ಬಂಟ್ವಾಳ: ಮಣಿಪುರದಲ್ಲಿ ನಡೆದ ಮಹಿಳೆಯರ ಮೇಲಿನ ದೌರ್ಜನ್ಯ, ಆಡಳಿತರೂಢ ಸರಕಾರದ ವೈಫಲ್ಯ ಹಾಗೂ ಮಣಿಪುರ ರಾಜ್ಯದಲ್ಲಿ ಶಾಂತಿ ಸುವ್ಯವಸ್ಥೆಯನ್ನು ಕಾಪಾಡಲು ಒತ್ತಾಯಿಸಿ, ಕೇಂದ್ರ ಸರಕಾರದ ವಿರುದ್ಧ ಮಾಜಿ ಸಚಿವ ಬಿ. ರಮಾನಾಥ ರೈಯವರ ನೇತೃತ್ವದಲ್ಲಿ ಬಂಟ್ವಾಳ ಹಾಗೂ ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ನೇತೃತ್ವದಲ್ಲಿ ಪ್ರತಿಭಟನೆ ಬಿ.ಸಿ.ರೋಡಿಲ್ಲಿ ನಡೆಯಿತು.
ಕಡಬ: ಸುಳ್ಯ ತಾಲೂಕಿನ ಹರಿಹರ ಪಲ್ಲತಡ್ಕದ ಬಳಿಯ ಗುಂಡಡ್ಕ ಸೇತುವೆ ಮುಳುಗಡೆ ಹಾಗೂ ರಸ್ತೆಗೆ ಬಂಡೆ ಬಿದ್ದು, ಬರೆ ಜರಿದು ರಸ್ತೆ ಸಂಚಾರವು ಸ್ಥಗಿತಗೊಂಡಿದೆ. ಧಾರಾಕಾರ ಮಳೆಯ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಕಡಬ ಮತ್ತು ಸುಳ್ಯ ತಾಲೂಕಿನ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ದೇವರ ಗದ್ದೆ ಎಂಬಲ್ಲಿ ರಸ್ತೆಗೆ ಮಣ್ಣು ಕುಸಿದಿದೆ, ದೇವರಗದ್ದೆ ಎಂಬಲ್ಲಿ ಬಂಡೆ ಬಿದ್ದಿದ್ದು, ವಿದ್ಯುತ್ ಕಂಬಗಳು ಮುರಿದು ಬಿದ್ದ ಘಟನೆ ನಡೆದಿದೆ. ಕಳೆದೆರಡು
ಮೂಡುಬಿದಿರೆ : ದಕ್ಷಿಣ ಕೊರಿಯಾದ ಜಿಯೋಲ್ಲಾದಲ್ಲಿ ಆಗಸ್ಟ್ 2 ರಿಂದ 12ರ ವರೆಗೆ ನಢೆಯುವ 25ನೇ ಅಂತರರಾಷ್ಟ್ರೀಯ ಸ್ಕೌಟ್ಸ್ ಮತ್ತು ಗೈಡ್ಸ್ ಜಾಂಬೂರಿಗೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ 8 ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ.ಆಳ್ವಾಸ್‌ನ 8 ಸ್ಕೌಟ್ಸ್ ಮತ್ತು ಗೈಡ್ಸ್ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯಿಂದ ಒಟ್ಟು 48 ಸ್ಕೌಟ್ಸ್ ಮತ್ತು ಗೈಡ್ಸ್ ಗಳು ಭಾಗವಹಿಸಲಿದ್ದಾರೆ. ಆಳ್ವಾಸ್ ಶಾಲೆಯ ಒಂಬತ್ತನೇ ತರಗತಿ ವಿದ್ಯಾರ್ಥಿನಿ ಅನನ್ಯ, ಹತ್ತನೇಯ ತರಗತಿ
ಕುಂದಾಪುರ: ಅರಶಿನಗುಂಡಿ ಜಲಪಾತ ವೀಕ್ಷಿಸುತ್ತಿದ್ದ ವೇಳೆ ಯುವಕನೋರ್ವ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ನೀರುಪಾಲಾದ ಬೆನ್ನಲ್ಲೇ ಜಿಲ್ಲೆಯ ಪ್ರವಾಸಿ ತಾಣಗಳಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ. ವಿಶ್ವಪ್ರಸಿದ್ದ ತ್ರಾಸಿ-ಮರವಂತೆ ಬೀಚ್ ಗೆ ಪ್ರವಾಸಿಗರು ಇಳಿಯದಂತೆ ಮುಂಜಾಗ್ರತ ಕ್ರಮವಾಗಿ ಗಂಗೊಳ್ಳಿ ಪೊಲೀಸ್ ಠಾಣಾಧಿಕಾರಿ ಹರೀಶ್ ಆರ್ ನಾಯ್ಕ್ ಮತ್ತು ಸಿಬ್ಬಂದಿಗಳು ಕೆಂಪು ಬಣ್ಣದ ರಿಬ್ಬನ್ ಹಾಗೂ ಸೂಚನಾ ಫಲಕಗಳನ್ನು ಅಳವಡಿಸಿದ್ದಾರೆ. ಅಲ್ಲದೇ ಬೀಚ್
ಸರ್ಕಾರದ ಯೋಜನೆಗಳು ಉತ್ತಮವಾಗಿದ್ದರೂ ಅದು ಕಾರ್ಯಗತವಾಗಲು ನೂರೆಂಟು ಅಡ್ಡಿ ಆತಂಕಗಳು.ಗೃಹಜ್ಯೋತಿ ಬಹಳಷ್ಟು ಕುಟುಂಬಗಳ ಮನೆಮನ ಬೆಳಗಿದೆ, ಕಾರಣ ಅದರ ಅನುಷ್ಠಾನಕ್ಕೆ ಯಾವುದೇ ಸರ್ವರ್ ಡೌನ್ ಎಂಬ ಸೈಬರ್ ಗಳ ಸ್ಲೋ ಗನ್ ಅಡ್ಡಿ ಮಾಡಿಲ್ಲ. ಇದೀಗ ಒಂದೊಂದು ಸೈಬರ್ ಶಾಪ್ ಗಳಲ್ಲಿ ಗೃಹಲಕ್ಷ್ಮೀ ಯೋಜನೆಯನ್ನು ಅನುಷ್ಠಾನಗೊಳಿಸಲು ಹತ್ತಾರು ಮಹಿಳೆಯರ ಗುಂಪು ಕಾಯುತ್ತಿರುವುದು ಕಾಣ ಬಹುದು, ಕಾರಣ ಸರ್ವರ್ ಡೌನ್….ಈ ಸರ್ವರ್ ಡೌನ್ ಎಂಬುದು ಯಾರ ಸೃಷ್ಠಿ..? ಗೃಹಜ್ಯೋತಿ
ಉಳ್ಳಾಲ : ಸ್ಟೇಟ್ ಬ್ಯಾಂಕ್ ತಲಪಾಡಿ ನಡುವೆ ಚಲಿಸುವ ಸಿಟಿ ಬಸ್ ಚಾಲಕ ಚಾಲನೆ ವೇಳೆ ಮೊಬೈಲ್ ಉಪಯೋಗಿಸುತ್ತಿರುವುದನ್ನು ಪ್ರಯಾಣಿಕರೊಬ್ಬರು ಸೆರೆಹಿಡಿದಿರುವುದು, ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ವೀಡಿಯೋ ವೈರಲ್ ಆಗುತ್ತಿದ್ದಂತೆ ಸಾರ್ವಜನಿಕ ವಲಯದಿಂದ ಚಾಲಕನ ವಿರುದ್ಧ ಕ್ರಮಕ್ಕಾಗಿ ಆಗ್ರಹ ವ್ಯಕ್ತವಾಗಿದೆ. ಖಾಸಗಿ ಬಸ್ ಚಾಲಕ ನಿರ್ಲಕ್ಷ್ಯರೀತಿಯಲ್ಲಿ ಬಸ್ ಚಲಾಯಿಸಿದ್ದಾನೆ. ನೇತ್ರಾವತಿ ಸೇತುವೆಯಿಂದ ಮೊಬೈಲ್ ನೋಡಲು ಆರಂಭಿಸಿದ ಚಾಲಕ
ಯುವಕನೊಬ್ಬ ಜಲಪಾತದ ನೀರಿಗೆ ಕಾಲುಜಾರಿ ಬಿದ್ದು ನೀರುಪಾಲಾದ ಘಟನೆ ,ಕೊಲ್ಲೂರು ಬಳಿಯಿರುವ ಅರಶಿನಗುಂಡಿ ಜಲಪಾತದಲ್ಲಿ ಸಂಭವಿಸಿದೆ. ಭದ್ರಾವತಿ ಮೂಲದ ಶರತ್ ಕುಮಾರ್ (23) ಮೃತಪಟ್ಟ ಯುವಕ. ಈ ಯುವಕ ಬೀಳುತ್ತಿರುವ ದೃಶ್ಯ ಮತ್ತೋರ್ವ ಯುವಕನ ಮೊಬೈಲ್ ನಲ್ಲಿ ಸೆರೆಯಾಗಿದೆ. ಕೊಲ್ಲೂರಿಗೆ ಕಾರಿನಲ್ಲಿ ಬಂದಿದ್ದ ಯುವಕ, ಜಲಪಾತ ವೀಕ್ಷಣೆಗೆಂದು ತೆರಳಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಬಂಡೆಕಲ್ಲೊಂದರ ಮೇಲೆ ಯುವಕ ನಿಂತಿದ್ದಾಗ ,ಅಕಸ್ಮಾತ್ತಾಗಿ ಕಾಲುಜಾರಿ ಬಿದ್ದಿದ್ದಾನೆ.
ಬಂಟ್ವಾಳ ತಾಲೂಕು ವ್ಯಾಪ್ತಿಯಲ್ಲಿ ಭಾರೀ ಮಳೆಯಾಗುತ್ತಿದ್ದು ನದಿ ತೀರದ ತಗ್ಗು ಪ್ರದೇಶಗಳು ಜಲಾವೃತಗೊಂಡಿದೆ. ಪಾಣೆಮಂಗಳೂರು ಸಮೀಪದ ಆಲಡ್ಕ ಪರಿಸರದಲ್ಲಿ ಮನೆಗೆ ನೀರು ನುಗ್ಗಿದ್ದು ಮನೆ ಮಂದಿ ಹಾಗೂ ಸೊತ್ತುಗಳನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರ ಮಾಡಲಾಗುತ್ತಿದೆ. ಪೊಲೀಸರು ಈ ಮನೆಗಳಿಗೆ ತೆರಳಿ ಸ್ಥಳಾಂತರಗೊಳ್ಳುವಂತೆ ಸೂಚಿಸಿದರು. ನದಿಯಲ್ಲಿ ನೀರಿನ ಮಟ್ಟ ಕ್ಷಣದಿಂದ ಕ್ಷಣಕ್ಕೆ ಏರಿಕೆಯಾಗುತ್ತಿದ್ದು ಜನತೆಯಲ್ಲಿ ಆತಂಕ ಮೂಡಿಸಿದೆ.
ಮೂಡುಬಿದಿರೆ: ಮಣಿಪುರದಲ್ಲಿ ನಡೆಯುತ್ತಿರುವ ಹಿಂಸಾಚಾರವನ್ನು ಖಂಡಿಸಿ ಅಲಂಗಾರು ಚಚ್ ೯ ಬಳಿ ಪ್ರತಿಭಟನೆ ನಡೆಸಿ ತಹಸೀಲ್ದಾರ್ ಮೂಲಕ ಮನವಿ ಸಲ್ಲಿಸಲಾಯಿತು. ಅಲಂಗಾರು ಚರ್ಚಿನ ಧರ್ಮಗುರು ರೇ.ಫಾ. ವಾಲ್ಟಾರ್ ಡಿಸೋಜಾ , ಸರ್ವ ಅಯೋಗದ ಸಂಚಾಲಕ ರಾಜೇಶ್ ಕಡಲಕೆರೆ , ಉಪಾಧ್ಯಕ್ಷ ಎಡ್ವಾರ್ಡ್ ಸೆರವೋ , ಕಾರ್ಯದರ್ಶಿ ಲಾರೆನ್ಸ್ , ಕಥೋಲಿಕ್ ಸಭಾ ಮುಖಂಡ ಅಲ್ವಿನ್ ಡಿಸೋಜಾ , ಜೇಸಿಂತ ಅರನ್ಹ , ಮೇಬಲ್ , ಅನಿಶ್ , ರಾಜ ಡಿಸೋಜಾ , ವಲೇರಿಯನ್ ಸಿಕ್ವೆರಾ , ಐವನ್ […]
ಕೆಥೋಲಿಕ್ ಸಭಾ ಮಂಗಳೂರು ಪ್ರದೇಶ ಮಂಗಳೂರು ಧರ್ಮಕ್ಷೇತ್ರ ವತಿಯಿಂದ ಮಣಿಪುರ ರಾಜ್ಯದಲ್ಲಿ ಭುಗಿಲೆದ್ದ ಹಿಂಸಾಚಾರ ಖಂಡಿಸಿ ಕೆಥೋಲಿಕ್ ಸಭಾ ಖಂಡನೆ ವ್ಯಕ್ತಪಡಿಸಿದರು. 124 ಚರ್ಚ್ ಗಳಲ್ಲಿಯೂ ಮೌನ ಪ್ರತಿಭಟನೆ ನಡೆಸಿದರು. ಸೈಂಟ್ ಪೌಲ್ ಚರ್ಚ್ ದೇಲಂತಬೆಟ್ಟು, ಅವರ್ ಲೇಡಿ ಆಫ್ ಫಾತಿಮಾ ಚರ್ಚ್ ಮತ್ತು ಮದರ್ ಆಫ್ ಗಾಡ್ ಚರ್ಚ್ ಮೊಗರ್ನಾಡು ಹಾಗೂ ವಿವಿಧ ಚರ್ಚ್ಗಳ ಮುಂಭಾಗದಲ್ಲಿ ಕ್ರೈಸ್ತ ಬಾಂಧವರು ಮೌನ ಪ್ರತಿಭಟನೆ ನಡೆಸಿದರು.




























