ಬಂಟ್ವಾಳ: ಅನಾರೋಗ್ಯದ ನಿಮಿತ್ತ ಚಿಕಿತ್ಸೆಗೆಂದು ಬಂಟ್ವಾಳ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಪೋಲಿಸ್ ಸಿಬ್ಬಂದಿಯೋರ್ವರ ಎರಡು ಮೊಬೈಲ್ ಫೋನ್ ಕಳವಾಗಿದ್ದು ಕಳ್ಳನ ಚಲನವಲನ ಸಿ.ಸಿ.ಕ್ಯಾಮರಾದಲ್ಲಿ ಸೆರೆಯಾಗಿದೆ. ಇದೀಗ ಆಸ್ಪತ್ರೆಯಲ್ಲಿ ಈತನ ಪೋಟೋ ಅಂಟಿಸಲಾಗಿದ್ದು, ಈತನ ಚಹರೆಯನ್ನು ಗಮನಿಸಿದವರು ಪೋಲಿಸರಿಗೆ ಮಾಹಿತಿ ನೀಡುವಂತೆ ಮನವಿ ಮಾಡಲಾಗಿದೆ.
ಉಪ್ಪಳ ಮುಳಿಂಜ ಶಿವತೀರ್ಥಪದವಿನ ಸಾರ್ವಜನಿಕ ಗಣೇಶೋತ್ಸವ ಸಮಿತಿ ವತಿಯಿಂದ ಶ್ರೀ ಸಿದ್ದಿವಿನಾಯಕ ಸಾರ್ವಜನಿಕ ಸಂಸ್ಥೆಯ ಆಶ್ರಯದಲ್ಲಿ 44 ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ನಡೆಯಿತು. ಕಾರ್ಯಕ್ರಮದ ಪ್ರಯುಕ್ತ ವಿದ್ಯಾರ್ಥಿಗಳಿಗಾಗಿ ಹಾಗೂ ಸಾರ್ವಜನಿಕರಿಗಾಗಿ ವಿವಿಧ ಆಟೋಟ ಸ್ಪರ್ಧೆ, ಸಾಂಸ್ಕೃತಿಕ ಸ್ಪರ್ಧೆಗಳು ನಡೆಯಿತು. ವಿವಿಧ ವೈದಿಕ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ವಿಜೃಂಭಣೆಯಿಂದ ನಡೆಯಿತು. ಶ್ರೀ ಗಣೇಶನ ಭವ್ಯವಾದ ಶೋಭಾ ಯಾತ್ರೆಯು
ಪಡುಕುತ್ಯಾರಿನಲ್ಲಿ ಚಾತುರ್ಮಾಸ್ಯ ವ್ರತಾನುಷ್ಠರಾಗಿರುವ ಜಗದ್ಗುರುಗಳವರಿಂದ ಅನುಗ್ರಹ ಮಂತ್ರಾಕ್ಷತೆ ಸ್ವೀಕರಿಸಲು ಸೆ. 22ರಂದು 2 ಗಂಟೆಗೆ ಸರಕಾರದ ಮಹಿಳಾ ಮತ್ತು ಮಕ್ಕಳ ಕಲ್ಯಾಣಾಭಿವೃದ್ಧಿ, ವಿಕಲಚೇತನರು ಮತ್ತು ಹಿರಿಯ ನಾಗರಿಕರ ಕಲ್ಯಾಣ ಇಲಾಖೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಆಗಮಿಸಲಿದ್ದಾರೆ. ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಬಳಿಕ ಮಹಾಸಂಸ್ಥಾನಕ್ಕೆ ಪ್ರಥಮಬಾರಿ ಆಗಮಿಸಲಿರುವ ಸಚಿವರನ್ನು, ಮಹಾ ಸಂಸ್ಥಾನದ ಸಹ
ಕಾಪು ರೆಸಿಡೆನ್ಸಿ ಕಟ್ಟಡದ ಬಳಿ ನಿಲ್ಲಿಸಲಾಗಿದ್ದ ಬೈಕ್ ನಾಪತ್ತೆಯಾದ ಬಗ್ಗೆ ಉತ್ತರ ಪ್ರದೇಶ ಮೂಲದ ವ್ಯಕ್ತಿ ನೀಡಿದ ದೂರಿನನ್ವಯ ತನಿಖೆ ನಡೆಸಿದ ಕಾಪು ಪೊಲೀಸರು ಬೈಕ್ ಸಹಿತ ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿ ಮೂಳೂರು ನಿವಾಸಿ ಹಳೆ ಆರೋಪಿ ಸೂರಜ್ ಕೋಟ್ಯಾನ್ (೩೧), ಉತ್ತರ ಪ್ರದೇಶ ಮೂಲದ ವ್ಯಕ್ತಿ ಶಾರುಖ್ ಹಸನ್ ಎಂಬವರು ಅನೂಪ್ ಕುಮಾರ್ ಎಂಬವರಿಗೆ ಸೇರಿದ ಪಲ್ಸರ್ ಬೈಕನ್ನು ಕಾಪು ರೆಸಿಡೆನ್ಸಿ ಬಳಿ ರಾತ್ರಿ ನಿಲ್ಲಿಸಿ ಹೋಗಿದ್ದು, ಮರುದಿನ ಬೆಳಗ್ಗೆ
ಮಂಗಳೂರು ರಿಫೈನರಿ & ಪೆಟ್ರೋಕೆಮಿಕಲ್ಸ್ ಲಿಮಿಟೆಡ್ ಸಂಸ್ಥೆಯಿಂದ ಜೈಪುರ್ ಪುಟ್ಸ್ ಸಹಯೋಗದೊಂದಿಗೆ ಉಚಿತ ಕೃತಕ ಕೈ ಮತ್ತು ಕಾಲು ಜೋಡಣಾ ಶಿಬಿರವನ್ನು ಹಮ್ಮಿಕೊಂಡಿದ್ದಾರೆ. ಎಂಆರ್‍ಪಿಎಲ್ ಸಂಸ್ಥೆಯ ಉದ್ದಿಮೆಗಳ ಸಾಮಾಜಿಕ ಜವಾಬ್ದಾರಿ ವಿಭಾಗದಿಂದ ಉಚಿತ ಕೃತಕ ಕೈ ಮತ್ತು ಕಾಲು ಜೋಡಣಾ ಶಿಬಿರವನ್ನು ಜೈಪುರ್ ಫುಟ್ಸ್‍ನ ನುರಿತ ತಂತ್ರಜ್ಞರ ನೇತೃತ್ವದಲ್ಲಿ ಅಕ್ಟೋಬರ್ ತಿಂಗಳಲ್ಲಿ ಶಿಬಿರವನ್ನು ಆಯೋಜಿಸಿದ್ದಾರೆ. ಈ ಶಿಬಿರದಲ್ಲಿ ಪಾಲ್ಗೊಳ್ಳಲು
ದ.ಕ. ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಷನ್ ಲಿ.ಗೆ ಮಂಜುನಾಥ ಖಾರ್ವಿ ಅವರು ನೀಡಿದ ಮೂರು ಚೆಕ್‌ಗಳು ಬೌನ್ಸ್ ಆದ ಹಿನ್ನೆಲೆಯಲ್ಲಿ ಒಟ್ಟು 88 ಲ.ರೂ. ಪಾವತಿಸುವಂತೆ ನ್ಯಾಯಾಲಯದ ತೀರ್ಪಿನಂತೆ ಹಣ ಮರುಪಾವತಿ ಮಾಡಲು ವಿಫಲನಾದ ಮಂಜುನಾಥ್ ಖಾರ್ವಿ ವಿರುದ್ಧ ವಾರಂಟ್ ಜಾರಿ ಮಾಡಿದ್ದ ಹಿನ್ನೆಲೆಯಲ್ಲಿ ಕುಂದಾಪುರ ಪೊಲೀಸರು ಉಪ್ಪುಂದದ ಮನೆಯಲ್ಲಿ ಬಂಧಿಸಿ 5ನೇ ಜೆ ಎಂ ಎಫ್ ಸಿ ನ್ಯಾಯಾಲಯದ ನ್ಯಾಯಾಧೀಶರ ಮುಂದೆ ಸೆಪ್ಟೆಂಬರ್ 20 ರಂದು ಹಾಜರು ಪಡಿಸಿದ
ಪುತ್ತೂರಿನ ಬಲ್ನಾಡು ನಿವಾಸಿ ರವಿಕೃಷ್ಣ ಕಲ್ಲಜೆ ಎಂಬವರ ಮನೆಯಲ್ಲಿ ಫಾರೆಸ್ಟಿನ್ ಕ್ಯಾಟ್ ಸ್ನೇಕ್ ಪತ್ತೆಯಾಗಿದೆ. ಪುತ್ತೂರಿನ ಉರಗತಜ್ಞ ತೇಜಸ್ ಬನ್ನೂರು ಹಾವನ್ನು ರಕ್ಷಿಸಿ ಮತ್ತೆ ಅದರ ವಾಸಸ್ಥಾನವಾದ ದಟ್ಟ ಅರಣ್ಯಕ್ಕೆ ಬಿಟ್ಟಿದ್ದಾರೆ. ಫಾರೆಸ್ಟಿನ್ ಕ್ಯಾಟ್ ಸ್ನೇಕ್ ಎಂದು ಕರೆಯಲಾಗುವ ಈ ಹಾವನ್ನು ನೋಡಿದ ಉರಗತಜ್ಞ ತೇಜಸ್ ಪುತ್ತೂರಿನಲ್ಲಿ ಈ ರೀತಿಯ ಹಾವು ಪತ್ತೆಯಾಗಿರುವುದೇ ಅಪರೂಪ ಎಂದಿದ್ದಾರೆ. ಕಿರಿಯ ವಯಸ್ಸಿನಲ್ಲೇ ಹಾವು ಹಿಡಿದು ಅವುಗಳ ರಕ್ಷಣೆ
ಮಂಜೇಶ್ವರ ವ್ಯಾಪ್ತಿಯ ಸಾರ್ವಜನಿಕ ಸ್ಥಳಗಳಲ್ಲಿ ತ್ಯಾಜ್ಯಗಳನ್ನು ಎಸೆಯುತ್ತಿದ್ದು ಇದರಿಂದ ಜನತೆ ಸಾಂಕ್ರಾಮಿಕ ರೋಗದ ಭೀತಿಯನ್ನು ಎದುರಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಸಿಸಿ ಕ್ಯಾಮೆರಾ ಅಳವಡಿಸಲು ನಿರ್ಧರಿಸಿದ್ದಾರೆ. ಮಂಜೇಶ್ವರದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ತ್ಯಾಜ್ಯ ಬಿಸಾಡುವವರ ವಿರುದ್ಧ ಹಲವು ರೀತಿಯ ವಿಭಿನ್ನವಾದ ರೀತಿಯಲ್ಲಿ ಕ್ರಮಗಳನ್ನು ಕೈಗೊಳ್ಳುತಿದ್ದರೂ ಯಾವುದೂ ಫಲಪ್ರದವಾಗುತ್ತಿರಲಿಲ್ಲ. ಈ ನಿಟ್ಟಿನಲ್ಲಿ ತ್ಯಾಜ್ಯ ಸಂಗ್ರಹವಾಗುತ್ತಿರುವ
ಬೆಳಪು ಗ್ರಾಮದ ಮಲೆ ಜುಮಾದಿ ದೈವಸ್ಥಾನದ ಬಳಿ ನಡೆಯುತ್ತಿದ್ದ ಕೋಳಿ ಅಂಕಕ್ಕೆ ದಾಳಿ ಮಾಡಿದ ಶಿರ್ವ ಪೊಲೀಸರು ನಾಲ್ವರನ್ನು ವಶಕ್ಕೆ ಪಡೆದಿದ್ದಾರೆ. ಬಂಧಿತರು ಬ್ರಹ್ಮಾವರ ಬೈಕಾಡಿ ಪಡು ತೆಂಕುಮನೆ ನಿವಾಸಿ ಅರುಣ್ ಶೆಟ್ಟಿ, ಪಾಂಗಾಳ ಗುಡ್ಡೆ ಅಕ್ಕು ತೋಟ ನಿವಾಸಿ ಸುರೇಶ್ ಪೂಜಾರಿ , ಮೂಳೂರು ದಡ್ಡಿನಗುಜ್ಜಿ ಗೋಪಾಲ ನಿಲಯ ನಿವಾಸಿ ನಿಕ್ಷಿತ್, ಉಚ್ಚಿಲ ಬಡ ಗ್ರಾಮ ಭಾಸ್ಕರ್ ನಗರ ನಿವಾಸಿ ರವಿ ಪೂಜಾರಿ ಎಂದು ಗುರುತಿಸಲಾಗಿದೆ. ಆರೋಪಿಗಳಿಂದ ೬೯೦೦ ರೂಪಾಯಿ ಹಾಗೂ ಅಕ್ರಮ
ಕಾಸರಗೋಡಿನ ವಿಶ್ವ ಹಿಂದೂ ಪರಿಷತ್ ಜಿಲ್ಲಾ ಸಮಿತಿ ಹಾಗೂ ಹೊಸಂಗಡಿಯ ಸಾರ್ವಜನಿಕ ಶ್ರೀ ಗಣೇಶೊತ್ಸವ ಸಮಿತಿ ಆಶ್ರಯದಲ್ಲಿ ಶ್ರೀ ಅಶ್ವತ್ಥೋಪನಯನ, ವಿವಾಹೋತ್ಸವ ಮತ್ತು ಸಾಮೂಹಿಕ ಅಶ್ವತ್ಥನಾರಾಯಣ ಪೂಜೆಯು ಹೊಸಂಗಡಿಯ ಪ್ರೇರಣಾ ಜಿಲ್ಲಾ ಕಾರ್ಯಾಲಯದಲ್ಲಿ ನಡೆಯಿತು. ಸಕಲ ದೇವತೆಗಳು ನೆಲೆಸಿರುವ ದೇವ ಸ್ವರೂಪದ ಮರವೆಂದೇ ಪೂಜಿಸಲ್ಪಡುವ ಸರ್ವ ದೋಷಗಳನ್ನೂ ಸಕಲ ರೋಗಗಳನ್ನೂ ನಿವಾರಣೆಗೊಳಿಸಬಲ್ಲ ಅತ್ಯಂತ ಪವಿತ್ರ ಅಶ್ವತ್ಥವೃಕ್ಷದ ಶ್ರೀ ಅಶ್ವತ್ಥೋಪನಯನ, ವಿವಾಹೋತ್ಸವ ಮತ್ತು




























