Home Posts tagged V4News (Page 381)

ಅರ್ಥಪೂರ್ಣವಾಗಿ ಶಿಕ್ಷಕರ ದಿನವನ್ನು ಆಚರಿಸಿದ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆ

ವಿಟ್ಲ – ಪೆರಾಜೆ, ವಿದ್ಯಾನಗರದ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸೆಪ್ಟೆಂಬರ್ 5 ರಂದು ಶಿಕ್ಷಕರ ದಿನವನ್ನು ಬಹಳ ಅರ್ಥಪೂರ್ಣವಾಗಿ ಆಚರಿಸಲಾಯಿತು. ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಸ್ಕಾಲರ್ ಶಿಪ್ ಮಾಸ್ಟರ್ ಎಂದೇ ಖ್ಯಾತರಾದ ನಿವೃತ್ತ ಸರಕಾರಿ ಶಿಕ್ಷಕರಾದ ಶ್ರೀ ನಾರಾಯಣ ನಾಯ್ಕ್ ರವರು ಮಾತನಾಡಿ, ” ಎರಡು ರೀತಿಯ ದೇವರು

ಕಮೀಷನರ್ ವರ್ಗಾವಣೆ : ಡ್ರಗ್ಸ್ ವಿರುದ್ದದ ಹೋರಾಟದಲ್ಲಿ ಪೊಲೀಸರ ನೈತಿಕ ಸ್ಥೈರ್ಯ ಕ್ಕೆ ಹೊಡೆತ : ಶಾಸಕ ಡಾ.ಭರತ್ ಶೆಟ್ಟಿ

ಮಂಗಳೂರು: ನಗರದಲ್ಲಿ ವ್ಯಾಪಕವಾಗಿ ಜಾಲಹರಡಿದ್ದ ಮಾದಕ ವಸ್ತುಗಳ ಮಾರಾಟ,ಸೇವನೆ,ಡ್ರಗ್ಸ್ ಪೆಡ್ಲರ್ ಗಳ ಅಟ್ಟಹಾಸವನ್ನು ಸಮಪರ್ಕವಾಗಿ ನಿಗ್ರಹಿಸಿ ನಗರವನ್ನು ಕಾನೂನು ಅಸ್ತ್ರ ಸ್ವಚ್ಚಮಾಡುತ್ತಿದ್ದ ಪೊಲೀಸ್ ಕಮೀಷನರ್ ಕುಲ ದೀಪ್ ಜೈನ್ ಅವರ ವರ್ಗಾವಣೆಯಿಂದ ಪೊಲೀಸ್ ಇಲಾಖೆಯ ನೈತಿಕ ಸ್ಥೈರ್ಯ ಕ್ಕೆ ಹೊಡೆತ ನೀಡಲಾಗಿದೆ ಎಂದು ಶಾಸಕ ಡಾ.ಭರತ್ ಶೆಟ್ಟಿ ವೈ ಕಿಡಿ ಕಾರಿದ್ದಾರೆ. ನಮ್ಮ ಜಿಲ್ಲೆಯ ಮಕ್ಕಳು ದುಶ್ಚಟಗಳಿಗೆ ಬಲಿಯಾಗಬಾರದು ಎನ್ನುವ ಸಂಕಲ್ಪದೊಂದಿಗೆ

ದುಬಾಯಿಯಲ್ಲಿ ಸಾರ್ವಜನಿಕ ಶ್ರೀ ಕೃಷ್ಣ ಜನ್ಮಾಷ್ಟಮಿ 2023 ಆಚರಣೆಗೆ ಸರ್ವ ಸಿದ್ಧತೆ

ಯಕ್ಷಗಾನ ಅಭ್ಯಾಸ ಕೇಂದ್ರ ಯುಎಇ ಪ್ರಾಯೋಜಕತ್ವದಲ್ಲಿ, “ಮಕ್ಕಳಿಗೆ ತಾಯ್ನಾಡಿನ ಪರಂಪರೆ-ಕಲೆ- ಸಂಸ್ಕೃತಿ-ಹಬ್ಬ-ಆಚರಣೆಗಳ ಪರಿಚಯ ಯೋಜನೆಯಡಿಯಲ್ಲಿ ” ಕಳೆದ ಕೆಲ ವರ್ಷಗಳಿಂದ ಆಚರಿಸಿಕೊಂಡು ಬರುತ್ತಿರುವಂತೆ, ಮತ್ತಷ್ಟು ವೈಭವ-ಸಡಗರ ಮತ್ತು ನವರೂಪದಿಂದ ಈ ಸಲವೂ, ಸಾರ್ವಜಿನಿಕ ಶ್ರೀ ಕೃಷ್ಣ ಜನ್ಮಾಷ್ಟಮಿ -2023 ಆಚರಣೆಗೆ ಸರ್ವ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ದಿನಾಂಕ 10-09-2023 ನೇ ಆದಿತ್ಯವಾರದಂದು, ದುಬಾಯಿ -ಗೀಸೈಸ್ ನ ಮದಿನ ಹೈಪರ್

ಮಂಗಳೂರು: ತನಿಷ್ಕ್ ಜ್ಯುವೆಲ್ಲರ್ಸ್ ವತಿಯಿಂದ ಶಿಕ್ಷಕರ ದಿನಾಚರಣೆ

ಮಂಗಳೂರಿನ ಬಲ್ಮಠ ಸಮೀಪದ ತನಿಷ್ಕ್ ಜ್ಯುವೆಲ್ಲರ್ಸ್ ವತಿಯಿಂದ ಶಿಕ್ಷಕರ ದಿನಾಚರಣೆಯನ್ನು ವಿನೂತನವಾಗಿ ಆಚರಿಸಲಾಯಿತು. ಈಗಾಗಲೇ ಚಿನ್ನಾಭರಣ ಮಾರಾಟದಲ್ಲಿ ಹೆಸರುವಾಸಿಯಾಗಿರುವ ಮಂಗಳೂರಿನ ತನಿಷ್ಕ್ ಜ್ಯುವೆಲ್ಲರ್ಸ್ ನಲ್ಲಿ ಶಿಕ್ಷಕರ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು. ಕಾರ್ಯಕ್ರಮವನ್ನು ಶಿಕ್ಷಕಿಯರು ದೀಪಬೆಳಗಿಸಿ, ಕೇಕ್ ಕತ್ತರಿಸಿ ಉದ್ಘಾಟಿಸಿದರು. ಇದೇ ವೇಳೆ ಜ್ಯುವೆಲ್ಲರ್‍ನಲ್ಲಿ ಗ್ರಾಹಕರಿಗಾಗಿ ಹಮ್ಮಿಕೊಂಡ ವಿಶೇಷ ಆಫರ್ ಅನ್ನು ಶಿಕ್ಷಕರು

ಮಂಜೇಶ್ವರ: ಪೋಲಿಸರ ಮೇಲೆ ಹಲ್ಲೆ-ಜಿಲ್ಲಾ ಪಂಚಾಯತ್ ಸದಸ್ಯ ಅಬ್ದುರ್ ರಹ್ಮಾನ್ ಬಂಧನ

ಉಪ್ಪಳ ಹಿದಾಯತ್ ನಗರದಲ್ಲಿ ಪೋಲಿಸರ ಮೇಲೆ ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಸರಗೋಡು ಜಿಲ್ಲಾ ಪಂಚಾಯತ್ ಸದಸ್ಯನನ್ನು ಮಂಜೇಶ್ವರ ಪೋಲಿಸರು ಬಂಧಿಸಿದ್ದಾರೆ. ಮುಸ್ಲಿಂ ಲೀಗ್ ಮುಖಂಡ, ಯೂತ್ ಲೀಗ್ ಜಿಲ್ಲಾ ಕಾರ್ಯದರ್ಶಿ, ಉಪ್ಪಳ ಹಿದಾಯತ್ ಬಜಾರ್‍ನ ಗೋಲ್ಡನ್ ಅಬ್ದುಲ್ ರಹಮಾನ್ ಬಂಧಿತ ಆರೋಪಿಯಾಗಿದ್ದಾನೆ. ಉಪ್ಪಳ ಹಿದಾಯತ್ ನಗರದಲ್ಲಿ ಗಸ್ತಿನಲ್ಲಿದ್ದ ಪೋಲಿಸರ ಮೇಲೆ ಗುಂಪೊಂದು ಹಲ್ಲೆ ನಡೆಸಿತ್ತು. ಹಲ್ಲೆಯಿಂದ

ಕಾರ್ಕಳ: ಒಳ ಚರಂಡಿ ತ್ಯಾಜ್ಯ ನೀರು ರಸ್ತೆ ಮೇಲಿನಿಂದ ಹರಿಯುತ್ತಿದ್ದ ಸಮಸ್ಯೆಗೆ ಪರಿಹಾರ

ವಿ4 ವರದಿಗೆ ಸ್ಪಂದಿಸಿದ ಕಾರ್ಕಳ ಪುರಸಭಾಧಿಕಾರಿಗಳಿಗೆ ಕೃತಜ್ಞತೆ ಸಲ್ಲಿಸಿದ ನಾಗರಿಕರು ಕಾರ್ಕಳ ಗಾಂಧಿ ಮೈದಾನದ ಕ್ರೈಸ್ಟ್ ಕಿಂಗ್ ಚರ್ಚ್ ಮತ್ತು ಶಾಲೆಗಳಿಗೆ ಹೋಗುವ ಮುಖ್ಯ ರಸ್ತೆಯಲ್ಲಿ ಒಳ ಚರಂಡಿ ತ್ಯಾಜ್ಯ ನೀರು ರಸ್ತೆ ಮೇಲಿನಿಂದ ಹರಿದು ಎಲ್ಲರಿಗೂ ಸಮಸ್ಯೆಯಾಗುತ್ತಿದ್ದು ಇದೀಗ ಕಾರ್ಕಳ ಪುರಸಭೆಯವರು ಒಳ ಚರಂಡಿಯ ಕಾಮಗಾರಿಕೆಯನ್ನು ಪ್ರಾರಂಭಿಸಿ ಸಮಸ್ಯೆಗೆ ಮುಕ್ತಿ ನೀಡಿದ್ದಾರೆ. ಒಳ ಚರಂಡಿ ತ್ಯಾಜ್ಯ ನೀರು ರಸ್ತೆ ಮೇಲಿನಿಂದ ಹರಿಯುತ್ತಿದ್ದರಿಂದ ಕಂಗೆಟ್ಟ

ಸೌಜನ್ಯ ಪ್ರಕರಣ ಮರುತನಿಖೆಗೆ ಅವಕಾಶವಿಲ್ಲ-ಬಿಜೆಪಿ ಶಾಸಕರ ನಿಯೋಗಕ್ಕೆ ಉತ್ತರಿಸಿದ ಸಿ.ಎಂ.

ಸೌಜನ್ಯ ಪ್ರಕರಣವನ್ನು ಮರು ತನಿಖೆಗೆ ಒಳಪಡಿಸುವಂತೆ ಒತ್ತಾಯಿಸಿ ದ.ಕ ಮತ್ತು ಉಡುಪಿ ಜಿಲ್ಲೆಯ ಬಿಜೆಪಿ ಶಾಸಕರ ನಿಯೋಗ ಮುಖ್ಯಮಂತ್ರಿ ಸಿದ್ಧರಾಮಯ್ಯರನ್ನು ಭೇಟಿ ಮಾಡಿ ಮನವಿ ಸಲ್ಲಿಸಿತು. ಈ ಸಂದರ್ಭ ನಿಯೋಗದೊಂದಿಗೆ ಮಾತನಾಡಿದ ಮುಖ್ಯಮಂತ್ರಿಗಳು, ಸೌಜನ್ಯ ಪ್ರಕರಣವನ್ನು ಮರು ತನಿಖೆಗೆ ಒಳಪಡಿಸಲು ರಾಜ್ಯ ಸರಕಾರಕ್ಕೆ ಕಾನೂನಿನಲ್ಲಿ ಅವಕಾಶವಿರುವುದಿಲ್ಲ. ಈ ವಿಷಯವನ್ನು ಸೌಜನ್ಯಳ ಪೋಷಕರಿಗೆ ನಾನು ತಿಳಿಸಿದ್ದೇನೆ. ಈಗಾಗಲೇ ಕಾನೂನು ಸಲಹೆಯನ್ನು ನಾನು ಪಡೆದಿರುವುದರಿಂದ

ಮಂಗಳೂರು: ಕುಲದೀಪ್ ಕುಮಾರ್ ಆರ್ ಜೈನ್ ವರ್ಗಾವಣೆ, ನೂತನ ಪೊಲೀಸ್ ಆಯುಕ್ತರಾಗಿ ಅನುಪಮ್ ಅಗರ್ವಾಲ್ ನೇಮಕ

ಮಂಗಳೂರು ಪೊಲೀಸ್ ಕಮಿಷನರ್ ಕುಲದೀಪ್ ಕುಮಾರ್ ಆರ್ ಜೈನ್ ವರನ್ನು ವರ್ಗಾವಣೆ ಮಾಡಲಾಗಿದ್ದು ನಗರದ ನೂತನ ಪೊಲೀಸ್ ಆಯುಕ್ತರಾಗಿ ಐಪಿಎಸ್ ಅಧಿಕಾರಿ ಅನುಪಮ್ ಅಗರ್ವಾಲ್ ಅವರನ್ನು ನೇಮಕ ಮಾಡಲಾಗಿದೆ. ಮಂಗಳೂರು ಪೊಲೀಸ್ ಕಮೀಷನರ್ ಆಗಿರುವ ಕುಲದೀಪ್ ಕುಮಾರ್ ಆರ್ ಜೈನ್ ಅವರು ಸೇರಿದಂತೆ 35 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ಕುಲದೀಪ್ ಅವರು ದಕ್ಷ ಮತ್ತು ಪ್ರಾಮಾಣಿಕ ಅಧಿಕಾರಿಯಾಗಿ ಹೆಸರುವಾಸಿಯಾಗಿದ್ದು ಜನರ

ಸುಳ್ಯ: ಗ್ರಾ.ಪಂ ಗ್ರಂಥಾಲಯ, ಮಾಹಿತಿ ಕೇಂದ್ರಗಳಿಗೆ ಲ್ಯಾಪ್‍ಟಾಪ್, ಮೋನಿಟರ್ ಕೊಡುಗೆ

ಕರ್ನಾಟಕ ಸರಕಾರ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಶಿಕ್ಷಣ ಪೌಂಡೇಶನ್ ಮತ್ತು ಡೆಲ್ ಟೆಕ್ನಲಾಜಿ ಸಹಭಾಗಿತ್ವದಲ್ಲಿ ಗ್ರಾಮ ಪಂಚಾಯತ್ ಗ್ರಂಥಾಲಯದಲ್ಲಿ ನಡೆಯುತ್ತಿರುವ ಗ್ರಾಮ ಡಿಜಿ ವಿಕಸನ ಕಾರ್ಯಕ್ರಮದಡಿ ಆಯ್ಕೆಯಾದ ಸುಳ್ಯ ತಾಲೂಕಿನ ಎಂಟು ಗ್ರಾಮ ಪಂಚಾಯತ್ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರಗಳಿಗೆ ಕೊಡುಗೆಯಾಗಿ ನೀಡುವ ಲ್ಯಾಪ್‍ಟಾಪ್, ಮೋನಿಟರ್‍ಗಳನ್ನು ಸುಳ್ಯ ಶಾಸಕರಾದ ಭಾಗೀರಥಿ ಮುರುಳ್ಯ ಹಸ್ತಾಂತರಿಸಿದರು. ಸುಳ್ಯ ತಾಲೂಕು

ಬಿ.ಸಿ.ರೋಡಿನ ತಲಪಾಡಿಯಲ್ಲಿ ರಸ್ತೆಗೆ ಉರುಳಿ ಬಿದ್ದ ಗೂಡ್ಸ್ ಟೆಂಪೋ

ಬಂಟ್ವಾಳ: ಚಾಲಕನ ನಿಯಂತ್ರಣ ತಪ್ಪಿ ಗೂಡ್ಸ್ ಟೆಂಪೋವೊಂದು ರಸ್ತೆಗೆ ಉರುಳಿ ಬಿದ್ದ ಘಟನೆ ಬಿ.ಸಿ.ರೋಡಿನ ತಲಪಾಡಿ ಬಳಿ ನಡೆದಿದೆ. ಬೆಳಗ್ಗೆ ಸುರಿದ ಭಾರಿ ಮಳೆಯಿಂದಾಗಿ ಈ ಘಟನೆ ನಡೆದಿರುವುದಾಗಿ ತಿಳಿದು ಬಂದಿದೆ. ಚಾಲಕನಿಗೆ ತರಚಿದ ಗಾಯಗಳಾಗಿದ್ದು ಅಪಾಯದಿಂದ ಪಾರಾಗಿದ್ದಾರೆ. ಘಟನೆಯಿಂದಾಗಿ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಲಹೊತ್ತು ಟ್ರಾಫಿಕ್ ಜಾಂ ಸಮಸ್ಯೆ ಉಂಟಾಗಿತ್ತು.