Home Posts tagged V4News (Page 412)

ಅರಳ ಗ್ರಾಮದ ದೇಂಬುಡೆಯಲ್ಲಿ ಗುಡ್ಡ ಕುಸಿತ

ಬಂಟ್ವಾಳ: ಅರಳ ಗ್ರಾಮದ ದೇಂಬುಡೆ ಎಂಬಲ್ಲಿ ಗುಡ್ಡ ಕುಸಿದು ಅಪಾಯಕಾರಿ ಸ್ಥಿತಿ ನಿರ್ಮಾಣವಾಗಿದೆ. ಇಲ್ಲಿನ ನಿವಾಸಿ ರುಡಾಲ್ಫ್ ಮರ್ಕ್ ಲೋಬೋ ಅವರ ಮನೆ ಬಳಿ ಈ ಘಟನೆ ನಡೆದಿದೆ. ಕಳೆದ ವರ್ಷ ಇದೇ ಸ್ಥಳದಲ್ಲಿ ಗುಡ್ಡ ಕುಸಿದು ಮನೆಮಂದಿಯನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿತ್ತು. ಬಳಿಕ ಮಣ್ಣು ಕುಸಿಯದಂತೆ ಕಾಂಕ್ರೀಟ್ ತಡೆಗೋಡೆಯನ್ನು ನಿರ್ಮಿಸಲಾಗಿತ್ತು. ಆದರೆ

ಹೆಜಮಾಡಿಯಲ್ಲಿ ವನಮಹೋತ್ಸವ ಕಾರ್ಯಕ್ರಮ

ಪರಿಸರವನ್ನು ಸಂರಕ್ಷಿಸುವ ಗುರುತರವಾದ ಜವಾಬ್ದಾರಿ ನಮ್ಮ ಮೇಲಿದ್ದು, ಗಿಡಗಳನ್ನು ನೆಟ್ಟು ಅದನ್ನು ಪೋಷಿಸುವ ಮೂಲಕ ಪರಿಸವನ್ನು ಉಳಿಸಬೇಕಾಗಿದೆ ಎಂಬುದಾಗ ಪಡುಬಿದ್ರಿ ಎಸ್ಸೈ ಪ್ರಸನ್ನ ಎಂ.ಎಸ್. ಹೇಳಿದ್ದಾರೆ. ಅವರು ಪಡುಬಿದ್ರಿ ಪೊಲೀಸ್ ಠಾಣೆ ಹಾಗೂ ಪಡುಬಿದ್ರಿ ರೋಟರಿ ಕ್ಲಬ್ ಜಂಟಿಯಾಗಿ ಹೆಜಮಾಡಿ ಟೋಲ್ ಗೇಟ್ ಬಳಿ ಆಯೋಜಿಸಿದ ವನಮಹೋತ್ಸವ ಕಾರ್ಯಕ್ರಮದಲ್ಲಿ ಗಿಡ ನೆಟ್ಟು ಮಾತನಾಡಿ, ಮರಗಿಡಗಳ ಮಹತ್ವ ಮಹಾಮಾರಿ ಕೋವಿಡ್ ಸಂದರ್ಭ ನಾವೆಲ್ಲಾ ಅರಿತುಕೊಂಡಿದ್ದೇವೆ.

ಬಂಟ್ಚಾಳ : ರಸ್ತೆಗೆ ಉರುಳಿದ ಬೃಹತ್ ಗಾತ್ರದ ಬಂಡೆಕಲ್ಲು

ಬಂಟ್ಚಾಳ: ಭಾರಿ ಮಳೆಗೆ ಅಮ್ಟಾಡಿ ಗ್ರಾಮದ ಮಹಲ್ ತೋಟ ರಸ್ತೆ ಬಳಿ ಬೃಹತ್ ಗಾತ್ರದ ಬಂಡೆ ಕಲ್ಲೊಂದು ರಸ್ತೆಗೆ ಉರುಳಿ ಬಿದ್ದಿದೆ. ಲೊರಟ್ಟೊ ಪದವಿನಿಂದ ಮಹಲ್ ತೋಟ ಸಂಪರ್ಕಿಸುವ ರಸ್ತೆ ಇದಾಗಿದ್ದು ಬೆಳಿಗ್ಗೆ 8.30ರ ವೇಳೆಗೆ ಈ ಘಟನೆ ನಡೆದಿದೆ. ಪ್ರತಿದಿನ ಈ ರಸ್ತೆಯ ಮೂಲಕ ಶಾಲಾ ವಿದ್ಯಾರ್ಥಿಗಳು ತೆರಳುತ್ತಿದ್ದು ಶಾಲೆಗೆ ರಜೆ ಇದ್ದುದರಿಂದ ದೊಡ್ಡ ಅನಾಹುತವೊಂದು ತಪ್ಪಿದಂತಾಗಿದೆ. ಅಮ್ಟಾಡಿ ಪಂಚಾಯತಿ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಕಲ್ಲು ತೆರವು ಕಾರ್ಯ ಕೈ

ಬೈಂದೂರು :ನೆರೆ ಪೀಡಿತ ಪ್ರದೇಶಗಳಿಗೆ ಶಾಸಕ ಗುರುರಾಜ್ ಗಂಟಿಹೊಳೆ ಭೇಟಿ

ಕರಾವಳಿ ಭಾಗದಲ್ಲಿ ನಿರಂತರ ಮಳೆ ಸುರಿಯುತ್ತಿದ್ದು. ರೆಡ್ ಅಲರ್ಟ್ ಘೋಷಣೆ ಮಾಡಿದ್ದಾರೆ. ಬೈಂದೂರು ಭಾಗದಲ್ಲಿ ತಗ್ಗು ಪ್ರದೇಶಗಳು ಜಲಾವೃತಗೊಂಡಿದ್ದು, ಶಾಸಕ ಗುರುರಾಜ್ ಗಂಟಿಹೊಳೆ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸೌಪರ್ಣಿಕಾ ನದಿ ನೀರಿನ ಮಟ್ಟ ಹೆಚ್ಚಾಗಿದ್ದು, ನದಿಯ ಅಕ್ಕ ಪಕ್ಕ ಪ್ರದೇಶಗಳಾದ ನಾವುಂದ, ಸಾಲ್ಬುಡ, ಬಡಾಕೆರೆ, ನಾಡ, ಕಡ್ಕೆ, ಮರವಂತೆ, ಪಡುಕೋಣೆ, ಪ್ರದೇಶಗಳಿಗೆ ಭೇಟಿ ನೀಡಿ ನೆರೆಯಿಂದ ಆಗುವ ಸಮಸ್ಯೆಗಳ ಬಗ್ಗೆ ಸ್ಥಳೀಯ ಹಾಗೂ ಪಂಚಾಯತ್

ಉಪ್ಪಳ : ಟೀಮ್ ಮಂಜುಶ್ರೀ ತುಳುನಾಡ್ ಸಂಸ್ಥೆಯಿಂದ ಆಹಾರ ಸಾಮಾಗ್ರಿ ವಿತರಣೆ

ಮಂಜೇಶ್ವರ : ಟೀಮ್ ಮಂಜುಶ್ರೀ ತುಳುನಾಡ್ ಸಂಸ್ಥೆಯ ಬಡವು ಯೋಜನೆಯ 57ನೇ ಸೇವಾ ಕಾರ್ಯದ ವತಿಯಿಂದ ಉಪ್ಪಳ ಸಮೀಪದ ಪೈವಳಿಕೆ ಲಾಲ್ಬಾಗ್ ಬೋಳಂಗಳ ನಿವಾಸಿ ಕಲ್ಯಾಣಿ ಕೃಷ್ಣ ದಂಪತಿಗಳ ಕುಟುಂಬಕ್ಕೆ ದಿನಸಿ ಸಾಮಾಗ್ರಿಗಳನ್ನು ಹಸ್ತಾಂತರಿಸಲಾಯಿತು. ಕಲ್ಯಾಣಿ ಕೃಷ್ಣ ದಂಪತಿಗಳ ಮನೆಯು ಶೋಚನಿಯಾವಸ್ಥೆಯಲ್ಲಿದ್ದು, ಅಲ್ಲದೇ ಮುಪ್ಪಿನ ಕಾಲದಲ್ಲಿ ದುಡಿದು ಸಾಕಾಬೇಕಾದ ಮಕ್ಕಳ ಅನಾರೋಗ್ಯ ಇನ್ನೊಂದು ಕಡೆ. ಈ ಪರಿಸ್ಥಿತಿಯಲ್ಲಿ ಕಲ್ಯಾಣಿಯವರಿಗೆ ದಿಕ್ಕು ತೋಚದ ಪರಿಸ್ಥಿತಿ ಮೂರು

ರಾಜ್ಯದಲ್ಲಿ ಮುಂದುವರೆದ ಮಳೆ – ಮುನ್ನೆಚ್ಚರಿಕೆಯಿಂದ ಇರುವಂತೆ ಸಿಎಂ ಸಿದ್ದರಾಮಯ್ಯ ಟ್ವೀಟ್

ರಾಜ್ಯದಲ್ಲಿ ವರುಣಾರ್ಭಟ ಮುಂದುವರೆದಿದ್ದು, ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಭಾರಿ ಮಳೆಯ ಕಾರಣದಿಂದಾಗಿ ಹಠಾತ್ ಪ್ರವಾಹ ಸಂಭವಿಸಬಹುದೆಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಟ್ವೀಟರ್ ನಲ್ಲಿ ಮಾಹಿತಿ ನೀಡಿರುವ ಸಿಎಂ ಸಿದ್ದರಾಮಯ್ಯ, ರಾಜ್ಯದ ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಭಾರಿ ಮಳೆಯ ಕಾರಣದಿಂದಾಗಿ ಹಠಾತ್ ಪ್ರವಾಹ ಸಂಭವಿಸಬಹುದೆಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ ಎಂದಿದ್ದಾರೆ.

ಪ್ರವೀಣ್ ನೆಟ್ಟಾರು ಹತ್ಯೆಯಾಗಿ ಒಂದು ವರ್ಷದ ಹಿನ್ನಲೆ ಸ್ಮೃತಿ ದಿನ ಹಾಗೂ ರಕ್ತದಾನ ಶಿಬಿರ

ಭಾರತೀಯ ಜನತಾ ಪಾರ್ಟಿ ಸುಳ್ಯ ಮಂಡಲ ಹಾಗೂ ಬಿಜೆಪಿ ಯುವ ಮೋರ್ಚಾ ಸುಳ್ಯ ಮಂಡಲ ವತಿಯಿಂದ ದುಷ್ಕರ್ಮಿಗಳಿಂದ ಹತ್ಯೆಗೀಡಾದ ದಿವಂಗತ ಪ್ರವೀಣ್ ನೆಟ್ಟಾರ್ ಅವರ ಸ್ಮೃತಿ ದಿನ ಹಾಗೂ ರಕ್ತದಾನ ಶಿಬಿರ ನಡೆಯಿತು. ರಕ್ತದಾನ ಶಿಬಿರವನ್ನು ಸುಳ್ಯದ ಶಾಸಕಿ ಭಾಗೀರಥಿ ಮುರುಳ್ಯ ಉದ್ಘಾಟಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಜಿಲ್ಲಾ ಉಪಾಧ್ಯಕ್ಷರಾದ ರಾಧಾಕೃಷ್ಣ ರೈ, ಬೂಡಿಯಾರು, ಸುಳ್ಯ ಮಂಡಲದ ಅಧ್ಯಕ್ಷರಾದ ಹರೀಶ್ ಕಂಜಿಪಿಲಿ, ಗುರುದತ್ ನಾಯಕ್, ಕೃಷ್ಣ, ರಾಕೇಶ್ ರೈ ಕೆಡೆಂಜಿ

ಪುತ್ತೂರು ಗ್ರಾ.ಪಂ ಉಪ ಚುನಾವಣೆ ಫಲಿತಾಂಶ ಪ್ರಕಟ – ಪುತ್ತಿಲ ಪರಿವಾರ ಜಯಭೇರಿ

ಪುತ್ತೂರು ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಎರಡು ಗ್ರಾ ಪಂ ವಾರ್ಡ್‍ಗಳಿಗೆ ನಡೆದ ಉಪ ಚುನಾವಣೆಯ ಮತ ಎಣಿಕೆ ಪ್ರಗತಿಯಲ್ಲಿದ್ದು ಒಂದು ಕ್ಷೇತ್ರದ ಫಲಿತಾಂಶ ಪ್ರಕಟವಾಗಿದೆ. ಆರ್ಯಾಪು ಕ್ಷೇತ್ರದಲ್ಲಿ ಪುತ್ತಿಲ ಪರಿವಾರದಿಂದ ಕಣಕ್ಕಿಳಿದಿದ್ದ ಸುಬ್ರಹ್ಮಣ್ಯ ಬಲ್ಯಾಯ ಅವರು ವಿಜಯಿಯಾಗಿದ್ದಾರೆ. ಬಲ್ಯಾಯ ಅವರು ತಮ್ಮ ಹತ್ತಿರದ ಪ್ರತಿಸ್ಪರ್ಧಿ ಕಾಂಗ್ರೆಸ್ ಬೆಂಬಲಿತ ಪುರುಷೋತ್ತಮ ಪ್ರಭು ಅವರನ್ನು ಸೋಲಿಸಿದ್ದಾರೆ. ಬಿಜೆಪಿ ಬೆಂಬಲಿತ ಅಭ್ಯರ್ಥಿ ರುಕ್ಮಾ ನಾಯ್ಕ

ಚಾರ್ಮಾಡಿ ಘಾಟಿ : ಜಲಪಾತ ವೀಕ್ಷಿಸುತ್ತಿರುವ ಮಂದಿ, ವಾಹನ ಸಂಚಾರಕ್ಕೆ ತೊಡಕು

ಚಾರ್ಮಾಡಿ ಘಾಟಿ ಪರಿಸರದಲ್ಲಿ ಕಳೆದ ಎರಡು ದಿನಗಳಿಂದ ಹಗಲಲ್ಲೂ ದಟ್ಟ ಮಂಜಿನ ವಾತಾವರಣ ಕಂಡುಬರುತ್ತಿದ್ದು, ವಾಹನ ಸವಾರರು ಪರದಾಟ ನಡೆಸುತ್ತಾ ಚಾಲನೆ ಮಾಡಬೇಕಾದ ಪರಿಸ್ಥಿತಿ ಇದೆ. ಕಳೆದ ಕೆಲವು ದಿನಗಳಿಂದ ನಿರಂತರ ಮಳೆ ಸುರಿದಿದ್ದು, ಪ್ರಸ್ತುತ ಬಿಟ್ಟು ಬಿಟ್ಟು ಮಳೆಯಾಗುತ್ತಿದೆ. ಈ ಸಮಯ ಘಾಟಿಯಲ್ಲಿ ದಟ್ಟವಾದ ಮಂಜಿನ ವಾತಾವರಣ ಏರ್ಪಟ್ಟು ವಾಹನಗಳ ಹೆಡ್ಲೈಟ್ ಹಾಕಿದರೂ ದಾರಿ ಕಾಣದ ಸ್ಥಿತಿ ಉಂಟಾಗುತ್ತಿದೆ. ಸಂಜೆಯಾಗುತ್ತಿದ್ದಂತೆ ಇನ್ನಷ್ಟು ದಟ್ಟ ಮಂಜಿನಿಂದ ದಾರಿ

ಬೆಳ್ಳಾರೆ ಗೃಹ ರಕ್ಷಕ ಘಟಕದ ಹಿರಿಯ ಗೃಹ ರಕ್ಷಕ ಹೂವಪ್ಪ ವಿಧಿವಶ

ಬೆಳ್ಳಾರೆ ಗೃಹ ರಕ್ಷಕ ಘಟಕದ ಹಿರಿಯ ಗೃಹ ರಕ್ಷಕ ಕೇನ್ಯ ಗ್ರಾಮದ ಕಣ್ಕಲ್ ಹೂವಪ್ಪರು ಜು. 25ರಂದು ನರ ಸಂಬಂಧಿ ಕಾಯಿಲೆಯಿಂದ ಪುತ್ತೂರಿನ ಸರಕಾರಿ ಆಸ್ಪತ್ರೆಯಲ್ಲಿ ನಿಧನರಾದರು. ಇವರಿಗೆ ಅಂದಾಜು 55 ವರ್ಷ ವಯಸ್ಸಾಗಿತ್ತು. ಮುಖ್ಯ ಮಂತ್ರಿ ಚಿನ್ನದ ಪದಕಕ್ಕೆ ಭಾಜನರಾಗಿದ್ದ ಹೂವಪ್ಪರ ನಿಧನಕ್ಕೆ ದ.ಕ ಜಿಲ್ಲಾ ಗೃಹ ರಕ್ಷಕ ದಳದ ಸಮಾದೇಷ್ಟರಾದ ಡಾ ಮುರಲಿ ಮೋಹನ್ ಚೂಂತಾರು ಸಂತಾಪ ವ್ಯಕ್ತಪಡಿಸಿಹೂವಪ್ಪರು ನಿಷ್ಠಾವಂತ, ಪ್ರಾಮಾಣಿಕ ಮತ್ತು ಮಾದರಿ ಗೃಹರಕ್ಷಕರಾಗಿದ್ದರೆಂದು