Home Posts tagged V4News (Page 440)

ತಲಪಾಡಿ: ಲಾರಿಗಳ ನಡುವೆ ಸಿಲುಕಿ ಚಾಲಕ ಮೃತ್ಯು

ಉಳ್ಳಾಲ: ಎರಡು ಕಂಟೈನರ್ ಲಾರಿಗಳ ನಡುವೆ ಸಿಲುಕಿ ಲಾರಿ ಚಾಲಕ ದಾರುಣವಾಗಿ ಸಾವನ್ನಪ್ಪಿರುವ ಘಟನೆ ರಾ,.ಹೆ.66ರ ತಲಪಾಡಿ ಟೋಲ್ ಗೇಟ್ ಸಮೀಪ ನಿನ್ನೆ ತಡರಾತ್ರಿ ವೇಳೆ ಸಂಭವಿಸಿದೆ. ಹರ್ಯಾಣ ಮೂಲದ ಶಮೀಮ್ (38) ಮೃತಪಟ್ಟ ಚಾಲಕ. ಹರಿಯಾಣದಿಂದ ಕೇರಳ ಕಡೆಗೆ ಒಂದೇ ಸಂಸ್ಥೆಗೆ ಸೇರಿದ , ಸಂಬಂಧಿ ಚಾಲಕರು ಎರಡು ಕಂಟೈನರ್ ಲಾರಿಗಳಲ್ಲಿ ಕೇರಳ ಕಡೆಗೆ ಸರಕು ಸಾಗಾಟ

ಕಡಬ : ಅನಾರೋಗ್ಯದಿಂದ ಯುವಕ ನಿಧನ

ಕಡಬ: ಕುಟ್ರುಪ್ಪಾಡಿ ಗ್ರಾಮದ ಹೊಸಮಠ ಉಳಿಪು ನಿವಾಸಿ ಗಿರಿಯಪ್ಪ ಗೌಡ ಅವರ ಪುತ್ರ ಸುಮಂತ್(32ವ.)ರವರು ಅನಾರೋಗ್ಯದಿಂದ ಜೂ.22ರಂದು ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಸುಮಂತ್ ಅವರು ಕಳೆದ ಎರಡು ವರ್ಷಗಳಿಂದ ಅನಾರೋಗ್ಯಕ್ಕೆ ಒಳಗಾಗಿದ್ದರು. ಕೆಲ ದಿನಗಳಿಂದ ಅವರ ಆರೋಗ್ಯದಲ್ಲಿ ಮತ್ತಷ್ಟೂ ಏರುಪೇರಾಗಿದ್ದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದವರು ಚಿಕಿತ್ಸೆಗೆ ಸ್ಪಂದಿಸದೆ ಜೂ.22ರಂದು ರಾತ್ರಿ ನಿಧನರಾಗಿದ್ದಾರೆ.

ಕಾಸರಗೋಡು ಶಾಲೆಯಲ್ಲಿ ಕನ್ನಡಕ್ಕಾಗಿ ಹೋರಾಟ : ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಸರಗೋಡು ಸಿನೆಮಾ ನೆನಪಿಸುವ ನೈಜ ದೃಶ್ಯ

ಕನ್ನಡ ಸರಿಯಾಗಿ ಬಾರದ ಶಿಕ್ಷಕಿಯೋರ್ವರನ್ನು ಕನ್ನಡ ಮಾಧ್ಯಮ ಶಾಲೆಗೆ ನಿಯುಕ್ತಿಗೊಳಿಸಿರುವುದನ್ನು ವಿರೋಧಿಸಿ ಶಾಲಾ ವಿದ್ಯಾರ್ಥಿಗಳು ಹಾಗೂ ಪೋಷಕರು ಪ್ರತಿಭಟನೆ ನಡೆಸಿದ ಘಟನೆ ಕೇರಳ ರಾಜ್ಯದ ಕಾಸರಗೋಡು ಜಿಲ್ಲೆಯ ಅಡೂರು ಸರಕಾರಿ ಶಾಲೆಯಲ್ಲಿ ನಡೆದಿದೆ. ಇತ್ತೀಚೆಗೆ ಈ ಶಾಲೆಯ ಸಮಾಜ ವಿಜ್ಞಾನ ಶಿಕ್ಷಕರಿಗೆ ಬೇರೆ ಶಾಲೆಗೆ ವರ್ಗಾವಣೆಯಾದ ಹಿನ್ನಲೆಯಲ್ಲಿ ಕೇರಳ ಶಿಕ್ಷಣ ಇಲಾಖೆ ಆ ಜಾಗಕ್ಕೆ ಹೊಸ ಶಿಕ್ಷಕಿಯೋರ್ವರನ್ನು ನೇಮಿಸಿದೆ. ಆದರೆ ಈ ಶಿಕ್ಷಕಿಗೆ ಕನ್ನಡ ಸರಿಯಾಗಿ

ಸರ್ಕಸ್ ತುಳು ಚಿತ್ರ ಇಂದು ವಿಶ್ವದಾದ್ಯಂತ ಬಿಡುಗಡೆ – circus tulu film

ರೂಪೇಶ್ ಶೆಟ್ಟಿ ನಿರ್ದೇಶನದ ಬಹು ನಿರೀಕ್ಷಿತ “ಸರ್ಕಸ್” ತುಳು ಸಿನಿಮಾ ಭಾರತ್ ಮಾಲ್ ನ ಬಿಗ್ ಸಿನಿಮಾಸ್‍ನಲ್ಲಿ ಬಿಡುಗಡೆಗೊಂಡಿತು. ಸಿನಿಮಾ ಬಿಡುಗಡೆಗೂ ಮುನ್ನ ಅದ್ಧೂರಿ ಮೆರವಣಿಗೆ ನಡೆಯಿತು. ಕಾರ್ಯಕ್ರಮವನ್ನು ಅತಿಥಿಗಳು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಬಳಿಕ ಮಾತಾಡಿದ ಚಿತ್ರ ನಿರ್ದೇಶಕ, ನಟ ರೂಪೇಶ್ ಶೆಟ್ಟಿ ಅವರು, “ತುಳು ಸಿನಿಮಾಕ್ಕೆ ಸಣ್ಣ ಮಾರುಕಟ್ಟೆ ಇದ್ದರೂ ಇಷ್ಟು ದೊಡ್ಡ ರೀತಿಯಲ್ಲಿ ತುಳುವರು ಪೆÇ್ರೀತ್ಸಾಹ

ಉಡುಪಿ : ವಿದ್ಯಾರ್ಥಿನಿ ನಿಖಿತ ಸಾವು ಪ್ರಕರಣ : ಆಸ್ಪತ್ರೆಯ ಮುಂಭಾಗದಲ್ಲಿ ವಿದ್ಯಾರ್ಥಿಗಳಿಂದ ಪ್ರತಿಭಟನೆ

ಕಾಪು ತಾಲೂಕಿನ ಪಡುಬಿದ್ರಿ ಸಮೀಪದ ಕೆಮ್ಮುಂಡೇಲಿನ ನಿಖಿತ ಎಂಬ ವಿದ್ಯಾರ್ಥಿನಿಯ ಸಾವಿಗೆ ಉಡುಪಿಯ ಸಿಟಿ ಆಸ್ಪತ್ರೆಯ ವೈದ್ಯರೇ ಕಾರಣ ಎಂದು ಆರೋಪಿಸಿ ಎಬಿವಿಪಿ ವಿದ್ಯಾರ್ಥಿಗಳು ಆಸ್ಪತ್ರೆ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದರು. ನಿಖಿತ ವಿಪರೀತ ವಾಂತಿಯಿಂದ ಬಳಲಿ ಅಸ್ವಸ್ಥಗೊಂಡು ಉಡುಪಿಯ ಸಿಟಿ ಆಸ್ಪತ್ರೆಗೆ ದಾಖಲಾಗಿದ್ದರು. ಬಳಿಕ ಚಿಕಿತ್ಸೆಗೆ ಸ್ಪಂದಿಸದೆ ನಿಖಿತ ಮೃತ ಪಟ್ಟಿದ್ದಾರೆ. ನಿಖಿತ ಸಾವು ಪ್ರಕರಣ ವಿಚಾರವಾಗಿ ಸೂಕ್ತ ತನಿಖೆಗೆ ಆಗ್ರಹಿಸಿ ಎಬಿವಿಪಿ

ಮಗಳನ್ನು ನೋವು ನೀಡಿ ಕೊಂದರು : ಕೆಪಿಟಿ ವಿದ್ಯಾರ್ಥಿನಿ ನಿಕಿತಾ ಪೋಷಕರ ನೋವಿನ ಮಾತು

ವಾಂತಿ ಬಂದ ಹಿನ್ನೆಲೆಯಲ್ಲಿ ಉಡುಪಿ ಸಿಟಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ಕರೆದುಕೊಂಡು ಹೋದ ನಮ್ಮ ಹತ್ತೊಂಬತ್ತರ ಹರೆಯದ ಮಗಳನ್ನು ಐದು ದಿನಗಳ ಕಾಲ ನೋವು ನೀಡಿ ವೈದ್ಯರು ಕೊಂದು ತಿಂದರು ಎಂಬುದಾಗಿ ಮೃತಳ ಚಿಕ್ಕಮ್ಮ ಶೈಲಜ ನೋವಿನಿಂದ ನುಡಿದಿದ್ದಾರೆ. ಕಾಪು ತಾಲೂಕಿನ ಕೆಮ್ಮುಂಡೇಲು ಬಂಡಸಾಲೆ ನಿವಾಸಿ ಜನಾರ್ದನ ಎಂಬವರ ಪುತ್ರಿ, ಮಂಗಳೂರು ಕೆಪಿಟಿ ಸಂಸ್ಥೆಯ ಅಂತಿಮ ವರ್ಷದ ಸಿವಿಲ್ ಇಂಜಿನಿಯರಿಂಗ್ ವಿದ್ಯಾರ್ಥಿನಿ ನಿಕಿತಾ(19) ಅನುಮಾಸ್ಪದ ಸಾವಿನ ಬಗ್ಗೆ ಮೃತಳ ಪೋಷಕರು

Manjeshwara : ಮನೆಗೆ ನುಗ್ಗಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳವು

ಮಂಜೇಶ್ವರ ರಾಗಂ ಜಂಕ್ಷನ್ ಸಮೀಪದ ಕುನ್ನಿಲ್ ಜುಮಾ ಮಸೀದಿ ರಸ್ತೆ ಸಮೀಪದಲ್ಲಿ ವಾಸವಾಗಿರುವ ದಿವಂಗತ ಸಯ್ಯದ್ ಹಾದಿ ತಂಘಲ್ ರವರ ಪುತ್ರ ಹಮೀದ್ ತಂಘಲ್ ಎಂಬವರ ಮನೆಗೆ ಹಿಂಬಾಗದ ಬಾಗಿಲನ್ನು ಮುರಿದು ನುಗ್ಗಿದ ಕಳ್ಳರು ಮನೆಯೊಳಗಿನ ಕಪಾಟನ್ನು ಮುರಿದು 60 ಪವನ್ ಚಿನ್ನಾಭರಣ ಹಾಗೂ 50 ಸಾವಿರ ರೂ. ನಗದನ್ನು ಕಳವುಗೈದಿದ್ದಾರೆ.ಹಮೀದ್ ತಂಘಲ್ ರವರು ಎರಡು ದಿವಸಕ್ಕೆ ಮೊದಲು ಕುಟುಂಬ ಸಮೇತರಾಗಿ ಏರ್ವಾಡಿಗೆ ತೆರಳಿದ್ದಾರೆನ್ನಲಾಗಿದೆ. ಗುರುವಾರ ಸಂಜೆ ಮರಳಿ ಬಂದಾಗ ಮನೆಯ

ಗುರುಪುರ : ಬಸ್ ಢಿಕ್ಕಿಯಾಗಿ ಯುವಕ ಸಾವು- ಕೈಕಂಬ ಜಂಕ್ಷನ್‍ನಲ್ಲಿ ಪ್ರತಿಭಟನೆ

ಮಂಗಳೂರು: ಗುರುಪುರ ಜಂಕ್ಷನ್ ಬಳಿ ಜೂನ್ 22ರಂದು ಬಸ್ ಢಿಕ್ಕಿಯಾಗಿ ಬೈಕ್ ಸವಾರ ಮೃತಪಟ್ಟ ಘಟನೆಯನ್ನು ಖಂಡಿಸಿ ಶುಕ್ರವಾರ ಸ್ಥಳೀಯರು ಕೈಕಂಬ ಜಂಕ್ಷನ್‍ನಲ್ಲಿ ಬಸ್‍ಗಳನ್ನು ತಡೆದು ಪ್ರತಿಭಟನೆ ನಡೆಸಿದರು. ಬಸ್ ಢಿಕ್ಕಿಯಾಗಿ ಬೈಕ್ ಸವಾರ ಪೊಳಲಿ ಕರಿಯಂಗಳ ನಿವಾಸಿ ಸಂತೋಷ್ ಕುಮಾರ್ ಅವರು ಮೃತಪಟ್ಟಿದ್ದು ಈ ಘಟನೆಯನ್ನು ಖಂಡಿಸಿ ನೂರಾರು ಮಂದಿ ಪ್ರತಿಭಟನೆ ಸೇರಿ ವ್ಯವಸ್ಥೆಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನೆಯಿಂದಾಗಿ ಕೈಕಂಬ ಜಂಕ್ಷನ್

Bantwala : ನಾಗರಹಾವಿನ ಹೊಟ್ಟೆಗೆ ಸೇರಿದ್ದ ಸುಣ್ಣದ ಪ್ಲಾಸ್ಟಿಕ್ ಡಬ್ಬ – ಶಸ್ತ್ರಚಿಕಿತ್ಸೆಯ ಮೂಲಕ ಹೊರತೆಗೆದ ವೈದ್ಯರು

ನಾಗರಹಾವಿನ ಹೊಟ್ಟೆ ಸೇರಿದ್ದ ಸುಣ್ಣದ ಪ್ಲಾಸ್ಟಿಕ್ ಡಬ್ಬವನ್ನು ಶಸ್ತ್ರಚಿಕಿತ್ಸೆಯ ಮೂಲಕ ಯಶಸ್ವಿಯಾಗಿ ಹೊರತೆಗೆದು 15 ದಿನಗಳ ಆರೈಕೆಯ ಬಳಿಕ ಯಶಸ್ವಿಯಾಗಿ ಅರಣ್ಯ ಬಿಡಲಾಗಿದೆ. ಉರಗ ತಜ್ಞ ಸ್ನೇಕ್ ಕಿರಣ್ ಹಾಗೂ ಪಶುವೈದ್ಯ ಡಾ. ಯಶಸ್ವಿ ನಾರಾವಿ ಹಾಗೂ ಅರಣ್ಯ ಇಲಾಖೆಯ ಸಕಾಲಿಕ ಕಾರ್ಯಚರಣೆಯಿಂದ ಪಾಣ ಸಂಕಟದಲ್ಲಿ ನರಳುತ್ತಿದ್ದ ನಾಗರ ಹಾವು ಬದುಕುಳಿದಿದೆ. ಕಾವಳಪಡೂರು ಗ್ರಾ.ಪಂ. ವ್ಯಾಪ್ತಿಯ ವಗ್ಗದಲ್ಲಿರುವ ಸಾಲು ಮರ ತಿಮ್ಮಕ್ಕ ಉದ್ಯಾನವನ ಸಮೀಪದಲ್ಲಿರುವ

ಬ್ರಹ್ಮಾವರ : ಮಾದಕ ದ್ರವ್ಯ ವಿರೋಧಿ ಮತ್ತು ಜಾಗೃತಿ ಕಾರ್ಯಕ್ರಮ

ಬ್ರಹ್ಮಾವರ : ಉಡುಪಿ ಜಿಲ್ಲಾ ಪೊಲೀಸ್, ಬ್ರಹ್ಮಾವರ ಪೊಲೀಸ್ ಠಾಣೆಯ ಸಹಯೋಗದಲ್ಲಿ ಮಾದಕ ದ್ರವ್ಯ ವಿರೋಧಿ ಮತ್ತು ಜಾಗೃತಿ ಕಾರ್ಯಕ್ರಮ ಬ್ರಹ್ಮಾವರ ಕ್ರಾಸ್‍ಲ್ಯಾಂಡ್ ಕಾಲೇಜಿನ ಸಭಾಂಗಣದಲ್ಲಿ ಜರುಗಿತು. ಕಾರ್ಯಕ್ರಮದಲ್ಲಿ ಭಾಗವಹಿಸಿದ ಬ್ರಹ್ಮಾವರ ಪೊಲೀಸ್ ಠಾಣೆಯ ಸಬ್‍ಇನ್ಸ್‍ಪೆಕ್ಟರ್ ರಾಜಶೇಖರ ವಂದಲಿ ಮಾತನಾಡಿ, ನಾನಾ ಮಾದಕ ವಸ್ತುಗಳ ಜಾಲಕ್ಕೆ ಯುವಜನರನ್ನೆ ಟಾರ್ಗೆಟ್ ಮಾಡಲಾಗುತ್ತಿರುವ ಕಾರಣ ಯುವಸಮೂಹ ಜಾಗೃತರಾಗ ಬೇಕಾಗಿದೆ. ಮೋಜು