Home Posts tagged #v4news (Page 5)

ಬಂಟ್ವಾಳದ ವಿಎನ್‍ಆರ್ ಗೋಲ್ಡ್‍ನಲ್ಲಿ ಅಕ್ಷಯ ತೃತೀಯ ಸಂಭ್ರಮ

ಬಂಟ್ವಾಳದ ಪ್ರತಿಷ್ಠಿತ ಚಿನ್ನಾಭರಣ ಮಳಿಗೆಯಾದ ವಿಎನ್‍ಆರ್ ಗೋಲ್ಡ್‍ನಲ್ಲಿ ಅಕ್ಷಯ ತೃತೀಯ ಪ್ರಯುಕ್ತ ಗ್ರಾಹಕರಿಗೆ ಅತೀ ಕಡಿಮೆ ದರದಲ್ಲಿ ಚಿನ್ನಾಭರಣಗಳನ್ನು ಖರೀದಿ ಮಾಡುವ ಅವಕಾಶವಿದೆ. ಗ್ರಾಹಕರು ಎಪ್ರಿಲ್ 22ರಂದು ವಿಎನ್‍ಆರ್ ಮಳಿಗೆಗೆ ಭೇಟಿ ನೀಡಿ ಚಿನ್ನಾಭರಣವನ್ನು ಖರೀದಿಸಿ ಸಂಭ್ರಮಿಸಬಹುದು. ಅಕ್ಷಯ ತೃತೀಯದಂದು ಚಿನ್ನ ಖರೀದಿ

ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ಜಾತ್ರೆ ಮಹೋತ್ಸವ : ಹೊರೆಕಾಣಿಕೆ ಮೆರವಣಿಗೆ

ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಏ. 10ರಿಂದ 20ರ ತನಕ ನಡೆಯಲಿರುವ ವೈಭವದ ಜಾತ್ರೋತ್ಸವಕ್ಕೆ ಹೊರೆಕಾಣಿಕೆ ಸಮರ್ಪಣೆಯಾಯಿತು. ಹೊರೆಕಾಣಿಕೆ ಮೆರವಣಿಗೆಗೆ ಪುತ್ತೂರು ಸೀಮೆ ಹಾಗೂ ವಿವಿಧ ಧಾರ್ಮಿಕ ಕ್ಷೇತ್ರಗಳಿಂದ ಹೊರೆಕಾಣಿಕೆ ದರ್ಬೆ ವೃತ್ತ ಹಾಗೂ ಬೊಳುವಾರಿನ ಸುಬ್ರಹ್ಮಣ್ಯ ನಗರದಲ್ಲಿ ಸೇರಿ ಏಕಕಾಲದಲ್ಲಿ ಚಾಲನೆ ನೀಡಲಾಯಿತು. ದರ್ಬೆ ವೃತ್ತದಲ್ಲಿ ಶ್ರಿ ವಜ್ರದೇಹಿ ಮಠದ ಶ್ರೀ ರಾಜಶೇಖರಾನಂದ ಸ್ವಾಮಿಜಿ ತೆಂಗಿನಕಾಯಿ

ಹಿರಿಯ ದೈವ ಪಾತ್ರಿ ಲಾಡಿ ಅಣ್ಣು ಶೆಟ್ಟಿ ನಿಧನ

ಮೂಡುಬಿದಿರೆ: ಹಿರಿಯ ದೈವಪಾತ್ರಿ, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಲಾಡಿ ಅಣ್ಣು ಶೆಟ್ಟಿ (78ವ)ಅಲ್ಪಕಾಲದ ಅಸೌಖ್ಯದಿಂದ ಇಂದು ಮುಂಜಾನೆ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಲಾಡಿ ಹಜಂಕಾಲಬೆಟ್ಟು, ಮಾರ್ನಾಡು, ತೋಡಾರು ಸಹಿತ ಜಿಲ್ಲೆಯ ಹಲವಾರು ದೈವಸ್ಥಾನಗಳಲ್ಲಿ ದೈವಪಾತ್ರಿಯಾಗಿ ಸೇವೆ ಸಲ್ಲಿಸುತ್ತಿದ್ದ ಅವರು ಪತ್ನಿ, ಇಬ್ಬರು ಹೆಣ್ಣು ಮಕ್ಕಳು ಮತ್ತು ಓರ್ವ ಪುತ್ರನನ್ನು ಅಗಲಿದ್ದಾರೆ.ಶಾಸಕ ಉಮಾನಾಥ ಕೋಟ್ಯಾನ್, ಮಾಜಿ ಸಚಿವ ಕೆ.ಅಭಯಚಂದ್ರ ಜೈನ್,

ಗುಂಡ್ಯ ಹಿಟ್ ಅಂಡ್ ರನ್; ವ್ಯಕ್ತಿ ಸಾವು

ಗುಂಡ್ಯ: ರಾಷ್ಟ್ರೀಯ ಹೆದ್ದಾರಿ ಬೆಂಗಳೂರು-ಮಂಗಳೂರು ಮಧ್ಯೆ ಗುಂಡ್ಯ ಎಂಬಲ್ಲಿ ಎ.2ರ ಬೆಳಗ್ಗೆ ರಸ್ತೆಯ ಬದಿಯಲ್ಲಿ ಮಲಗಿದ ವ್ಯಕ್ತಿಯ ಮೇಲೆ ಲಾರಿಯೊಂದು ಚಲಾಯಿಸಿ ಸಾರಿ ಸಮೇತ ಚಾಲಕ ಪರಾರಿಯಾದ ಕೆಲವೇ ಕ್ಷಣದಲ್ಲಿ ಚಾಲಕ ಹಾಗೂ ಲಾರಿಯನ್ನು ವಶಕ್ಕೆ ಪಡೆಯಲಾಗಿದೆ.ಘಟನೆಯಲ್ಲಿ ವ್ಯಕ್ತಿ ಸ್ಥಳದಲ್ಲಿ ಮೃತಪಟ್ಟಿದ್ದಾರೆ. ಮೃತಪಟ್ಟ ವ್ಯಕ್ತಿಯನ್ನು ಕೇರಳದ ಪೊನ್ನಪ್ಪನ್(ವ.50) ಎಂದು ಗುರುತಿಸಲಾಗಿದೆ.ಮೃತ ವ್ಯಕ್ತಿಯು ಮೂಲತಃ ಕೇರಳದವನಾಗಿದ್ದು, ಕಳೆದ 15 ವರ್ಷದಿಂದ

ಅಡ್ಯಾರ್ : ಐಸ್ ಕ್ರೀಮ್ ದಾಸ್ತಾನು ಕೇಂದ್ರದಲ್ಲಿ ಬೆಂಕಿ ಅವಘಡ

ಅಡ್ಯಾರ್ ನಲ್ಲಿರುವ ಐಸ್ ಕ್ರೀಮ್ ದಾಸ್ತಾನು ಕೇಂದ್ರವೊಂದರಲ್ಲಿ ಸೋಮವಾರ ತಡರಾತ್ರಿ ಬೆಂಕಿ ಅವಘಡ ಸಂಭವಿಸಿದ್ದು, ಅಪಾರ ನಾಶನಷ್ಟ ಸಂಭವಿಸಿರುವುದಾಗಿ ವರದಿಯಾಗಿದೆ. ಅಡ್ಯಾರ್ ನಲ್ಲಿರುವ ಪೋಲಾರ್ ಐಸ್ ಕ್ರೀಂ ಸ್ವಾಕಿಸ್ಟ್ ಎಂಬ ನಂದಿನಿ ಐಸ್ ಕ್ರೀಂ ದಾಸ್ತಾನು ಕೇಂದ್ರದಲ್ಲಿ ಸೋಮವಾರ ತಡರಾತ್ರಿ 2 ಗಂಟೆ ಸುಮಾರಿಗೆ ಬೆಂಕಿ ಈ ಅವಘಡ ಸಂಭವಿಸಿದೆ. ಈ ವೇಳೆ ದಾಸ್ತಾನು ಕೇಂದ್ರದ ಪಕ್ಕದಲ್ಲಿ ನಿಲ್ಲಿಸಲಾಗಿದ್ದ ಲಾರಿ ಸಹಿತ ಎರಡು ವಾಹನಗಳು ‌ಬೆಂಕಿಗೆ ಆಹುತಿಯಾಗಿವೆ ಎಂದು

ಕಾರ್ಕಳ : ಹೆರಿಗೆಯ ಸಮಯ ಮಗು ಮೃತಪಟ್ಟ ಪ್ರಕರಣ : ವೈದ್ಯರ ನಿರ್ಲಕ್ಷ ಆರೋಪ

ಬಡ ರೋಗಿಗಳಿಗೆ ಅನುಕೂಲವಾಗಲೆಂದು ಸುಮಾರು ಎಂಟು ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಿರುವ ಕಾರ್ಕಳ ಸರ್ಕಾರಿ ಆಸ್ಪತ್ರೆಯ ವೈದ್ಯರ ವಿರುದ್ಧ ಕರ್ತವ್ಯ ಲೋಪದ ಆರೋಪ ಕೇಳಿ ಬಂದಿದೆ. ತುಂಬು ಗರ್ಭಿಣಿಯೊಬ್ಬರು ಸರಕಾರಿ ಆಸ್ಪತ್ರೆಗೆ ಬಂದರು ಸಕಾಲದಲ್ಲಿ ವೈದ್ಯರ ನೆರವು ಸಿಗದೆ ಮಂಗಳೂರಿನಲ್ಲಿ ಮೃತಪಟ್ಟಿದ್ದು ಇದಕ್ಕೆ ಕಾರ್ಕಳ ವೈದ್ಯಾಧಿಕಾರಿಗಳ ನಿರ್ಲಕ್ಷ ಹಾಗೂ ಕರ್ತವ್ಯ ಲೋಪ ಕಾರಣವೆಂದು ಮಹಿಳೆಯ ಸಂಬಂಧಿಕರು ದೂರಿದ್ದಾರೆ. ಕಾರ್ಕಳ ತಾಲೂಕಿನ ಸಾಣೂರು ಗ್ರಾಮದ ಮಠದಕೆರೆ

ಮಾ.25ರಂದು ಮೋರ್ಲ ಬೋಳದಲ್ಲಿ ಪ್ರಥಮ ವರ್ಷದ ನರಿಂಗಾನ ಕಂಬಳ

ಉಳ್ಳಾಲ: ಇಲ್ಲಿನ ತಾಲೂಕಿನಲ್ಲಿ ಇದೇ ಮೊದಲ ಬಾರಿಗೆ ಸರಕಾರಿ ಕಂಬಳ ಆಯೋಜನೆ ಮಾಡಲಾಗಿದ್ದು ನರಿಂಗಾನ ಗ್ರಾಮದ ಮೋರ್ಲ ಬೋಳದಲ್ಲಿ ಲವಕುಶ ಜೋಡುಕರೆ ಹೆಸರಿನಲ್ಲಿ ನರಿಂಗಾನ ಕಂಬಳ ಮಾ. 25ರಂದು ಹೊನಲು ಬೆಳಕಿನಲ್ಲಿ ನಡೆಯಲಿದ್ದು ಬೆಳಗ್ಗೆ 10.30ಕ್ಕೆ ಗಣ್ಯರ ಉಪಸ್ಥಿತಿಯಲ್ಲಿ ತುಳುನಾಡಿನ ಧಾರ್ಮಿಕ ವಿಧಿಗಳೊಂದಿಗೆ ಉದ್ಘಾಟನೆಗೊಳ್ಳಲಿದೆ ಎಂದು ಶಾಸಕ ಯು.ಟಿ.ಖಾದರ್ ಹೇಳಿದರು.ಕಂಬಳ ಕರೆಯ ಬಳಿಯಲ್ಲಿ ಬುಧವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರುಮಾ. 25ರಂದು

ಕಾರ್ಕಳ : ಮೇಣದ ಬತ್ತಿ ತಯಾರಿಕಾ ಘಟಕ ಬೆಂಕಿಗಾಹುತಿ

ಕಾರ್ಕಳ ತಾಲೂಕಿನ ನಿಟ್ಟೆ ಗ್ರಾಮದ ಅತ್ತೂರು ಪರ್ಪಲೆಗುಡ್ಡೆ ಎಂಬಲ್ಲಿನ ಮೇಣದ ಬತ್ತಿ ತಯಾರಿಕಾ ಘಟಕದಲ್ಲಿ ನಿನ್ನೆ ಅಗ್ನಿ ಅವಘಡ ಸಂಭವಿಸಿದ್ದು, ಈ ದುರಂತದಿಂದ ಮೇಣದ ಬತ್ತಿ ತಯಾರಿಕಾ ಘಟಕ ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿದ್ದು ಸುಮಾರು 25 ಲಕ್ಷ ರೂಪಾಯಿಗೂ ಮಿಕ್ಕಿ ನಷ್ಟ ಸಂಭವಿಸಿದೆ ಎನ್ನಲಾಗಿದೆ. ಅತ್ತೂರು ಚರ್ಚಿಗೆ ಸೇರಿದ್ದ ಪರ್ಪಲೆ ಗುಡ್ಡದಲ್ಲಿರುವ ಮೇಣದ ಬತ್ತಿ ತಯಾರಿಕಾ ಘಟಕದ ಇಡೀ ಕಟ್ಟಡ, ಯಂತ್ರೋಪಕರಣಗಳು ಹಾಗೂ ಮೇಣದ ಬತ್ತಿ ತಯಾರಿಕೆಗೆ ದಾಸ್ತಾನು

ಎಂಐಎಫ್‍ಎಸ್‍ಇಗೆ ಟೈಮ್ಸ್ ಗ್ರೂಪ್ ಅವಾರ್ಡ್ 2023

ಫೈರ್ & ಸೇಫ್ಟಿ ಮತ್ತು ಎಚ್‍ಎಸ್‍ಇ ಕ್ಷೇತ್ರದಲ್ಲಿ ಕಳೆದ 16 ವರ್ಷಗಳಲ್ಲಿ ನಿರಂತರ ಸಾಧನೆಗಳನ್ನು ಸೃಷ್ಟಿಸಿ 17 ಸಾವಿರಕ್ಕಿಂತಲೂ ಅಧಿಕ ವಿದ್ಯಾರ್ಥಿಗಳಿಗೆ ದೇಶ ವಿದೇಶಗಳಲ್ಲಿ ಉದ್ಯೋಗ ಒದಗಿಸಿದ ವಿದ್ಯಾಸಂಸ್ಥೆ ಮಂಗಳೂರು ಇನ್ಸಿಟ್ಯೂಟ್ ಆಫ್ ಫೈರ್ & ಸೇಫ್ಟಿ ಇಂಜಿನಿಯರಿಂಗ್ (ಎಂಐಎಫ್‍ಎಸ್‍ಇ)ಗೆ 2023 ಸಾಲಿನ ಇಕಾನಮಿಕ್ಸ್ ಬಿಸಿನೆಸ್ ಟೈಮ್ಸ್ ಅವಾರ್ಡ್ 2023 ಲಭಿಸಿದೆ. ಬಾಲಿವುಡ್ ನಟಿ ರಿಷಿ ಖನ್ನಾ ಅವಾರ್ಡನ್ನು

ಉಳ್ಳಾಲ : ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ತಾನೇ ಆಂಬ್ಯುಲೆನ್ಸ್ ಹತ್ತಿದ್ದ ವ್ಯಕ್ತಿ ಸಾವು

ಉಳ್ಳಾಲ: ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡು ವ್ಯಕ್ತಿಯೋರ್ವ ಪತ್ನಿಯ ಸಂಬಂಧಿಕರ ಮನೆಯಲ್ಲೇ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ಮುಚ್ಚಿಲಕೋಡಿ ಎಂಬಲ್ಲಿ ಸಂಭವಿಸಿದೆ.ವಿಟ್ಲ ಕನ್ಯಾನ ನಿವಾಸಿ ಬಾಬು ಶೆಟ್ಟಿಗಾರ್ ಎಂಬವರ ಪುತ್ರ ಹರೀಶ್ (33) ಆತ್ಮಹತ್ಯೆ ಮಾಡಿಕೊಂಡವರು. ಇವರು 10 ವರ್ಷಗಳಿಂದ ಮುಡಿಪುವಿನ ಇನ್ಫೋಸಿಸ್ ಸಂಸ್ಥೆಯ ಗಾರ್ಡನ್ ಕೆಲಸ ನಿರ್ವಹಿಸುತ್ತಿದ್ದರು. ನವವಿವಾಹಿತರಾಗಿದ್ದ ಹರೀಶ್ ಅವರು ಸಿದ್ದಕಟ್ಟೆ ಸಂಗಬೆಟ್ಟು