Home Posts tagged V4News (Page 10)

ಕರ್ನಾಟಕ ಗಮಕ ಕಲಾ ಪರಿಷತ್(ರಿ)ಬೆಂಗಳೂರು ಜಿಲ್ಲಾ ಮಟ್ಟದ ಕಾರ್ಯಕ್ರಮಕ್ಕೆ ಶ್ರೀ ಕ್ಷೇತ್ರದ ಧರ್ಮಸ್ಥಳ ದಿಂದ 20 ಸಾವಿರ ಮಂಜೂರು

ಉಡುಪಿ: ಕರ್ನಾಟಕ ಗಮಕ ಕಲಾ ಪರಿಷತ್ (ರಿ )ಬೆಂಗಳೂರು ಜಿಲ್ಲಾ ಮಟ್ಟದ ಕಾರ್ಯಕ್ರಮಕ್ಕೆ ಶ್ರೀ ಕ್ಷೇತ್ರದ ಧರ್ಮಸ್ಥಳ ದಿಂದ ಮಂಜೂರಾದ 20 ಸಾವಿರ ಮೊತ್ತದ ಮಂಜೂರಾತಿ ಪತ್ರವನ್ನು ಕರ್ನಾಟಕ ಗಮಕ ಸಂಘ ಕಲಾ ಪರಿಷತ್ತಿನ ಅಧ್ಯಕ್ಷರಾದ ಸತೀಶ್ ಕುಮಾರ್ ಕೆಮ್ಮಣ್ಣು ಇವರಿಗೆತಾಲೂಕು ಯೋಜನಾಧಿಕಾರಿಗಳಾದ ಮಮತಾ ಶೆಟ್ಟಿ ಹಸ್ತಾಂತರ ಮಾಡಿದರು.

ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕ ಕಯ್ಯಾರು ಪ್ರಭಾಕರ ರೈ ನಿಧನ

ಮೂಡುಬಿದಿರೆ : ಸ್ವಾಮಿ ಮುಕ್ತಾನಂದ ಪರಮಹಂಸ ಪ್ರೌಢಶಾಲೆಯ ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕ (PET) ಕಯ್ಯಾರು ಪ್ರಭಾಕರ ರೈ ಅವರು (ಪ್ರಾಯ: 85 ವರ್ಷ) ಮಂಗಳವಾರ ನಿಧನರಾದರು. ಮೃತರು ಪತ್ನಿ ಹಾಗೂ ಬ್ಯಾಂಕ್ ಆಫ್ ಬರೋಡಾ (ವಿಜಯಾ ಬ್ಯಾಂಕ್) ನ ಹಿರಿಯ ವ್ಯವಸ್ಥಾಪಕ ಮಧುಸೂಧನ ರೈ ಸಹಿತ ಈರ್ವರು ಪುತ್ರರನ್ನು ಅಗಲಿರುತ್ತಾರೆ.ಬೆಂಗಳೂರಿನ ಗುಜರಾತಿ ವಿದ್ಯಾಲಯದಲ್ಲಿ ಆರಂಭಿಕ ವೃತ್ತಿ ಜೀವನ ನಡೆಸಿದ ಇವರು ಮುಂದೆ ಬೆಳುವಾಯಿ ಮುಕ್ತಾನಂದ ಪರಮಹಂಸ ಪ್ರೌಢಶಾಲೆಯ ಸಮುದಾಯ

ಲೇಬರ್ ಕೋಡ್ ಹೆಸರಿನಲ್ಲಿ ಕಾರ್ಪೊರೇಟ್ ಕೋಡ್ ಜಾರಿ – ಕಾರ್ಮಿಕ ಸಂಹಿತೆಗಳ ವಿರುದ್ದ ಸುನಿಲ್ ಕುಮಾರ್ ಬಜಾಲ್ ಆಕ್ರೋಶ

ಕೇಂದ್ರ ಸರಕಾರವು ದೇಶದ ಕಾರ್ಮಿಕ ವರ್ಗವನ್ನು ದುರ್ಬಲಗೊಳಿಸಿ ಮತ್ತೆ ಗುಲಾಮಗಿರಿಯತ್ತ ತಳ್ಳಲು, ಕಾರ್ಮಿಕರ ಹಕ್ಕು ಭಾಧ್ಯತೆಗಳನ್ನು ನಾಶ ಮಾಡಲು, ಕಾರ್ಮಿಕ ಚಳುವಳಿಯನ್ನೇ ಹತ್ತಿಕ್ಕಲು ಹಾಗೂ ಬಂಡವಾಳಿಗರ ಹಿತಾಸಕ್ತಿಗಳನ್ನು ಕಾಪಾಡಲು ದೇಶದ ಪ್ರಮುಖ 29 ಕಾರ್ಮಿಕ ಕಾನೂನುಗಳನ್ನು ರದ್ದುಗೊಳಿಸಿ ಕಾರ್ಪೊರೇಟ್ ಪರವಾದ 4 ಸಂಹಿತೆಗಳನ್ನು ರೂಪಿಸಿ ತಕ್ಷಣದಿಂದಲೇ ಜಾರಿಯಾಗುವಂತೆ ಏಕಪಕ್ಷೀಯ ತೀರ್ಮಾನವನ್ನು ಕೈಗೊಂಡಿದೆ.ಆದ್ದರಿಂದ ಇದು ಕೇವಲ ಲೇಬರ್ ಕೋಡ್ ಅಲ್ಲ ಬದಲಾಗಿ

ಅಜಿತ್‌ ಪವಾರ್ ಪ್ರಯಾಣಿಸುತ್ತಿದ್ದ ವಿಮಾನ ಪತನ: ಅಜಿತ್ ಪವಾರ್‌ ಸೇರಿದಂತೆ ಐದು ಮಂದಿ ಸಾವು

ಮಹಾರಾಷ್ಟ್ರದ ಬಾರಾಮತಿ ಬಳಿ ಸಂಭವಿಸಿದ ವಿಮಾನ ದುರಂತದಲ್ಲಿ ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಅಜಿತ್ ಪವಾರ್‌ ಸೇರಿದಂತೆ ಐದು ಮಂದಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಅಜಿತ್ ಪವಾರ್ ಸೇರಿದಂತೆ ಪಿಎಸ್ಒ ಜಾಧವ್, ಓರ್ವ ಸಹಾಯಕ, ಇಬ್ಬರು ಪೈಲೈಟ್‌ಗಳು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯ (ಡಿಜಿಸಿಎ) ಖಚಿತಪಡಿಸಿದೆ. ಮಹಾರಾಷ್ಟ್ರದಲ್ಲಿ ನಿಗದಿಯಾಗಿರುವ ಸ್ಥಳೀಯ ಸಂಸ್ಥೆಗಳ ಚುನಾವಣೆ ಹಿನ್ನೆಲೆಯಲ್ಲಿ ಪ್ರಚಾರ

ಓಂ ಕ್ರಿಕೆಟರ್ಸ್ ಪಾವಂಜೆ ನೂತನ ಅಧ್ಯಕ್ಷರಾಗಿ ಗಣೇಶ್ ದೇವಾಡಿಗರವರು ಆಯ್ಕೆ

ಪಾವಂಜೆ : ಓಂ ಕ್ರಿಕೆಟರ್ಸ ಪಾವಂಜೆ ಇದರ ವಾರ್ಷಿಕ ಮಹಾಸಭೆಯು ಸುಕೇಶ್ ಪಾವಂಜೆ ಇವರ ಅಧ್ಯಕ್ಷತೆಯಲ್ಲಿ ನೆರವೇರಿತು. ಸಂಘಟನೆಯ ನೂತನ ಅಧ್ಯಕ್ಷರಾಗಿ ಗಣೇಶ್ ದೇವಾಡಿಗರವರನ್ನು ಆಯ್ಕೆ ಮಾಡಲಾಯಿತು. ಸಂಸ್ಥೆಯ ಉಪಾಧ್ಯಕ್ಷರಾಗಿ ಪ್ರಮೋದ್, ಕಾರ್ಯದರ್ಶಿಯಾಗಿ ವರುಣ್, ಕೋಶಾಧಿಕಾರಿಯಾಗಿ ಸುನಿಲ್ ಕುಮಾರ್, ತಂಡದ ಕಪ್ತಾನರಾಗಿ ಕಾರ್ತಿಕ್, ಉಪ ಕಪ್ತಾನರಾಗಿ ಪ್ರವೀಣ್ ರವರನ್ನು ಆಯ್ಕೆ ಮಾಡಲಾಯಿತು. ಸಂಸ್ಥೆಯ ಒಟ್ಟು 40 ಸದಸ್ಯರು ಈ ನೂತನ ಪದಾಧಿಕಾರಿಗಳ ಆಯ್ಕೆ

ಉಡುಪಿ: ನೇತ್ರ ಜ್ಯೋತಿ ಕಾಲೇಜಿನಲ್ಲಿ ಸಂಭ್ರಮದ 77ನೆ ಗಣರಾಜ್ಯೋತ್ಸವ

ಉಡುಪಿ: ಉಡುಪಿಯ ಪ್ರತಿಷ್ಠಿತ ನೇತ್ರ ಜ್ಯೋತಿ ಕಾಲೇಜಿನಲ್ಲಿ 77ನೆಯ ಗಣರಾಜ್ಯೋತ್ಸವವನ್ನು ಸಡಗರ ಸಂಭ್ರಮದಿಂದ ಆಚರಿಸಲಾಯಿತು.ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿ ಧ್ವಜಾರೋಹಣ ನೆರವೇರಿಸಿದ ಸಾಯಿ ರಾಧಾ ಸಮೂಹ ಸಂಸ್ಥೆಗಳ ವ್ಯವಸ್ಥಾಪಕ ನಿರ್ದೇಶಕರಾದ ಶ್ರೀ ಮನೋಹರ್ ಎಸ್. ಶೆಟ್ಟಿಯವರು ಮಾತನಾಡಿ ಭಾರತವು ವಿವಿಧತೆಯಲ್ಲಿ ಏಕತೆಯನ್ನು ಹೊಂದಿದ ದೇಶ. ಅನೇಕ ಮಹಾನ್ ನಾಯಕರ ತ್ಯಾಗದ ಫಲದಿಂದ ಇಂದು ನಾವು ಸ್ವಾತಂತ್ರ್ಯವನ್ನು ಅನುಭವಿಸುತ್ತಿದ್ದೇವೆ ಎಂದರು. ತಾನು

ಶ್ರೀ ಬಾಲಾಂಜನೇಯ ದೇವರ ಹಾಡಿನ ವಿಡಿಯೋ ಶೀಘ್ರದಲ್ಲಿ ಬಿಡುಗಡೆ

ಶ್ರೀ ಬಾಲಾಂಜನೇಯ ದೇವರ ವಿಡಿಯೋ ಸಹಿತ ಹಾಡು ಸದ್ಯದಲ್ಲೇ ಬಿಡುಗಡೆಯಾಗಲಿದೆ ಹಾಡಿನ ರೆಕಾರ್ಡಿಂಗ್ ಕಾರ್ಯವು 27-01-2026 ಮಧ್ಯಾಹ್ನ ಕ್ಯಾಡ್ ಸ್ಟೂಡಿಯೋದಲ್ಲಿ ನಡೆಯಿತು. ಈ ಸಂದರ್ಭ ಗಾಯಕರಾದ ರವೀಂದ್ರ ಪ್ರಭು ಇವರೊಂದಿಗೆ ಗೀತೆ ರಚನೆಕಾರ ಯಶವಂತ ಬೋಳೂರು ಹಾಗು ದೇವಸ್ಥಾನದ ಅಧ್ಯಕ್ಷರಾದ ರಂಜನ್ ಕಾಂಚನ್ ಉಪಸ್ಥಿತರಿದ್ದರು.

ಮೂಡುಬಿದಿರೆ : 60 ಅಡಿ ಆಳದ ಬಾವಿಗೆ ಬಿದ್ದ ಹಸುವನ್ನು ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿಗಳು

ಮೂಡುಬಿದಿರೆ : 60 ಅಡಿ ಆಳದ ಬಾವಿಗೆ ಬಿದ್ದ ಹಸುವೊಂದನ್ನು ಮೂಡುಬಿದಿರೆಯ ಅಗ್ನಿಶಾಮಕ ದಳದ ಸಿಬಂದಿಗಳು ಮೇಲಕ್ಕೆತ್ತಿ ರಕ್ಷಿಸಿದ ಘಟನೆ ತೆಂಕಮಿಜಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಬಡಗಮಿಜಾರಿನಲ್ಲಿ ಸೋಮವಾರ ನಡೆದಿದೆ. ಬಡಗಮಿಜಾರಿನ ನಿವಾಸಿ ಜಯರಾಮ್ ಗೌಡ ಎಂಬುವವರಿಗೆ ಸೇರಿದ ಸುಮಾರು ೬೦ ಅಡಿ ಆಳ ಹಾಗೂ ೫ ಅಡಿ ಅಗಲದ ಬಾವಿಗೆ ಹಸು ಆಕಸ್ಮಿಕವಾಗಿ ಬಿದ್ದಿತ್ತು. ತಕ್ಷಣ ಮನೆಯವರು ಹಾಗೂ ಸ್ಥಳೀಯರು ಅಗ್ನಿಶಾಮಕ ಇಲಾಖೆಗೆ ಮಾಹಿತಿ ನೀಡಿದರು.ಸ್ಥಳಕ್ಕೆ ಧಾವಿಸಿದ

ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆ ಸುಳ್ಯದಲ್ಲಿ 77ನೇ ಗಣರಾಜ್ಯೋತ್ಸವ

ಸುಳ್ಯದ ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆಯಲ್ಲಿ 77ನೇ ವರ್ಷದ ಗಣರಾಜ್ಯೋತ್ಸವವನ್ನು ವಿಜೃಂಭಣೆಯಿಂದ ಜನವರಿ 26ರಂದು ಆಚರಿಸಲಾಯಿತು. ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್ (ರಿ.) ಕುರುಂಜಿಭಾಗ್ ಸುಳ್ಯ ಇದರ ಅಧ್ಯಕ್ಷರಾದ ಡಾ. ಕೆ ವಿ ಚಿದಾನಂದ ಧ್ವಜರೋಹಣವನ್ನು ನೆರವೇರಿಸಿ ಗಣರಾಜ್ಯೋತ್ಸವದ ಮಹತ್ವವನ್ನು ತಿಳಿಸಿದರು. ಈ ಕಾರ್ಯಕ್ರಮದಲ್ಲಿ ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ (ರಿ.) ಸುಳ್ಯ ಇದರ ಅಧ್ಯಕ್ಷರ ಆಪ್ತ ಕಾರ್ಯದರ್ಶಿ ಶ್ರೀ. ಚಂದ್ರಶೇಖರ

ಮೂಡುಬಿದಿರೆ ಪುರಸಭೆಯಲ್ಲಿ 77ನೇ ಗಣರಾಜ್ಯೋತ್ಸವ ಆಚರಣೆ

ಮೂಡುಬಿದಿರೆ : ಇಲ್ಲಿನ ಪುರಸಭೆಯಲ್ಲಿ ಮೂಡುಬಿದಿರೆ ಪುರಸಭೆಯಲ್ಲಿ 77ನೇ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು.ಶಾಸಕ ಉಮಾನಾಥ ಎ. ಕೋಟ್ಯಾನ್ ಧ್ವಜಾರೋಹಣಗೈದು ಶುಭ ಹಾರೈಸಿದರು. ಮುಖ್ಯಾಧಿಕಾರಿ ಇಂದು ಎಂ., ಪುರಸಭಾ ಕಂದಾಯ ಅಧಿಕಾರಿ ಜ್ಯೋತಿ, ಸುಧೀಶ್ ಹೆಗ್ಡೆ, ಸಮುದಾಯ ಸಂಘಟಕ ಪ್ರಸನ್ನ, ಬಿಲ್ ಕಲೆಕ್ಟರ್ ವಿಜಯಪ್ರಕಾಶ್ ಹಾಗೂ ಪೌರಕಾಮಿ೯ಕರು ಭಾಗವಹಿಸಿದ್ದರು.