ಉಳ್ಳಾಲ ತಾಲೂಕಿನ ಬಟ್ಟಂಪಾಡಿಯ ಕಡಲ್ಕೊರೆತ ಪ್ರದೇಶಕ್ಕೆ ಕಂದಾಯ ಸಚಿವರಾದ ಕೃಷ್ಣಭೈರೇಗೌಡ ಅವರು ಭೇಟಿ ನೀಡಿ ಕಡಲ್ಕೊರೆತದ ಹಾನಿಯನ್ನು ಪರಿಶೀಲಿಸಿದರು. ಈ ಸಂದರ್ಭದಲ್ಲಿ ವಿಧಾನ ಪರಿಷತ್ ಶಾಸಕರಾದ ಹರೀಶ್ ಕುಮಾರ್, ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಕುಮಾರ್, ಕಂದಾಯ ಇಲಾಖೆಯ ಆಯುಕ್ತ ಸುನಿಲ್ ಕುಮಾರ್ ಹಾಗೂ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ
ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯಲ್ಲಿ ಮೊದಲ ಬಾರಿಗೆ ಯಶಸ್ವಿ ಗ್ರಾಫ್ಟ್ ಮ್ಯಾನಿಪುಲೇಟೆಡ್ ಅರ್ಧ-ಹೊಂದಾಣಿಕೆಯ ಮೂಳೆ ಮಜ್ಜೆಯ ಕಸಿ ಚಿಕಿತ್ಸೆ ಯಶಸ್ವಿಯಾಗಿ ನಡೆದಿದೆ. ಮಣಿಪಾಲದ ಆಸ್ಪತ್ರೆಗೆ ಚಿಕಿತ್ಸೆ ಪಡೆಯಲು ಬಂದಿದ್ದ ಒಂದು ವರ್ಷದ ಮಗುವಿಗೆ ಸಿವಿಯರ್ ಕಂಬೈನ್ಡ್ ಇಮ್ಮುನೊ ಡೆಫಿಸಿನ್ಸಿ ಹೆಸರಿನ ತೀವ್ರ ತರಹದ ರೋಗ ನಿರೋಧಕ ಶಕ್ತಿ ಕೊರತೆ ಕಾಯಿಲೆ ಪತ್ತೆಯಾಗಿತ್ತು. ಅಸ್ಥಿಮಜ್ಜೆ ಕಸಿ ಮಾತ್ರವೇ ಮಗುವಿನ ಕಾಯಿಲೆ ಗುಣಪಡಿಸಬಲ್ಲ ಇದ್ದ ಏಕೈಕ ಚಿಕಿತ್ಸೆಯಾಗಿದ್ದರಿಂದ
ಬೈಂದೂರು ತಾಲೂಕು ಕಚೇರಿಯ ಸಮೀಪದಲ್ಲಿರುವ ದರ್ಖಾಸ್ತು ಕಾಲೋನಿ ನಿವಾಸಿ ಚಂದು ಅವರ ಕುಟುಂಬಕ್ಕೆ ದಿಕ್ಕೇ ತೋಚದಂತಹ ಪರಿಸ್ಥಿತಿ ಇದೆ. ಕಿತ್ತು ತಿನ್ನುವ ಬಡತನದ ನಡುವೆ ಆಧಾರಸ್ಥಂಭವಾಗಿದ್ದ ಹಿರಿ ಮಗ ಪ್ರಕಾಶ್ ಅಪಘಾತದಲ್ಲಿ ಬೆನ್ನು ಮೂಳೆ ಮುರಿದುಕೊಂಡು ಆರು ವರ್ಷದಿಂದ ಹಾಸಿಗೆ ಹಿಡಿದಿದ್ದಾರೆ. ಎರಡು ವರ್ಷಗಳ ಹಿಂದಿನ ಭಾರೀ ಮಳೆಗೆ ಮನೆ ಮೇಲೆ ಮರ ಬಿದ್ದ ಕಾರಣ ಮನೆಯೂ ನಾಶವಾಗಿದೆ. ಇಂದು ತಹಶೀಲ್ದಾರ್ ಶ್ರೀಕಾಂತ್ ಹೆಗ್ಡೆ ಅವರು ಭೇಟಿ ನೀಡಿ ಚಂದು ಅವರ ಮನೆಯ
ಬ್ರಹ್ಮಾವರ ಪೊಲೀಸ್ ಠಾಣಾ ವ್ಯಾಪ್ತಿಯ ಬಾರಕೂರು ಕಲ್ಲು ಚಪ್ಪರ ಮತ್ತು ಆಕಾಶವಾಣಿ ವೃತ್ತದ ಬಳಿ ದಾನಿಗಳ ನೆರವಿನಿಂದ ಹೊಸ ತಂತ್ರಜಾÐನದ ಸಿಸಿ ಕ್ಯಾಮರಾ ಅಳವಡಿಸಲಾಗಿದೆ. ಇತ್ತೀಚೆಗೆ ಬಾರಕೂರಿನಲ್ಲಿ 3 ಪೆಟ್ರೋಲ್ ಬಂಕ್‍ನಲ್ಲಿ ಅಳವಡಿಸಿರುವ ಸಿಸಿ ಕ್ಯಾಮಾರಾಕ್ಕೆ ಬಟ್ಟೆ ಮುಚ್ಚಿ ಅಲ್ಲಿರುವ ಹಣವನ್ನು ಕಳ್ಳರು ಕದ್ದೊಯ್ದ ಘಟನೆ ನಡೆದಿತ್ತು. ಇದೀಗ ಅಳವಡಿಸಿದ್ದ ಸಿಸಿ ಕ್ಯಾಮರಾ ಹೊಸ ತಂತ್ರಜ್ಞಾನದ್ದಾಗಿದ್ದು ಮಂದ ಬೆಳಕಿನಲ್ಲಿ ಕೂಡಾ ವ್ಯಕ್ತಿ, ವಾಹನಗಳ
ಮೈಸೂರು : ಈ ಬಾರಿಯ ದಸರಾ ಮಹೋತ್ಸವವನ್ನು ನಾಡಿನ ಖ್ಯಾತ ಸಂಗೀತ ನಿರ್ದೇಶಕ ಹಂಸಲೇಖ ಅವರ ಮೂಲಕ ಈ ಬಾರಿಯ ಉದ್ಘಾಟಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಕಟಿಸಿದರು. ಅವರು ಇಂದು ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ತಾಯಿ ಚಾಮುಂಡೇಶ್ವರಿಯ ದರ್ಶನ ಪಡೆದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ ಈ ವಿಷಯ ತಿಳಿಸಿದರು. ಡಿಸಿಎಂ ಡಿ.ಕೆ.ಶಿವಕುಮಾರ್, ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ.ಮಹದೇವಪ್ಪ , ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಜತೆಗಿದ್ದರು.
ರಾಜ್ಯ ಸರ್ಕಾರದ ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ ಅವರು ನಗರದ ಪಡೀಲ್‍ನಲ್ಲಿರುವ ಜಿಲ್ಲಾಧಿಕಾರಿ ಕಚೇರಿಯ ಕಾಮಗಾರಿಗಳನ್ನು ಪರಿಶೀಲಿಸಿ ಸಲಹೆ, ಸೂಚನೆಗಳನ್ನು ನೀಡಿದರು. ಈ ಸಂದರ್ಭದಲ್ಲಿ ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಾದ ರಾಜೇಂದ್ರ ಕುಮಾರ್ ಕಟೀರಿಯ, ಕಂದಾಯ ಇಲಾಖೆಯ ಆಯುಕ್ತ ಸುನೀಲ್ ಕುಮಾರ್, ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್, ಮಂಗಳೂರು ಸಹಾಯಕ ಆಯುಕ್ತ ಹರ್ಷವರ್ಧನ್ ಸೇರಿದಂತೆ ಕಂದಾಯ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
ಕಾರೊಂದು ಆಟೋ ರಿಕ್ಷಾಕ್ಕೆ ಢಿಕ್ಕಿಯಾದ ಘಟನೆ ಬಿ.ಸಿ ರೋಡ್‍ನ ರೈಲು ನಿಲ್ದಾಣದ ಬಳಿ ನಡೆದಿದೆ. ಅಪಘಾತದ ಪರಿಣಾಮ ರಿಕ್ಷಾ ನಜ್ಜುಗುಜ್ಜಾಗಿದ್ದು, ರಿಕ್ಷಾ ಚಾಲಕ ಗಂಭೀರ ಗಾಯಗೊಂಡಿದ್ದಾರೆ. ಅವನ್ನು ತಕ್ಷಣ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ಅಂತರರಾಷ್ಟ್ರೀಯ ಕೃಷ್ಣ ಪ್ರಜ್ಞಾ ಸಂಘದ ಮಂಗಳೂರು ಶಾಖೆಯ ಆಶ್ರಯದಲ್ಲಿ ಸೆಪ್ಟೆಂಬರ್ 6 ಮತ್ತು 7ರಂದು ನಗರದ ಕೊಡಿಯಾಲ್‍ಬೈಲ್‍ನ ಪಿವಿಎಸ್ ಕಲಾಕುಂಜ ಸಭಾಂಗಣದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಮಹೋತ್ಸವ ಆಚರಿಸಲಾಗುವುದು ಎಂದು ಇಸ್ಕಾನ್ ಮಂಗಳೂರು ಅಧ್ಯಕ್ಷ ಗುಣಕರ ರಾಮದಾಸ ತಿಳಿಸಿದರು. ಅವರು ಮಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು. ಮಹೋತ್ಸವದ ಅಂಗವಾಗಿ ಸೆಪ್ಟೆಂಬರ್ 2 ಮತ್ತು 3ರಂದು ದೇವಾಲಯದ
ಸರ್ಕಾರದ ಜನಪರ ಕಾರ್ಯಕ್ರಮಗಳನ್ನು ಜನಸಾಮಾನ್ಯರಿಗೆ ಮುಟ್ಟಿಸಬೇಕು. ಕಾಂಗ್ರೆಸ್ ಪಕ್ಷ ಪ್ರಣಾಳಿಕೆ ಯಲ್ಲಿ ಘೋಷಣೆ ಮಾಡಿರುವ ಎಲ್ಲಾ ಗ್ಯಾರಂಟಿ ಯೋಜನೆಗಳನ್ನು ಸರ್ಕಾರ ಜಾರಿ ಮಾಡುತ್ತಿದೆ ಎಂದು ಸಣ್ಣ ಕೈಗಾರಿಕಾ ಮತ್ತು ಸಾರ್ವಜನಿಕ ಉದ್ದಿಮೆಗಳ ಸಚಿವರಾದ ಶರಣಬಸಪ್ಪ ದರ್ಶನಾಪೂರ ಹೇಳಿದರು. ಅವರು ಬೆಳ್ತಂಗಡಿಯಲ್ಲಿ ಬ್ಲಾಕ್ ಕಾಂಗ್ರೆಸ್ ಕಚೇರಿಗೆ ಭೇಟಿ ನೀಡಿದ ಸಂದರ್ಭ ಕಾರ್ಯಕರ್ತರನ್ನು ಉದ್ದೇಶಸಿ ಮಾತನಾಡಿದರು. ಬಳಿಕ ಸಚಿವರು ಕಾರ್ಯಕರ್ತರ ಅಹವಾಲು ಸ್ವೀಕರಿಸಿದರು.
ಹೆಜಮಾಡಿ ಸಮೀಪದ ಕನ್ನಂಗಾರಿನಲ್ಲಿ ನಡೆದ ಟ್ಯಾಂಕರ್ ಹಾಗೂ ಸ್ಕೂಟರ್ ಮಧ್ಯೆ ನಡೆದ ಅಪಘಾತದಲ್ಲಿ ಸ್ಕೂಟರ್‌ನ ಸಹ ಸವಾರ ಗಂಭೀರ ಗಾಯಗೊಂಡು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಮೃತ ಯುವಕ ಜಾರ್ಕಾಂಡ್ ಮೂಲದ ಹೆಜಮಾಡಿ ಬ್ರಹ್ಮಸ್ಥಾನ ಬಳಿ ಬಾಡಿಗೆ ಕೋಣೆಯ ನಿವಾಸಿ ಮೇಸ್ತ್ರಿ ಕೆಲಸ ಮಾಡುತ್ತಿದ್ದ ಸದ್ದಾಂ ಅನ್ಸಾರಿ(20). ಸವಾರ ಪರ್ವೇಜ್ ಸಣ್ಣ ಪುಟ್ಟ ಗಾಯಗೊಂಡಿದ್ದಾರೆ.ತಮ್ಮ ವಾಸದ ಮನೆಯಿಂದ ಪಡುಬಿದ್ರಿ ಕಡೆಗೆ ಸ್ಕೂಟರ್ ನಲ್ಲಿ ಬರುತ್ತಿದ್ದು, ಹೆಜಮಾಡಿ ಒಳ




























