Home Posts tagged #v4news (Page 9)

ವಕೀಲರ ಮನೆ ಪ್ರವೇಶ ಮಾಡಿ ಮನೆಯಿಂದ ಎಳೆದುಕೊಂಡು ಹೋಗಿ  ದೌರ್ಜನ್ಯ ಆರೋಪ: ಮಂಗಳೂರು ವಕೀಲರ ಸಂಘ ಖಂಡನೆ

ದಿನಾಂಕ 3.12.2022 ರಂದು ಮಂಗಳೂರಿನ ಯುವ ವಕೀಲರಾದ ಕುಲದೀಪ್ ಶೆಟ್ಟಿ ಅವರ ಮೇಲೆ ಬಂಟ್ವಾಳದ ಪುಂಜಾಲಕಟ್ಟೆಯ ಪೊಲೀಸ್ ಠಾಣೆಯ ಪೋಲೀಸರು ನಡೆಸಿದ ದೌರ್ಜನ್ಯವನ್ನು ಮಂಗಳೂರು ವಕೀಲರ ಸಂಘದ ಕಾರ್ಯಕಾರಿ ಸಮಿತಿಯ ತುರ್ತು ಸಭೆಯಲ್ಲಿ ತೀವ್ರವಾಗಿ ಖಂಡಿಸಲಾಗಿದೆ. ಸಿವಿಲ್ ವ್ಯಾಜ್ಯ ನ್ಯಾಯಾಲಯದಲ್ಲಿ ಇದ್ದು ಎದುರುದಾರರ ವಿರುದ್ದ ಪ್ರತಿಬಂದಕಾಜ್ಞೆ ಇದ್ದೂ ಕೂಡ ಎದುರುದಾರರ

ಸುರತ್ಕಲ್ ಅಕ್ರಮ ಟೋಲ್ ಬಂದ್ : ಹೋರಾಟಗಾರರ ವಿಜಯೋತ್ಸವ

ಸುರತ್ಕಲ್ ಅಕ್ರಮ ಟೋಲ್ ಗೇಟ್ ಮುಚ್ಚುವಂತೆ ಆಗ್ರಹಿಸಿ ಕಳೆದ 35 ದಿನಗಳಿಂದ ನಡೆಯುತ್ತಿದ್ದ ಆಹೋರಾತ್ರಿ ಹೋರಾಟವು ಬುಧವಾರ ರಾತ್ರಿ ಮುಕ್ತಾಯಗೊಂಡಿದ್ದು, ಹೋರಾಟ ಯಶಸ್ವಿಯಾದ ಹಿನ್ನೆಲೆಯಲ್ಲಿ ಹೋರಾಟ ಸಮಿತಿಯ ನಾಯಕರು ಹಾಗೂ ಕಾರ್ಯಕರ್ತರು ಗುರುವಾರದಂದು ಸುರತ್ಕಲ್ ಧರಣಿ ವೇದಿಕೆಯಲ್ಲಿ ವಿಜಯೋತ್ಸವ ಆಚರಿಸಿದರು. ಸಾಮೂಹಿಕ ಹೋರಾಟದ ಫಲವಾಗಿ ಸುರತ್ಕಲ್ ಅಕ್ರಮ ಟೋಲ್ ಮುಚ್ಚುವಂತಾಯಿತು, ದೇಶದಲ್ಲಿ ಇರುವ ಎಲ್ಲಾ ಅಕ್ರಮ ಟೋಲ್ ಗಳ ಮುಚ್ಚುಗಡೆಗೆ ಈ ಹೋರಾಟ

ಕಾಪುವಿನಲ್ಲಿ ಡಿ.16, 18 ಮತ್ತು 19ರಂದು ಕಡಲ ಐಸಿರ ಬೀಚ್ ಫೆಸ್ಟ್

ಕಾಪು ಲಾಲ್ ಬಹದ್ದೂರ್ ಶಾಸ್ತ್ರಿ ಸ್ಪೋರ್ಟ್ಸ್, ಕಲ್ಚರಲ್ ಕ್ಲಬ್ ಕಾಪು, ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಪು ಪಡು ಮತ್ತು ದಿ. ಆರ್.ಡಿ. ಮೆಂಡನ್ ಕಾಪು ಸ್ಮರಣಾರ್ಥ ಜನ್ಮ ಶತಮಾನೋತ್ಸವ ಆಚರಣಾ ಸಮಿತಿಯ ಸಂಯುಕ್ತ ಆಶ್ರಯದಲ್ಲಿ ಡಿಸೆಂಬರ್ 16, 17 ಮತ್ತು 18 ರಂದು ಕಾಪು ಬೀಚ್ ನಲ್ಲಿ ಕಡಲ ಐಸಿರ ಬೀಚ್ ಫೆಸ್ಟ್ -2022 ನಡೆಯಲಿದೆ ಎಂದು ಸಮಿತಿಯ ಗೌರವಾಧ್ಯಕ್ಷ, ಶಾಸಕ ಲಾಲಾಜಿ ಆರ್. ಮೆಂಡನ್ ತಿಳಿಸಿದರು. ಕಾಪು ಬೀಚ್ ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ

ಯಕ್ಷರಂಗದ ಅಪ್ರತಿಮ ಕಲಾವಿದ ಕುಂಬ್ಳೆ ಸುಂದರ್ ರಾವ್ ಅಸ್ತಂಗತ

ಯಕ್ಷರಂಗದ ಅಪ್ರತಿಮ ಕಲಾವಿದ ಕುಂಬ್ಳೆ ಸುಂದರ್ ರಾವ್ ಅಸ್ತಂಗತರಾಗಿದ್ದಾರೆ.ಯಕ್ಷಗಾ‌ನ ಕಲಾವಿದರೂ ಮಾಜಿ ಶಾಸಕರೂ ಆಗಿದ್ದ ಕುಂಬ್ಳೆ ಸುಂದರ್ ರಾವ್ ಅನಾರೋಗ್ಯದಿಂದ ವಿಧಿವಶರಾಗಿದ್ದಾರೆ. ಯಕ್ಷಗಾನ ಮತ್ತು ತಾಳ-ಮದ್ದಳೆ (ಸಾಂಪ್ರದಾಯಿಕ ನೃತ್ಯ) ಕಲಾವಿದರೂ ಆಗಿದ್ದ ಸುಂದರ್ ರಾವ್, ಮಂಗಳೂರಿನ ಆಗಿನ ಸುರತ್ಕಲ್ ಕ್ಷೇತ್ರದ ಶಾಸಕರಾಗಿಯೂ ಸೇವೆ ಸಲ್ಲಿಸಿದ್ದರು. 1994 ರಿಂದ 1999ರವರೆಗೆ ಬಿಜೆಪಿಯಿಂದ ಸುರತ್ಕಲ್ ಕ್ಷೇತ್ರದ ಶಾಸಕರಾಗಿ ಆಯ್ಕೆಯಾಗಿದ್ದ ಅವರು, ಸುರತ್ಕಲ್,

ಶತಮಾನೋತ್ತರ ದಶಮಾನೋತ್ತರ ಸಂಭ್ರಮದಲ್ಲಿ ಎಂಸಿಸಿ ಬ್ಯಾಂಕ್

ಕರಾವಳಿಯ ಮುಂಚೂಣಿ ಸಹಕಾರಿ ಲಿಮಿಟೆಡ್ ಬ್ಯಾಂಕ್ಗಳಲ್ಲಿ ಒಂದಾದ ಎಂಸಿಸಿ ಬ್ಯಾಂಕ್ ಮಂಗಳೂರು ಇದ್ರ ಶತಮಾನೋತ್ತರ ದಶಮಾನೋತ್ಸವ ಕಾರ್ಯಕ್ರಮವು ನಗರದ ಮಿಲಾಗ್ರಿಸ್ ಕಾಲೇಜಿನ ಮೈದಾನದಲ್ಲಿ ಸಂಭ್ರಮದಿಂದ ನಡೆಯಿತು. ಕಾರ್ಯಕ್ರಮವನ್ನು ಮಂಗಳೂರು ಬಿಷಪ್ ರೆವರೆಂಡ್ ಡಾ. ಪೀಟರ್ ಪಾವ್ಲ್ ಸಲ್ಡಾನಾ ಮತ್ತು ಉಡುಪಿ ಬಿಷಪ್ ಡಾ. ಜೆರಾಲ್ಡ್ ಐಸಾಕ್ ಲೋಬೋ ಅವರು ದೀಪ ಬೆಳಗಿಸಿ ಉದ್ಘಾಟಿಸಿದರು. ಇದೇ ವೇಳೆ ಮಾತನಾಡಿದ ಡಾ. ಪೀಟರ್ ಪಾವ್ಲ್ ಸಲ್ಡಾನಾ ಅವರು, ಸಮಾಜಕ್ಕೆ

ಬೆಳ್ತಂಗಡಿಯಲ್ಲಿ ಸ್ಯಾಟಲೈಟ್ ಕರೆ ಹೋಗಿರುವುದು ದೃಢಪಟ್ಟಿಲ್ಲ: ಎಸ್ಪಿ ರಿಷಿಕೇಶ್ ಸೋನಾವಣೆ

ಬೆಳ್ತಂಗಡಿ ತಾಲೂಕಿನ ತೋಟತ್ತಾಡಿ ಗ್ರಾಮದ ಬೆಂದ್ರಾಳ ಅರಣ್ಯ ಪ್ರದೇಶದಿಂದ ಸ್ಯಾಟ್ ಲೈಟ್ ಕರೆ ಹೋಗಿದೆ ಎಂಬ ವಿಚಾರವಾಗಿ ಧರ್ಮಸ್ಥಳ ಪೊಲೀಸರು ಪರಿಶೀಲನೆ ನಡೆಸಿದ್ದು, ಈ ಬಗ್ಗೆ ಯಾವುದೇ ನಿರ್ದಿಷ್ಟ ಮಾಹಿತಿ ದೃಢೀಕರಿಸಲ್ಪಟ್ಟಿಲ್ಲ ಎಂದು ದ.ಕ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಿಷಿಕೇಶ್ ಭಗವಾನ್ ಸೋನಾವಣೆ ತಿಳಿಸಿದ್ದಾರೆ. ಬೆಂದ್ರಾಳ ಅರಣ್ಯ ಪ್ರದೇಶದಿಂದ ಸ್ಯಾಟ್ ಲೈಟ್ ಕರೆ ಹೋಗಿದೆ, ಭಾರೀ ಸ್ಫೋಟದ ಸದ್ದು ಕೇಳಿಸಿದೆ ಎನ್ನುವ ವದಂತಿ ಹರಡಿದ ಹಿನ್ನೆಲೆಯಲ್ಲಿ

ಕ್ರಿಕೆಟಿಗ ಕೆ.ಎಲ್.ರಾಹುಲ್ ಕುಕ್ಕೆ ಸುಬ್ರಹ್ಮಣ್ಯ ಭೇಟಿ

ಸುಬ್ರಮಣ್ಯ: ಭಾರತೀಯ ಕ್ರಿಕೆಟ್ ತಂಡದ ಆಟಗಾರ ಮೂಲತಃ ಮಂಗಳೂರಿನ ಕ್ರಿಕೆಟಿಗ ಕೆ.ಎಲ್.ರಾಹುಲ್ ಕುಕ್ಕೆ ಸುಬ್ರಹ್ಮಣ್ಯ ಭೇಟಿ ನೀಡಿ ದೇವರ ದರ್ಶನ ಪಡೆದರು.ದೇವಾಲಯದಲ್ಲಿ ವಿಶೇಷ ಪೂಜೆ ನೆರವೇರಿಸಿದ ಕೆ‌.ಎಲ್.ರಾಹುಲ್, ಮಹಾಪೂಜೆಯಲ್ಲಿ ಭಾಗಿಯಾಗಲಿದ್ದಾರೆ.

“ಅಹಿಂಸಾ ಎನಿಮಲ್ ಕೇರ್” ಟ್ರಿಸ್ಟ್ ಮೂಲಕ ಬೀದಿ ನಾಯಿಗಳ ಆರೈಕೆ

ನಿಯತ್ತಿಗೆ ಮತ್ತೊಂದು ಹೆಸರು ನಾಯಿ.. ಇಷ್ಟೊಂದು ನಿಷ್ಠಾವಂತ ಪ್ರಾಣಿಯನ್ನು ಪ್ರೀತಿಸುವವರು ವಿರಳ.. ಈ ಶ್ವಾನಗಳಿಗೆ ಮನುಷ್ಯನಿಗಿರುವಂಥಹ ಸ್ವಾರ್ಥ, ಮತ್ಸರ, ಆಸೆ, ಆಕಾಂಕ್ಷೆಗಳಿಲ್ಲ, ಅದಕ್ಕೆ ಹೊಟ್ಟೆಗೆ ತಿನ್ನಲು ಹಿಟ್ಟು ಬಿಟ್ಟರೆ ಯಾವುದೇ ಆಸ್ತಿ, ಅಂತಸ್ತು ಬೇಡ… ಒಂದೊಮ್ಮೆ ತಪ್ಪಿಯಾದರೂ ಅದಕ್ಕೆ ಆಹಾರ ನೀಡಿದ್ದೀರಿ ಎಂದಾದರೆ ನಿಮ್ಮನ್ನು ಅದು ಅದರ ಜೀವನ ಪರಿಯಂತ ಮರೆಯೋಲ್ಲ.. ಇಂಥಹ ವಿಶ್ವಾಸ ಭರಿತ ಪ್ರಾಣಿಯನ್ನು ಸಾಕಿ ಸಲಹುತ್ತಿರುವ ಅಪರೂಪದ

ಕುಕ್ಕೆ ಸುಬ್ರಹ್ಮಣ್ಯ ದೇವಳಕ್ಕೆ ಸಚಿವ ಬೈರತಿ ಬಸವರಾಜ್ ಭೇಟಿ

ಸುಬ್ರಹ್ಮಣ್ಯ, ನ.20: ಒಂಬತ್ತು ಸಾವಿರ ಕೋಟಿ ರೂಪಾಯಿಗಳನ್ನು ನಮ್ಮ ಸರಕಾರ ಅಭಿವೃದ್ಧಿಗೆ ಇರಿಸಿದೆ. ಸರಕಾರದ ಸಂಕಲ್ಪ ದಾಹಮುಕ್ತ ಕರ್ನಾಟಕ ಮಾಡಬೇಕೆಂಬುದು. ಮುಂದಿನ ಎರಡು ಮೂರು ತಿಂಗಳಲ್ಲಿ ಅದನ್ನು ಕಾರ್ಯಗತ ಗೊಳಿಸಲು ಪ್ರಯತ್ನಿಸಲಾಗುವುದು ಎಂದು ರಾಜ್ಯ ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ್ ತಿಳಿಸಿದರು. ಅವರು ರವಿವಾರ ರಾತ್ರಿ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಭೇಟಿ ನೀಡಿದ ಬಳಿಕ ಪತ್ರಕರ್ತರೊಂದಿಗೆ ಮಾತನಾಡಿದರು. ನಗರಾಭಿವೃದ್ಧಿ ಇಲಾಖೆ ವತಿಯಿಂದ

ಬೈಂದೂರು : ಗಜ್ಞಾರ ಎನ್ ಕ್ಲೇವ್ ನೂತನ ಕಟ್ಟಡ ಉದ್ಘಾಟನೆ

ಬೈಂದೂರು: ಪ್ರಮೋದ್ ಶಿಪ್ಲಾ ಪೂಜಾರಿ ಅವರು ಗಜ್ಞಾರ ಮನೆತನದ ಹೆಸರಿನಲ್ಲಿ ಗಜ್ಞಾರ ಎನ್ ಕ್ಲೇವ್ ಎಂಬ ನೂತನ ಖಾಸಗಿ ಕಟ್ಟಡದ ಉದ್ಘಾಟನಾ ಕಾರ್ಯಕ್ರಮವು ಬೈಂದೂರಿನಲ್ಲಿ ನಡೆಯಿತು. ಕಟ್ಟಡದ ಉದ್ಘಾಟನೆ ಬೈಂದೂರು ಕ್ಷೇತ್ರದ ಶಾಸಕ ಬಿ ಎಂ ಸುಕುಮಾರ್ ಶೆಟ್ಟಿ ನೆರವೇರಿಸಿದರು. ಬಳಿಕ ಮಾತನಾಡಿ ಕಂಬದಕೋಣೆ ಹಾಗೂ ಕೆರ್ಗಾಲು ಗ್ರಾಮವನ್ನು ದೇಶ ವಿದೇಶಗಳಿಗೆ ಪರಿಚಯಿಸಿದ ದಿವಂಗತ ಆರ್.ಕೆ ಸಂಜುರಾಯರನ್ನು ನೆನಪಿಸಿ ಈ ಕಟ್ಟಡದಿಂದ ಬರುವಂತ ಆದಾಯವನ್ನು ಸ್ವಲ್ಪ ಮಟ್ಟಿಗೆ ನಮ್ಮ