ಕುಂದಾಪುರದ ಸೇನಾಪುರ ನಿಲ್ದಾಣದಲ್ಲಿ ಎಕ್ಸ್‍ಪ್ರೆಸ್ ರೈಲು ನಿಲುಗಡೆ ಹೋರಾಟ ಸಮಿತಿ ನೇತೃತ್ವದಲ್ಲಿ ಸೇನಾಪುರ ನಿಲ್ದಾಣದಲ್ಲಿ ಎಕ್ಸ್‍ಪ್ರೆಸ್ ರೈಲು ನಿಲುಗಡೆ ಆಗ್ರಹಿಸಿ ಚಲೋ ಸೇನಾಪುರ ಬೃಹತ್ ಪ್ರತಿಭಟನೆ ನಡೆಸಿದರು. ಬೃಹತ್ ಪ್ರತಿಭಟನೆ ಮೆರವಣಿಗೆ ನಾಡಾ ಗ್ರಾಮ ಪಂಚಾಯತ್‍ನಿಂದ ಆರಂಭಗೊಂಡು ಸೇನಾಪುರ ರೈಲ್ವೇ ನಿಲ್ದಾಣದವರೆಗೆ ಸಾಗಿಬಂದು,
ಕೋಟದ ಕಾರಂತ ಥೀಮ್ ಪಾರ್ಕ್‍ನಲ್ಲಿ ಡಾ. ಕೋಟ ಶಿವರಾಮ ಕಾರಂತರ ಜನ್ಮದಿನೋತ್ಸವದ ಅಂಗವಾಗಿ ಸಂಗೀತ ಲೋಕದ ದಿಗ್ಗಜ ಡಾ. ವಿದ್ಯಾಭೂಷಣರಿಗೆ ಹುಟ್ಟೂರ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯಿತು. ಕೋಟತಟ್ಟು ಗ್ರಾಮ ಪಂಚಾಯತ್, ಡಾ.ಶಿವರಾಮ ಕಾರಂತ ಟ್ರಸ್ಟ್ ಉಡುಪಿ, ಡಾ. ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿ ಪ್ರತಿಷ್ಠಾನ ಇವರ ಆಶ್ರಯದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ವಿಶೇಷವಾಗಿ ಆಗಮಿಸಿದ್ದ ರಾಜ್ಯಪಾಲ ಥಾವರ್‍ಚಂದ್ ಗೇಹಲೋಟ್‍ರವರಿಗೆ
ಕುಂದಾಪುರ: ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿದ ರಾಜ್ಯಪಾಲ ಥ್ಯಾವರ್ ಚಂದ್ ಗೆಹ್ಲೋಟ್ ಅವರು ದೇವರ ದರ್ಶನ ಪಡೆದುಕೊಂಡು ವಿಶೇಷ ಪೂಜೆ ಸಲ್ಲಿಸಿದರು. ದೇಗುಲಕ್ಕೆ ಭೇಟಿ ನೀಡಿದ ರಾಜ್ಯಪಾಲರನ್ನು ಪೂರ್ಣಕುಂಭ ಸ್ವಾಗತದೊಂದಿಗೆ ಬರಮಾಡಿಕೊಳ್ಳಲಾಯಿತು. ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೆರಾಡಿ ಚಂದ್ರಶೇಖರ ಶೆಟ್ಟಿ ಅವರು ರಾಜ್ಯಪಾಲರನ್ನು ಗೌರವಿಸಿದರು. ಈ ಸಂದರ್ಭದಲ್ಲಿ ಮಾಜಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಶಾಸಕ ಗುರುರಾಜ್
ಕಾಲುಗಳಿಗಿಲ್ಲ ತನ್ನ ಬೇಕು ಬೇಡಗಳನ್ನು ಪೂರೈಸುವ ಶಕ್ತಿ… ಆದರೆ ಜನರ ಉದ್ಧಾರಕ್ಕೂ ಎಂಬಂತೆ ತನ್ನೆಲ್ಲಾ ಸುಖ ಸಂತೋಷಗಳನ್ನು ಬದಿಗೊತ್ತಿ,.. ತನ್ನಲ್ಲಿ ಅಡಕವಾಗಿರುವ ನೋವುಗಳನ್ನು ಮರೆತು ಜನರ ಕಷ್ಟ ಕಾರ್ಪಣ್ಯಗಳಿಗೆ ಸ್ಪಂದಿಸುತ್ತಾರೆ. ಇದೀಗ ಪಡುಬಿದ್ರಿಯ ಸುಜ್ಲಾನ್ ಕಾಲೋನಿಯ ಒಂದು ಮನೆಯಲ್ಲಿ ಜನರ ಸೇವೆಗೆ ಲಭ್ಯವಿದ್ದಾರೆ. ಕೇರಳ ಮೂಲದ “ಶೇಷಾನಂದ” ವಯಸ್ಸು ಕೇವಲ ಮೂವತ್ತ ನಾಲ್ಕು, ವಿದ್ಯಾಭ್ಯಾಸ ರಹಿತವಾಗಿರುವ ಇವರು ಕನ್ನಡ, ಹಿಂದಿ, ಮಲಯಾಳಂ ಸಹಿತ
ಮಂಗಳೂರಿನ ಕಲೆ, ಸಂಸ್ಕೃತಿಯನ್ನು ಉಳಿಸಿ, ಬೆಳೆಸುವ ನಿಟ್ಟಿನಲ್ಲಿ ಆರಂಭವಾಗಿರುವ ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನ ಇದರ ಎರಡನೇ ವರ್ಷದ ಪಿಲಿಪರ್ಬದ ಆಮಂತ್ರಣ ಪತ್ರಿಕೆಯನ್ನು ಪ್ರತಿಷ್ಠಾನದ ಮಾರ್ಗದರ್ಶಕರೂ, ಸಂಸದರೂ, ಭಾಜಪಾ ರಾಜ್ಯಾಧ್ಯಕ್ಷರೂ ಆಗಿರುವ ನಳಿನ್ ಕುಮಾರ್ ಕಟೀಲ್ ಮಂಗಳೂರಿನಲ್ಲಿ ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ಮಂಗಳೂರಿನ ಕೇಂದ್ರ ಮೈದಾನದಲ್ಲಿ ಅಕ್ಟೋಬರ್ 21 ರಂದು ನಡೆಯುವ ಪಿಲಿಪರ್ಬ ಈ ವರ್ಷವೂ ಆದ್ದೂರಿಯಾಗಿ ನಡೆಯಲಿದೆ.
ಇಸ್ರೇಲ್ ನಲ್ಲಿರುವ ಕರಾವಳಿಯ ಜನರನ್ನು ಸುರಕ್ಷಿತವಾಗಿ ಕರೆತರುವ ಕೆಲಸವನ್ನು ಕೇಂದ್ರ ಸರಕಾರ ಮಾಡುತ್ತದೆ. ಯಾರೂ ಭಯ ಪಡುವ ಅಗತ್ಯವಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ. ಈ ಕುರಿತು ಮಾಧ್ಯಮದೊಂದಿಗೆ ಮಾತನಾಡಿದ ನಳಿನ್ ಕುಮಾರ್ ಕಟೀಲ್ ಅವರು, ಯಾರು ಭಯ ಪಡಬೇಕಾಗಿಲ.್ಲ ಇಸ್ರೇಲ್‍ನಲ್ಲಿ ಐದು ಸಾವಿರ ದ.ಕ ಜಿಲ್ಲೆಯ ಜನರು ಇದ್ದಾರೆಂಬ ಮಾಹಿತಿ ಇದೆ. ಈಗಾಗಲೇ ವಿದೇಶಾಂಗ ಇಲಾಖೆ ಸಚಿವರಿಗೆ ಪತ್ರ ಬರೆದಿದ್ದೇನೆ, ಯಾರಿಗೂ
ಉಡುಪಿ: ವಿಎಚ್‌ಪಿ- ಬಜರಂಗದಳ ವತಿಯಿಂದ ಇಂದು ಉಡುಪಿಯಲ್ಲಿ ಹಮ್ಮಿಕೊಳ್ಳಲಾದ ಶೌರ್ಯ ಜಾಗರಣ ರಥಯಾತ್ರೆ ಸಮಾರೋಪ ಹಾಗೂ ಹಿಂದೂ ಸಮಾಜೋತ್ಸವ ಹಿನ್ನೆಲೆಯಲ್ಲಿ ಹೈಕೋರ್ಟ್ ಆದೇಶದಂತೆ ವಿಎಚ್‌ಪಿ ಪ್ರಾಂತ ಸಹಕಾರ್ಯದರ್ಶಿ ಶರಣ್ ಪಂಪ್‌ವೆಲ್ ಗೆ ಉಡುಪಿ ಜಿಲ್ಲಾ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ. ಇತ್ತೀಚೆಗೆ ನಡೆದ ಉಡುಪಿಯ ಕಾಲೇಜೊಂದರ ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ ಪ್ರಕರಣದ ಪ್ರತಿಭಟನೆಯಲ್ಲಿ ಶರಣ್ ಪಂಪ್‌ವೆಲ್ ಪ್ರಚೋದನಕಾರಿಯಾಗಿ ಭಾಷಣ ಮಾಡಿದ್ದರು. ಈ ಸಂಬಂಧ
ಉಳ್ಳಾಲ ಸಮುದಾಯ ಆಸ್ಪತ್ರೆಯಲ್ಲಿ ವೈದ್ಯರು ಸಹಿತ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಡಿವೈಎಫ್‍ಐ ಉಳ್ಳಾಲ ತಾಲೂಕು ಸಮಿತಿಯಿಂದ ಉಳ್ಳಾಲ ಸಮುದಾಯ ಆಸ್ಪತ್ರೆ ಯ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದರು. ಡಿವೈಎಫ್‍ಐ ಜಿಲ್ಲಾಧ್ಯಕ್ಷರಾದ ಬಿ.ಕೆ ಇಮ್ತಿಯಾಝ್ ಅವರು ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿ, ಖಾಯಂ ವೈದ್ಯರನ್ನು ನಿಯುಕ್ತಿ ಮಾಡಲು ಆರೋಗ್ಯ ಇಲಾಖೆ ವಿಫಲವಾಗಿದೆ. ಬಾಣಂತಿಯರಿಗೆ ಬಿಸಿನೀರಿನ ವ್ಯವಸ್ಥೆಯಿಲ್ಲ, 108 ಆಂಬ್ಯುಲೆನ್ಸ್ ಸೇವೆ ಆರೋಗ್ಯ
ಜಿಲ್ಲೆಯ ಎಲ್ಲಾ ಸಮುದಾಯ ಆರೋಗ್ಯ ಕೇಂದ್ರಕ್ಕೆ ಹೋಲಿಸಿದರೆ ಸುಸಜ್ಜಿತವಾದ ಎಲ್ಲಾ ವೈದ್ಯಕೀಯ ಪದ್ಧತಿಯ ಚಿಕಿತ್ಸೆ ಸಿಗುವ ಏಕೈಕ ಆರೋಗ್ಯ ಕೇಂದ್ರ ಉಳ್ಳಾಲ ಸಮುದಾಯ ಆರೋಗ್ಯ ಕೇಂದ್ರವಾಗಿದ್ದು, ಈ ಆರೋಗ್ಯ ಕೇಂದ್ರವನ್ನು ಸುಸಜ್ಜಿತವಾಗಿ ನಿರ್ಮಿಸುವಲ್ಲಿ ಕ್ಷೇತ್ರದ ಶಾಸಕರೂ ಮತ್ತು ಪ್ರಸ್ತುತ ಯು.ಟಿ.ಖಾದರ್ ಅವರು, ಆರೋಗ್ಯ ಕೇಂದ್ರ ಮೇಲ್ದರ್ಜೆಗೇರಿಸಿ ಅಭಿವೃದ್ಧಿಪಡಿಸಿದ್ದು, ಖಾಸಗಿ ಆಸ್ಪತ್ರೆಯ ವೈದ್ಯರು ಸೇರಿದಂತೆ ಸಮುದಾಯ ಆರೋಗ್ಯ ಕೇಂದ್ರದ ವೈದ್ಯರುಗಳು ಮತ್ತು
ಕಳೆಂಜ ಗ್ರಾಮದ ಅಮ್ಮಿನಡ್ಕ ಎಂಬಲ್ಲಿ ನಿರ್ಮಾಣ ಹಂತದಲ್ಲಿದ್ದ ಮನೆಯ ಫೌಂಡೇಶನ್ ಅರಣ್ಯ ಇಲಾಖೆ ಕಿತ್ತೆಸೆದ ಘಟನೆಗೆ ಸಂಬಂಧಿಸಿದಂತೆ ಜಿಲ್ಲೆಯ ಶಾಸಕರು ದೌಡಾಯಿಸುತ್ತಲೆ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿದ್ದ ಪ್ರಕರಣ ತಾತ್ಕಾಲಿಕ ಸುಖಾಂತ್ಯ ಕಂಡಿದೆ. ಸ್ಥಳಕ್ಕೆ ಜಿಲ್ಲಾ ಅರಣ್ಯಾಧಿಕಾರಿ ವೆಲಂಟನಿ ಮರಿಯಪ್ಪ ಅವರು ಭೇಟಿ ನೀಡಿ ಮನೆ ತೆರವುಗೊಳಿಸುವುದಾಗಿ ತಿಳಿಸಿದಾಗ, ಶಾಸಕರುಗಳು ತೆರವುಗೊಳಿಸುವುದಾದರೆ 309 ಸರ್ವೇ ನಂಬರ್‍ಗೆ ಒಳಪಟ್ಟ ಎಲ್ಲ ಮನೆ




























