Home Posts tagged V4News (Page 22)

ಡಿ. 25: ಸಾವಿರ ಕಂಬದ ಬಸದಿಯಲ್ಲಿ ಲಕ್ಷ ದೀಪೋತ್ಸವ

ಮೂಡುಬಿದಿರೆ: ಜಗದ್ಗುರು ಡಾ. ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಪಂಡಿತಾಚಾರ್ಯವರ್ಯ ಮಹಾಸ್ವಾಮೀಜಿಯವರ ವಿಶ್ವಪ್ರಸಿದ್ಧ ಸಾವಿರ ಕಂಬದ ಬಸದಿಯಲ್ಲಿ ಡಿಸೆಂಬರ್ 25 ರಂದು ಲಕ್ಷ ದೀಪೋತ್ಸವ ಕಾರ್ಯಕ್ರಮವು ಅತ್ಯಂತ ಸಡಗರದಿಂದ ಜರುಗಲಿದೆ.​ಅತಿಶಯ ಸಿದ್ಧಕ್ಷೇತ್ರವಾದ ಮೂಡುಬಿದಿರೆಯ ಈ ಪುಣ್ಯಕ್ಷೇತ್ರದಲ್ಲಿ ಅಂದು ವಿವಿಧ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು

ಪದವಿ ಪೂರ್ವ ವಿದ್ಯಾರ್ಥಿಗಳ ರಾಜ್ಯ ಮಟ್ಟದ ಬೆಲ್ಟ್ ಕುಸ್ತಿ ಪಂದ್ಯಾಟ 2025-26 ಉದ್ಘಾಟನಾ ಸಮಾರಂಭ – ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭಾಗಿ

ಶಾಲಾ ಶಿಕ್ಷಣ ಇಲಾಖೆ ಪದವಿ ಪೂರ್ವ, ಬೆಂಗಳೂರು ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ), ಉಡುಪಿ ಜಿಲ್ಲೆ ಉಡುಪಿ ಜಿಲ್ಲಾ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲರ ಸಂಘ ಹಾಗೂ ತ್ರಿಶಾ ವಿದ್ಯಾ ಪದವಿ ಪೂರ್ವ ಕಾಲೇಜು, ಕಟಪಾಡಿ, ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ಇಂದು ದಿನಾಂಕ 22-12-2025 ರಂದು ಅಜ್ಜರಕಾಡು ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಲಾದ “ಪದವಿ ಪೂರ್ವ ವಿದ್ಯಾರ್ಥಿಗಳ ರಾಜ್ಯ ಮಟ್ಟದ ಬೆಲ್ಟ್ ಕುಸ್ತಿ ಪಂದ್ಯಾಟ 2025-26″ರ

ಬೈಂದೂರು : ಹಳ್ಳಿಹೊಳೆ ಗ್ರಾ.ಪಂ. ಸಂಯುಕ್ತ ಆಶ್ರಯದಲ್ಲಿ ನೂತನ ಕಟ್ಟಡ, ಸಭಾಭವನ ಉದ್ಘಾಟನಾ

ಕುಂದಾಪುರ :ಉಡುಪಿ ಜಿ.ಪಂ., ಬೈಂದೂರು ತಾ.ಪಂ. ಹಾಗೂ ಹಳ್ಳಿಹೊಳೆ ಗ್ರಾ.ಪಂ. ಸಂಯುಕ್ತ ಆಶ್ರಯದಲ್ಲಿ ಹಳ್ಳಿಹೊಳೆ ಗ್ರಾ.ಪಂ.ನ ನೂತನ ಕಟ್ಟಡ, ಸಭಾಭವನ, ಗ್ರಾಮ ಆಡಳಿತ ಅಧಿಕಾರಿಗಳ ಕಚೇರಿ, ಅರಿವು ಕೇಂದ್ರದ ಕಚೇರಿ ಉದ್ಘಾಟನಾ ಸಮಾರಂಭ ಸೋಮವಾರ ಸಂಭ್ರಮದಲ್ಲಿ ನಡೆಯಿತು. ಕಮಲಶಿಲೆ ದೇವಸ್ಥಾನದ ಆಡಳಿತ ಧರ್ಮದರ್ಶಿ ಸಚ್ಚಿದಾನಂದ ಚಾತ್ರ ಮಾತನಾಡಿ, ಇದು ಊರಿನ ಒಳ್ಳೆಯ ಕಾರ್ಯ. ಹಳ್ಳಿಹೊಳೆ ಒಳ್ಳೆಯ ಪಂಚಾಯತ್ ಆಗಿ ಮೂಡಿ ಬರುತ್ತಿದ್ದು, ಎಲ್ಲರ ಸಂಘನಾತ್ಮಕ ಕೆಲಸದಿಂದ ಇದು

ರಿಶಲ್ ಫೆರ್ನಾಂಡಿಸ್‌ಗೆ `ದೇಶ್ ರತ್ನಾ ಪ್ರಶಸ್ತಿ

ಮೂಡುಬಿದಿರೆ: ಯುವ ಲೇಖಕಿ, ವಾಗ್ಮಿ ಹಾಗೂ ಎಬಿವಿಪಿ ಕಾರ್ಯಕರ್ತೆ ರಿಶಲ್ ಬ್ರಿಟ್ನಿ ಫೆರ್ನಾಂಡಿಸ್ ಅವರು 2025ನೇ ಸಾಲಿನದೇಶ್ ರತ್ನಾ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.ದೆಹಲಿಯಭಾರತ ಮಂಟಪದಲ್ಲಿ ನಡೆಯುವ ಸಮಾರಂಭದಲ್ಲಿ ವಿವಿಧ ಕೇಂದ್ರ ಹಾಗೂ ರಾಜ್ಯ ಸಚಿವರ ಉಪಸ್ಥಿತಿಯಲ್ಲಿ ಈ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುತ್ತದೆ. ರಿಶಲ್ ಬ್ರಿಟ್ನಿ ಅವರು ಸಾಹಿತ್ಯ ಕ್ಷೇತ್ರದಲ್ಲಿ ಮಾಡಿರುವ ಅಂತರಾಷ್ಟ್ರೀಯ ಮತ್ತು ರಾಷ್ಟ್ರೀಯ ಮಟ್ಟದ ಸಾಧನೆಗಳನ್ನು ಗುರುತಿಸಿ ಭಾರತೀಯ ಯುವ

ಕೆಯ್ಯೂರು: ಪ್ರಗತಿ ಬಂಧು ಒಕ್ಕೂಟಗಳ ಆಶ್ರಯದಲ್ಲಿ ಸಾಮೂಹಿಕ ಸತ್ಯನಾರಾಯಣ ಪೂಜೆ

ಕೆಯ್ಯೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ (ರಿ), ಮತ್ತೂರು ಹಾಗೂ ಪ್ರಗತಿ ಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟ ಕೆಯ್ಯೂರು ಇವರ ಆಶ್ರಯದಲ್ಲಿ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ, ಧಾರ್ಮಿಕ ಸಭೆ ಹಾಗೂ ಸ್ವ-ಸಹಾಯ ಸಂಘಗಳಿಗೆ 1001 ಹೊಸ ಸದಸ್ಯರ ಸೇರ್ಪಡೆ ಕಾರ್ಯಕ್ರಮ ಕೆಯ್ಯೂರು ಜಯಕರ್ನಾಟಕ ಸಭಾಭವನದಲ್ಲಿ ನಡೆಯಿತು. ಬೆಳಗ್ಗೆ ಭಜನಾ ಸೇವೆ ನಡೆದು ಬಳಿಕ ಶ್ರೀ ಸತ್ಯನಾರಾಯಣ ದೇವರ ಪೂಜೆ ಪ್ರಾರಂಭಗೊಂಡಿತು. ಬಳಿಕ ಕೇಂದ್ರ ಒಕ್ಕೂಟದ

ಅಟಲ್ ಜನ್ಮಶತಾಬ್ದಿ ಪ್ರಯುಕ್ತ ಕಾಪು ಕಡಲ ಪರ್ಬ ಪೂರ್ವಭಾವಿಯಾಗಿ ವಿವಿಧ ಸಮಿತಿ ಪ್ರಮುಖರ ಜೊತೆ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಸಭೆ

ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರ ನೇತೃತ್ವದಲ್ಲಿ ಕಾಪು ಮಂಡಲ ಬಿಜೆಪಿ ವತಿಯಿಂದ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮ ಶತಾಬ್ದಿ ಪ್ರಯುಕ್ತ ಡಿಸೆಂಬರ್ 26,27,28 ರಂದು “ಕಾಪು ಕಡಲ ಪರ್ಬ” ನಡೆಯಲಿದ್ದು ಇದರ ಪೂರ್ವಭಾವಿಯಾಗಿ ವಿವಿಧ ಸಮಿತಿಗಳನ್ನು ರಚಿಸಲಿಗಿದ್ದು ಸಮಿತಿಯ ಪ್ರಮುಖರೊಂದಿಗೆ ಇಂದು ದಿನಾಂಕ 21-12-2025 ರಂದು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಸಭೆ ನಡೆಸಿ ಚರ್ಚಿಸಿದರು. 3 ದಿನಗಳ ಕಾಲ ನಡೆಯುವ ಈ ಕಡಲ ಪರ್ಬ

ಕಲ್ಲಬೆಟ್ಟುವಿನಲ್ಲಿ ಪೋಲಿಯೋ ಲಸಿಕಾ ಅಭಿಯಾನ

ಮೂಡುಬಿದಿರೆ : ಪೋಲಿಯೋ ದಿನದ ಅಂಗವಾಗಿ ಪುರಸಭಾ ವ್ಯಾಪ್ತಿಯ ಕಲ್ಲಬೆಟ್ಟು ಶಾಲೆ ಮತ್ತು “ನಮ್ಮ ಕ್ಲಿನಿಕ್”ನಲ್ಲಿ ಐದು ವಷ೯ದೊಳಗಿನ ಮಕ್ಕಳಿಗೆ ಎರಡು ಹನಿ ಪೋಲಿಯೋ ಲಸಿಕೆಯನ್ನು ಹಾಕಲಾಯಿತು.ಪುರಸಭಾ ಸದಸ್ಯ ಜೊಸ್ಸಿ ಮಿನೇಜಸ್ ಅವರು ಎರಡೂ ಕಡೆಗಳಲ್ಲಿ ಮಕ್ಕಳಿಗೆ ಲಸಿಕೆ ಹಾಕುವ ಮೂಲಕ ಕಾಯ೯ಕ್ರಮಕ್ಕೆ ಚಾಲನೆಯನ್ನು ನೀಡಿ ಶುಭ ಹಾರೈಸಿದರು.ಕಲ್ಲಬೆಟ್ಟುವಿನ ಸಮುದಾಯ ಆರೋಗ್ಯಾಧಿಕಾರಿ ಸೋಮನಾಥ್, ಪ್ರಾಥಮಿಕ ಆರೋಗ್ಯಾಧಿಕಾರಿ ಹಷಿ೯ತಾ, ಕಲ್ಲಬೆಟ್ಟು

ಕಾಪು:18 ಲಕ್ಷ ರೂ. ವೆಚ್ಚದ ಕಾಲು ಸಂಕ ನಿರ್ಮಾಣಕ್ಕೆ ಗುದ್ದಲಿ ಪೂಜೆ

ಕಾಪು ವಿಧಾನಸಭಾ ಕ್ಷೇತ್ರದ ಇನ್ನಂಜೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಪಾಂಗಾಳ ತುಂಗೇರ್ ಬೈಲು ಬಳಿ ಕಾಲು ಸಂಕ ನಿರ್ಮಾಣಕ್ಕೆ 18 ಲಕ್ಷ ರೂಪಾಯಿ ಅನುದಾನದ ಮಂಜೂರಾಗಿದ್ದು ಇದರ ಗುದ್ದಲಿ ಪೂಜೆಯನ್ನು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ನೆರವೇರಿಸಿದರು. ಈ ಸಂದರ್ಭದಲ್ಲಿ ಇನ್ನಂಜೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಮಾಲಿನಿ ಶೆಟ್ಟಿ, ಉಪಾಧ್ಯಕ್ಷರಾದ ಸುರೇಖಾ ಶೆಟ್ಟಿ, ಸದಸ್ಯರಾದ ದಿವೇಶ್ ಶೆಟ್ಟಿ, ಸವಿತಾ ಶೆಟ್ಟಿ, ಶಕ್ತಿ ಕೇಂದ್ರದ ಪ್ರವೀಣ್ ಶೆಟ್ಟಿ ಪಾಂಗಾಳ,

ರಾಜ್ಯದಲ್ಲಿ ಸೀಸನಲ್ ಫ್ಲೂ(ಶೀತಜ್ವರ) ಹೆಚ್ಚಳ: ಆರೋಗ್ಯ ಸೇವೆಗಳ ಆಯುಕ್ತಾಲಯದಿಂದ ಮಾರ್ಗಸೂಚಿ ಬಿಡುಗಡೆ

ಹವಾಮಾನ ಬದಲಾವಣೆಯಿಂದಾಗಿ ರಾಜ್ಯದಲ್ಲಿ ಸೀಸನಲ್ ಫ್ಲೂ(ಶೀತಜ್ವರ) ಹೆಚ್ಚಳ ಆಗುತ್ತಿದ್ದು, ಡಿಸೆಂಬರ್, ಜನವರಿಯಿಂದ ಮಾರ್ಚ್ ತನಕ ಸೀಸನಲ್ ಫ್ಲೂ ಹೆಚ್ಚಳದ ಭೀತಿ ಇದೆ. ಹೀಗಾಗಿ ಆರೋಗ್ಯ ಸೇವೆಗಳ ಆಯುಕ್ತಾಲಯವು ಮಾರ್ಗಸೂಚಿ ಬಿಡುಗಡೆ ಮಾಡಿದೆ. ಸೀಸನಲ್ ಫ್ಲೂ ಸಾಮಾನ್ಯವಾಗಿ ಒಂದು ವಾರಗಳ ಕಾಲ ಕಾಡಲಿದ್ದು, ಕೆಲವೊಮ್ಮೆ 3 ವಾರಗಳ ವರೆಗೂ ಮುಂದುವರಿಯುತ್ತದೆ. ಹೀಗಾಗಿ ಶೀತಜ್ವರ ಹರಡುವುದನ್ನು ತಡೆಗಟ್ಟಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾ

ಕೊಲ್ಲೂರು ದೇವಳದ ಹೆಸರಿನಲ್ಲಿ ನಕಲಿ ವೆಬ್‌ಸೈಟ್ ಪ್ರಕರಣ: ರಾಜಸ್ಥಾನ ಮೂಲದ ಆರೋಪಿ ಬಂಧನ

ಕೊಲ್ಲೂರು: ಕೊಲ್ಲೂರು ಶ್ರೀಮೂಕಾಂಬಿಕಾ ದೇವಸ್ಥಾನದ ಹೆಸರಿನಲ್ಲಿ ನಕಲಿ ವೆಬ್‌ಸೈಟ್ ಸೃಷ್ಠಿಸಿ ಭಕ್ತರಿಂದ ಹಣ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿ ಓರ್ವ ಆರೋಪಿಯನ್ನು ಕೊಲ್ಲೂರು ಪೊಲೀಸರು ಬಂಧಿಸಿದ್ದಾರೆ. ರಾಜಸ್ಥಾನ ರಾಜ್ಯದ ತಿಜಾರಿ ಜಿಲ್ಲೆಯ ನಾಸೀರ್ ಹುಸೇನ್(21) ಬಂಧಿತ ಆರೋಪಿ. ಈತ ದೇವಸ್ಥಾನದ ಅಧಿಕೃತ ವೆಬ್‌ಸೈಟ್ ಅನ್ನು ಹೊಲುವ ನಕಲಿ ವೆಬ್ ಸೈಟ್ ಸೃಷ್ಠಿಸಿ ದೇವಸ್ಥಾನದ ಭಕ್ತಾಧಿಗಳಿಂದ ಮುಂಗಡವಾಗಿ ರೂಮ್ ಬುಕಿಂಗ್ ಮಾಡಿಸುವ ಬಗ್ಗೆ ಹಣವನ್ನು ಪಡೆದು ನಕಲಿ