Home Posts tagged V4News (Page 413)

ಆಟೋ ರಿಕ್ಷಾ ಚಾಲಕರ ಕಲ್ಯಾಣ ಮಂಡಳಿ ರಚಿಸಿ, 1000 ಕೋಟಿ ಹಣ ಮೀಸಲಿಡಬೇಕು – ಸಂತೋಷ್ ಕುಮಾರ್

ಪ್ರತಿಯೊಬ್ಬರ ಬದುಕಿನಲ್ಲಿ ಅಪದ್ಭಾಂಧವರಾಗಿ ಬರುವ ಆಟೋರಿಕ್ಷಾ ಚಾಲಕರು ತಮ್ಮ ಜೀವನದ ಬಹುಪಾಲು ಸಮಯವನ್ನು ಜನರ ಸೇವೆಗಾಗಿ ಮೀಸಲಿಟ್ಟು, ಅಂತಿಮವಾಗಿ ಹಿಂತಿರುಗಿ ನೋಡಿದಾಗ ಅವರ ಶ್ರಮಕ್ಕೆ ಯಾವುದೇ ಪ್ರತಿಫಲವಿಲ್ಲವಾಗಿದೆ.ವರ್ಷಕ್ಕೆ ಸುಮಾರು 3000 ಕೋಟಿಯಷ್ಟು ಹಣ ಸರಕಾರದ ಬೊಕ್ಕಸಕ್ಕೆ ಪ್ರತ್ಯಕ್ಷವಾಗಿ ಪರೋಕ್ಷವಾಗಿ ಆಟೋರಿಕ್ಷಾ ಚಾಲಕರು ತೆರಿಗೆ ಕಟ್ಟುತಿದ್ದರೂ

ತನಿಖೆ ತಿರುಚಲು ಶೌಚಾಲಯದಲ್ಲಿ ಇಟ್ಟ ಮೊಬೈಲ್ ಗಳ ಅದಲು ಬದಲು: ಜನರ ಸಂಶಯ ನಿವಾರಿಸಿ , ಎಸ್ ಐ ಟಿ ತನಿಖೆ ನಡೆಸಿ: ಡಾ.ಭರತ್ ಶೆಟ್ಟಿ ವೈ ಆಗ್ರಹ

ಶೌಚಾಲಯದಲ್ಲಿ ಮೊಬೈಲ್ ಇಟ್ಟವರನ್ನು ಪತ್ತೆ ಮಾಡುವುದನ್ನು ಬಿಟ್ಟು ಪೊಲೀಸ್ ಇಲಾಖೆ ಟ್ವೀಟ್ ಮಾಡಿದ ಬಡಪಾಯಿಯ ಮನೆಯ ಮೇಲೆ ತನಿಖೆಯ ನೆಪದಲ್ಲಿ ದಾಳಿ ಮಾಡಿರುವುದು ಅತಿರೇಕದ ವರ್ತನೆಯಾಗಿದೆ . ಕಾಂಗ್ರೆಸ್ ಸರ್ಕಾರ ಹಿಂದೂ ಸಮುದಾಯದ ಮೇಲೆ ದಾಳಿ ನಡೆಸಲು ರಾಜ್ಯದ ಪೊಲೀಸ್ ಪಡೆಯನ್ನ ಬಳಸಲು ಸಜ್ಜಾಗಿರುವಂತಿದೆ ಎಂದು ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಭರತ್ ಶೆಟ್ಟಿ ವೈ.ಟೀಕಾ ಪ್ರಹಾರ ನಡೆಸಿದ್ದಾರೆ. ಉಡುಪಿಯ ಕಾಲೇಜು ಒಂದರ ಶೌಚಾಲಯದಲ್ಲಿ ಗುಪ್ತವಾಗಿ

ಹಿರಿಯ ಫೋಟೋಗ್ರಾಫರ್ ಸುಬ್ಬು ನಿಧನ

ಮೂಡುಬಿದಿರೆ: ಕಳೆದ ಮೂರು ದಶಕಗಳಿಂದ ಮೂಡುಬಿದಿರೆಯಲ್ಲಿ ಫೊಟೊಗ್ರಾಫರ್ ಆಗಿ ಖ್ಯಾತರಾಗಿದ್ದ ಸುಬ್ಬು (55) ಅವರು ಇಂದು ಮುಂಜಾನೆ ನಿಧನರಾದರು.ಮೂಡುಬಿದಿರೆಯಲ್ಲಿ ಸುಷ್ಮಾ ಸ್ಟುಡಿಯೋ ಮೂಲಕ ಖ್ಯಾತರಾಗಿದ್ದ ಅವರು ಕೆಲ ಪತ್ರಿಕೆಗಳ ಛಾಯಾಗ್ರಾಹಕ ರಾಗಿಯೂ ಗಮನಸೆಳೆದಿದ್ದರು. ಕೆಲ ಧಾರಾವಾಹಿ, ಚಿತ್ರಗಳಲ್ಲಿ ಸಹ ಕಲಾವಿದನಾಗಿಯೂ ಬಣ್ಣ ಹಚ್ಚಿದ್ದು ಓರ್ವ ಕಲಾವಿದನಾಗಿಯೂ ಗುರುತಿಸಿಕೊಂಡಿದ್ದರು. ಸರ್ವರೊಂದಿಗೂ ಆತ್ಮೀಯ ಒಡನಾಟ ಹೊಂದಿದ್ದ ಸುಬ್ರಹ್ಮಣ್ಯ ಹೆಸರಿನ ಅವರು

ಸುಳ್ಯ ತಾಲೂಕು ಪಂಚಾಯತ್ ಕಾರ್ಯನಿರ್ವಾಕ ಅಧಿಕಾರಿ ಭವಾನಿಶಂಕರ್ ವರ್ಗಾವಣೆ

ಸುಳ್ಯ ತಾಲೂಕು ಪಂಚಾಯತ್ ಕಾರ್ಯ ನಿರ್ವಹಣಾಧಿಕಾರಿಯಾಗಿ ಎನ್.ಭವಾನಿಶಂಕರ್ ಅವರಿಗೆ ವರ್ಗಾವಣೆಗೊಂಡಿದ್ದಾರೆ. ಎಂಟು ವರ್ಷಗಳಿಂದ ಸುಳ್ಯ ತಾಲೂಕು ಪಂಚಾಯತ್ನಲ್ಲಿ ಕಾರ್ಯನಿರ್ವಹಿಸುತ್ತಿರುವ ಭವಾನಿಶಂಕರ್ ಅವರು 4 ವರ್ಷಗಳ ಕಾಲ ತಾಲೂಕು ಪಂಚಾಯತ್ ಸಹಾಯಕ ನಿರ್ದೇಶಕರಾಗಿ ಮತ್ತು 4 ವರ್ಷಗಳಿಂದ ಸುಳ್ಯ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸುಳ್ಯಕ್ಕೆ ಬಂಟ್ವಾಳ ತಾಲೂಕು ಪಂಚಾಯತ್ ಮುಖ್ಯ ಕಾರ್ಯನಿರ್ವಣಾಧಿಕಾರಿ ರಾಜಣ್ಣ

ಉಜಿರೆ ಎಸ್.ಡಿ.ಎಂ. ಕಾಲೇಜಿನ ಕಚೇರಿ ಅಧೀಕ್ಷಕರಾಗಿ ದಿವಾಕರ ಪಟವರ್ಧನ್ ನೇಮಕ

ಉಜಿರೆ, ಜು.17: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಕಚೇರಿ ಅಧೀಕ್ಷಕರಾಗಿ ದಿವಾಕರ ಪಟವರ್ಧನ್ ಮುಂಡಾಜೆ ಅವರು ಪದೋನ್ನತಿ ಹೊಂದಿದ್ದಾರೆ. ಯುವರಾಜ್ ಪೂವಣಿ ಅವರು ಹುದ್ದೆಯಿಂದ ಸೇವಾನಿವೃತ್ತಿ ಹೊಂದಿದ ಹಿನ್ನೆಲೆಯಲ್ಲಿ ಈ ನೇಮಕಾತಿ ನಡೆದಿದೆ. ಪಟವರ್ಧನ್ ಅವರು ಕಳೆದ 20 ವರ್ಷಗಳಿಂದ ಕಾಲೇಜಿನಲ್ಲಿ ಸೀನಿಯರ್ ಅಕೌಂಟ್ ಅಸಿಸ್ಟೆಂಟ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದು, ಜು.14ರಂದು ಕಚೇರಿ ಅಧೀಕ್ಷಕರಾಗಿ

ಕಿರುಚಿತ್ರ ಸ್ಪರ್ಧೆಯಲ್ಲಿ ಎಸ್ ಡಿ ಎಂ ಕಾಲೇಜಿಗೆ ದ್ವಿತೀಯ ಪ್ರಶಸ್ತಿ

ಉಜಿರೆ: ತುಮಕೂರು ವಿಶ್ವವಿದ್ಯಾಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ ಆಯೋಜಿಸಿದ ‘ಇಂಪ್ರೆಶನ್ – 2023’ ರಾಜ್ಯ ಮಟ್ಟದ ಮಾಧ್ಯಮ ಸ್ಪರ್ಧೆಯ ಕಿರುಚಿತ್ರ ವಿಭಾಗದಲ್ಲಿ ಉಜಿರೆಯ ಎಸ್ ಡಿ ಎಂ ಸ್ನಾತಕೋತ್ತರ ಕೇಂದ್ರದ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗದ ವಿದ್ಯಾರ್ಥಿಗಳು ನಿರ್ಮಿಸಿದ ಕಿರುಚಿತ್ರ ದ್ವಿತೀಯ ಸ್ಥಾನ ಪಡೆದುಕೊಂಡಿದೆ. ‘ನಾದ’ ಎಂಬ ಶೀರ್ಷಿಕೆಯಡಿ ಈ ಕಿರುಚಿತ್ರವು ಮೂಡಿಬಂದಿದೆ. ಈ ಕಿರುಚಿತ್ರವು ಕಿರಣ್

ಕುಂದಾಪುರ : ನಮ್ಮ ಭೂಮಿ ನಮ್ಮ ಹಕ್ಕು, ಕೃಷಿ ಭೂಮಿಗಾಗಿ ಹಕ್ಕೊತ್ತಾಯ

ಕುಂದಾಪುರ: ಕೊರಗರಿಗೆ ಕೃಷಿ ಭೂಮಿ ಇಲ್ಲದಿರುವುದರಿಂದ ಅವರು ಕೃಷಿಕರಾಗದೇ ಇಂದಿಗೂ ದಯನೀಯ ಸ್ಥಿತಿಯಲ್ಲಿ ಇದ್ದಾರೆ. ಹಲವು ಸರ್ಕಾರಗಳು ನಾನಾ ಯೋಜನೆಗಳನ್ನು ತಂದರೂ ಕೊರಗರಿಗೆ ಕೃಷಿ ಮಾಡಿಕೊಳ್ಳಲು ತುಂಡು ಭೂಮಿಯನ್ನೂ ಕೊಟ್ಟಿಲ್ಲ. ಕೊರಗ ಸಮುದಾಯದ ಮನವಿಗಳು ಕೇವಲ ಕುಂದು ಕೊರತೆ ಸಭೆಗೆ ಮಾತ್ರವೇ ಸೀಮಿತವಾಗಬಾರದು. ಅದು ಕಾರ್ಯರೂಪಕ್ಕೂ ಬರಬೇಕು ಎಂದು ಕೊರಗ ಅಭಿವೃದ್ಧಿ ಸಂಘಗಳ ಒಕ್ಕೂಟದ ಅಧ್ಯಕ್ಷೆ ಸುಶೀಲಾ ನಾಡ ಹೇಳಿದರು. ಕೊರಗ ಅಭಿವೃದ್ಧಿ ಸಂಘಗಳ ಒಕ್ಕೂಟ

‘ಭಿನ್ನ ಯೋಚನೆ ಸೃಜನಶೀಲತೆಗೆ ಆಧಾರ’

‘ಭಿನ್ನ ಯೋಚನೆ ಸೃಜನಶೀಲತೆಗೆ ಆಧಾರ’ ಉಜಿರೆ: ವಿಭಿನ್ನವಾಗಿ ಆಲೋಚಿಸುವ ಸಾಮರ್ಥ್ಯ ಮತ್ತು ಕೌಶಲ್ಯಪೂರ್ಣ ಅಭಿವ್ಯಕ್ತಿಯ ಮಾದರಿಗಳೊಂದಿಗೆ ಗುರುತಿಸಿಕೊಂಡಾಗ ಮಾತ್ರ ಮಾಧ್ಯಮರಂಗ ನಿರೀಕ್ಷಿಸುವ ಸೃಜನಶೀಲತೆಯನ್ನು ರೂಪಿಸಿಕೊಳ್ಳಲು ಸಾಧ್ಯ ಎಂದು ಬೆಂಗಳೂರು ಆಕಾಶವಾಣ ಯ ಹಿರಿಯ ಉದ್ಘೋಷಕಿ, ಕಂಟೆಂಟ್ ಬರಹಗಾರ್ತಿ ಬಿ.ಕೆ ಸುಮತಿ ಅಭಿಪ್ರಾಯಪಟ್ಟರು. ಉಜಿರೆಯ ಶ್ರೀ.ಧ.ಮಂ ಸ್ನಾತಕೋತ್ತರ ಕೇಂದ್ರದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗವು ರೇಡಿಯೋ ಬರಹ ಮತ್ತು

ಕೊಲ್ಲೂರು : ನೀರುಪಾಲಾದ ಯುವಕನಿಗಾಗಿ ಮುಂದುವರೆದ ಶೋಧ

ಬೈಂದೂರು ತಾಲ್ಲೂಕಿನ ಕೊಲ್ಲೂರು ಬಳಿಯ ಅರಶಿನಗುಂಡಿ ಜಲಪಾತ ವೀಕ್ಷಣೆಗೆ ಬಂದಿದ್ದ ಯುವಕ ಆಕಸ್ಮಿಕವಾಗಿ ಕಾಲುಜಾರಿ ಬಿದ್ದು ನೀರಿನಲ್ಲಿ ಕೊಚ್ಚಿ ಹೋಗಿದ್ದು, ಯುವಕನಿಗಾಗಿ ಶೋಧ ಕಾರ್ಯಾಚರಣೆ ಮುಂದುವರೆದಿದೆ. ಭದ್ರಾವತಿ ಮೂಲದ ಶರತ್ ಕುಮಾರ್ (23) ಜಲಪಾತದಲ್ಲಿ ಕೊಚ್ಚಿಹೋದ ಯುವಕ. ಬಂಡೆಯ ತುದಿಯಲ್ಲಿ ನಿಂತು ಹತ್ತಿರದಿಂದ ಜಲಪಾತ ವೀಕ್ಷಣೆ ಮಾಡುವಾಗ ಈ ದುರ್ಘಟನೆ ಸಂಭವಿಸಿದೆ. ಯುವಕನ ಪತ್ತೆಗೆ ಶೋಧ ಕಾರ್ಯಾಚರಣೆ ನಡೆಯುತ್ತಿದೆ. ಅಗ್ನಿಶಾಮಕ ದಳ, ಪೊಲೀಸ್ ಇಲಾಖೆ

ಜವಾಬ್ದಾರಿ ಮೆರೆದ ಪತ್ರಕರ್ತರು

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಕಡಬ, ಸುಬ್ರಹ್ಮಣ್ಯ ಭಾಗದಲ್ಲಿ ಅತೀ ಹೆಚ್ಚಿನ ಅನಾಹುತಗಳು ನಡೆದಿದೆ. ಮಂಜೇಶ್ವರ ಸುಬ್ರಹ್ಮಣ್ಯ ನಡುವಿನ ರಾಜ್ಯ ಹೆದ್ದಾರಿಯಲ್ಲಿ ಹಲವೆಡೆ ನದಿ ನೀರು ರಸ್ತೆಗೆ ಬಂದು ಸಂಚಾರ ಸ್ಥಗಿತಗೊಂಡಿದೆ. ಸುಬ್ರಹ್ಮಣ್ಯ ಸಮೀಪದ ಪರ್ವತಮುಖಿಯಿಂದ ಯಾವುದೇ ವಾಹನಗಳು ಮುಂದಕ್ಕೆ ಸಾಗುವಂತಿಲ್ಲ. ಕಳೆದ ಎರಡು ದಿನಗಳಿಂದ ಇದೇ ಪರಿಸ್ಥಿತಿ ಇದ್ದು ಈ ರಸ್ತೆಯಲ್ಲಿ ಸಾಗುವವರು ಬಳ್ಪ ಗ್ರಾಮದಿಂದ ಗುತ್ತಿಗಾರು ಮಾರ್ಗವಾಗಿ