ದಕ್ಷಿಣ ಕನ್ನಡ ಜಿಲ್ಲೆಗೆ ಗೃಹ ಲಕ್ಷ್ಮಿ ಯೋಜನೆಗಾಗಿ 60ಕೋಟಿ ರೂಪಾಯಿ ನೀಡಲಾಗಿದೆ. ಮಹಿಳೆಯರಿಗೆ ಶಕ್ತಿ ತುಂಬುವ ಮೂಲಕ ಕುಟುಂಬವನ್ನು ಸದೃಢವಾಗಿಸಲಾಗುತ್ತಿದೆ ಎಂದು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಹೇಳಿದರು. ಅವರು ಪೆರುವಾಯಿ ಮುಚ್ಚಿರಪದವು ಫಾತಿಮಾ ಮಾತೆಯ ದೇವಾಲಯದಲ್ಲಿ ಸಮುದಾಯ ಭವನದ ಶಿಲಾನ್ಯಾಸವನ್ನು ನಡೆಸಿ ಮಾತನಾಡಿದರು. ಕ್ರೈಸ್ತ ಅಕಾಡೆಮಿಯ
ಕರ್ನಾಟಕ ರಾಜ್ಯ ಮತ್ತು ದ.ಕ ಜಿಲ್ಲಾ ಅಥ್ಲೆಟಿಕ್ ಅಸೋಸಿಯೇಷನ್‍ನ ಸಹಯೋಗದಲ್ಲಿ ದಿವಂಗತ ಲೋಕನಾಥ್ ಬೋಳಾರ್ ಸ್ಮರಣಾರ್ಥ ಸೆಪ್ಟಂಬರ್ 27ರಿಂದ 30ರ ವರೆಗೆ ಕರ್ನಾಟಕ ರಾಜ್ಯ ಜೂನಿಯರ್ ಅಥ್ಲೆಟಿಕ್ ಕ್ರೀಡಾ ಕೂಟ ನಡೆಯಲಿದ್ದು, ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮವು ಮಂಗಳೂರಿನಲ್ಲಿ ಜರಗಿತು. ಮುಂಬೈಯ ಮೊಗವೀರ ವ್ಯವಸ್ಥಾಪಕ ಮಂಡಳಿ, ದಕ್ಷಿಣ ಕನ್ನಡ ಮತ್ತು ಉಡುಪಿ ಶಾಖೆ, ಮಂಗಳೂರು ಬಂದರ್ ಯಾಂತ್ರಿಕ ಮೀನುಗಾರರ ಪ್ರಾಥಮಿಕ ಸಹಕಾರಿ ಸಂಘದ ನೇತೃತ್ವದಲ್ಲಿ
ಶ್ರಿ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಧರ್ಮಸ್ಥಳದ ವತಿಯಿಂದ ದಕ್ಷಿಣ ಕನ್ನಡ ಜಿಲ್ಲಾ ಪಶು ಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಗೆ ದ್ರವ ಸಾರ ಜನಕ ಜಾಡಿಗಳ ವಿತರಣಾ ಕಾರ್ಯಕ್ರಮ ಧರ್ಮಸ್ಥಳ ಪ್ರವಚನ ಮಂಟಪದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಮಾತನಾಡಿದ ಧರ್ಮಸ್ಥಳದ ಕ್ಷೇತ್ರದ ಧರ್ಮಾಧಿಕಾರಿ ಡಾ. ಡಿ.ವೀರೇಂದ್ರ ಹೆಗ್ಗಡೆಯವರು, ಪ್ರಸಕ್ತ ಪರಿಸ್ಥಿತಿಯಲ್ಲಿ ದಕ್ಷಿಣ ಕನ್ನಡದಲ್ಲಿ ಹಾಲಿನ ಉತ್ಪಾದನೆಯಲ್ಲಿ ಹೆಚ್ಚಿಸಿ ಕೊಳ್ಳಬೇಕಾದ ಅನಿವಾರ್ಯತೆಯಿದೆ.
ಮಂಗಳೂರು : ಶಕ್ತಿನಗರದಲ್ಲಿ ಸುಮಾರು ೧೨ ವರ್ಷಗಳ ಹಿಂದೆ ಪ್ರಾರಂಭವಾದಂತಹ ಬ್ಲೂ ಸ್ಟಾರ್ ಕ್ರಿಕೆಟರ್ಸ್ ತಂಡವು ಇಂದಿಗೂ ’ಒನ್ ಟೀಮ್ ಒನ್ ಡ್ರೀಮ್’ ಧ್ಯೇಯದೊಂದಿಗೆ ಮುನ್ನಡೆಯುತ್ತಿದೆ. ಬ್ಲೂ ಸ್ಟಾರ್ ಕ್ರಿಕೆಟರ್ಸ್ ತಂಡವು ಶಕ್ತಿನಗರದಲ್ಲಿ ಪ್ರತಿವರ್ಷ ಅದ್ದೂರಿಯಾಗಿ ನಡೆಯುವಂತಹ ಶ್ರೀ ಕೃಷ್ಣ ಜನ್ಮಾಷ್ಟಮಿ ಉತ್ಸವ ಹಾಗೂ ಮೊಸರು ಕುಡಿಕೆ ಉತ್ಸವಕ್ಕೆ ಕೈಜೋಡಿಸಿ, ಇನ್ನೂ ಸಂಭ್ರಮದಿಂದ ಆಚರಿಸುವಂತೆ ಸಹಕರಿಸುತ್ತಿದ್ದಾರೆ. ಈ ಬಾರಿ ಸಂಭ್ರಮವನ್ನು ಇನ್ನೂ ವಿನೂತನ
ನೆಲ್ಯಾಡಿ: ನೂಜಿಬಾಳ್ತಿಲ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಯು ಇಚಿಲಂಪಾಡಿ ನೇರ್ಲದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು. ಕೌಕ್ರಡಿ ಪಂಚಾಯತ್ ಅಧ್ಯಕ್ಷರಾದ ಲೋಕೇಶ್ ಬಾಣಜಲು ರವರು ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಶಾಲಾ ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ವಸಂತ ಬಿಜೇರು ರವರು ಸಭಾಧ್ಯಕ್ಷತೆಯನ್ನು ವಹಿಸಿದ್ದರು. ಕಡಬ ಸರಕಾರಿ ನೌಕರರ ಸಂಘದ ಅಧ್ಯಕ್ಷರು ಹಾಗೂ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಮಂಗಳೂರು ಇದರ ಕಾರ್ಯದರ್ಶಿಗಳಾದ ವಿಮಲ್,
ದೇರಳಕಟ್ಟೆಯ ವಿದ್ಯಾರತ್ನ ವಿದ್ಯಾಸಂಸ್ಥೆಯಲ್ಲಿ ನಡೆದ ದಕ್ಷಿಣ ಕನ್ನಡ ಸಾರ್ವಜನಿಕ ಶಿಕ್ಷಣ ಇಲಾಖೆಯ ಜಿಲ್ಲಾ ಮಟ್ಟದ ಕರಾಟೆ ಕ್ರೀಡಾಕೂಟದಲ್ಲಿ ಕುಂಜತ್ತಬೈಲಿನ ನೋಬಲ್ ಆಂಗ್ಲ ಮಾಧ್ಯಮ ಫ್ರೌಢಶಾಲೆಯ ವಿದ್ಯಾರ್ಥಿಗಳಾದ ಹರ್ಷಿಕ, ವರ್ಷಿತ ಇವರು ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆ ಆಗಿರುತ್ತಾರೆ. ಧನ್ವಿತ್ ದ್ವಿತೀಯ ಸ್ಥಾನ ಪಡೆದಿರುತ್ತಾರೆ. ಇವರು ನಿತೀನ್ .ಎನ್ .ಸುವರ್ಣ, ಸಂಪತ್ ಹಾಗು ಸುಶಾಂತ್ ರವರಿಂದ ಕರಾಟೆ ತರಬೇತಿಯನ್ನು ಪಡೆಯುತ್ತಿದ್ದಾರೆ.
ಪುತ್ತೂರು: ಪುತ್ತೂರು ನಗರದ ಬೀರಮಲೆ ಬೆಟ್ಟದಲ್ಲಿರುವ ಪ್ರಜ್ಞಾ ಆಶ್ರಮದಲ್ಲಿ ಮಾಜಿ ಸಚಿವ ಬಿ.ರಮಾನಾಥ ರೈ ಅವರು 72ನೇ ಹುಟ್ಟು ಹಬ್ಬವನ್ನು ವಿನೂತನವಾಗಿ ಆಚರಿಸಿಕೊಂಡರು. ಆಶ್ರಮದಲ್ಲಿನ ವಿಶೇಷ ಚೇತನರೊಂದಿಗೆ ಸಹಭೋಜನ ನಡೆಸಿ ತನ್ನ ಹುಟ್ಟು ಹಬ್ಬ ಆಚರಿಸಿದ ರಮಾನಾಥ ರೈ ಅವರು, ನನ್ನ ರಾಜಕೀಯ ಬದುಕಿನಲ್ಲಿ ಹಲವಾರು ಏಳು ಬೀಳುಗಳನ್ನು ಕಂಡಿದ್ದು, ಎಲ್ಲವನ್ನೂ ಸಮಾನವಾಗಿ ಸ್ವೀಕರಿಸುತ್ತಾ ಬಂದಿದ್ದೇನೆ. ಇಲ್ಲಿನ ಜನರು ನನಗೆ ನೀಡಿರುವ ಪ್ರೀತಿಗೆ ಬೆಲೆ ಕಟ್ಟಲಾಗದು
ಬಂಟ್ವಾಳದ ಬೈಪಾಸ್‍ನಲ್ಲಿ ನೂತನವಾಗಿ ನಿರ್ಮಾಣಗೊಂಡ ರಿಕ್ಷಾ ಪಾರ್ಕ್‍ನ್ನು ಮಾಜಿ ಸಚಿವ ಬಿ.ರಮಾನಾಥ ರೈ ಉದ್ಘಾಟಿಸಿದರು.ವಿಧಾನ ಪರಿಷತ್ ಸದಸ್ಯ ಯು. ಬಿ. ವೆಂಕಟೇಶ್ ಅವರ ಪ್ರದೇಶಾಭಿವೃದ್ಧಿ ನಿಧಿಯಡಿ ರಿಕ್ಷಾ ಪಾರ್ಕ್‍ನ್ನು ನಿರ್ಮಾಣ ಮಾಡಲಾಗಿತ್ತು. ಈ ಸಂದರ್ಭ ಮಾತನಾಡಿದ ರಮಾನಾಥ ರೈ ಅವರು, ನನ್ನ ಹುಟ್ಟು ಹಬ್ಬದ ದಿನದಂದೇ ರಿಕ್ಷಾ ತಂಗುದಾಣ ನಿರ್ಮಾಣವಾಗಿರುವುದು ಕಾಕತಾಳಿಯ. ಈ ತಂಗುದಾಣದಿಂದ ರಿಕ್ಷಾ ಚಾಲಕರಿಗೆ ಅನುಕೂಲವಾಗಲಿ ಎಂದು
ರಾಷ್ಟ್ರೀಯ ವಿಚಾರಧಾರೆಗಳಲ್ಲಿ ಬಿಜೆಪಿ ಯಾವುದೇ ರಾಜಿ ಮಾಡಿಕೊಳ್ಳುವುದಿಲ್ಲ. ಹಿಂದುಗಳನ್ನು ವಿರೋಧಿಸುತ್ತಿರುವ ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರಕ್ಕೆ ಮುಂದಿನ ಲೋಕಸಭಾ ಚುನಾವಣೆಯಲ್ಲಿ ನಿರ್ಲಕ್ಷಿಸುವ ಕಾರ್ಯವನ್ನು ಮಾಡಬೇಕಾಗಿದೆ ಎಂದು ಬಿಜೆಪಿ ರಾಜ್ಯ ರೈತ ಮೋರ್ಚಾ ಕಾರ್ಯದರ್ಶಿ ಡಾ. ನವೀನ್ ಹೇಳಿದರು. ಪುತ್ತೂರು ಅಮರ ಜವಾನ್ ಸ್ಮಾರಕದ ಬಳಿ ರಾಜ್ಯ ಕಾಂಗ್ರೆಸ್ ಸರ್ಕಾರದ ರೈತ ವಿರೋಧಿ ನೀತಿಯನ್ನು ಖಂಡಿಸಿ ಬಿಜೆಪಿ ನಡೆಸಿದ ಪ್ರತಿಭಟನೆಯಲ್ಲಿ ಮಾತನಾಡಿದರು.
ಮೂಡುಬಿದಿರೆ: ಖಾಸಗಿ ಬಸ್‍ನಿಂದ ಮಧ್ಯ ವಯಸ್ಸಿನ ಮಹಿಳೆಯೊಬ್ಬರು ಬಿದ್ದು ತೀವೃ ತರಹದ ಗಾಯದಿಂದಾಗಿ ಆಸ್ಪತ್ರೆಗೆ ಸಾಗಿಸುವ ಸಂದರ್ಭದಲ್ಲಿ ಮೃತಪಟ್ಟ ಘಟನೆ ಮೂಡುಬಿದಿರೆ ಪೊಲೀಸ್ ಠಾಣಾ ವ್ಯಾಪ್ತಿಯ ಮಾರೂರಿನಲ್ಲಿ ನಡೆದಿದೆ. ಮಾರೂರು ಕುಂಟೋಡಿ ನಿವಾಸಿ ನೀಲಮ್ಮ (66ವ ) ದುರ್ಘಟನೆಯಲ್ಲಿ ಸಾವನ್ನಪ್ಪಿದವರು. ನೀಲಮ್ಮ ಅವರು ಬಿಪಿ, ಶುಗರ್ ತಪಾಸಣೆ ಮಾಡಲೆಂದು ತನ್ನ ಮೊಮ್ಮಗನ ಜತೆ ಮೂಡುಬಿದಿರೆ ಆಸ್ಪತ್ರೆಗೆಂದು ಸಾಯಿ ಟ್ರಾವೆಲ್ಸ್ ಎಂಬ ಹೆಸರಿನ ಖಾಸಗಿ ಬಸ್ಸಿಗೆ




























