ಬಂಟ್ವಾಳ: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಇರ್ವತ್ತೂರುಪದವು ಆಶ್ರಯದಲ್ಲಿ 17ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವವು ಇರ್ವತ್ತೂರು ಗಣೇಶನ ಕಟ್ಟೆಯ ಬಳಿ ನಡೆಯಿತು. ಪಾಂಗಲ್ಪಾಡಿ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಡಾ.ರಾಮಕೃಷ್ಣ ಎಸ್. ಧ್ವಜಾರೋಹಣ ನೆರವೇರಿಸಿದರು. ಆಟೋಟ ಸ್ಪರ್ಧೆ ಹಾಗೂ ಸಭಾ ಕಾರ್ಯಕ್ರಮಕ್ಕೆ
ಶ್ರೀ ಗಣೇಶೋತ್ಸವ ಹಬ್ಬದ ಪ್ರಯುಕ್ತ ಸೋನಾ ಟಿವಿಎಸ್ ವತಿಯಿಂದ ವಿಶೇಷ ಆಫರ್‌ಗಳನ್ನು ನೀಡುತ್ತಿದ್ದಾರೆ. ಬಿ.ಸಿ ರೋಡ್, ತೊಕ್ಕೊಟ್ಟು, ಮುಡಿಪು ಸಿದ್ಧಕಟ್ಟೆಯ ಸೋನಾ ಟಿವಿಎಸ್‌ನ ಶೋರೂಂಗೆ ಭೇಟಿ ನೀಡಿ ವಿಶೇಷ ಆಫರ್‌ಗಳ ಸದುಪಯೋಗ ಪಡೆದುಕೊಳ್ಳಬಹುದು. ಹೆಚ್ಚಿನ ಮಾಹಿತಿಗಾಗಿ 9449920789, 9606903065 ಸಂಪರ್ಕಿಸಬಹುದು.
ಮಂಗಲ್ಪಾಡಿ ಮುಟ್ಟಂ ನವೋದಯ ಮಿತ್ರ ವೃಂದದ ವತಿಯಿಂದ 32ನೇ ವರ್ಷದ ಶ್ರೀ ಗಣೇಶೋತ್ಸವ ಕಾರ್ಯಕ್ರಮವು ಮುಟ್ಟಂನಲ್ಲಿ ಜರುಗಿತು. ಧಾರ್ಮಿಕ ಕಾರ್ಯಕ್ರಮದಂಗವಾಗಿ ಚಂದ್ರಶೇಖರ ನಾವಡ ಬಜಕೊಡ್ಲು ಅವರ ಪೌರೋಹಿತ್ಯದದಲ್ಲಿ ಬೆಳಿಗ್ಗೆ ಶ್ರೀ ಗಣಪತಿ ದೇವರ ವಿಗ್ರಹ ಪ್ರತಿಷ್ಠೆ, ಗಣಹೋಮ, ಪ್ರತಿಷ್ಠೆ ಪೂಜೆ, ಸಾಮೂಹಿಕ ಪ್ರಾರ್ಥನೆ ನೆರವೇರಿತು. ಸೀರೆ ಶ್ರೀ ಶಂಕರನಾರಾಯಣ ಭಜನಾ ಸಂಘ ಶಿರಿಯ ವತಿಯಿಂದ ಮತ್ತು ಅಡ್ಕ ಶ್ರೀ ಭಗವತೀ ಮಹಿಳಾ ಭಜನಾ ಸಂಘದಿಂದ ಭಜನಾ ಕಾರ್ಯಕ್ರಮ ನಡೆಯಿತು.
ಬೈಂದೂರಿನ ಬವಳಾಡಿ- ಗಂಟಿಹೊಳೆಯ ವಿವೇಕಾನಂದ ಯುವಕ ಮಂಡಳಿಯ ಆಶ್ರಯದಲ್ಲಿ 14ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಬೈಂದೂರು ಶಾಸಕÀ ಗುರುರಾಜ್ ಗಂಟಿಹೊಳೆ ಅವರಿಗೆ ಹುಟ್ಟೂರ ಸನ್ಮಾನ ಕಾರ್ಯಕ್ರಮ ನಡೆಯಿತು. ಗುರುರಾಜ್ ಗಂಟಿಹೊಳೆ ಯವರು ಪ್ರಾಥಮಿಕ ಶಿಕ್ಷಣವನ್ನು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬವಳಾಡಿಯಲ್ಲಿಯೂ, ಪ್ರೌಢ ಶಿಕ್ಷಣವನ್ನು ಸರಕಾರಿ ಪದವಿ ಪೂರ್ವ ಕಾಲೇಜು ಉಪ್ಪುಂದದಲ್ಲಿಯೂ ಹಾಗೂ ಕಾಲೇಜು ಶಿಕ್ಷಣವನ್ನು ಸರಕಾರಿ
ಮಂಗಳೂರು ವಿಶ್ವವಿದ್ಯಾಲಯದ ಗಣೇಶೋತ್ಸವ ವಿಚಾರದಲ್ಲಿ ವಿನಾಕಾರಣ ಉಂಟಾಗಿದ್ದ ಗೊಂದಲಕ್ಕೆ ಸಂಬಂಧಿಸಿ “ಈ ಹಿಂದಿನಂತೆ ಗಣೇಶೋತ್ಸವ ಮುಂದುವರಿಸಿಕೊಂಡು ಹೋಗುವಂತೆ ಬಂದಿರುವ ಆದೇಶವು ಇಷ್ಟು ದಿನ ವಿವಾದ ಸೃಷ್ಟಿಸಿ ಜನರ ದಿಕ್ಕು ತಪ್ಪಿಸಲು ಯತ್ನಿಸಿದ್ಧವರಿಗೆ ಸ್ಪಷ್ಟ ಸಂದೇಶವಾಗಿದೆ ಎಂದು ಶಾಸಕ ವೇದವ್ಯಾಸ್ ಕಾಮತ್ ಅವರು ಹೇಳಿದರು. ಯಾವುದೇ ಗೊಂದಲಕ್ಕೂ ಆಸ್ಪದ ನೀಡದೇ ಈ ಹಿಂದಿನಂತೆ ಗಣೇಶೋತ್ಸವ ನಡೆಸುವ ಬಗ್ಗೆ ಬಂದಿರುವ ಆದೇಶವು ಇಡೀ ಹಿಂದೂ ಸಮಾಜದ ಹೋರಾಟಕ್ಕೆ
ವೈದ್ಯನಾಥೇಶ್ವರ ಯಕ್ಷಗಾನ ನಾಟ್ಯ ಕಲಾ ಕೇಂದ್ರದ ವತಿಯಿಂದ ಕೊಕ್ಕಡದ ಶ್ರೀರಾಮ ಸೇವಾ ಮಂದಿರದಲ್ಲಿ ಯಕ್ಷಗಾನ ನಾಟ್ಯ ತರಬೇತಿ ತರಗತಿಯು ಸೆ.17ರಂದು ದೀಪ ಪ್ರಜ್ವಲನೆಯ ಮೂಲಕ ಯಕ್ಷಗಾನ ನಾಟ್ಯ ತರಬೇತಿ ತರಗತಿನ್ನು ಉದ್ಘಾಟಿಸಲಾಯಿತು. ವೇದಿಕೆಯಲ್ಲಿ ವೇದಮೂರ್ತಿಬಾಲಕೃಷ್ಣ ಕೆದಿಲಾಯ ಅಧ್ಯಕ್ಷರು ವ್ಯವಸ್ಥಾಪನ ಸಮಿತಿ ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನ ಕೊಕ್ಕಡ, ನಾರಾಯಣ ಶೆಟ್ಟಿ ಕುಂಡಡ್ಕ ಹಿರಿಯ ಭಾಗವತರು, ಕುಶಾಲಪ್ಪ ಗೌಡ ಪೂವಾಜೆ ಅಧ್ಯಕ್ಷರು ಶ್ರೀರಾಮ
ಬ್ರಹ್ಮಾವರದಲ್ಲಿ 41ನೇ ಸಾರ್ವಜನಿಕ ಶ್ರೀ ಗಣೇಶೋತ್ಸವದ ಗಣಪತಿ ವಿಗ್ರಹ ಮತ್ತು ಅಲಂಕಾರ ಈ ಬಾರಿ ಶ್ರೀ ಮಹಾಲಿಂಗೇಶ್ವರ ಗೆಳೆಯರ ಬಳಗದ ವತಿಯಿಂದ ನಡೆಯಲಿದೆ. ಬೈಟ್: ಶೇಖರ ದೇವಾಡಿಗ ಅಧ್ಯಕ್ಷರು ಶ್ರೀ ಮಹಾಲಿಂಗೇಶ್ವರ ಗೆಳೆಯರ ಬಳಗ, ವಿಭಿನ್ನ ಕಾರ್ಯಕ್ರಮವನ್ನು ನಡೆಸಲು ಶ್ರೀ ಮಹಾಲಿಂಗೇಶ್ವರ ಗೆಳೆಯರ ಬಳಗದ ನಿರ್ಧರಿಸಿದ್ದಾರೆ. ಗಣಪತಿಗೆ ಕಿರೀಟವನ್ನು ಮತ್ತು ಚೌತಿಯ ಸಮಯದಲ್ಲಿ ಅಲಂಕಾರವನ್ನು ತಿರುಪತಿ ತಿಮ್ಮಪ್ಪನ ಮಾದರಿಯಲ್ಲಿ ಗಣಪತಿ ಮೂರ್ತಿಯನ್ನು ಸಿಂಗರಿಸುವ ಹೊಸ
ಬ್ರಹ್ಮಾವರ ಬಿಲ್ಲವ ಸಮಾಜ ಸೇವಾ ಸಂಘದಿಂದ ಬ್ರಹ್ಮಾವರ ನಾರಾಯಣ ಗುರು ಸಭಾ ಭವನದ ಬಳಿ ಬ್ರಹ್ಮ ಶ್ರೀ ನಾರಾಯಣ ಗುರು ಮಂದಿರದ ಶಿಲಾನ್ಯಾಸ ಕಾರ್ಯಕ್ರಮ ನಡೆಯಿತು. ಸೋಲೂರು ಮಠದ ವಿಖ್ಯಾತಾನಂದ ಸ್ವಾಮೀಜಿ ಅವರು ಶಿಲಾನ್ಯಾಸ ನೆರವೇರಿಸಿದರು. ಸಭಾ ಕಾರ್ಯಕ್ರಮವನ್ನು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ನೆರವೇರಿಸಿದರು. ಬಳಿಕ ಮಾತನಾಡಿದ ಅವರು, ಮಹಾ ಪುರುಷರ ದಿನಾಚರಣೆಗೆ ಸರಕಾರಿ ರಜೆ ನೀಡಿದಲ್ಲಿ ಮಹಾಪುರಷರನ್ನು ಮರೆತು ರಜೆಯ ಮಜಾ ಹೆಚ್ಚುತ್ತದೆ.
ಉಳ್ಳಾಲ: ಬೈಕಿನಲ್ಲಿ ಬಂದು ನಿಷೇಧಿತ ಮಾದಕ ವಸ್ತು ಎಂಡಿಎಂಎಯನ್ನು ಹಣಕ್ಕಾಗಿ ಸಾರ್ವಜನಿಕರಿಗೆ ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರನ್ನು ಉಳ್ಳಾಲ ಪೋಲಿಸ್ರ ತಂಡ ಬಂಧಿಸಿದ್ದಾರೆ. ತ್ರಿಶೂರ್ ವಡಕಂಚೇರಿ ನಿವಾಸಿ ಶೇಕ್ ತನ್ಸಿರ್ (20) ಮತ್ತು ಕೋಝಿಕ್ಕೋಡ್ ಕಡಮೇರಿ ನಿವಾಸಿ ಸಾಯಿಕೃಷ್ಣ ( 19) ಬಂಧಿತರು. ಇಬ್ಬರಿಂದ 2.77 ಗ್ರಾಂ ತೂಕದ ನಿಷೇಧಿತ ಎಂಡಿಎಂಎ, ಎರಡು ಮೊಬೈಲ್ ಹಾಗೂ ರೂ. 50,000 ಬೆಲೆಬಾಳುವ ಎಫ್ ಝೆಡ್ ಬೈಕನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿಗಳ
ಒವರ್ ಟೇಕ್ ಭರಾಟೆಯಿಂದ ಮುನ್ನುಗ್ಗಿ ಬಂದ ಕಾರೊಂದು ನಿಯಂತ್ರಣ ತಪ್ಪಿ ಮತ್ತೊಂದು ಕಾರಿಗೆ ಡಿಕ್ಕಿಯಾಗಿ ಎರಡೂ ಕಾರುಗಳು ಗದ್ದೆಗೆ ಉರುಳಿದ ಘಟನೆ ಪಡುಬಿದ್ರಿಯ ಅಲಂಗಾರು ಬಳಿ ನಡೆದಿದೆ. ಕುಂದಾಪುರ ಮೂಲದ ಐ ಟೆನ್ ಕಾರು ಹಾಗೂ ಕೋಟ ಮೂಲದ ಶಿಪ್ಟ್ ಕಾರು ಅಪಘಾತಕ್ಕೆ ತುತ್ತಾಗಿದೆ. ಎರಡೂ ಕಾರುಗಳಲ್ಲೂ ಚಾಲಕರು ಮಾತ್ರ ಇದ್ದು ಶಿಪ್ಟ್ ಕಾರಿನ ಚಾಲಕ ಗಾಯಗೊಂಡು ಮುಕ್ಕ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಾಗಿದ್ದಾರೆ. ಈ ಭಾಗದಲ್ಲಿ ಹೆದ್ದಾರಿ ಬಹಳ ಅಪಾಯಕಾರಿ ತಿರುವು




























