಯಲ್ಲೂ ರಕ್ಷಣಾ

ಕೋಮು ಗಲಭೆ ಪ್ರಚೋದಿಸುವ ಪೋಸ್ಟ್ ಗಳನ್ನು ಹರಿಯ ಬಿಡುವವರ ವಿರುದ್ಧ ಕ್ರಮಕ್ಕೆ ಶಾಸಕ ಡಾ. ಭರತ್ ಶೆಟ್ಟಿ ಮನವಿ

ಸಾಮಾಜಿಕ ಜಾಲತಾಣಗಳಲ್ಲಿ ಹಿಂದೂಗಳ ಭಾವನೆಗೆ ದಕ್ಕೆ ತರುವ, ಕೋಮು ಗಲಭೆ ಪ್ರಚೋದಿಸುವ ಪೋಸ್ಟ್ ಗಳನ್ನು ಹರಿಯಬಿಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಮಂಗಳೂರು ನಗರ ಉತ್ತರ ಶಾಸಕರಾದ ಡಾ. ಭರತ್ ಶೆಟ್ಟಿಯವರು ಮಂಗಳೂರು ಪೊಲೀಸ್ ಕಮೀಷನರ್ ಕುಲದೀಪ್ ಜೈನ್ ಅವರಿಗೆ ಮನವಿ ಮಾಡಿದ್ದಾರೆ. ಪೊಲೀಸ್ ಕಮೀಷನರ್ ಅವರನ್ನು ಕಚೇರಿಯಲ್ಲಿ ಭೇಟಿ ಮಾಡಿದ ಶಾಸಕರು ಸಾಮರಸ್ಯ, ಸಹಬಾಳ್ವೆ ಮತ್ತು ಶಾಂತಿ ಸುವ್ಯವಸ್ಥೆ ತುಂಬಿರುವ ಜಿಲ್ಲೆಯಲ್ಲಿ ಅವಹೇಳನಕಾರಿ ಪೋಸ್ಟ್ ಮೂಲಕ

ಸಜೀಪಮೂಡ : ಇಂದಿರಾ ಸೇವಾ ಕೇಂದ್ರದ ಉದ್ಘಾಟನೆ

ಸಜೀಪಮೂಡ ಗ್ರಾಮದ ಬೊಳ್ಳಾಯಿ ಜಂಕ್ಷನ್ ಹಾಗೂ ಸುಭಾಶ್‍ನಗರದ ಬ್ರಹ್ಮಶ್ರೀ ನಾರಾಯಣ ಗುರು ಸಭಾಂಗಣದ ಆವರಣದಲ್ಲಿ ಸಜೀಪಮೂಡ ವಲಯ ಕಾಂಗ್ರೆಸ್ ವತಿಯಿಂದ ನಿರ್ವಹಿಸಲ್ಪಡುವ ಇಂದಿರಾ ಸೇವಾ ಕೇಂದ್ರವನ್ನು ಮಾಜಿ ಸಚಿವ ಬಿ. ರಮಾನಾಥ ರೈ ಉದ್ಘಾಟಿಸಿದರು. ಈ ಸಂದರ್ಭ ಮಾತನಾಡಿದ ಅವರು ಸರ್ಕಾರದ ಎಲ್ಲಾ ಸೌಲಭ್ಯಗಳು ಜನರಿಗೆ ಸುಲಭವಾಗಿ ದೊರಕುವಂತಾಗಲೂ ಪಕ್ಷದ ವತಿಯಿಂದ ಇಂದಿರಾ ಸೇವಾ ಕೇಂದ್ರಗಳನ್ನು ಆರಂಭಿಸಲಾಗಿದ್ದು ಎಲ್ಲರೂ ಇದರ ಸದುಪಯೋಗ ಪಡೆದುಕೊಳ್ಳುವಂತೆ

ಕಾಂಗ್ರೆಸ್‍ನಿಂದ ಬಟ್ಟಲು ಬಡಿದು ಪ್ರತಿಭಟನೆ 

ರಾಜ್ಯ ಸರಕಾರದ ಅನ್ನಭಾಗ್ಯ ಯೋಜನೆಗೆ ಅಕ್ಕಿ ನೀಡಲು ನಿರಾಕರಿಸಿದ ಕೇಂದ್ರ ಸರ್ಕಾರದ ವಿರುದ್ಧ ಮಂಗಳೂರಿನಲ್ಲಿ ಮಾಜಿ ಸಚಿವ ಬಿ.ರಮಾನಾಥ ರೈ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು. ನಗರದ ಮಿನಿವಿಧಾನಸೌಧ ಮುಂಭಾಗದಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಬಟ್ಟಲು ಬಡಿದು ವಿನೂತನ ರೀತಿಯಲ್ಲಿ ಪ್ರತಿಭಟಿಸಿ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಮಾಜಿ ಸಚಿವ ರಮಾನಾಥ ರೈ ಅವರು, ಹಿಂದಿನ ಕಾಂಗ್ರೆಸ್

ಜೂನ್ 17 ಮತ್ತು 18 : ಪುತ್ತೂರು ಜೈನಭವನದಲ್ಲಿ ಹಲಸು ಮತ್ತು ಹಣ್ಣುಗಳ ಮೇಳ-2023

ಪುತ್ತೂರು ನವತೇಜ ಟ್ರಸ್ಟ್, ಬೆಂಗಳೂರಿನ ಭಾರತೀಯ ತೋಟಗಾರಿಕಾ ಸಂಶೋಧನಾ ಸಂಸ್ಥೆ ಹಾಗೂ ಪುತ್ತೂರು ಜೆಸಿಐ ಸಂಯುಕ್ತ ಆಶ್ರಯದಲ್ಲಿ 6ನೇ “ಹಲಸು ಮತ್ತು ಹಣ್ಣುಗಳ ಮೇಳ-2023” ಜೂ.17 ಹಾಗೂ 18 ರಂದು ಪುತ್ತೂರು ಬೈಪಾಸ್ ರಸ್ತೆಯಲ್ಲಿರುವ ಜೈನ ಭವನದಲ್ಲಿ ನಡೆಯಲಿದೆ ಎಂದು ನವತೇಜ ಟ್ರಸ್ಟ್ ಅಧ್ಯಕ್ಷ ಅನಂತಪ್ರಸಾದ್ ನೈತ್ತಡ್ಕ ತಿಳಿಸಿದ್ದಾರೆ. ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಮೇಳದಲ್ಲಿ ಸುಮಾರು 30ಕ್ಕೂ ಅಧಿಕ ಮಿಕ್ಕಿ ಹಲಸಿನ ಉತ್ಪನ್ನಗಳ ಪ್ರದರ್ಶನ

ಮಹಿಳಾ ಕ್ರೀಡಾಪಟುಗಳ ಮೇಲೆ ನಡೆಯುತ್ತಿರುವ ಲೈಂಗಿಕ ಕಿರುಕುಳವನ್ನು ಖಂಡಿಸಿ ಪ್ರತಿಭಟನಾ ಪ್ರದರ್ಶನ

ಮಹಿಳಾ ಕ್ರೀಡಾಪಟುಗಳ ಮೇಲೆ ನಡೆಯುತ್ತಿರುವ ಲೈಂಗಿಕ ಕಿರುಕುಳ ಹಾಗೂ ಹಿಂಸೆಯನ್ನು ಖಂಡಿಸಿ,BJP ಸಂಸದ ಬ್ರಿಜ್ ಭೂಷಣ್ ಸಿಂಗ್ ಮತ್ತು BJP ಹರ್ಯಾಣ ಮಂತ್ರಿ ಸಂದೀಪ್ ಸಿಂಗ್ ವಿರುದ್ಧ ಕಠಿಣ ಕ್ರಮ ಜರುಗಿಸಲು ಒತ್ತಾಯಿಸಿ ಇಂದು ದೇಶಾದ್ಯಂತ ಪ್ರತಿಭಟನೆ ನಡೆಸಲು ಕರೆ ನೀಡಿರುವ ಹಿನ್ನೆಲೆಯಲ್ಲಿ ಮಂಗಳೂರಿನ ಕ್ಲಾಕ್ ಟವರ್ ಬಳಿಯಲ್ಲಿ ಪ್ರತಿಭಟನಾ ಪ್ರದರ್ಶನ ನಡೆಸಲಾಯಿತು. ದೆಹಲಿಯಲ್ಲಿ ನಡೆಯುತ್ತಿರುವ ಮಹಿಳಾ ಕ್ರೀಡಾಪಟುಗಳ ನ್ಯಾಯಯುತ ಹೋರಾಟವನ್ನು ಬೆಂಬಲಿಸಿ ದೇಶದ ರೈತ

ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಬಜರಂಗದಳ ನಿಷೇಧ : ಬಿಜೆಪಿ ಅಭ್ಯರ್ಥಿ ಗುರ್ಮೆ ಸುರೇಶ್ ಶೆಟ್ಟಿ ಕಿಡಿ

ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಬಜರಂಗದಳ ನಿಷೇಧದ ಕುರಿತು ಕಾಪು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗುರ್ಮೆ ಸುರೇಶ್ ಶೆಟ್ಟಿ ಅವರು ಕಿಡಿಕಾರಿದರು. ಅವರು ವಿ4 ನ್ಯೂಸ್ ನೊಂದಿಗೆ ಮಾತನಾಡಿ, ಬಜರಂಗದಳ ಸಂಘಟನೆಯ ಮುಖಾಂತರ ಅಕ್ರಮ ದನ ಸಾಗಾಟ ಹಾಗೂ ಲವ್ ಜಿಹಾದ್ ವಿರುದ್ಧ ಹೋರಾಟ ಮಾಡಲಾಗುತ್ತಿದೆ. . ಇಂತಹ ಸಂಘಟನೆಯನ್ನು ನಿಷೇಧಕ್ಕೆ ಮುಂದಾಗುತ್ತಿರುವ ಸರಿಯಲ್ಲ.ಇದು ಕಾಂಗ್ರೆಸ್ ಅವನತಿ ಹೋಗುತ್ತದೆ ಎಂಬುದಕ್ಕೆ ಇದುವೇ ಸಾಕ್ಷಿಯಾಗಿದೆ ಎಂದು ಅವರು

ಅಧಿಕಾರ ನಡೆಸುವುದು ಬಿಡಿ,ವಿರೋಧ ಪಕ್ಷದ ಸ್ಥಾನದಲ್ಲೂ ಕೂರಲು BJP ನಾಲಾಯಕ್ಕು – ಜಿ ಎನ್ ನಾಗರಾಜ್

ರಾಜ್ಯದ ಜನತೆ ನೀಡಿದ ಜನಾದೇಶಕ್ಕೆ ವಿರುದ್ಧವಾಗಿ ಅಕ್ರಮ ಸರಕಾರ ರಚಿಸಿ ಜನತೆಯ ಬದುಕನ್ನು ಮೂರಾಬಟ್ಟೆಯನ್ನಾಗಿಸಿ ರಾಜ್ಯದ ಖಜಾನೆಯನ್ನು ಲೂಟಿ ಮಾಡಿದೆ.40% ಕಮಿಷನ್ ಸರಕಾರವೆಂದು ತನ್ನವರಿಂದಲೇ ಕರೆಸಿಕೊಂಡ BJP,ನಾಡಿನ ಸೌಹಾರ್ದತೆಯನ್ನು ನಾಶ ಮಾಡಿದೆ.ಇಂತಹ BJP,ಸರಕಾರ ನಡೆಸುವುದು ಬಿಡಿ ವಿರೋಧ ಪಕ್ಷದ ಸ್ಥಾನದಲ್ಲೂ ಕೂರಲು ನಾಲಾಯಕ್ಕು ಎಂದು ಕರ್ನಾಟಕ ಪ್ರಾಂತ ಕೃಷಿಕೂಲಿಕಾರರ ಸಂಘದ ಸ್ಥಾಪಕಾಧ್ಯಕ್ಷರಾದ ಜಿ ಎನ್ ನಾಗರಾಜ್ ರವರು ಖಾರವಾಗಿ ಪ್ರತಿಕ್ರಿಯೆ ನೀಡಿದರು.

ಬಂಟ್ವಾಳದ ವಿಎನ್‍ಆರ್ ಗೋಲ್ಡ್‍ನಲ್ಲಿ ಅಕ್ಷಯ ತೃತೀಯ ಸಂಭ್ರಮ

ಬಂಟ್ವಾಳದ ಪ್ರತಿಷ್ಠಿತ ಚಿನ್ನಾಭರಣ ಮಳಿಗೆಯಾದ ವಿಎನ್‍ಆರ್ ಗೋಲ್ಡ್‍ನಲ್ಲಿ ಅಕ್ಷಯ ತೃತೀಯ ಪ್ರಯುಕ್ತ ಗ್ರಾಹಕರಿಗೆ ಅತೀ ಕಡಿಮೆ ದರದಲ್ಲಿ ಚಿನ್ನಾಭರಣಗಳನ್ನು ಖರೀದಿ ಮಾಡುವ ಅವಕಾಶವಿದೆ. ಗ್ರಾಹಕರು ಎಪ್ರಿಲ್ 22ರಂದು ವಿಎನ್‍ಆರ್ ಮಳಿಗೆಗೆ ಭೇಟಿ ನೀಡಿ ಚಿನ್ನಾಭರಣವನ್ನು ಖರೀದಿಸಿ ಸಂಭ್ರಮಿಸಬಹುದು. ಅಕ್ಷಯ ತೃತೀಯದಂದು ಚಿನ್ನ ಖರೀದಿ ಮಾಡುವುದು ಅದೃಷ್ಟ ಹಾಗೂ ಸಮೃದ್ಧಿಯ ಸಂಕೇತ ಎಂದೇ ಭಾವಿಸಲಾಗಿದೆ. ಯಾಕೆಂದ್ರೆ ಈ ದಿನವನ್ನು ಮಂಗಳಕರ