Home Posts tagged V4News (Page 365)

ಮಂಗಳೂರು: ಘನತ್ಯಾಜ್ಯ ನಿರ್ವಹಣೆ ಪ್ಯಾಕೇಜ್ ರದ್ದು, ಪ್ಯಾಕೇಜ್ ಅವೈಜ್ಞಾನಿಕವಾಗಿದೆ ಎಂದ ವಿಪಕ್ಷ ಸದಸ್ಯರು

ಮಂಗಳೂರು ನಗರದಲ್ಲಿ ಮುಂದಿನ ದಿನಗಳಲ್ಲಿ ಘನತ್ಯಾಜ್ಯ ನಿರ್ವಹಣೆಗಾಗಿ ಗುತ್ತಿಗೆ ನೀಡಿರುವ ಹೊಸ ಪ್ಯಾಕೇಜ್ ವ್ಯವಸ್ಥೆಯನ್ನು ಅನುಷ್ಠಾನಕ್ಕೆ ಮೊದಲೇ ರದ್ದು ಮಾಡುವ ಮಹತ್ವದ ತೀರ್ಮಾನವನ್ನು ಮಂಗಳೂರು ಮಹಾನಗರ ಪಾಲಿಕೆಯ ಸಭೆ ನಿರ್ಣಯ ಕೈಗೊಂಡಿದೆ. ವೈಜ್ಞಾನಿಕ ಟೆಂಡರ್, ಅಧಿಕಾರಿಗಳ ಲೋಪ, ಹಿಂದಿನ ಟೆಂಡರ್‍ಗಿಂತ ಹಲವು ವಿಷಯ ಕೈಬಿಟ್ಟಿರುವ ಹಿನ್ನಲೆಯಲ್ಲಿ

ಉಳ್ಳಾಲ: ಟೆಂಪೋ ಚಾಲಕ ಬಾವಿಗೆ ಹಾರಿ ಆತ್ಮಹತ್ಯೆ

ಉಳ್ಳಾಲ:ಟೆಂಪೋ ಚಾಲಕ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ತೊಕ್ಕೊಟ್ಟು ಒಳಪೇಟೆಯ ಸಂತ ಸೆಬೆಸ್ತಿಯನ್ನರ ಚಚ್೯ ಬಳಿ ಇಂದು ಬೆಳಿಗ್ಗೆ ಬೆಳಕಿಗೆ ಬಂದಿದೆ. ತೊಕ್ಕೊಟ್ಟು, ಕೃಷ್ಣ ನಗರ,ಲಚ್ಚಿಲ್ ನಿವಾಸಿ ನಾಗೇಶ್ (62)ಆತ್ಮ ಹತ್ಯೆಗೈದ ದುರ್ದೈವಿ.ನಾಗೇಶ್ ಗೂಡ್ಸ್ ಆಟೋ ಟೆಂಪೊ ಚಲಾಯಿಸುತ್ತಿದ್ದರು. ಟೆಂಪೋವನ್ನ ನಾಗೇಶ್ ಅವರು ಒಳಪೇಟೆಯ ಚರ್ಚ್ ಮುಂಭಾಗದ ಗಣೇಶ್ ಭವನ ಹೊಟೇಲು ಮಾಲಕರ ಮನೆಯಂಗಳದಲ್ಲೇ ದಿನನಿತ್ಯವೂ ರಾತ್ರಿ ನಿಲ್ಲಿಸುತ್ತಿದ್ದರು.ಇಂದು ಬೆಳಿಗ್ಗೆ

ಕಾರ್ಕಳ: ಈದ್ ಮಿಲಾದ್ ಹಬ್ಬವನ್ನು ಶಾಂತಿಯಿಂದ ಆಚರಿಸಿ, ಡಿವೈಎಸ್ಪಿ ಅರವಿಂದ ಕಲಗಜ್ಜಿ

ಈದ್ ಮಿಲಾದ್ ಹಬ್ಬವನ್ನು ಶಾಂತಿಯುತವಾಗಿ ಆಚರಿಸಿ. ಯಾರೂ ಕೂಡ ಶಾಂತಿ ಕದಡುವ ಕೆಲಸ ಮಾಡಬೇಡಿ ಎಂದು ಕಾರ್ಕಳ ಡಿವೈಎಸ್ಪಿ ಅರವಿಂದ ಕಲಗಜ್ಜಿ ಹೇಳಿದರು. ಅವರು ಕಾರ್ಕಳ ನಗರ ಠಾಣೆ ಮತ್ತು ಗ್ರಾಮಾಂತರ ಠಾಣೆ ವ್ಯಾಪ್ತಿಯ ಎಲ್ಲಾ ಮಸೀದಿಯ ಧರ್ಮಗುರುಗಳು ಮತ್ತು ಮಸೀದಿಯ ಮುಖ್ಯಸ್ಥರ ಸಭೆಯಲ್ಲಿ ಮಾತನಾಡಿದರು. ಈದ್ ಮಿಲಾದ್ ಆಚರಣೆಗೆ ಪೊಲೀಸ್ ಇಲಾಖೆಯಿಂದ ಸಂಪೂರ್ಣವಾದ ಭದ್ರತೆಯನ್ನು ಕೊಡುತ್ತೇವೆ. ಸಮಯದೊಳಗಡೆ ಸಭೆ, ಸಮಾರಂಭಗಳನ್ನು ಮುಕ್ತಾಯಗೊಳಿಸಬೇಕು ಎಂದರು. ಈ ಸಂದರ್ಭ

ಉಳ್ಳಾಲ: ರೋಹಿಣಿ ಸಾಲಿಯಾನ್ ರಚಿತ ದಿವ್ಯಾಂಗನೆ ಕವನ ಸಂಕಲನ ಬಿಡುಗಡೆ

ಕನ್ನಡಿಗ ಪತ್ರಕರ್ತರ ಸಂಘ ಮಹಾರಾಷ್ಟ್ರದ ಸಲಹಾ ಸಮಿತಿಯ ಹಿರಿಯ ಸದಸ್ಯೆ, ಮುಂಬಯಿಯ ಹೈಕೋರ್ಟ್ ನ್ಯಾಯವಾದಿ ರೋಹಿಣಿ ಜೆ.ಸಾಲಿಯಾನ್ ರಚಿತ ದಿವ್ಯಾಂಗನೆ ಕವನ ಸಂಕಲನವನ್ನು ಬಿಡುಗಡೆ ಹಾಗೂ ಕೃತಿಯ ಅರ್ಪಣೆ ಕಾರ್ಯಕ್ರಮ ಮಂಗಳೂರಿನ ಹೊಯಿಗೆಬೈಲ್ ರತ್ನಾ ನಿವಾಸದಲ್ಲಿ ನಡೆಯಿತು. ಕನ್ನಡಿಗ ಪತ್ರಕರ್ತರ ಸಂಘ ಮಹಾರಾಷ್ಟ್ರ ಸಂಸ್ಥೆಯ ಸಲಹಾ ಸಮಿತಿ ಸದಸ್ಯ ನ್ಯಾಯವಾದಿ ಬಿ.ಮೋಹಿದ್ಧೀನ್ ಮುಂಡ್ಕೂರು ಕಾರ್ಯಕ್ರಮದ ಉದ್ದೇಶಿಸಿ ಮಾತನಾಡಿ, ಧ್ಯೇಯೋದ್ದೇಶಗಳು ಚೆನ್ನಾಗಿದ್ದರೆ

ಉಳ್ಳಾಲ: ಡ್ರೈನೇಜ್ ನೀರಿನಲ್ಲಿ ತೊಕ್ಕೊಟ್ಟು ರಿಕ್ಷಾ ಚಾಲಕರ ಬದುಕು- ಪ್ರತಿಭಟನೆಗೆ ನಿರ್ಧಾರ

ಉಳ್ಳಾಲ: ಉಳ್ಳಾಲ ತಾಲೂಕಿನಲ್ಲೇ ಅತಿ ಹೆಚ್ಚು ರಿಕ್ಷಾ ಚಾಲಕರಿರುವ ತೊಕ್ಕೊಟ್ಟು ರಿಕ್ಷಾ ಚಾಲಕರು ಕಳೆದ ಎರಡೂವರೆ ತಿಂಗಳಿನಿಂದ ಸಂಡಾಸು ನೀರಿನ ಮೇಲೆಯೇ ನಿಂತು ದುಡಿಯುವ ಸ್ಥಿತಿ ನಿರ್ಮಾಣವಾಗಿದೆ. ಖಾಸಗಿ ಕಟ್ಟಡದ ಮಾಲೀಕರು ತ್ಯಾಜ್ಯ ನೀರಿಗೆ ಸೂಕ್ತ ವ್ಯವಸ್ಥೆ ಕಲ್ಪಿಸದೆ ಸಮಸ್ಯೆ ನಿರ್ಮಾಣವಾಗಿದೆ. ದಿನದಲ್ಲಿ ಮಕ್ಕಳು, ಮಹಿಳೆಯರು, ವಿದ್ಯಾರ್ಥಿಗಳು, ವೃದ್ಧರು ಸೇರಿದಂತೆ ಲಕ್ಷದಷ್ಟು ಮಂದಿ ನಡೆದುಕೊಂಡು ಹೋಗುವ ರಸ್ತೆಯಲ್ಲೇ ತ್ಯಾಜ್ಯ ನೀರು ಹರಿದಾಡಿದರೂ

ಮೂಡುಬಿದಿರೆ: ಪುತ್ತಿಗೆ ಗ್ರಾಮ ಪಂಚಾಯತ್ ಗಾಂಧಿ ಗ್ರಾಮ ಪುರಸ್ಕಾರಕ್ಕೆ ಆಯ್ಕೆ

ಮೂಡುಬಿದಿರೆ : 2022-23 ನೇ ಸಾಲಿನ ಗಾಂಧಿ ಗ್ರಾಮ ಪುರಸ್ಕಾರಕ್ಕೆ ಮೂಡುಬಿದಿರೆ ತಾಲೂಕಿನ ಪುತ್ತಿಗೆ ಗ್ರಾಮ ಪಂಚಾಯತ್ ಮೊದಲ ಬಾರಿ ಆಯ್ಕೆಯಾಗಿದೆ. ತಾಲೂಕಿನ ಎರಡನೇ ಅತೀ ದೊಡ್ಡ ಗ್ರಾಮವಾಗಿರುವ ಪುತ್ತಿಗೆ ಗ್ರಾಮ ಪಂಚಾಯತ್ ಜನರ ಗುಣಮಟ್ಟವನ್ನು ಹೆಚ್ಚಿಸಲು ಕೈಗೊಂಡ ಕಾರ್ಯಕ್ರಮಗಳು, ಹಣಕಾಸಿನ ವಿಷಯದಲ್ಲಿ ಶಿಸ್ತುಬದ್ಧ ಕ್ರಮಗಳು, ಮೂಲ ಸೌಕರ್ಯಗಳ ಅಭಿವೃದ್ಧಿಗೆ ಆದ್ಯತೆ, ಉತ್ತಮ ಆಡಳಿತ, ಗ್ರಾ.ಪಂಚಾಯತ್ ಸೇವೆಗಳನ್ನು ಕ್ಲಪ್ತ ಸಮಯದಲ್ಲಿ ಗ್ರಾಮದ ನಾಗರಿಕರಿಗೆ

ಕಾಸರಗೋಡು: ಅ.1ರಂದು ಶೌರ್ಯ ಜಾಗರಣ ರಥಯಾತ್ರೆ ಮತ್ತು ಬೈಕ್ ರ್‍ಯಾಲಿ

ವಿಶ್ವಹಿಂದೂ ಪರಿಷತ್ ಬಜರಂಗದಳ, ಮಾತೃಶಕ್ತಿ ಮತ್ತು ದುರ್ಗಾವಾಹಿನಿ , ಪ್ರೇರಣಾ ಜಿಲ್ಲಾ ಕಾರ್ಯಾಲಯ ಹೊಸಂಗಡಿ ಇವರ ಸಹಯೋಗದಲ್ಲಿ ಶೌರ್ಯ ಜಾಗರಣ ರಥಯಾತ್ರೆ ಮತ್ತು ಬೈಕ್ ರ್‍ಯಾಲಿಯು ಅಕ್ಟೋಬರ್ 1ರಂದು ಬೆಳಿಗ್ಗೆ 10.30 ಕ್ಕೆ ಮಂಜೇಶ್ವರದ ಶ್ರೀಮದ್ ಅನಂತೇಶ್ವರ ದೇವಸ್ಥಾನದಲ್ಲಿ ನಡೆಯಲಿದೆ. ಬೆಳಿಗ್ಗೆ ೮.೩೦ ರಿಂದ ವಿವಿದ ಭಜನಾ ತಂಡಗಳಿಂದ ಕುಣಿತ ಭಜನೆ ಮತ್ತು ನಂತರ ೧೦.೩೦ರಿಂz ನಡೆಯಲಿರುವ ಸಭಾಕಾರ್ಯಕ್ರಮವನ್ನು ಧಾರ್ಮಿಕ ಮುಂದಾಳು ರವೀಶ್ ತಂತ್ರಿ

ಹಿಂದಿ ಶಿಕ್ಷಕ ರತ್ನ ರಾಜ್ಯ ಪ್ರಶಸ್ತಿಗೆ ದಡ್ಡಲಕಾಡು ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಮುಖ್ಯ ಶಿಕ್ಷಕ ರಮಾನಂದ ಆಯ್ಕೆ

ಬಂಟ್ವಾಳ: ಹಿಂದಿ ಶಿಕ್ಷಕರಿಗೆ ಕೊಡುವ ರಾಜ್ಯ ಹಿಂದಿ ಶಿಕ್ಷಕ ರತ್ನ ಪ್ರಶಸ್ತಿಗೆ ಸರಕಾರಿ ಆಂಗ್ಲ ಮಾಧ್ಯಮ ಪ್ರೌಢ ಶಾಲೆ ದಡ್ಡಲ ಕಾಡು ಹಿಂದಿ ಭಾಷಾ ಶಿಕ್ಷಕ ರಮಾನಂದ ಇವರು ಆಯ್ಕೆಯಾಗಿರುತ್ತಾರೆ. ಹಿಂದಿ ವಿಷಯದ ರಾಜ್ಯ ಸಂಪನ್ಮೂಲ ವ್ಯಕ್ತಿಯಾಗಿ, ತಾಲೂಕು ಹಾಗೂ ಜಿಲ್ಲಾ ಸಂಘದ ಪದಾಧಿಕಾರಿಗಳಾಗಿ, ಹಿಂದಿ ಸಂಪನ್ಮೂಲ ಕ್ರೋಡಿಕರಣ ಹಾಗೂ ಪುಸ್ತಕ ರಚನಾ ಕಾರ್ಯದಲ್ಲಿ ತೊಡಗಿಸಿಕೊಂಡು ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆ ಪ್ರಮಾಣಿಕ ಪ್ರಯತ್ನ ಹಾಗೂ ಕರ್ತವ್ಯ

ಸುರತ್ಕಲ್: ಸೆ.29 ರಂದು ಬಿಎಂಆರ್ ಗೋಲ್ಡ್ & ಡೈಮಂಡ್ಸ್‌ನ ನೂತನ ಮಳಿಗೆ ಶುಭಾರಂಭ

ಪ್ರತಿಷ್ಠಿತ ಚಿನ್ನಾಭರಣ ಮಳಿಗೆಯಾಗಿರುವ ಬಿಎಂಆರ್ ಗೋಲ್ಡ್ ಆಂಡ್ ಡೈಮಂಡ್ಸ್ ನ ನೂತನ ಮಳಿಗೆಯು ಸೆ.29 ರಂದು ಸಂಜೆ 5 ಗಂಟೆಗೆ ಕೃಷ್ಣಾಪುರದ ಬಿಎಂಆರ್ ಹೆಡ್ ಆಫೀಸ್‌ನಲ್ಲಿ ಶುಭಾರಂಭಗೊಳ್ಳಲಿದೆ ಎಂದು ಬಿಎಂಆರ್ ಗ್ರೂಪ್‌ನ ಮ್ಯಾನೇಜಿಂಗ್ ಡೈರೆಕ್ಟರ್ ದಾವೂದ್ ಹಕೀಮ್ ತಿಳಿಸಿದ್ದಾರೆ. ನೂತನ ಮಳಿಗೆಯನ್ನು ಪನಕ್ಕಾಡ್‌ನ ಸಯ್ಯದ್ ಫೈನಜ್ ಆಲಿ ಶಿನಾಬ್ ತಂಗಳ್ ಹಾಗೂ ಕೃಷ್ಣಾಪುರದ ಖಾಝಿ ಆಲ್ ಹಾಜಿ ಇ.ಕೆ. ಇಬ್ರಾಹಿಂ ಮದನಿ ಅವರು ಉದ್ಘಾಟಿಸಲಿದ್ದಾರೆ. ವಿಧಾನಸಭಾ ಸ್ಪೀಕರ್

ನೆಲ್ಯಾಡಿ ಕಾಮಧೇನು ಮಹಿಳಾ ಸಹಕಾರ ಸಂಘ ನಿ.ಮಹಾಸಭೆ; 6.70 ಕೋಟಿ ವ್ಯವಹಾರ, 24.65 ಲಕ್ಷ ನಿವ್ವಳಲಾಭ

ನೆಲ್ಯಾಡಿ: ಕಾಮಧೇನು ಮಹಿಳಾ ಸಹಕಾರ ಸಂಘ ನಿ. ಇದರ ಮಹಾಸಭೆ ಹಾಗೂ ಅಭಿನಂದನಾ ಕಾರ್ಯಕ್ರಮ ಸೆ.24 ರಂದು ನೆಲ್ಯಾಡಿ ಸಿ ಎ ಬ್ಯಾಂಕಿನ ಸಭಾಂಗಣದಲ್ಲಿ ನಡೆಯಿತು.ಅಧ್ಯಕ್ಷತೆಯನ್ನು ಸಹಕಾರಿ ಸಂಘದ ಅಧ್ಯಕ್ಷರಾದ ಉಷಾ ಅಂಚನ್ ಅವರು ವಹಿಸಿ ಸಂಘವು ಒಂದು ವರ್ಷದಲ್ಲಿ 6.70 ಕೋಟಿ ವ್ಯವಹಾರ ನಡೆಸಿದೆ ಹಾಗೂ 24.65 ಲಕ್ಷ ನಿವ್ವಳ ಲಾಭವನ್ನು ಗಳಿಸಿದೆ ಎಂದು ತಿಳಿಸಿದರು. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ಚೈತನ್ಯ ಅವರು 2022-23ನೇ ಸಾಲಿನ ಆರು ತಿಂಗಳುಗಳ ಕಾಲ