Home Posts tagged #v4news karnataka (Page 261)

ಪುತ್ತೂರಿನ ನೈತ್ತಾಡಿಯ ಕಲ್ಲಗುಡ್ಡೆಯಲ್ಲಿ ಅಕ್ರಮ ಮದ್ಯ ಮಾರಾಟ: ಭಾರಿ ಪ್ರಮಾಣದ ಮದ್ಯ ವಶ 

ಪುತ್ತೂರು: ಮನೆಯ ಸಮೀಪದ ಗುಡ್ಡೆಯಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿರುವ ಕುರಿತು ಖಚಿತ ಮಾಹಿತಿ ಮೇರೆಗೆ ಕೆಮ್ಮಿಂಜೆಯ ನೈತ್ತಾಡಿಯ ಕಲ್ಲಗುಡ್ಡೆ ಎಂಬಲ್ಲಿ ಪುತ್ತೂರು ನಗರ ಠಾಣಾ ಪೊಲೀಸರು ದಾಳಿ ನಡೆಸಿದ್ದು, ರೂ. 26,118 ಮೌಲ್ಯದ ಅಕ್ರಮ ಮದ್ಯವನ್ನು ವಶಕ್ಕೆ ಪಡೆದು, ಇಬ್ಬರು ಆರೋಪಿಗಳನ್ನು ಬಂಧಿಸಿರುವ ಘಟನೆ  ನಡೆದಿದೆ. ಕೆಮ್ಮಿಂಜೆ ಗ್ರಾಮದ ನೈತಾಡಿ

ಸಂಪ್ಯದಲ್ಲಿ ನೇಗಿಲು ಹಿಡಿದು ಉಳುಮೆ ಮಾಡಿದ ಪುತ್ತೂರು ಶಾಸಕ ಸಂಜೀವ ಮಠಂದೂರು

ಪುತ್ತೂರು: ಪೊರ್ತು ಕಂತ್ಂಡ್ ಓ ಎರು ಮಗನೇ…ಇದು ಸಂಪ್ಯ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದ ಪಕ್ಕದಲ್ಲೇ ಹಡೀಲು ಬಿದ್ದ ಗದ್ದೆಯಲ್ಲಿ ಭಾನುವಾರ ಕೇಳಿಬಂದ ಸಂಧಿಯ ಕೆಲವು ಸಾಲು.ಶಾಸಕ ಸಂಜೀವ ಮಠಂದೂರು ಅವರು ಉಟ್ಟಿದ್ದ ಪಂಚೆಯನ್ನು ಎತ್ತಿಕಟ್ಟಿ, ಗದ್ದೆಗೆ ಇಳಿದು, ಎತ್ತುಗಳನ್ನು ಕಟ್ಟಿದ್ದ ನೇಗಿಲನ್ನು ಕೈಗೆ ತೆಗೆದುಕೊಳ್ಳುತ್ತಿದ್ದಂತೆ, ಉಳುಮೆ ಮಾಡುತ್ತಿದ್ದ ಬೇಸಾಯಗಾರರ ಉತ್ಸಾಹ ನೂರ್ಮಡಿಗೊಂಡಿತು. ಸಂಧಿಯ ಸಾಲುಗಳು ಪುಂಖಾನು ಪುಂಖವಾಗಿ ಗದ್ದೆಯ ತುಂಬಾ

ನಾಳೆಯಿಂದ ದೇಗುಲ ಓಪನ್: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಸ್ಯಾನಿಟೈಸೇಷನ್ ಕಾರ್ಯ

ರಾಜ್ಯದ್ಯಾಂತ ಜುಲೈ 5ರಿಂದ ಅನ್‌ಲಾಕ್ 3.0 ಜಾರಿಯಲ್ಲಿರಲಿದ್ದು, ದೇವಾಲಯಗಳು ನಾಳೆಯಿಂದ ಓಪನ್ ಆಗಲಿದ್ದು, ಭಕ್ತರ ದರುಶನಕ್ಕೆ ಅವಕಾಶವನ್ನು ಕಲ್ಪಿಸಿ ರಾಜ್ಯ ಸರ್ಕಾರ ಆದೇಶವನ್ನು ನೀಡಿದೆ. ಈ ಹಿನ್ನೆಲೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಸಂಪೂರ್ಣ ಸ್ಯಾನಿಟೈಸೇಷನ್ ಕಾರ್ಯ ಮಾಡಲಾಗುತ್ತಿದೆ. ದೇವಸ್ಥಾನದ ಒಳಾಂಗಣ, ಹೊರಾಂಗಣ, ಅನ್ನಛತ್ರ, ವಸ್ತು ಸಂಗ್ರಹಾಲಯದಲ್ಲಿ ದೇವಳದ ಸಿಬ್ಬಂದಿಯಿಂದ ಸ್ಯಾನಿಟೈಸೇಷನ್ ಮಾಡಲಾಗುತ್ತಿದೆ. ನಾಳೆಯಿಂದ ಶ್ರೀ ಕ್ಷೇತ್ರ

ಕೊಳ್ನಾಡಿನಲ್ಲಿ ಯುವಕನೊರ್ವನಿಗೆ ನಾಲ್ವರ ತಂಡದಿಂದ ಹಲ್ಲೆ

ವಿಟ್ಲ: ಹಳೆ ದ್ವೇಷದ ಹಿನ್ನೆಲೆಯಲ್ಲಿ ಯುವಕನೊಬ್ಬನಿಗೆ ನಾಲ್ವರ ತಂಡ ಹಲ್ಲೆ ನಡೆಸಿ, ಚೂರಿಯಿಂದ ಇರಿದು ಪರಾರಿಯಾದ ಘಟನೆ ಕೊಳ್ನಾಡು ಗ್ರಾಮದ ಕಾಡುಮಠ ಎಂಬಲ್ಲಿ ಸಂಭವಿಸಿದೆ. ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೊಳ್ನಾಡು ಗ್ರಾಮದ ಕಾಡುಮಠ ನಿವಾಸಿ ಅಬ್ದುಲ್ ಹ್ಯಾರಿಸ್ (29) ಗಾಯಗೊಂಡಿದ್ದು, ವಿಟ್ಲ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದಾರೆ. ಕಾಡುಮಠ ನಿವಾಸಿಗಳಾದ ಅವಿನಾಶ್, ವಿನೀತ್, ದಿನೇಶ್, ಮತ್ತೊಬ್ಬ ಅಪರಿಚಿತ

ರಾಜ್ಯದಲ್ಲಿ ಜು.5ರಿಂದ 3.0 ಅನ್‌ಲಾಕ್ ಜಾರಿ: ಮತ್ತಷ್ಟು ಸಡಿಲಿಕೆ ಮಾಡಿ ಸರ್ಕಾರ ಆದೇಶ

ರಾಜ್ಯಾದ್ಯಂತ ಜುಲೈ 5ರಿಂದ 3.0 ಅನ್‍ಲಾಕ್ ಜಾರಿಯಾಗಲಿದ್ದು, ರಾಜ್ಯಾದ್ಯಂತ ವೀಕೆಂಡ್ ಕರ್ಪ್ಯೂ ರದ್ದುಗೊಳಿಸಿ, ಮಾಲ್‍ಗಳ ಓಪನ್ ಗೆ ಗ್ರೀನ್ ಸಿಗ್ನಲ್ ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಅನ್ ಲಾಕ್ 3.0 ಜಾರಿಯಾಗುವ ಕುರಿತು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಇಂದು ಮಹತ್ವದ ಸುದ್ದಿಗೋಷ್ಟಿ ನಡೆಸಿ ಈ ಕುರಿತು ಘೋಷಣೆ ಮಾಡಿದ್ದಾರೆ. ಮಾಲ್‍ಗಳ ಓಪನ್‍ಗೆ ರಾಜ್ಯ ಸರ್ಕಾರದಿಂದ ಗ್ರೀನ್ ಸಿಗ್ನಲ್ ನೀಡಿದೆ. ಮದುವೆ ಸಮಾರಂಭಕ್ಕೆ 100 ಜನರಿಗೆ ಅನುಮತಿ. ವೀಕೆಂಡ್

ಮಂಗಳೂರು : ಗುಂಡು ಹಾರಿಸಿ ನಾಯಿ ಹತ್ಯೆ

ಮಂಗಳೂರು ನಗರದ ಶಿವಭಾಗ್‍ನ ಆಭರಣ ಜ್ಯುವೆಲ್ಲರ್ಸ್ ಮಳಿಗೆಯ ಹಿಂಭಾಗದ ರಸ್ತೆಯಲ್ಲಿ ಗುರುವಾರ ರಾತ್ರಿ ವೇಳೆ ಬೀದಿ ನಾಯಿಯೊಂದನ್ನು ಗುಂಡು ಹೊಡೆದು ಸಾಯಿಸಲಾಗಿದೆ. ಸ್ಥಳೀಯ ವ್ಯಕ್ತಿಯೊಬ್ಬ ಈ ಕೃತ್ಯವೆಸಗಿರುವ ಬಗ್ಗೆ ಶಂಕೆ ಇದ್ದು, ಕದ್ರಿ ಠಾಣೆಯಲ್ಲಿ ದೂರು ದಾಖಲಾಗಿದೆ. ಶಿವಭಾಗ್ ರಸ್ತೆಯಲ್ಲಿ ಪ್ರತಿನಿತ್ಯ ಓಡಾಡುತ್ತಿದ್ದ ಬೀದಿ ನಾಯಿಗೆ ವ್ಯಕ್ತಿಯೊಬ್ಬ ಗುಂಡುಹಾರಿಸಿ ಹತ್ಯೆ ಮಾಡಿದ ಈ ಪ್ರಕರಣ ಸ್ಥಳೀಯರಲ್ಲಿ ಆತಂಕವನ್ನು ಉಂಟು ಮಾಡಿದೆ. ಈ ಘಟನೆ ಪ್ರಾಣಿ

ದ.ಕ. ಜಿಲ್ಲೆಯಲ್ಲಿ ಲಾಕ್‌ಡೌನ್ ಸಡಿಲಿಕೆ: ಜುಲೈ2ರಿಂದ ಸಂಜೆ 7 ರ ತನಕ ಅವಕಾಶ: ಸಚಿವ ಕೋಟ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪಾಸಿಟಿವಿಟಿ ರೇಟ್ ಕಡಿಮೆಯಾದ ಹಿನ್ನೆಲೆಯಲ್ಲಿ ಜುಲೈ 2ರಿಂದ ಬೆಳಗ್ಗೆ 6 ಗಂಟೆಯಿಂದ ಸಂಜೆ 7 ರ ವರಗೆ ಅವಕಾಶಗಳನ್ನು ನೀಡಲಾಗಿದೆ ಎಂದು ವಿ4 ನ್ಯೂಸ್‌ಗೆ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.ಬಸ್, ಮಾರ್ಕೆಟ್, ಸೂಚಿತ ಮಳಿಗೆಗಳಿಗೆ ಅವಕಾಶವನ್ನು ನೀಡಲಾಗಿದೆ. ಶನಿವಾರ ಮತ್ತು ಭಾನುವಾರ ವೀಕೆಂಡ್ ಕರ್ಫ್ಯೂ ಮುಂದುವರಿಯಲಿದೆ. ಜುಲೈ 5ರ ವರೆಗೆ ಮಾರ್ಗಸೂಚಿ ಜಾರಿಯಲ್ಲಿರಲಿದೆ ಎಂದು ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ

ಮಂಜೇಶ್ವರದಲ್ಲಿ ತೈಲ ಬೆಲೆ ಏರಿಕೆ ವಿರುದ್ಧ ಯೂತ್ ಕಾಂಗ್ರೆಸ್ ನಿಂದ ಪ್ರತಿಭಟನೆ

ಮಂಜೇಶ್ವರ : ಕೇಂದ್ರ ಸರಕಾರದ ದುರಾಡಳಿತದಿಂದಾಗಿ ದೇಶ ತತ್ತರಿಸಿ ಹೋಗಿದ್ದು, ಜನಸಾಮಾನ್ಯರ ಬದುಕು ದುಸ್ತರವಾಗಿದೆ, ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯು ನರೇಂದ್ರ ಮೋದಿಯವರ ಅಚ್ಚೇ ದಿನ್ ಕೊಡುಗೆಯಾಗಿದೆ. ಈ ದೇಶದಿಂದ ಮೋದಿ ಆಡಳಿತವನ್ನು ಕಿತ್ತೆಸೆಯುವ ಮೂಲಕ ದೇಶವನ್ನು ರಕ್ಷಿಸುವ ಕೆಲಸ ಆಗಲೇಬೇಕಾಗಿದೆ ಎಂದು ಜಿಲ್ಲಾ ಪಂಚಾಯತ್ ಮಾಜಿ ಸ್ಥಾಯಿ ಸಮಿತಿ ಅಧ್ಯಕ್ಷ ಹರ್ಷಾದ್ ವರ್ಕಾಡಿ ಹೇಳಿದ್ದಾರೆ. ಅವರು ಯೂತ್ ಕಾಂಗ್ರೆಸ್ ಮಂಜೇಶ್ವರ ಅಸೆಂಬ್ಲಿ ಸಮಿತಿಯ ವತಿಯಿಂದ

ಕಡಬದಲ್ಲಿ ಸ್ಕೂಟಿಗೆ ಓಮಿನಿ ಕಾರು ಢಿಕ್ಕಿ: ಸ್ಕೂಟರ್ ಸವಾರನಿಗೆ ಗಂಭೀರ ಗಾಯ

ಕಡಬ :ಬಲ್ಯ ಸಮೀಪ ಇಂದು ಬೆಳಿಗ್ಗೆ ಅಲಂಕಾರಿನಿಂದ ಕಡಬಕ್ಕೆ ಬರುತ್ತಿದ್ದ ಸ್ಕೂಟಿಗೆ ಬಲ್ಯ ಸಮೀಪ ಓಮಿನಿ ಮಾರುತಿ ಕಾರೊಂದು ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಅಪಘಾತದ ತೀವ್ರತೆಗೆ ಬೈಕ್ ಸವಾರರಿಬ್ಬರಿಗೂ ಗಾಯಗಳಾಗಿದ್ದು ಬೈಕ್ ಸವಾರರನ್ನು ಪ್ರಾಥಮಿಕ ಚಿಕಿತ್ಸೆಗೆ ಕಡಬ ಸರ್ಕಾರಿ ಆಸ್ಪತ್ರಗೆ ಕರೆದೊಯ್ಯಲಾಗಿದೆ. ಬೈಕ್ ಸವಾರರೊಬ್ಬರನ್ನು ಅಲಂಕಾರು ನಿವಾಸಿ ದೀಕ್ಷಿತ್ ಎಂದು ಗುರುತಿಸಲಾಗಿದೆ. ಡಿಕ್ಕಿ ಹೊಡೆದಿರುವ ಓಮಿನಿ ಕಾರು ಕಡಬದಿಂದ ಕುಂತೂರು ಕಡೆಗೆ