ಕಾಸರಗೋಡು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಮತ್ತು ಭಾರತ ಉದ್ಯೋಗ ಕೇಂದ್ರ ಆಶ್ರಯದಲ್ಲಿ ಮಂಜೇಶ್ವರ ಗೋವಿಂದ ಪೈ ಮೆಮೋರಿಯಲ್ ಕಾಲೇಜಿನ ಸಹಯೋಗದಲ್ಲಿ ಉದ್ಯೋಗ ಮೇಳ-2023 ನಡೆಯಿತು. ಕೇರಳದ ವಿದ್ಯಾವಂತ ಯುವಕ/ಯುವತಿಯರಿಗೆ ಸೌಕರ್ಯ ವಲಯದಲ್ಲಿ ಉದ್ಯೋಗಾವಕಾಶ ಕಲ್ಪಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರವು ರಾಜ್ಯ ಸರ್ಕಾರದ ರಾಷ್ಟ್ರೀಯ ಉದ್ಯೋಗ ಸೇವಾ ಇಲಾಖೆಯ ಮೂಲಕ ಉಚಿತ
ಬಂಟ್ವಾಳ: ಜಿಲ್ಲೆಯ ಹವಾಗುಣಕ್ಕೆ ಬೆಳೆ ಹೊಂದಿಕೆಯಾಗುವುದಿಲ್ಲ, ನೀರಾವರಿ ಸಮಸ್ಯೆ, ಅತಿವೃಷಿ, ಅನಾವೃಷಿಯಿಂದಾಗಿ ಉತ್ತಮ ಇಳುವರಿ ಪಡೆಯಲು ಸಾಧ್ಯವಿಲ್ಲ ಎನ್ನುವ ಕಾರಣಕ್ಕೆ ಸಾಕಷ್ಟು ಜಮೀನಿದ್ದರೂ ಕೂಡ ದೊಡ್ಡ ಮಟ್ಟದಲ್ಲಿ ವಿದೇಶಿ ಹಣ್ಣುಗಳನ್ನು ಬೆಳೆಯಲು ಜಿಲ್ಲೆಯ ರೈತರು ನಿರಾಸಕ್ತಿ ತೋರುತ್ತಾರೆ. ಆದರೆ ಬಂಟ್ವಾಳದ ಹೊಟೇಲ್ ಉದ್ಯಮಿಯೊಬ್ಬರು ಸುಮಾರು 2 ಎಕರೆ ಭೂ ಪ್ರದೇಶದಲ್ಲಿ ಡ್ರ್ಯಾಗನ್ ಪ್ರೂಟ್ ಬೆಳೆದು ಯಶಸ್ವಿಯಾಗುವುದರ ಜೊತೆಗೆ ಉತ್ತಮ ಆದಾಯವನ್ನು
ಮಂಗಳೂರಿನ ಕದ್ರಿ ಸಮೀಪದ ಬಟ್ಟಗುಡ್ಡೆ ಬಳಿ ಕಾರು ಅಪಘಾತ ಸಂಭವಿಸಿದ್ದು ಕಾರಿನಲ್ಲಿದ್ದ ಮೂವರು ಸಣ್ಣಪುಟ್ಟ ಗಾಯಗಳಿಂದ ಪಾರಾದ ಘಟನೆ ನಡೆದಿದೆ. ಶುಕ್ರವಾರ ಮಧ್ಯರಾತ್ರಿ ಸುಮಾರು 12.30 ರ ಸುಮಾರಿಗೆ ಈ ಅಪಘಾತ ಸಂಭವಿಸಿದ್ದು ಸರ್ಕಿಟ್ ಹೌಸ್ ಕಡೆಯಿಂದ ಬಿಜೈ ಕಡೆಗೆ ವೇಗವಾಗಿ ಸಾಗುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಡಿವೈಡರ್ ಮೇಲೇರಿ ವಿದ್ಯುತ್ ಕಂಬಕ್ಕೆ ಹೊಡೆದು ಪಕ್ಕದ ರಸ್ತೆ ಬಿದ್ದು ಅಲ್ಲಿದ್ದ ಪ್ರಪಾತದ ಸನಿಹದಲ್ಲೇ ಗಿಡ ಗಂಟಿಗಳ ಮಧ್ಯೆ
ಮಳೆಗಾಲ ಆರಂಭವಾಗುತ್ತಿದ್ದಂತೆ ನಗರದ ಬಹತೇಕ ರಸ್ತೆಗಳು ಹೊಂಡ-ಗುಂಡಿಗಳಿಂದ ಆವೃತ್ತವಾಗಿದೆ. ಇದೀಗ ಬೈಕಂಪಾಡಿ ಇಂಡಸ್ಟ್ರೀಯಲ್ ಪ್ರದೇಶಕ್ಕೆ ಹೋಗುವ ರಸ್ತೆಯ ಪರಿಸ್ಥಿತಿ ಕೂಡ ಹಾಗೆಯೇ ಇದೆ. ಹೊಂಡ-ಗುಂಡಿ ರಸ್ತೆಯಲ್ಲಿ ಮಳೆ ನೀರು ನಿಂತು ವಾಹನ ಸವಾರರಿಗೆ ಸಂಕಷ್ಟ ತಂದೊಡ್ಡಿದೆ. ಮಾತ್ರವಲ್ಲದೆ ಅಪಘಾತಗಳು ಸಂಭವಿಸುತ್ತಿದೆ. ಈ ಸಾರ್ವಜನಿಕರು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ಮನವಿಯನ್ನು ನೀಡಿದ್ರೂ ಸಹ ಯಾವುದೇ ಕ್ರಮ ತೆಗೆದುಕೊಂಡಿಲ್ಲ. ಈ ಬಗ್ಗೆ
ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೇಸ್ ಸೋಲಿನ ಪರಾಮರ್ಶೆ ಸಭೆಯಲ್ಲಿ ಎರಡು ಬಣಗಳ ಮಧ್ಯೆ ಅಸಮಾಧಾನ ಸ್ಪೋಟಗೊಂಡು, ಬಡಿದಾಟ ಮಾರಾಮಾರಿ ನಡೆದಿದೆ. ಕಡಬ ಅಂಬೇಡ್ಕರ್ ಭವನದಲ್ಲಿ ನಡೆದ ಪರಾಮರ್ಶೆ ಸಭೆಯು ಕಾಂಗ್ರೇಸ್ ಮುಖಂಡರಾದ ಜಿ.ಕೃಷ್ಣಪ್ಪ ಹಾಗೂ ನಂದಕುಮಾರ್ ಬಣದ ನಾಯಕರ ಕಾರ್ಯಕರ್ತರ ವಾಕ್ಸಮರ, ಕೈ ಕೈ ಮಿಲಾಯಿಸಿಕೊಳ್ಳವ ರಣರಂಗಕ್ಕೆ ವೇದಿಕೆಯಾಯಿತು. ರಾಜ್ಯದಲ್ಲಿ ಕಾಂಗ್ರೇಸ್ ಅಭೂತಪೂರ್ವ ಗೆಲವು ಸಾಧಿಸಿದರೂ ಸುಳ್ಯ ವಿಧಾನ ಸಭಾ ಕ್ಷೇತ್ರದಲ್ಲಿನ ಹೀನಾಯ ಸೋಲು
ಎರಡು ತಂಡಗಳ ನಡುವೆ ನಡೆದ ಹೊಡೆದಾಟದಲ್ಲಿ ಹಲವು ಮಂದಿ ಗಾಯಗೊಂಡ ಘಟನೆ ಹೆಜಮಾಡಿಯಲ್ಲಿ ನಡೆದಿದೆ. ಕ್ರಿಕೆಟ್ ಬೆಟ್ಟಿಂಗ್ ವಿಚಾರವಾಗಿ ಎರಡು ತಂಡಗಳ ಮಧ್ಯೆ ಮಾರಕಾಯುಧಗಳಿಂದ ಹೊಡೆದಾಟ ನಡೆದಿದೆ ಎನ್ನಲಾಗಿದೆ. ಕೆಲ ದಿನಗಳ ಹಿಂದೆ ಸಂದೇಶ್ ಶೆಟ್ಟಿ ಹಾಗೂ ಸೂರಜ್ ಕ್ರಿಕೆಟ್ ಬೆಟ್ಟಿಂಗ್ ವಿಚಾರದಲ್ಲಿ ಪರಸ್ಪರ ರೋಷದಿಂದ ಬೈದಾಡಿಕೊಂಡ ಆಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಸಂದೇಶ್ ಶೆಟ್ಟಿ ಮತ್ತಿತರರು ಕಾರಿನಲ್ಲಿ ಬಂದು
ಯಶಸ್ವೀ ಪ್ರದರ್ಶನಗಳನ್ನು ಕಾಣುತ್ತಿರುವ ಸರ್ಕಸ್ ಸಿನಿಮಾ ಇದೀಗ ಮತ್ತೊಂದು ಮೈಲಿಗಲ್ಲನ್ನು ಸಾಧಿಸಿದೆ. ಶಾಸಕ ವೇದವ್ಯಾಸ್ ಕಾಮತ್ ಅವರ ವತಿಯಿಂದ ವಿವಿಧ ಆಶ್ರಮದ ಮಕ್ಕಳಿಗೆ ಉಚಿತ ಪ್ರದರ್ಶನ ವ್ಯವಸ್ಥೆಯನ್ನು ಕಲ್ಪಿಸಿದ್ದು, ಎಲ್ಲಾ ಮಕ್ಕಳು ಉತ್ಸಾಹದಿಂದಲೇ ಸರ್ಕಸ್ ಸಿನಿಮಾ ವೀಕ್ಷಿಸಿದರು. ದೇಶ ವಿದೇಶ ಮತ್ತು ಕರಾವಳಿಯಲ್ಲಿ ಸರ್ಕ್‍ಸ್ ಸಿನಿಮಾ ಹೌಸ್‍ಫುಲ್ ಪ್ರದರ್ಶನಗಳನ್ನು ಕಾಣುತ್ತಿದೆ. ಸಿನಿಮಾ ಪ್ರೇಕ್ಷಕರು ಸಿನಿಮಾ ವೀಕ್ಷಿಸಿ
ಇಸ್ರೋ ಮಹತ್ತ್ವಾಕಾಂಕ್ಷೆಯ ಚಂದ್ರಯಾನ-3 ವಿಶೇಷತೆಗಳನ್ನು ನೋಡುವುದಾದರೆ, ಲ್ಯಾಂಡರ್, ರೋವರ್ ಯಂತ್ರ ಒಳಗೊಂಡಿದೆ. ಚಂದ್ರಯಾನ-3 ನೌಕೆ ನಭಕ್ಕೆ ಹೊತ್ತೊಯ್ಯುವ GSLV-MK3 ರಾಕೆಟ್, GSLV-MK3 ರಾಕೆಟ್-43.5 ಮೀಟರ್ ಎತ್ತರ, 640 ಟನ್ ತೂಕ ಹೊಂದಿದೆ. ಚಂದ್ರಯಾನ-3 ಯೋಜನೆಗೆ 630 ಕೋಟಿ ರೂ. ಆಗಿರುವ ವೆಚ್ಚ ತಗುಲಿದೆ. ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಆಗಸ್ಟ್ ಅಂತ್ಯದ ವೇಳೆಗೆ ಚಂದ್ರಯಾನ -3 ಮಿಷನ್ ಅನ್ನು ಚಂದ್ರನ ಮೇಲ್ಮೈಯಲ್ಲಿ ಮೃದುವಾಗಿ
ವಿಟ್ಲ: ಪರಿಯಲ್ತಡ್ಕ – ಸಾರಡ್ಕ ರಸ್ತೆಯ ಕೂರೇಲು ಎಂಬಲ್ಲಿ ಪಿಕಪ್ ರಸ್ತೆಯಿಂದ ಮನೆಯ ಮೇಲೆ ಬಿದ್ದಿದ್ದು, ಮನೆಯ ಒಳಗೆ ಮಹಿಳೆ ಸಿಲುಕಿ ಹಾಕಿಕೊಂಡಿದ್ದಾರೆ. ಕೂರೇಲು ಮಧ್ಯದ ಅಂಗಡಿಯ ಸಮೀಪದಲ್ಲಿ ರಸ್ತೆಯಿಂದ ಕೆಳಗಿದ್ದ ಮನೆಗೆ ಚಾಲಕ ನಿಯಂತ್ರಣ ತಪ್ಪಿದ ಪಿಕಪ್ ಬಿದ್ದು ಮನೆ ಸಂಪೂರ್ಣ ಹಾನಿಯಾಗಿದೆ. ಮನೆಯ ಒಳಗೆ ಮಹಿಳೆ ಮಲಗಿದ್ದ ಸಂದರ್ಭ ಘಟನೆಯಾಗಿದ್ದು, ಗಂಭೀರ ಪರಿಸ್ಥಿಯಲಿದ್ದಾರೆ. ವಾಹನವನ್ನು ತೆರವು ಮಾಡದೆ ಮಹಿಳೆಯನ್ನು ಹೊರಗೆ ತೆಗೆಯಲು ಸಾಧ್ಯವಿಲ್ಲದ
ಬ್ರಹ್ಮಾವರದಲ್ಲಿ ಕಳೆದ ಕೆಲವು ದಿನದಿಂದ ಸುರಿಯುತ್ತಿರುವ ಭಾರೀ ಮಳೆಗೆ ಬ್ರಹ್ಮಾವರ ರಥ ಬೀದಿಯಲ್ಲಿರುವ ಶ್ರೀ ಆಂಜನೇಯ ದೇವಸ್ಥಾನದ ಬಳಿ ಇರುವ ಮನೆಯೊಂದು ಕುಸಿದು ಬಿದ್ದಿದೆ. ಗೋಪಾಲ ಪೂಜಾರಿ ಎನ್ನುವವರ ಮನೆಯು ಮಳೆಗೆ ಕುಸಿದು ಬಿದ್ದು ಸಂಪೂರ್ಣ ಹಾನಿಯಾಗಿದೆ. ಘಟನಾ ಸ್ಥಳಕ್ಕೆ ಬ್ರಹ್ಮಾವರ ತಾಲೂಕು ತಹಶೀಲ್ದಾರ್ ರಾಜಶೇಖರ ಮೂರ್ತಿ ಕಂದಾಯ ನೀರೀಕ್ಷಕ ಲಕ್ಷ್ಮೀ ಮೀನಾರಾಯಣ ಭಟ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮನೆ ಕುಸಿತಗೊಂಡ ಸಂದರ್ಭದಲ್ಲಿ ಗೋಪಾಲ ಪೂಜಾರಿಯವರ




























