Home Posts tagged V4News (Page 367)

ಉಳ್ಳಾಲ: ಸೆ.29ಕ್ಕೆ ತಾಲೂಕು ಮಟ್ಟದ ದಸರಾ ಕ್ರೀಡಾಕೂಟ-2023

ಉಳ್ಳಾಲ ತಾಲೂಕು ಮಟ್ಟದ ದಸರಾ ಕ್ರೀಡಾಕೂಟ ಸೆ.29ರಂದು ಮಂಗಳೂರು ವಿಶ್ವ ವಿದ್ಯಾನಿಲಯದ ಮಂಗಳ ಕ್ರೀಡಾಂಗಣದಲ್ಲಿ ನಡೆಯಲಿದೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ರವಿ ವೈ ನಾಯಕ್ ಅವರು ಹೇಳಿದರು. ಉಳ್ಳಾಲ ಪ್ರೆಸ್‍ಕ್ಲಬ್‍ನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ

ಮೂಡುಬಿದಿರೆ: ಭೂಮಿ ಹಕ್ಕಿಗೆ ಒತ್ತಾಯಿಸಿ ನಡೆಯುತ್ತಿದ್ದ ಧರಣಿ ಸತ್ಯಾಗ್ರಹ ವಾಪಾಸ್

ಮೂಡುಬಿದಿರೆ: ಭೂಮಿ ಹಕ್ಕಿಗೆ ಒತ್ತಾಯಿಸಿ ಭೂಮಿ ಹೋರಾಟ ಸಮಿತಿಯು ಆಡಳಿತ ಸೌಧದ ಮುಂಭಾಗ ಸೋಮವಾರ ಕೈಗೊಂಡಿದ್ದ ಅಹೋರಾತ್ರಿ ಧರಣಿಯು ಮೂಡುಬಿದಿರೆ ತಾಲೂಕು ತಹಶೀಲ್ದಾರ್ ಪ್ರದೀಪ್ ಕುರ್ಡೇಕರ್ ಅವರ ಮನವೊಲಿಕೆಯಿಂದಾಗಿ ವಾಪಾಸ್ ಪಡೆದುಕೊಂಡಿದೆ. ಪ್ರಾಂತ ರೈತ ಸಂಘದ ಜಿಲ್ಲಾಧ್ಯಕ್ಷ ಯಾದವ ಶೆಟ್ಟಿ ಅವರು ಧರಣಿ ಸತ್ಯಾಗ್ರಹವನ್ನು ಉದ್ದೇಶಿಸಿ ಮಾತನಾಡಿ, ಮೂಡುಬಿದಿರೆ ತಾಲೂಕು ವ್ಯಾಪ್ತಿಯ ಇರುವೈಲು, ತೋಡಾರು, ಪುತ್ತಿಗೆ, ಬೆಳುವಾಯಿ, ಶಿರ್ತಾಡಿ, ಪಾಲಡ್ಕ ಇನ್ನಿತರ

ಮಂಜೇಶ್ವರ: ಆಟೋ ರಿಕ್ಷಾಗೆ ಶಾಲಾ ಬಸ್ಸು ಡಿಕ್ಕಿ : ಐದು ಮಂದಿ ದಾರುಣ ಸಾವು

ಮಂಜೇಶ್ವರ : ಬದಿಯಡ್ಕ ಪಳ್ಳತ್ತಡ್ಕದಲ್ಲಿ ಆಟೋ ರಿಕ್ಷಾವೊಂದಕ್ಕೆ ಶಾಲಾ ಬಸ್‌ಗೆ ಡಿಕ್ಕಿ ಹೊಡೆದು ಉಂಟಾದ ಅಪಘಾತದಲ್ಲಿ ಆಟೋ ರಿಕ್ಷಾದಲ್ಲಿದ್ದ ಮೊಗ್ರಾಲ್ ಮೂಲದ ಐವರು ದಾರುಣವಾಗಿ ಸಾವನ್ನಪ್ಪಿದ್ದಾರೆ. ಮೊಗ್ರಾಲ್ ಪುತ್ತೂರು ಕಡವತ್ತ್ ನಿವಾಸಿಗಳಾದ ಆಟೋ ಚಾಲಕ ಅಬ್ದುಲ್ ರವೂಫ್, ಬೀಫಾತಿಮಾ, ನಬೀಸಾ, ಬೀಫಾತಿಮಾ ಮೊಗರ್ ಮತ್ತು ಉಮ್ಮಾಲಿಮಾ ಸಾವನ್ನಪ್ಪಿದ ದುರ್ದೈವಿಗಳು. ವಿದ್ಯಾರ್ಥಿಗಳನ್ನು ಇಳಿಸಿ ಹಿಂತಿರುಗುತ್ತಿದ್ದ ಶಾಲಾ ಬಸ್ ಅಪಘಾತಕ್ಕೀಡಾಗಿದೆ.ಮೂವರು

ಮಂಗಳೂರು : ಶಕ್ತಿನಗರದ ವೈದ್ಯನಾಥ ಶಾಖೆಯ ವತಿಯಿಂದ 3ನೇ ವರ್ಷದ ಚಿತ್ರಕಲಾ ಸ್ಪರ್ಧೆ

ಮಂಗಳೂರು : ಗಣೇಶೋತ್ಸವದ ಪ್ರಯುಕ್ತ ಶಕ್ತಿನಗರದ ವಿಶ್ವ ಹಿಂದೂ ಪರಿಷತ್ ಬಜರಂಗದಳ ಮಾತೃಶಕ್ತಿ ದುರ್ಗಾವಾಹಿನಿಯ ವೈದ್ಯನಾಥ ಶಾಖೆಯ ವತಿಯಿಂದ 3ನೇ ವರ್ಷದ ಚಿತ್ರಕಲಾ ಸ್ಪರ್ಧೆಯು ದಿನಾಂಕ ಸೆಪ್ಟೆಂಬರ್ 24 ರಂದು ನಡೆಯಿತು. ಅಂಗನವಾಡಿಯಿಂದ ಹಿಡಿದು 12ನೇ ತರಗತಿ ವರೆಗಿನ ಮಕ್ಕಳಿಗೆ ವಿವಿಧ ವಿಭಾಗಗಳಲ್ಲಿ ಸ್ಪರ್ಧೆಯು ನಡೆಯಿತು. ಬಾಲ ಸಂಸ್ಕಾರದ ಮಕ್ಕಳು ದೀಪಪ್ರಜ್ವಲನೆ ಮಾಡುವುದರೊಂದಿಗೆ ಕಾರ್ಯಕ್ರಮ ಹಾಗೂ ಸ್ಪರ್ಧೆಯನ್ನು ಪ್ರಾರಂಭಿಸಲಾಯಿತು. ಸುಮಾರು ಒಂದೂವರೆ ಗಂಟೆಯ

ಉಡುಪಿ: ಎನ್‍ಸಿಸಿ ವಿದ್ಯಾರ್ಥಿಗಳಿಗೆ ಸಾಗರ ನೌಕಾಯಾನ ಸಾಹಸಯಾತ್ರೆ

ಭಾರತೀಯ ಸೇನೆಗೆ ಸೇರಬಯಸುವ ಎನ್‍ಸಿಸಿ ವಿದ್ಯಾರ್ಥಿಗಳಿಗೆ ಸಾಗರ ನೌಕಾಯಾನ ಸಾಹಸಯಾತ್ರೆ ಉಡುಪಿಯಲ್ಲಿ ಆಯೋಜಿಸಲಾಗಿದೆ. ಉಡುಪಿ ಸಮೀಪದ ಉದ್ಯಾವರದ ಹಿನ್ನೀರಿನಲ್ಲಿ ಹಮ್ಮಿಕೊಳ್ಳಲಾಗಿದ್ದ ಈ ಸೀ ಸೈಲಿಂಗ್ ತರಬೇತಿ ಕಾರ್ಯಾಗಾರದಲ್ಲಿ ಹೊರರಾಜ್ಯದ ಕೆಡೆಟ್ ಗಳು ಭಾಗವಹಿಸಿರುವುದು ವಿಶೇಷವಾಗಿತ್ತು. ನೂತನ ಕೆಡೆಟ್ಗಳ ನೌಕಯಾನದ ಎಕ್ಸ್ಪೀರಿಯನ್ಸ್ ಹೇಗಿತ್ತು ಅಂತೀರಾ… ಈ ಸ್ಟೋರಿ ನೋಡಿ ಭಾರತೀಯ ನೌಕಾದಳಕ್ಕೆ ಸೇರಬಯಸುವ ಎನ್‍ಸಿಸಿ ಕೆಡೆಟ್‍ಗಳು

ಬಂದ್ಯೋಡ್ : ವೀರನಗರ ಜನನಿ ಆರ್ಟ್ಸ್ ಮತ್ತು ಸ್ಪೋರ್ಟ್ಸ್ ಕ್ಲಬ್ ವತಿಯಿಂದ ವಿವಿಧ ಆಟೋಟ ಸ್ಪರ್ಧೆ

ಬಂದ್ಯೋಡ್ ನ ಅಡ್ಕ ವೀರನಗರ ಜನನಿ ಆರ್ಟ್ಸ್ ಮತ್ತು ಸ್ಪೋರ್ಟ್ಸ್ ಕ್ಲಬ್ ವತಿಯಿಂದ 27ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಚತುರ್ಥಿ ಪ್ರಯುಕ್ತ ಆಟೋಟ ಸ್ಪರ್ಧೆಗಳು ನಡೆದವು. ಹಗ್ಗ ಜಗ್ಗಾಟ ದಲ್ಲಿ ಶಿವ ಶಕ್ತಿ ಶಿರಿಯ ಈ ತಂಡಕ್ಕೆ ಪ್ರಥಮ ಬಹುಮಾನ ಹಾಗೂ ಪಿ ಎಫ್ ಸಿ ಪರಂಕಿಲ ತಂಡಕ್ಕೆ ದ್ವಿತೀಯ ಬಹುಮಾನ ಪಡೆದುಕೊಂಡಿದ್ದಾರೆ ವೀರನಗರ ಅಡ್ಕ ಶ್ರೀ ಉಳ್ಳಾಲ್ತಿ ದೈವಸ್ಥಾನದ ವಠಾರದಲ್ಲಿ ಸ್ಪರ್ಧಾ ಕಾರ್ಯಕ್ರಮಗಳು ನಡೆದವು. ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಣಿ

Mangaluru : ಸೆ.29ರಂದು ಅಪ್ಸರಾ ಐಸ್‌ಕ್ರೀಂನ ಪ್ರಾಂಚೈಸಿ ಶುಭಾರಂಭ

ಕಾಮಾಕ್ಷಿ ಎಂಟರ್‌ಪ್ರೈಸಸ್ ವತಿಯಿಂದ ಅಪ್ಸರಾ ಐಸ್‌ಕ್ರೀಂನ ಪ್ರಾಂಚೈಸಿ ಸೆಪ್ಟಂಬರ್ 29ರಂದು ಶುಭಾರಂಭಗೊಳ್ಳಲಿದೆ. ಮಂಗಳೂರಿನ ಕದ್ರಿಯ ಸಿಟಿ ಗೇಟ್ ಕಮರ್ಶಿಯಲ್ ಕಾಂಪ್ಲೆಕ್ಸ್‌ನಲ್ಲಿ ಕಾರ್ಯಾರಂಭಗೊಳ್ಳಲಿದೆ. ಹೆಚ್ಚಿನ ಮಾಹಿತಿಗಾಗಿ 9076097410ಗೆ ಸಂಪರ್ಕಿಸಬಹುದು.

ಉಚ್ಚಿಲ: ರೈಲಿಗೆ ತಲೆಯಿಟ್ಟು ಅವಿವಾಹಿತ ಆತ್ಮಹತ್ಯೆ

ಉಳ್ಳಾಲ: ರೈಲಿನಡಿಗೆ ತಲೆಯಿಟ್ಟು ಮಂಗಳೂರು ಕೊಂಚಾಡಿ ನಿವಾಸಿ ಪ್ರಶಾಂತ್ (44) ಎಂಬವರು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯ ಉಚ್ಚಿಲ ರೈಲ್ವೇ ಗೇಟ್ ಬಳಿ ನಡೆದಿದೆ. ಸೆ.24 ರಂದು ಸಂಜೆ ಮನೆಯಿಂದ ಹೊರಟವರು ಇಂದು ಬೆಳಿಗ್ಗೆ ಶವವಾಗಿ ಪತ್ತೆಯಾಗಿದ್ದಾರೆ. ಆಕ್ಟಿವಾ ಸ್ಕೂಟರನ್ನು ಉಳ್ಳಾಲ ರೈಲ್ವೇ ನಿಲ್ದಾಣದಲ್ಲಿರಿಸಿ,ಉಚ್ಚಿಲ ರೈಲ್ವೇ ಗೇಟ್ ವರೆಗೆ ನಡೆದುಕೊಂಡು ತೆರಳಿ ಅಲ್ಲಿ ರೈಲ್ವೇ ಹಳಿಯಲ್ಲಿ ತಲೆಯಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಇರಾದಲ್ಲಿ ವಿ4 ನ್ಯೂಸ್ ಕಾಮಿಡಿ ಪ್ರೀಮಿಯರ್ ಲೀಗ್‍ಗೆ ಅದ್ಧೂರಿ ಚಾಲನೆ-ಇರಾ ಯುವಕ ಮಂಡಲದ ಸುವರ್ಣ ಮಹೋತ್ಸವ ಸಮಿತಿ ಸಹಭಾಗಿತ್ವದೊಂದಿಗೆ ಅರ್ಥಪೂರ್ಣ ಸಮಾರಂಭ

ಕರಾವಳಿಯ ಪ್ರತಿಷ್ಠಿತ ಸುದ್ದಿ ವಾಹಿನಿ ವಿ4 ನ್ಯೂಸ್ ಮತ್ತು ಇರಾ ಯುವಕ ಮಂಡಲದ ಸುವರ್ಣ ಮಹೋತ್ಸವ ಸಮಿತಿ ಸಹಯೋಗದಲ್ಲಿ ಇರಾ ಶ್ರೀ ಸೋಮನಾಥೇಶ್ವರ ದೇವಸ್ಥಾನದ ಬಯಲು ರಂಗಮಂದಿರದಲ್ಲಿ ವಿ4 ನ್ಯೂಸ್‍ನ ಕಾಮಿಡಿ ಪ್ರೀಮಿಯರ್ ಲೀಗ್‍ಗೆ ಅದ್ಧೂರಿ ಚಾಲನೆ ದೊರೆಯಿತು. ಸಭಾ ಕಾರ್ಯಕ್ರಮವನ್ನು ಗಣ್ಯರು ದೀಪ ಬೆಳಗಿಸಿ ಉದ್ಘಾಟಿಸಿದರು. ನಂತರ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಕರ್ನಾಟಕ ಬ್ಯಾಂಕ್‍ನ ಪ್ರಬಂಧಕರಾದ ಶಿವಪ್ರಸಾದ್ ರೈ ಶಿಬರೂರು

ಉಡುಪಿ: ಮಾನಸಿಕ ಕಾಯಿಲೆಯಿಂದ ಬಳಲುತ್ತಿದ್ದ ಯುವಕ: ವಾರಗಳ ಬಳಿಕ ನಾಯಿಯ ಸಹಾಯದಿಂದ ಮರಳಿ ಮನೆಗೆ

ಮನೆಯಿಂದ ಹೊರಗೆ ತೆರಳಿದ ಯುವಕನೋರ್ವ ವಾರಗಳ ಬಳಿಕ ನಾಯಿಯ ಸಹಾಯದಿಂದ ಮನೆಗೆ ಮರಳಿದ ಘಟನೆ ಉಡುಪಿಯ ಅಮವಾಸೆ ಬೈಲು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನಡೆದಿದೆ. ಮಟ್ಟಟ್ಟು ಗ್ರಾಮದ ತೊಂಬಟ್ಟು ಇರ್ಕಿಗದ್ದೆ ನಿವಾಸಿ ಶೀನ ನಾಯ್ಕ ಅವರ ಮಗ ವಿವೇಕಾನಂದ (28) ನಾಪತ್ತೆಯಾಗಿದ್ದ ಯುವಕ. ವಿವೇಕಾನಂದ ಸೆಪ್ಟೆಂಬರ್ 16 ರಂದು ಮನೆಯಿಂದಲೇ ನಾಪತ್ತೆಯಾಗಿದ್ದ. ಮನೆಯಿಂದ ಹೊರಡುವಾಗ ಮನೆಯ ನಾಯಿ ಕೂಡು ವಿವೇಕಾನಂದ ಅವರ ಜೊತೆ ತೆರಳಿತ್ತು. ವಾರಗಳ ಕಾಲ ಕಾಡಿನಲ್ಲಿ ಅಲೆದಾಡಿದ್ದ