Home Posts tagged V4News (Page 205)

ಭಜರಂಗದಳ ಕಾರ್ಯಕರ್ತರಿಗೆ ಗಡಿಪಾರು ನೋಟಿಸ್

ಇತ್ತೀಚೆಗೆ ನಡೆದ ಎರಡು ನೈತಿಕ ಪೊಲೀಸ್‍ಗಿರಿ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಮೂವರು ಹಿಂದೂಪರ ಸಂಘಟನೆ ಕಾರ್ಯಕರ್ತರಿಗೆ ಗಡಿಪಾರು ನೋಟಿಸ್ ನೀಡಲಾಗಿದೆ. ಕಳೆದ ಒಂದು ವರ್ಷದಲ್ಲಿ 60 ಇಂತಹ ರೌಡಿ ಶೀಟರ್ ಗಳನ್ನು ಗಡಿಪಾರು ಮಾಡಲು ಕ್ರಮ ವಹಿಸಲಾಗಿದೆ ಎಂದು ಮಂಗಳೂರು ಪೊಲೀಸ್ ಕಮಿಷನರ್ ಕುಲದೀಪ್ ಜೈನ್ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಮಗೆ

ಕರುನಾಡ ರತ್ನ ಪ್ರಶಸ್ತಿಗೆ v4 ಸುದ್ದಿ ವಾಹಿನಿಯ ವರದಿಗಾರ ಕೆ.ಎಂ.ಖಲೀಲ್ ಆಯ್ಕೆ

ಕರುನಾಡ ರತ್ನ ಪ್ರಶಸ್ತಿಗೆ ಕೆ.ಎಂ.ಖಲೀಲ್ ಆಯ್ಕೆ ಕಾರ್ಕಳ: ಸುಮಾರು 40 ವರ್ಷಗಳಿಂದ ಛಾಯಾಗ್ರಾಹಕ ಹಾಗೂ ವಿಡಿಯೋ ಗ್ರಾಫರ್ ಆಗಿ ದುಡಿಯುತ್ತಿರುವ ಅದರ ಜೊತೆಗೆ 17 ವರ್ಷಗಳಿಂದ ಮಂಗಳೂರಿನ ಪ್ರತಿಷ್ಠಿತ v4 ಸುದ್ದಿವಾಹಿನಿಯಕಾರ್ಕಳ ತಾಲೂಕಿನ ವರದಿಗಾರನಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಎಂ.ಖಲೀಲ್ ಅವರ ಮಾಧ್ಯಮ ಕ್ಷೇತ್ರದ ಸಾಧನೆಗಾಗಿ ಈ ವರ್ಷದ ಕರುನಾಡ ರತ್ನ ಪ್ರಶಸ್ತಿ ನೀಡಲಾಗುತ್ತಿದೆ ಎಂದು ಸಂಘಟಕ ಡಾ.ಬಿ.ಎನ್.ಹೊರಪೇಟಿ ತಿಳಿಸಿದ್ದಾರೆ. ಬೆಂಗಳೂರಿನ ಸುಚಿತ್ರ

ಪುತ್ತೂರು : ದಿ. ಜಯರಾಮ ಗೌಡ ಪೆರ್ಲಂಪಾಡಿ ಅವರಿಗೆ ನುಡಿನಮನ

ಪುತ್ತೂರು ತಾಲೂಕಿನ ಕೊಳ್ತಿಗೆ ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘದ ಪಾಲ್ತಾಡು ಶಾಖಾ ವ್ಯವಸ್ಥಾಪಕರಾದ ಜಯರಾಮ ಗೌಡ ಅವರು ಇತ್ತೀಚೆಗೆ ನಿಧನರಾಗಿದ್ದು, ಅವರಿಗೆ ನುಡಿನಮನ ಕಾರ್ಯಕ್ರಮವು ಪೆರ್ಲಂಪಾಡಿಯ ಅಂಬೇಡ್ಕರ್ ಭವನದಲ್ಲಿ ನಡೆಯಿತು. ಸಮಾಜಕ್ಕೆ ಸ್ಫೂರ್ತಿಯ ಚಿಲುಮೆಯಾಗಿದ್ದಂತಹ ಜಯರಾಮ ಗೌಡ ಅವರ ಅಗಲಿಕೆ ಇಡೀ ಕುಟುಂಬಕ್ಕೆ, ಬಂಧು ಮಿತ್ರರಿಗೆ ತುಂಬಲಾರದ ನಷ್ಟ. ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ ಕಾರ್ಯಕ್ರಮವು ಪೆರ್ಲಂಪಾಡಿಯ ಅಂಬೇಡ್ಕರ್ ಭವನದಲ್ಲಿ ನಡೆಯಿತು.

CITU ಸದಸ್ಯರಾದ ಉಮೇಶ್ ಪೂಜಾರಿ ನಿಧನ

ನಿಟ್ಟೆ ಲೆಮಿನಾ ಫೌಂಡ್ರಿ ಸಂಸ್ಥೆಯ ಕಾರ್ಮಿಕರೂ,CITU ಸದಸ್ಯರಾದ ಉಮೇಶ್ ಪೂಜಾರಿಯವರು ತಾ.17-07-2023ರಂದು ರಾತ್ರಿ ಪಾಳಯದಲ್ಲಿ ಕಂಪೆನಿಯಲ್ಲಿ ದುಡಿಯುತ್ತಿದ್ದಾಗ,ಅವಘಡ ಸಂಭವಿಸಿದ್ದು,ಕೂಡಲೇ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಕೊಡಿಸಲಾಯಿತು. ಬಳಿಕ ಮನೆಗೆ ತೆರಳಿದ ಉಮೇಶ್ ರವರು ಮಂಗಳವಾರ ದಿನವಿಡೀ ಮನೆಯಲ್ಲಿ ವಿಶ್ರಾಂತಿ ಪಡೆದು ಬುಧವಾರ ಮತ್ತೆ ಆಸ್ಪತ್ರೆಗೆ ಹೋಗಿ ಚಿಕಿತ್ಸೆ ಪಡೆದು ಮನೆಗೆ ವಾಪಸಾಗುತ್ತಾರೆ.ಕಾಲಿಗೆ ಸಂಪೂರ್ಣವಾಗಿ ಬ್ಯಾಂಡೇಜ್ ಹಾಕಿದ್ದರಿಂದ

ಬಿಜೆಪಿ ಯುವ ಮೋರ್ಚ ವತಿಯಿಂದ ಸ್ಪೀಕರ್ ವಿರುದ್ಧ ಪ್ರತಿಭಟನೆ

ಕರ್ನಾಟಕ ರಾಜ್ಯ ಅಧಿವೇಶನದಲ್ಲಿ ಭಾರತೀಯ ಜನತಾ ಪಕ್ಷದ ಸದಸ್ಯರು ಸ್ಪೀಕರ್ ವಿರುದ್ಧ ಪ್ರತಿಭಟನೆ ನಡೆಸಿದರು ಎಂದು ಆರೋಪಹರಿಸಿ 10 ಮಂದಿ ಬಿಜೆಪಿ ಶಾಸಕರನ್ನು ಅಮಾನತು ಮಾಡಿರುವ ಕಾಂಗ್ರೆಸ್ ಪಕ್ಷದ ನಡವಳಿಕೆ ಹಾಗೂ ನಿಷ್ಪಕ್ಷಪಾತವಾಗಿ ನ್ಯಾಯ ನೀಡಬೇಕಾಗಿದ್ದ ಸ್ಪೀಕರ್ ವಿರುದ್ಧ ಬಿಜೆಪಿ ಯುವ ಮೋರ್ಚ ಸುರತ್ಕಲ್ ನಲ್ಲಿ ಪ್ರತಿಭಟನೆ ನಡೆಸಿತು. ಪ್ರತಿಭಟನೆಯಲ್ಲಿ ಮಂಗಳೂರು ಉತ್ತರಮಂಡಲ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಭರತ್ ರಾಜ್ ಕೃಷ್ಣಾಪುರ ರಾಜ್ಯ ಯುವ ಮೋರ್ಚಾ

ಬಿಗ್ ಸಿನೆಮಾಸ್ ನಲ್ಲಿ “ನಿಮ್ಮೆಲ್ಲರ ಆಶೀರ್ವಾದ” ಪ್ರೀಮಿಯರ್ ಶೋ

ಮಂಗಳೂರು: ವಿಭಿನ್ನ ಕಥೆ, ಹೊಸ ಕಲಾವಿದರನ್ನೊಳಗೊಂಡ “ನಿಮ್ಮೆಲ್ಲರ ಆಶೀರ್ವಾದ” ಕನ್ನಡ ಚಿತ್ರದ ಪ್ರೀಮಿಯರ್ ಶೋ ಗುರುವಾರ ಸಂಜೆ ನಗರದ ಬಿಗ್ ಸಿನೆಮಾಸ್ ನಲ್ಲಿ ನಡೆಯಿತು. ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟನೆ ನೆರವೇರಿಸಿ ಮಾತಾಡಿದ ಮಂಗಳೂರು ಪೊಲೀಸ್ ಕಮಿಷನರ್ ಕುಲದೀಪ್ ಆರ್. ಜೈನ್ ಅವರು, “ನಿಮ್ಮೆಲ್ಲರ ಆಶೀರ್ವಾದ ಸಿನಿಮಾ ರೊಮ್ಯಾಂಟಿಕ್ ಕಾಮಿಡಿ ಆಗಿದ್ದು ನಾಯಕ ನಟ ಪೊಲೀಸ್ ಅಧಿಕಾರಿಯ ಪಾತ್ರದಲ್ಲಿ ಗಮನ ಸೆಳೆಯುತ್ತಾರೆ.

3ನೇ ಬಾರಿಗೆ ತನ್ನ ದಾಖಲೆಯನ್ನು ತಾನೇ ಮುರಿದ ಸತೀಶ್ ಖಾರ್ವಿ

ಪವರ್ ಲಿಫ್ಟಿಂಗ್‍ನಲ್ಲಿ 3ನೇ ಬಾರಿಗೆ ತನ್ನ ದಾಖಲೆಯನ್ನು ತಾನೇ ಮುರಿದ ಹೆಗ್ಗಳಿಕೆ ಪಾತ್ರವಾಗಿರುವ ಅಂತರಾಷ್ಟ್ರೀಯ ಕ್ರೀಡಾಪಟು ಕುಂದಾಪುರ ಸತೀಶ್ ಖಾರ್ವಿ ನೂತನ ದಾಖಲೆ ಮಾಡಿರುವುದನ್ನು ಗುರುತಿಸಿ ಅವರಿಗೆ ಅದ್ದೂರಿ ಸ್ವಾಗತದ ಮೂಲಕ ಬೆಂಗಳೂರಿನಲ್ಲಿ ಕರ್ನಾಟಕ ಗೃಹ ಸಚಿವ ಮಾನ್ಯ ಡಾ.ಜಿ.ಪರಮೇಶ್ವರ್ ಅವರು ಗೌರವದಿಂದ ಅಭಿನಂದಿಸಿದರು. ಸತೀಶ್ ಖಾರ್ವಿ ಅವರು ಮಂಗೋಲಿಯನಲ್ಲಿ ನಡೆಯುವ ಅಂತರಾಷ್ಟ್ರೀಯ ಓಲ್ಡ್ ಪವರ್ ಲಿಫ್ಟಿಂಗ್ ಸ್ಪರ್ಧೆಗೆ ಆಯ್ಕೆಯಾಗಿದ್ದು,

“ನಿಮ್ಮೆಲ್ಲರ ಆಶೀರ್ವಾದ” ಚಿತ್ರ ಇದೇ ಶುಕ್ರವಾರ ತೆರೆಗೆ!

ವರುಣ್ ಸಿನಿ ಕ್ರಿಯೇಷನ್ಸ್ ಲಾಂಛನದಲ್ಲಿ ಮೂಡಿಬಂದಿರುವ “ನಿಮ್ಮೆಲ್ಲರ ಆಶೀರ್ವಾದ” ಸಿನಿಮಾ ಇದೇ ಶುಕ್ರವಾರ ತೆರೆ ಕಾಣಲಿದೆ ಎಂದು ನಾಯಕ ನಟ ಪ್ರತೀಕ್ ಶೆಟ್ಟಿ ತಿಳಿಸಿದರು. ಮಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಇದು ಹೊಸಬರ ವಿಭಿನ್ನ ಪ್ರಯತ್ನವಾಗಿದ್ದು ಒಳ್ಳೆಯ ಕತೆ ಸಿನಿಮಾದ ಜೀವಾಳವಾಗಿದೆ. ಚಿತ್ರತಂಡದಲ್ಲಿ ಬಹುತೇಕ ಹೊಸ ಕಲಾವಿದರು, ತಂತ್ರಜ್ಞರು ಕೆಲಸ ಮಾಡಿದ್ದಾರೆ. ನೀವೆಲ್ಲರೂ ಆಶೀರ್ವಾದ ಮಾಡಿದರೆ ನಾವು ಇನ್ನಷ್ಟು ಹೊಸ

ಕೆಪಿಟಿ : ಪ್ರತಿನಿತ್ಯ ಪಾರಿವಾಳಗಳಿಗೆ ಆಹಾರ ಧಾನ್ಯ ನೀಡುತ್ತಿರುವ ಪಕ್ಷಿಪ್ರೇಮಿ ಗಣೇಶ್ ಪೂಜಾರಿ

ಕೊರೊನಾ ಸಂದರ್ಭದಲ್ಲಿ ಪಕ್ಷಿಗಳಿಗೆ ಆಹಾರ ಹಾಕುವುದನ್ನು ಆರಂಭಿಸಿದ ಮಂಗಳೂರು ಕೆಪಿಟಿ ಪೆಟ್ರೊಲು ಪಂಪ್‍ನ ಉದ್ಯೋಗಿ ಗಣೇಶ್ ಪೂಜಾರಿ ಅವರು ನಂತರ ಅದನ್ನು ನಿತ್ಯದ ಅಭ್ಯಾಸವನ್ನಾಗಿಸಿಕೊಂಡಿದ್ದು ಇದೀಗ ಪ್ರತಿನಿತ್ಯ ನೂರಾರು ಪಾರಿವಾಳಗಳಿಗೆ ಆಹಾರದಾತರಾಗಿದ್ದಾರೆ. ಪ್ರತಿನಿತ್ಯ ಪಾರಿವಾಳಗಳಿಗೆ ಆಹಾರ ಹಾಕಿ ಪೋಷಿಸುವ ಇವರ ಪಕ್ಷಿಪ್ರೇಮ ಇದೀಗ ಸಾರ್ವಜನಿಕ ವಲಯದಲ್ಲಿ ಪ್ರಶಂಸೆಗೆ ಪಾತ್ರವಾಗಿದೆ. ಕೊರೊನಾ ಸಂಕಷ್ಟದ ಕಾಲದಲ್ಲಿ ಅಂಗಡಿ-ಮುಗ್ಗಟ್ಟುಗಳು ಬಂದ್

ಗೃಹಲಕ್ಷ್ಮಿ ಯೋಜನೆಗೆ ಕಾರ್ಕಳದಲ್ಲಿ ಚಾಲನೆ

ಕರ್ನಾಟಕ ಸರ್ಕಾರದ ಬಹುನಿರೀಕ್ಷಿತ ಗೃಹಲಕ್ಷ್ಮಿ ಯೋಜನೆಗೆ ಈಗಾಗಲೇ ರಾಜ್ಯದಲ್ಲಿ ಚಾಲನೆ ದೊರೆತಿರುವ ಹಿನ್ನೆಲೆಯಲ್ಲಿ ಕಾರ್ಕಳದ ಪುರಸಭೆಯ ಮುಖ್ಯ ಅಧಿಕಾರಿಯಾದ ರೂಪಶೆಟ್ಟಿಯವರು ಕಾರ್ಕಳದಲ್ಲಿ ಈ ಯೋಜನೆಗೆ ಚಾಲನೆ ನೀಡಿದರು. ನಂತರ ಮಾತನಾಡಿದ ಅವರು ಕಾರ್ಕಳ ಪುರಸಭಾ ವ್ಯಾಪ್ತಿಯ ಮೂರೂ ಕಡೆ ಅರ್ಜಿಯ ನೊಂದಣಿ ಮಾಡಲು ಅವಕಾಶ ಇದೆ ಇದರ ಸದುಪಯೋಗವನ್ನು ಎಲ್ಲರೂ ಪಡೆದುಕೊಳ್ಳಬೇಕೆಂದು ಹೇಳಿದರು. ನಂತರ ಮಾತನಾಡಿದ ಪುರಸಭೆ ಸದಸ್ಯರಾದ ಶುಭದ ರಾವ್ ಅವರು ನಾವು ಯೋಜನೆಯ