Home Posts tagged V4News (Page 345)

ಮಂಜೇಶ್ವರ|| ಸರ್ಕಾರಿ ಶಾಲೆಯಲ್ಲಿ ಶುಚಿತ್ವವಿಲ್ಲದ ಶೌಚಾಲಯ: ಸಾಂಕ್ರಾಮಿಕ ರೋಗದ ಭೀತಿಯಲ್ಲಿ ಶಾಲಾ ಮಕ್ಕಳು

ಮಂಜೇಶ್ವರದ ಉಪಜಿಲ್ಲಾ ವ್ಯಾಪ್ತಿಯಲ್ಲಿರುವ ಸರಕಾರಿ ಶಾಲೆಗಳಲ್ಲಿ ಹಾಗೂ ಖಾಸಗಿ ಶಾಲೆಗಳ ಶೌಚಾಲಯಗಳಲ್ಲಿ ಶುಚಿತ್ವ ಇಲ್ಲದೇ ಇರುವುದು ಪೋಷಕರಲ್ಲಿ ಸಾಂಕ್ರಾಮಿಕ ರೋಗದ ಭೀತಿಯನ್ನು ಹೆಚ್ಚಿಸಿದೆ. ಮಂಜೇಶ್ವರ ಉಪಜಿಲ್ಲೆಯ ವ್ಯಾಪ್ತಿಯಲ್ಲಿರುವ ಶಾಲೆಯೊಂದರಲ್ಲಿ ಶೌಚಾಲಯದಲ್ಲಿ ಮಾಲಿನ್ಯ ಕಟ್ಟಿ ನಿಂತು ದುರ್ವಾಸನೆಯಿಂದ ವಿದ್ಯಾರ್ಥಿಗಳು ಮೂಗು ಮುಚ್ಚಿಕೊಂಡು ಹೋಗುವ

ಪುತ್ತೂರು: ಅ.22ರಂದು ಪುತ್ತೂರುದ ಪಿಲಿಗೊಬ್ಬು -2023 ಹಾಗೂ ಫುಡ್ ಫೆಸ್ಟ್

ಪುತ್ತೂರು: ತುಳು ನಾಡಿನ ಧಾರ್ಮಿಕ ಹಿನ್ನೆಲೆ ಇರುವ ಜಾನಪದ ಕಲೆಯಾದ ಹುಲಿವೇಷ ಕುಣಿತವನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಅ. 22ರಂದು ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರ ಮಾರು ಗದ್ದೆಯಲ್ಲಿ ಪುತ್ತೂರುದ ಪಿಲಿಗೊಬ್ಬು -2023 ಹಾಗೂ ಫುಡ್ ಫೆಸ್ಟ್ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಪುತ್ತೂರುದ ಪಿಲಿಗೊಬ್ಬು ಸಮಿತಿಯ ಗೌರವಾಧ್ಯಕ್ಷ ಸಹಜ್ ರೈ ಬಳಜ್ಜ ತಿಳಿಸಿದ್ದಾರೆ. ಪುತ್ತೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ

ಪುತ್ತೂರು: ಅ.22ರಂದು ಪುತ್ತೂರುದ ಪಿಲಿರಂಗ್‍ನ ಸೀಸನ್ -2

ಪುತ್ತೂರು: ಹುಲಿ ಕುಣಿತದಂತಹ ಸಾಂಸ್ಕೃತಿಕ ಕಲೆ ನಮ್ಮ ಊರಿಗೂ ಬರಲಿ ಎಂಬ ಉದ್ದೇಶದಿಂದ ಆರಂಭಗೊಂಡಿರುವ ಪುತ್ತೂರುದ ಪಿಲಿರಂಗ್‍ನ ಸೀಸನ್ -2 ಪುತ್ತೂರು ಕಿಲ್ಲೆ ಮೈದಾನದಲ್ಲಿ ಅ. 22ರಂದು ನಡೆಯಲಿದೆ ಎಂದು ಪಿಲಿರಂಗ್ ಸಾರಥ್ಯ ವಹಿಸಿರುವ ಮಾಜಿ ಶಾಸಕಿ ಶಕುಂತಳಾ ಟಿ. ಶೆಟ್ಟಿ ಹೇಳಿದರು. ಪುತ್ತೂರಿನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ಪುತ್ತೂರಿಗೆ ಹೆಸರು ಬರಬೇಕು ಎಂಬ ನಿಟ್ಟಿನಲ್ಲಿ ಪಿಲಿರಂಗ್ ಆರಂಭ ಮಾಡಿದ್ದೇವೆ. ಜಾತ್ಯಾತೀತ, ಪಕ್ಷಾತೀತ

ಮಂಗಳೂರು: ವಿ.ಟಿ.ರೋಡ್ ಬಾಲಕ ವೃಂದ, ಶ್ರೀ ಶಾರದಾ ಪೂಜಾ ಸಮಿತಿಯಿಂದ ಶ್ರೀ ಶಾರದಾ ಪೂಜಾ ಮಹೋತ್ಸವ

ಮಂಗಳೂರಿನ ವಿ.ಟಿ.ರೋಡ್ ಬಾಲಕ ವೃಂದ, ಶ್ರೀ ಶಾರದಾ ಪೂಜಾ ಸಮಿತಿಯ ವತಿಯಿಂದ ನಗರದ ಶ್ರೀ ವಿಠೋಭ ದೇವಸ್ಥಾನದ ರಸ್ತೆಯಲ್ಲಿರುವ ಶ್ರೀ ಕೃಷ್ಣ ಮಂದಿರದ ಸಭಾಗೃಹದಲ್ಲಿ ಶ್ರೀ ಶಾರದಾ ಪೂಜಾ ಮಹೋತ್ಸವವು ಅ.23 ರ ವರೆಗೆ ನಡೆಯಲಿದೆ.ಅ.18ರಿಂದ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆದಿದ್ದು, ಅ.19ರಂದು ದೇವಿಯ ಪ್ರತಿಷ್ಠೆ, ಅ.20ರಂದು ಚಂಡಿಕಾ ಹವನ, ಸಾರ್ವಜನಿಕ ಮಹಾ ಅನ್ನಸಂತರ್ಪಣೆ, ರಾತ್ರಿಪೂಜೆ ನಡೆಯಿತು. ಅ.21 ರಂದು ಮಧ್ಯಾಹ್ನ ಪೂಜೆ ನಂತರ ನಂತರ ಸಂಜೆ 6.30ಕ್ಕೆ ವಿಶೇಷ

ವಿಟ್ಲ: ನೇಣು ಬಿಗಿದು ಯುವಕ ಆತ್ಮಹತ್ಯೆ

ನೇಣು ಬಿಗಿದು ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಟ್ಲ ಸಮೀಪದ ಪುಣಚದಲ್ಲಿ ನಡೆದಿದೆ. ಪುಣಚ ಚೆಕ್ಕುತ್ತಿ ನಿವಾಸಿ ಶ್ರೀ ಕೃಷ್ಣ (26) ಆತ್ಮಹತ್ಯೆ ಮಾಡಿಕೊಂಡ ಯುವಕ. ಶ್ರೀ ಕೃಷ್ಣ ಸೆಂಟ್ರಿoಗ್ ಕೆಲಸ ನಿರ್ವಹಿಸುತ್ತಿದ್ದು, ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಮೃತರು ತಾಯಿ, ಸಹೋದರ, ಸಹೋದರಿ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.ವಿಟ್ಲ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಬೆಂಗಳೂರು: ಅರಣ್ಯ ಭೂಮಿ ಒತ್ತುವರಿ, ಅರಣ್ಯಧಿಕಾರಿಗಳಿಗೆ ಕರ್ತವ್ಯಕ್ಕೆ ಅಡ್ಡಿ; ಶಾಸಕ ಹರೀಶ್ ಪೂಂಜಾ ವಿರುದ್ದ ಈಶ್ವರ್ ಖಂಡ್ರೆಗೆ ದೂರು

ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಹಿನ್ನಲೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ವಿರುದ್ಧ ಅರಣ್ಯಧಿಕಾರಿಗಳು ವಲಯ ಅರಣ್ಯಾಧಿಕಾರಿ ಸಂಘದ ಅಧ್ಯಕ್ಷರಾದ ಜಿ ಡಿ ದಿನೇಶ್ ಅವರ ನೇತೃತ್ವದಲ್ಲಿ ಅರಣ್ಯ ಸಚಿವ ಈಶ್ವರ್ ಖಂಡ್ರೆ ಗೆ ದೂರು ನೀಡಿದ್ದಾರೆ. ತಮಗೆ ಕರ್ತವ್ಯದ ಸಂದರ್ಭದಲ್ಲಿ ರಕ್ಷಣೆ ನೀಡುವಂತೆ ಕೋರಿ ಕರ್ನಾಟಕ ರಾಜ್ಯ ವಲಯ ಅರಣ್ಯಾಧಿಕಾರಿಗಳ ಸಂಘದಿಂದ ದೂರು ಸಲ್ಲಿಸಿದ್ದಾರೆ. ಉಪ್ಪಿನಂಗಡಿ ಅರಣ್ಯ ವಲಯದ ವ್ಯಾಪ್ತಿಯಲ್ಲಿನ ಬೆಳ್ತಂಗಡಿ ತಾಲೂಕಿನ ಕಳಂಜ ಗ್ರಾಮದಲ್ಲಿ

ಮೂಡುಬಿದಿರೆ:ಮುಖ್ಯಮಂತ್ರಿ ಕಪ್ ವೇಟ್‌ಲಿಫ್ಟಿಂಗ್: ಆಳ್ವಾಸ್‌ಗೆ ಸಮಗ್ರ ಪ್ರಶಸ್ತಿ

ಮೂಡುಬಿದಿರೆ: ಮೈಸೂರು ದಸರಾ ಮುಖ್ಯಮಂತ್ರಿ ಕಪ್ ವೇಟ್‌ಲಿಫ್ಟಿಂಗ್ ಚಾಂಪಿಯಶಿಪ್‌ನಲ್ಲಿ ಆಳ್ವಾಸ್ ಕಾಲೇಜಿನ ಪುರುಷರ ಮತ್ತು ಮಹಿಳಾ ತಂಡಗಳು ಸಮಗ್ರ ಪ್ರಶಸ್ತಿ ಪಡೆದಿದೆ. ಪುರುಷರ ವಿಭಾಗದಲ್ಲಿ ಒಟ್ಟು 6 ಚಿನ್ನ 3 ಬೆಳ್ಳಿ, ಒಂದು ಕಂಚಿನ ಪದಕ ಪಡೆದರೆ, ಮಹಿಳಾ ವಿಭಾಗದಲ್ಲಿ ಒಟ್ಟು 5 ಚಿನ್ನ, 5 ಬೆಳ್ಳಿ ಪಡೆದು ತಂಡ ಪ್ರಶಸ್ತಿ ಪಡೆದುಕೊಂಡಿದೆ. ಆಳ್ವಾಸ್‌ನ ಉಷಾ ಎಸ್.ಆರ್ 87 ಕೆ.ಜಿ ದೇಹತೂಕ ವಿಭಾಗದಲ್ಲಿ ಬೆಸ್ಟ್ ಲಿಫ್ಟರ್ ಪ್ರಶಸ್ತಿಗೆ ಭಾಜನರಾದರು. ಕ್ರೀಡಾಪಟುಗಳ

ಮಂಗಳೂರು: ಚಿತ್ರಾಪುರ ಬೀಚ್‌ನಲ್ಲಿ ಮುಳುಗಿ ವಿದ್ಯಾರ್ಥಿ ಮೃತ್ಯು

ರಜಾ ಹಿನ್ನೆಲೆ ಬೀಚ್‌ಗೆ ತೆರಳಿದ್ದ ವಿದ್ಯಾರ್ಥಿಗಳು ನೀರಿನಲ್ಲಿ ಮುಳುಗಿದ್ದು, ವಿಟ್ಲ ಮೂಲದ ಓರ್ವ ವಿದ್ಯಾರ್ಥಿನಿ ಸಾವನ್ನಪ್ಪಿದ ಘಟನೆ ಸುರತ್ಕಲ್ ಸಮೀಪದ ಚಿತ್ರಾಪುರ ಬೀಚ್‌ನಲ್ಲಿ ನಡೆದಿದೆ. ಮೃತಪಟ್ಟ ವಿದ್ಯಾರ್ಥಿ ನಿಶಾ(15) ಎಂದು ಗುರುತಿಸಲಾಗಿದ್ದು, ಈಕೆ ಮೂಲತಃ ನೇಪಾಲ ಮೂಲದವರಾಗಿದ್ದು, ಪ್ರಸ್ತುತ ವಿಟ್ಲದಲ್ಲಿ ವಾಸವಾಗಿದ್ದಳು. ವಿಟ್ಲ ಮೂಲದ ದಿಗಂತ (15) ದಿವ್ಯರಾಜ್ (15) ತೇಜಸ್ (14) ಕೀರ್ತನ್ (16) ಅಶ್ಮಿತಾ (15) ನಿಶಾ (15) ಇವರೆಲ್ಲರೂ ಕುಳಾಯಿ

ಅಕ್ಟೋಬರ್ 20 : ವಿಶ್ವ ಅಸ್ಥಿರಂದ್ರತೆ ಜಾಗೃತಿ ದಿನ

ವಿಶ್ವದಾದ್ಯಂತ ಪ್ರತಿ ವರ್ಷ ಅಕ್ಟೋಬರ್ 20ರಂದು ವಿಶ್ವ ಅಸ್ಥಿರಂದ್ರತೆ ಜಾಗೃತಿ ದಿನ ಎಂದು ಆಚರಿಸಿ ಜನರಲ್ಲಿ ಅಸ್ಥಿರಂದ್ರತೆಯ ಬಗ್ಗೆ ಜಾಗೃತಿ ಮತ್ತು ಅರಿವು ಮೂಡಿಸುವ ಕೆಲಸ ಮಾಡಲಾಗುತ್ತಿದೆ. ಯಾಕಾಗಿ ಅಸ್ಥಿರಂದ್ರತೆ ಬರುತ್ತದೆ, ಹೇಗೆ ತಡೆಯಬಹುದು, ಯಾವ ರೀತಿಯ ಆಹಾರ ಸೇವನೆ ಅವಶ್ಯಕ, ಅಸ್ಥಿರಂದ್ರತೆಯ ಅಪಾಯಗಳು ಏನು ಮತ್ತು ಹೇಗೆ ಜೀವನ ಶೈಲಿ ಬದಲಾಯಿಸಬೇಕು ಮುಂತಾದವುಗಳ ಬಗ್ಗೆ ಜನ ಸಾಮಾನ್ಯರಿಗೆ ತಿಳುವಳಿಕೆ ನೀಡಲಾಗುತ್ತದೆ. ಇದರ ಜೊತೆಗೆ ರೋಗದ ಚಿಕಿತ್ಸೆಯ

ಮಂಗಳೂರು: ವಾಲಿ ಸುಗ್ರೀವರ ಒಡ್ಡೋಲಗ ವಿಡಿಯೋ ಲೋಕಾರ್ಪಣೆ

ಯಕ್ಷಗಾನ ಪರಂಪರೆಯ ವಾಲಿ-ಸುಗ್ರೀವರ ಒಡ್ಡೋಲಗ ದಾಖಲೀಕರಣದ ವಿಡಿಯೋ ಮಧುಸೂಧನ ಅಲೆವೂರಾಯ ಅವರ ಪ್ರಸಿದ್ಧ ಯೂಟ್ಯೂಬ್ ಚಾನೆಲ್‍ನಲ್ಲಿ ಬಿಡುಗಡೆಗೊಂಡಿತು. ಮಂಗಳೂರಿನ ಪತ್ರಿಕಾಭವನದಲ್ಲಿ ವಾಲಿ ಸುಗ್ರೀವರ ಒಡ್ಡೋಲಗ ವಿಡಿಯೋ ಲೋಕಾರ್ಪಣೆಗೊಂಡಿತು. ಇದೇ ವೇಳೆ ಕನ್ನಡ ಸಾಹಿತ್ಯ ಪರಿಷತ್‍ನ ಮಾಜಿ ರಾಜ್ಯಾಧ್ಯಕ್ಷರಾದ ಡಾ. ಹರಿಕೃಷ್ಣ ಪುನರೂರು ಅವರು ಮಾತನಾಡಿ, ರಾಷ್ಟ್ರಪ್ರಶಸ್ತಿ ಪುರಸ್ಕøತ ಹಿರಿಯ ಕಲಾವಿದ ಕೆ. ಗೋವಿಂದ ಭಟ್ ಸೂರಿಕುಮೇರಿಯವರ