ಸುಳ್ಯ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೃಷ್ಣಪ್ಪ.ಜಿ ಅವರ ವಿರುದ್ದ ಕೆಲಸ ಮಾಡಿದ ಆರೋಪದಲ್ಲಿ ಪಕ್ಷದಿಂದ ಉಚ್ಚಾಲಿಸಲ್ಪಟ್ಟ ಕಾಂಗ್ರೆಸ್ ಮುಖಂಡರು ಇದೀಗ ದೈವದ ಮೊರೆ ಹೋಗಿದ್ದಾರೆ. ಪ್ರಸಿದ್ದ ಕಾರಣಿಕ ಕ್ಷೇತ್ರ ಕೋಡಿಂಬಾಳ ಗ್ರಾಮದ ಮಜ್ಜಾರು ರಾಜನ್ ದೈವದ ಸಾನಿಧ್ಯಕ್ಕೆ ಭೇಟಿ ನೀಡಿದ ಕಾಂಗ್ರೆಸ್ ಮುಖಂಡರಾದ ಬಾಲಕೃಷ್ಣ ಬಳ್ಳೇರಿ, ಸುಧೀರ್ ದೇವಾಡಿಗ, ಉಷಾ
ಬೀಸಿದ ಭಾರೀ ಗಾಳಿ ಮಳೆಗೆ ಪಡುಬಿದ್ರಿ ಬೀಚ್ ಪಕ್ಕದ ಕಾಡಿಪಟ್ಣ ಶಂಕರ ಎಮ್.ಅಮೀನ್ ಮನೆ ಬಳಿ ಸುಮಾರು 50 ಮೀ. ಭಾಗದಲ್ಲಿ ಕಡಲ್ಕೊರೆತವುಂಟಾಗಿದ್ದು, ಸೊತ್ತು ಇನ್ನಷ್ಟು ಕಡಲು ಪಾಲಾಗುವ ಸಾಧ್ಯತೆ ಇದೆ. ಕಡಲಿ ತಡಿಗೆ ಅಪ್ಪಳಿಸುತ್ತಿರುವ ಅಬ್ಬರದ ತೆರೆಗಳಿಗೆ ಈಗಾಗಲೇ 4 ತೆಂಗಿನ ಮರಗಳು, ಪಡುಬಿದ್ರಿ ಬೀಚ್ ಅಭಿವೃದ್ಧಿ ಕಾಮಗಾರಿಯ ಭಾಗವಾಗಿರುವ ಒಂದು ಬೃಹತ್ ವಿದ್ಯುತ್ ಕಂಬವು ನೆಲಕಚ್ಚಿದೆ. ಇಲ್ಲಿನ ಅಭಿವೃದ್ಧಿ ಕಾಮಗಾರಿಯ ವೇಳೆ ಹಾಸಲಾಗಿದ್ದ ಹಾಲೋ ಬ್ಲಾಕ್ಸ್ ಅಂಗಳದ
ಪುರಸಭಾ ವ್ಯಾಪ್ತಿಯ ತೆಂಕಪೇಟೆಯಲ್ಲಿ ಮನೆಯೊಂದು ಕುಸಿದು ಬಿದ್ದು ಲಕ್ಷಾಂತರ ರೂಪಾಯಿ ನಷ್ಟ ಉಂಟಾಗಿದೆ. ಕಾಪು ತೆಂಕಪೇಟೆ ನಿವಾಸಿ ವಿಜಯಲಕ್ಷ್ಮಿ ಕಾಮತ್ ಅವರಿಗೆ ಸೇರಿದ ಹಳೆ ಹೆಂಚಿನಮನೆ ಭಾರೀ ಮಳೆಗೆ ಸಂಪೂರ್ಣ ಕುಸಿದು ಬಿದ್ದಿದೆ. ಮನೆಯಲ್ಲಿ ಯಾರೂ ವಾಸಿಸುತ್ತಿಲ್ಲವಾಗಿದ್ದು ಇದರಿಂದಾಗಿ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ .
ದಾರಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯೋರ್ವ ಆಕಸ್ಮಿಕವಾಗಿ ಕಾಲು ಜಾರಿ ತೋಡಿಗೆ ಬಿದ್ದು ಮೃತಪಟ್ಟ ಘಟನೆ ಉಡುಪಿ ಜಿಲ್ಲೆಯ ಬೀಡಿನಗುಡ್ಡೆಯ ನಾಗಬನದ ಬಳಿ ನಡೆದಿದೆ. ಮೃತ ವ್ಯಕ್ತಿಯನ್ನು ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ 38 ವರ್ಷದ ಸೋಮಪ್ಪ ರಾಠೋಡ್ ಎಂದು ಗುರುತಿಸಲಾಗಿದೆ. ಇಂದು ಬೆಳಿಗ್ಗೆ ಸ್ಥಳೀಯರು ಮೃತದೇಹವನ್ನು ತೋಡಿನಿಂದ ಮೇಲಕೆತ್ತಿದರು. ಸಮಾಜ ಸೇವಕ ನಿತ್ಯಾನಂದ ಒಳಕಾಡು ಅವರು ಮೃತದೇಹವನ್ನು ಜಿಲ್ಲಾಸ್ಪತ್ರೆಗೆ ಸಾಗಿಸಲು ನೆರವಾದರು. ಈ
ಜು.04 : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅತಿಹೆಚ್ಚು ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಜು.4ರ ಮಂಗಳವಾರ ಮಂಗಳೂರು, ಮೂಲ್ಕಿ, ಉಲ್ಲಾಳ, ಮೂಡಬಿದರೆ ಹಾಗೂ ಬಂಟ್ವಾಳ ತಾಲೂಕುಗಳ ಶಾಲೆಗಳು ಹಾಗೂ ಕಾಲೇಜುಗಳಿಗೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರು ರಜೆ ಘೋಷಿಸಿದ್ದಾರೆ.
ದ.ಕ.ಜಿಲ್ಲೆಯಲ್ಲಿ ಸುರಿಯುತ್ತಿರುವ ಸತತ ಮಳೆಯ ಹಿನ್ನೆಲೆಯಲ್ಲಿ ಶಾಲಾ ಕಾಲೇಜುಗಳಿಗೆ ರಜೆಗಳನ್ನು ಘೋಷಿಸುವ ಅಧಿಕಾರವನ್ನು ಆಯಾ ತಾಲೂಕಿನ ತಹಶೀಲ್ದಾರರಿಗೆ ನೀಡಲಾಗಿದೆ ಎಂದು ದ.ಕ. ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಹೇಳಿದ್ದಾರೆ. ಆಯಾ ಕ್ಷೇತ್ರದ ಶಿಕ್ಷಣಾಧಿಕಾರಿಗಳು, ಶಾಲಾ ಮುಖ್ಯ ಶಿಕ್ಷಕರು, ಕಾಲೇಜಿನ ಪ್ರಾಂಶುಪಾಲರಿಂದ ವರದಿ ತಯಾರಿಸಿ ತಹಶೀಲ್ದಾರರಿಗೆ ಸಲ್ಲಿಸಬೇಕು. ತಹಶೀಲ್ದಾರರು ಪ್ರತಿದಿನ ಬೆಳಗ್ಗೆ 6ಕ್ಕೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಜೊತೆ ವೀಡಿಯೋ
ಉಜಿರೆ ಎಸ್ ಡಿ ಎಂ ಕಾಲೇಜು ಪತ್ರಿಕೋದ್ಯಮ ವಿಭಾಗ ಮುಖ್ಯಸ್ಥ ಡಾ. ಭಾಸ್ಕರ ಹೆಗಡೆ ಅವರ ಪತ್ನಿ ಸುವರ್ಣ(49) ನಿಧನರಾಗಿದ್ದಾರೆ.ಸುವರ್ಣ ಅವರಿಗೆ ಮನೆಯಲ್ಲಿ ಹೃದಯಾಘಾತವಾಗಿದೆ. ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಅಷ್ಟರಲ್ಲಿ ಅವರು ಸಾವನ್ನಪ್ಪಿದ್ದಾರೆ. ಸುವರ್ಣ ಅವರು ಪತಿ ಭಾಸ್ಕರ್ ಹೆಗಡೆ, ಪುತ್ರ ಶಶಾಂಕ್ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ
ಕರಾವಳಿಯಲ್ಲಿ ನಿನ್ನೆ ಸಂಜೆಯಿಂದ ಮಳೆ ಬಿರುಸುಗೊಂಡಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೆಲವೆಡೆ ಹಾನಿ ಸಂಭವಿಸಿದೆ. ಮಂಗಳೂರಿನ ಕೊಡಿಯಾಲ್ ಬೈಲ್‍ನ ಬಿಷಪ್ ಕಂಪೌಂಡ್‍ನ ಮೇಲ್ಬಾಗದ ಗುಡ್ಡ ಕುಸಿದು ಬಿದ್ದಿದೆ.ಗುಡ್ಡ ಕುಸಿತದ ಮೇಲ್ಭಾಗದಲ್ಲಿ ಕೋರ್ಟ್ ಆವರಣ ಮತ್ತು ರಸ್ತೆ ಇದ್ದು ವಾಹನಗಳು ನಿತ್ಯ ಈ ಮಾರ್ಗದಲ್ಲಿ ಸಂಚರಿಸುತ್ತಿವೆ. ಇದೀಗ ಈ ಭಾಗದಲ್ಲಿ ಭೂ ಕುಸಿತದ ಪರಿಣಾಮ ವಾಹನ ಸಂಚಾರಕ್ಕೆ ಅಲ್ಪ ಪ್ರಮಾಣದಲ್ಲಿ ತೊಂದರೆ ಆಗಿದೆ.
ಉಡುಪಿ : ಶ್ರೀ ವಿಶ್ವಕರ್ಮ ಜಗದ್ಗುರು ಪೀಠ ಹಾಸನ ಅರೆಮಾದನಹಳ್ಳಿ ವಿಶ್ವಬ್ರಾಹ್ಮಣ ಮಹಾಸಂಸ್ಥಾನದ ಪರಮಪೂಜ್ಯ ಅನಂತಶ್ರೀ ವಿಭೂಷಿತ ಶಿವಸುಜ್ಞಾನ ತೀರ್ಥ ಮಹಾಸ್ವಾಮೀಜಿ ಅವರು ನಾಲ್ಕೂರು ಕಜ್ಕೆಯ ಶಾಖಾ ಮಠದಲ್ಲಿ ಜುಲೈ 3ರಿಂದ ಸೆಪ್ಟಂಬರ್ 29ರ ತನಕ 41ನೇ ಚಾತುರ್ಮಾಸ್ಯ ವೃತಾನುಷ್ಠಾನದ ಅಂಗವಾಗಿ ಪುರಪ್ರವೇಶ ಕಾರ್ಯಕ್ರಮ ನಡೆಯಿತು. ಹೆಬ್ರಿ ಶ್ರೀ ವಿಶ್ವಕರ್ಮ ಸಮುದಾಯ ಭವನದಿಂದ ಹೊರಟು ಸಂತೆಕಟ್ಟೆ, ಕೆಂಜೂರು ಮೂಲಕ ಪುರಪ್ರವೇಶ ಮಾಡಿದರು. ಮಹಿಳಾ ಸಂಘದವರಿಂದ
ಸಿಮ್ರಾನ್ ಇನ್ಸ್ಟಿಟ್ಯೂಟ್ ಇತ್ತೀಚೆಗೆ 2022-23 ಬ್ಯಾಚಿನ ಪದವಿ ಸಮಾರಂಭವು ನೆರವೇರಿಸಲ್ಪಟ್ಟಿತು. ಕಾರ್ಯಕ್ರಮದ ನಿರೂಪಕ ಐಕ್ಬಾಲ್ ಬಾಳಿಲ ಅವರ ಸ್ವಾಗತದೊಂದಿಗೆ ಸಮಾರಂಭವು ಪ್ರಾರಂಭವಾಯಿತು. ಮುಖ್ಯ ಅತಿಥಿಯಾಗಿ ಮಹಮ್ಮದ್ ನಾಗಮಾನ್ ಲತೀಫ್, ಗೌರವ ಅತಿಥಿಗಳಾಗಿ ವಕೀಲ ಮೋಹನ್ ದಾಸ್ ರೈ ಕೆ. ಗೌರವಾನ್ವಿತ ನ್ಯಾಯವಾದಿ ಮೋಹನ್‌ದಾಸ್, ಅರೆನಾ ಆನಿಮೇಷನ್‌ನ ಕೇಂದ್ರದ ಮುಖ್ಯಸ್ಥೆ ಸಿಲ್ವಿಯಾ ಡೆಸಾ, ಪ್ರಾಂಶುಪಾಲರಾದ ಸಜೀಲಾ ಕೋಲಾ ಉಪಸ್ಥಿತರಿದ್ದರು . ಸಿಮ್ರಾನ್ ಸಂಸ್ಥೆಯ




























