ಮೂಡುಬಿದಿರೆ : ಹಲಸು ವೈವಿಧ್ಯಮಯ ಹಣ್ಣುಗಳ ಮಹಾಮೇಳ ಸಮಿತಿವತಿಯಿಂದ ಹಿರಿಯ ಕೃಷಿ ತಜ್ಞ ಡಾ| ಎಲ್ ಸಿ ಸೋನ್ಸ್ ಸ್ಮರಣಾರ್ಥ “ಸಮೃದ್ಧಿ” ಹಲಸು ವೈವಿಧ್ಯಮಯ ಹಣ್ಣುಗಳು, ಆಹಾರೋತ್ಸವ ಹಾಗೂ ಕೃಷಿ ಪರಿಕರಗಳ ಪ್ರದರ್ಶನ ಮತ್ತು ಮಾರಾಟ ಮಹಾ ಮೇಳ ಜುಲೈ 14 ರಿಂದ 16 ರವರೆಗೆ ವಿದ್ಯಾಗಿರಿಯ ಕೆ ಅಮರನಾಥಶೆಟ್ಟಿ ಸಭಾಭವನದಲ್ಲಿ ನಡೆಯಲಿದೆ. ಆಳ್ವಾಸ್ ಶಿಕ್ಷಣ
ಮೂಡುಬಿದಿರೆ ಪುರಸಭಾ ವ್ಯಾಪ್ತಿಯ ಹೌದಾಲ್ ಸಮೀಪದ ಮರಿಯಾಡಿಯ ಯುವಕ ಪಾರಿಸ್ (20) ತನ್ನ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಟಿಪ್ಪರ್ ಚಾಲಕನಾಗಿ ದುಡಿಯುತ್ತಿದ್ದ ಪಾರಿಸ್‍ನ ಆತ್ಮಹತ್ಯೆಗೆ ಕಾರಣವೇನೆಂದು ತಿಳಿದು ಬಂದಿಲ್ಲ. ಮೂಡುಬಿದಿರೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಬಡತನ ಹಾಗೂ ಕಷ್ಟದಲ್ಲಿರುವವರಿಗೆ ನಮ್ಮಿಂದಾಗುವ ಸಹಾಯ ಮಾಡುವ ಮೂಲಕ ಮಾನವ ತತ್ವವನ್ನು ಸಹಕಾರ ಗೊಳಿಸಬೇಕು, ನೊಂದಿರುವ ವ್ಯಕ್ತಿಗೆ ಮಾಡುವ ಸೇವೆಯೇ ದೇವರಿಗೆ ನಿಜವಾಗಿ ಮಾಡುವ ಸೇವೆ, ಕುಲಾಲ ಸಮಾಜದ ಒಗ್ಗಟ್ಟಿನ ಶಕ್ತಿ ಕೇಂದ್ರವಾಗಿ ಶ್ರೀ ವೀರನಾರಾಯಣ ಕ್ಷೇತ್ರ ಭವ್ಯವಾಗಿ ನಿರ್ಮಾಣಗೊಂಡಿದೆ. ದೇವಸ್ಥಾನಗಳು ಅಂತರಂಗವನ್ನು ಗಟ್ಟಿಗೊಳಿಸುವ ಆಧ್ಯಾತ್ಮಿಕದ ಜಿಮ್ಮಾ ಸೆಂಟರ್ ಆಗಬೇಕು ಎಂದು ಕೇಮಾರು ಶ್ರೀ ಸಂದೀಪನಿ ಸಾಧನ ಆಶ್ರಮದ ಶ್ರೀ ಈಶವಿಠಲದಾಸ ಸ್ವಾಮೀಜಿ ಹೇಳಿದರು.
ಮಂಜೇಶ್ವರದ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ತ್ಯಾಜ್ಯ ನಿರ್ಮೂಲನೆಗೆ ಹಸಿರು ಕರ್ಮ ಸೇನೆಯ ಕಾರ್ಯಕರ್ತರು ಮುಂದಾಗಿದ್ದಾರೆ. ಮನೆ ಮನೆಗೆ ಭೇಟಿ ನೀಡಿ ಶುಲ್ಕವನ್ನು ಪಡೆದು, ಪ್ಲಾಸ್ಟಿಕ್ ತ್ಯಾಜ್ಯಗಳನ್ನು ಕೊಂಡೊಯ್ಯುತ್ತಿರುವುದು ಸ್ಥಳೀಯರಲ್ಲಿ ಅಲ್ಪವಾದರೂ ಸಮಾಧಾನವನ್ನು ಹುಟ್ಟಿಸಿದೆ. ಕೆಲವೊಂದು ಕುಟುಂಬಗಳು ಈಗಲೂ ಸಾರ್ವಜನಿಕ ಸ್ಥಳಗಳಲ್ಲಿ ತ್ಯಾಜ್ಯಗಳನ್ನು ಹಾಕುತ್ತಿರುವುದು ಮುಂದುವರಿದಿದೆ. ಇಂತಹ ತ್ಯಾಜ್ಯಗಳನ್ನು ಹುಡುಕಿಕೊಂಡು ಬರುತ್ತಿರುವ ಬೀದಿ ನಾಯಿಗಳು
ಪುತ್ತೂರು: ಗ್ರಾಮ ಪಂಚಾಯಿತಿ ಹಾಗೂ ನಗರ ಸಭೆಯ ನಕಲಿ ಸೀಲು ಹಾಗೂ ಸಹಿ ಬಳಸಿ ದಾಖಲೆ ಸಿದ್ಧಪಡಿಸುತ್ತಿದ್ದ ಜಾಲವನ್ನು ಸಾರ್ವಜನಿಕರ ದೂರಿನ ಮೇರೆಗೆ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಪತ್ತೆ ಹಚ್ಚಿದ್ದಾರೆ. ಕೊಡಿಪ್ಪಾಡಿ ನಿವಾಸಿ ವಿಶ್ವನಾಥ ದಂಧೆ ನಡೆಸುತ್ತಿದ್ದ ವ್ಯಕ್ತಿ. ನಗರ ಸಭೆ ನಿರಾಕ್ಷೇಪಣಾ ಪತ್ರ, ತೆರಿಗೆ ರಶೀದಿ, ಪುತ್ತೂರು ಎಲ್ಲಾ ಪಂಚಾಯಿತಿ ಕಡಬ, ಸುಳ್ಯ, ಬಂಟ್ವಾಳ ತಾಲೂಕಿನ ಕೆಲವು ಗ್ರಾಮ ಪಂಚಾಯಿತಿಗಳ ನಕಲಿ ದಾಖಲೆಗಳನ್ನು
ಕಡಬ: ಟಿ.ನರಸೀಪುರದಲ್ಲಿ ಹಿಂದೂ ಕಾರ್ಯಕರ್ತ ಯುವ ಬ್ರಿಗೇಡ್‌ನ ವೇಣುಗೋಪಾಲ್ ಹಾಗೂ ಚಿಕ್ಕೋಡಿಯಲ್ಲಿ ಜೈನ ಮುನಿಗಳ ಅವರ ಬರ್ಭರ ಹತ್ಯೆಯನ್ನು ಖಂಡಿಸಿ ಮತ್ತು ರಾಜ್ಯದಲ್ಲಿ ಹಿಂದೂ ಕಾರ್ಯಕರ್ತರಿಗೆ ರಕ್ಷಣೆ ನೀಡುವಂತೆ ಆಗ್ರಹಿಸಿ ಕಡಬ ಯುವಬ್ರಿಗೇಡ್ ವತಿಯಿಂದ ಮನವಿ ಸಲ್ಲಿಸಲಾಯಿತು. ಕಡಬ ಉಪತಹಸೀಲ್ದಾರ್ ಮನೋಹರ ಕೆ.ಟಿ ಮುಖಾಂತರ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು. ಎರಡು ಹತ್ಯೆಗಳು ಸಮಾಜದ ಸ್ವಾಸ್ಥ್ಯವನ್ನು ಕೆಡಿಸುವಂತೆ ಮಾಡಿದ್ದು ಭಯದ ವಾತಾವರಣ
ಕಿನ್ನಿಗೋಳಿ ಸಮೀಪದ ಕಿಲೆಂಜೂರು ನಿವಾಸಿ ದನಂಜಯ ದೇವಾಡಿಗ ಅವರ ಪತ್ನಿ ಮಮತ ಅವರು ಕಳೆದ ಕೆಲ ತಿಂಗಳಿಂದ ಮೈಲೋಯ್ಡ್ ಲ್ಯುಕೇಮಿಯಾ ಕಾಯಿಲೆಯಿಂದ ಬಲಳುತ್ತಿದ್ದಾರೆ. ಮುಂಬೈಯಲ್ಲಿ ಬದುಕು ಸಾಗಿಸುತ್ತಿರುವ ಇವರು ಚಿಕಿತ್ಸೆಗಾಗಿ ಹಣವಿಲ್ಲದೆ ಪರದಾಡುವಂತಾಗಿದೆ. ಮುಂಬೈಯ ಅಸ್ಪತ್ರೆಯಲ್ಲಿ ದಾಖಲಾಗಿದ್ದು ಚಿಕಿತ್ಸೆಗಾಗಿ ತನ್ನಲ್ಲಿರುವ ಸರ್ವಸ್ವವನ್ನೂ ತ್ಯಾಗ ಮಾಡಿದ್ದಾರೆ. ಇದುವರೆಗೆ ಸುಮಾರು 65 ಲಕ್ಷ ರೂಪಾಯಿ ಖರ್ಚು ಮಾಡಿದ್ದು, ದಾನಿಗಳ, ಮಹರಾಷ್ಟ್ರ ಸರಕಾರ ಅಲ್ಲದೆ
ಉಳ್ಳಾಲ: ಭಾರೀ ಸಿಡಿಲು ಮಳೆಗೆ ಅಂಗಡಿ ಸಂಪೂರ್ಣವಾಗಿ ಸುಟ್ಟುಹೋಗಿ ಲಕ್ಷಾಂತರ ನಷ್ಟ ಸಂಭವಿಸಿರುವ ಘಟನರ ರಾಣಿಪುರದಲ್ಲಿ ಸಂಭವಿಸಿದೆ.ಕಟ್ಟಡದಲ್ಲೇ ಇದ್ದ ಮನೆಗೂ ಬೆಂಕಿ ವ್ಯಾಪಿಸಿದ್ದು ಸ್ಥಳಕ್ಕೆ ತಕ್ಷಣ ಬಂದ ಅಗ್ನಿ ಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಮುನ್ನೂರು ಗ್ರಾಮದ ರಾಣಿಪುರ ಚರ್ಚ್ ಎದುರಿನ ಪೀಟರ್ ಆಫ್ರೋಸ್ ಎಂಬವರ ದಿನಸಿ ಅಂಗಡಿಗೆ ಸಿಡಿಲು ಬಡಿದು ಭಸ್ಮವಾಗಿದೆ. ಇಂದು ಮುಂಜಾನೆ ನಸುಕಿನ ವೇಳೆ ಸಿಡಿಲು ಬಡಿದು ಘಟನೆ ಸಂಭವಿಸಿದೆ. ಘಟನೆ ವೇಳೆ ಪೀಟರ್
ಪುತ್ತೂರು: ಸಾರಿಗೆ ಬಸ್ ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣದಿಂದ ಖಾಸಗಿ ವಾಹನ ಚಾಲಕ-ಮಾಲಕರಿಗೆ, ವಿದ್ಯಾರ್ಥಿಗಳಿಗೆ, ಕಾರ್ಮಿಕರಿಗೆ ಕಷ್ಟ-ನಷ್ಟ ಹಾಗೂ ಉಚಿತ ಯೋಜನೆಗಳಿಂದ ಆಹಾರ ವಸ್ತುಗಳಿಗೆ ಮತ್ತು ಇತರ ವಸ್ತುಗಳಿಗೆ ಬೆಲೆ ಏರಿಕೆಯಿಂದ ಜನ ಸಮಾನ್ಯರಿಗೆ ಉಂಟಾಗುವ ತೊಂದರೆಯನ್ನು ವಿರೋಧಿಸಿ ಕರ್ನಾಟಕ ಕಾರ್ಮಿಕ ಸಂಘಗಳ ಒಕ್ಕೂಟ ಅನುರಾಗ ವಠಾರ ಇದರ ಆಶ್ರಯದಲ್ಲಿ ಪುತ್ತೂರಿನ ಅಮರ್ ಜವಾನ್ ಜ್ಯೋತಿ ಸ್ಮಾರಕದ ಬಳಿ ಪ್ರತಿಭಟನೆ ನಡೆಸಿದರು. ಕರ್ನಾಟಕ ಕಾರ್ಮಿಕ ಸಂಘಗಳ
ಕಡಬ: ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಹಿರೇಕೋಡಿ ಗ್ರಾಮದ ನಂದಿಪರ್ವತ ಜೈನ ಕ್ಷೇತ್ರದಲ್ಲಿ ವಾಸ್ತವ್ಯವಿದ್ದ ಆಚಾರ್ಯ ಮುನಿಶ್ರೀ ಕಾಮಕುಮಾರ ನಂದಿ ಮಹಾರಾಜರನ್ನು ಹತ್ಯೆ ಮಾಡಿರುವುದು ಖಂಡನೀಯ. ಈ ಹೇಯ ಕೃತ್ಯ ಮಾಡಿದ ಹಂತಕರಿಗೆ ಕಠಿಣ ಶಿಕ್ಷೆ ನೀಡಬೇಕು ಎಂದು ವಿ.ಹಿಂ.ಪ. ಪುತ್ತೂರು ಜಿಲ್ಲಾ ಕಾರ್ಯದರ್ಶಿ ನವೀನ್ ನೆರಿಯ ಆಗ್ರಹಿಸಿದರು. ಅವರು ಕಡಬದ ಮುಖ್ಯ ರಸ್ತೆಯಲ್ಲಿ ಕಡಬ ಪ್ರಖಂಡ ವಿ.ಹಿಂ.ಪ, ಬಜರಂಗದಳ, ಮಾತೃಶಕ್ತಿ ವತಿಯಿಂದ ನಡೆದ ಪ್ರತಿಭಟನಾ ಸಭೆಯಲ್ಲಿ




























