Home Posts tagged V4News (Page 444)

ಹಿಂದೂ ವಿರೋಧಿ ನಿಲುವುಗಳ ವಿರುದ್ಧ ಬೀದಿಗಿಳಿದು ಹೋರಾಟ :ಕಣಿಯೂರು ಶ್ರೀ ಮಹಾಬಲೇಶ್ವರ ಸ್ವಾಮೀಜಿ ಎಚ್ಚರಿಕೆ

ಪುತ್ತೂರು: ಮತಾಂತರದ ಪಿಡುಗು ಸಾಮಾನ್ಯವಾದುದಲ್ಲ. ಇದರ ವಿರುದ್ಧ ತಂದ ಕಾನೂನುಗಳನ್ನು ರದ್ದು ಮಾಡುವ ಮೂಲಕ ನಮ್ಮ ಮನೆಯಲ್ಲಿ ನಮಗೇ ಸ್ವಾತಂತ್ರ್ಯ ಇಲ್ಲದ ಸ್ಥಿತಿಯನ್ನು ರಾಜ್ಯ ಸರಕಾರ ಮಾಡುತ್ತಿದೆ. ಸಂತರಿಗೆ ಹಿಂದೂ ಎಂಬುದು ಮಾತ್ರ ಪಕ್ಷ. ಹಿಂದೂ ವಿರೋಧಿ ನಿಲುವುಗಳ ವಿರುದ್ಧ ಯಾವುದೇ ಸರಕಾರ ಕೆಲಸ ಮಾಡಿದರೂ ಬೀದಿಗಿಳಿದು ಹೋರಾಟ ಮಾಡಲು ಸಂತರೆಲ್ಲರೂ ಈಗಾಗಲೇ

ಉಡುಪಿಯ ಕೋಡಿ ಬೆಂಗ್ರೆ ಶಾಲೆಯಲ್ಲಿ ಶಿಕ್ಷಕರ ಕೊರತೆ: ಶಿಕ್ಷಕರ ಸಂಖ್ಯೆ ಹೆಚ್ಚಳ ಮಾಡುವಂತೆ ವಿದ್ಯಾರ್ಥಿಗಳ ಪ್ರತಿಭಟನೆ

ಉಡುಪಿ ಜಿಲ್ಲೆಯ ಕೋಡಿ ಬೆಂಗ್ರೆಯಲ್ಲಿರುವ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರ ಸಂಖ್ಯೆ ಹೆಚ್ಚು ಮಾಡುವಂತೆ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ. 98 ವರ್ಷ ಇತಿಹಾಸ ಇರುವ ಉಡುಪಿಯ ಕೋಡಿ ಬೆಂಗ್ರೆ ಶಾಲೆಯಲ್ಲಿ ಈಗ ಕೇವಲ ಮೂವರು ಖಾಯಂ ಶಿಕ್ಷಕರಿದ್ದು 1ರಿಂದ 7ನೇ ತರಗತಿಯವರೆಗೆ ವಿದ್ಯಾರ್ಥಿಗಳಿಗೆ ಬೋಧನೆಯನ್ನು ಮಾಡುತ್ತಿದ್ದಾರೆ. ಕಳೆದ ವರ್ಷ ಇಲ್ಲಿ ಹೆಚ್ಚುವರಿ ಶಿಕ್ಷಕರ ವರ್ಗಾವಣೆಯ ನೆಪ ಒಡ್ಡಿ ಮೂವರು ಶಿಕ್ಷಕರಲ್ಲಿ ಒಬ್ಬರನ್ನು ವರ್ಗಾವಣೆ

ಸುಳ್ಯ ಎಸ್‌ಐ ಆಗಿ ಈರಯ್ಯ ದೂಂತೂರು ಅಧಿಕಾರ ಸ್ವೀಕಾರ

ಸುಳ್ಯ: ಸುಳ್ಯ ಪೊಲೀಸ್ ಠಾಣಾ ಉಪ ನಿರೀಕ್ಷಕರಾಗಿ ಈರಯ್ಯ ದೂಂತೂರು ಅವರು ಅಧಿಕಾರ ವಹಿಸಿಕೊಂಡಿದ್ದಾರೆ. ಸೋಮವಾರ ಈರಯ್ಯ ದೂಂತೂರು ಅವರಿಗೆ ವರ್ಗಾವಣರಗೊಂಡ ಎಸ್‌ಐ ದಿಲೀಪ್ ಜಿ.ಆರ್ ಅಧಿಕಾರ ಹಸ್ತಾಂತರಿಸಿದರು. ಕಳೆದ ಎರಡು ವರ್ಷಗಳಿಂದ ಸುಳ್ಯ ಎಸ್ಐ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ದಿಲೀಪ್ ಜಿ.ಆರ್. ಅವರಿಗೆ ವರ್ಗಾವಣೆಯಾಗಿದೆ. ಈರಯ್ಯ ದೂಂತೂರು ಅವರನ್ನು ಸುಳ್ಯ ಎಸ್‌ಐ ಆಗಿ ನೇಮಕ‌ ಮಾಡಿ ಸರಕಾರ ಆದೇಶ ಮಾಡಿದೆ. 2014ನೇ ಬ್ಯಾಚ್‌ನ ಅಧಿಕಾರಿಯಾದ ಈರಯ್ಯ ದೂಂತೂರು

ಅಂಬಲಪಾಡಿ ನೀರಿನ‌ ಸಮಸ್ಯೆ: ಪಂಚಾಯತ್ ಅಧ್ಯಕ್ಷರ ಹೇಳಿಕೆ ವಿರುದ್ಧ ಗ್ರಾಮಸ್ಥರು ಗರಂ

ಉಡುಪಿ: ಉಡುಪಿ ಜಿಲ್ಲೆಯ ಅಂಬಲಪಾಡಿ ಪಂಚಾಯತ್ ವ್ಯಾಪ್ತಿಯಲ್ಲಿ ನೀರಿನ‌ ಸಮಸ್ಯೆ ತೀವ್ರಗೊಂಡಿದ್ದು ಗ್ರಾಮದ ಮಹಿಳೆಯರು ಪಂಚಾಯತ್ ಗೆ ಮುತ್ತಿಗೆ ಹಾಕಿದ್ದರು. ಅಲ್ಲಿನ 90ಕ್ಕು ಅಧಿಕ ಮನೆಗಳಿಗೆ ನೀರು ಸಿಗದಿರುವ ಪರಿಣಾಮ, ನೀರು ಪೂರೈಕೆ ಮಾಡಬೇಕು ಎಂದು ಕೊಡ ಹಿಡಿದು ಪಂಚಾಯತ್ ಗೆ ಮುತ್ತಿಗೆ ಹಾಕಿದ್ದ ಮಹಿಳೆಯರು ಮತ್ತು ಗ್ರಾಮಸ್ಥರು ತಮ್ಮ ಪ್ರತಿಭಟನೆ ದಾಖಲಿಸಿದ್ದರು. ಆದರೆ ಈ ಪ್ರತಿಭಟನೆ ರಾಜಕೀಯ ಪ್ರೇರಿತ ಎಂದು ಅಂಬಲಪಾಡಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ರೋಹಿಣಿ

ಕೇಂದ್ರ ಸರ್ಕಾರದ ವಿರುದ್ಧ ಅನ್ನದ ಬಟ್ಟಲು ಬಡಿದು ಎಚ್ಚರಿಕೆ : ಮಾಜಿ ಸಚಿವ ರಮಾನಾಥ ರೈ

ಬಡವರಿಗೆ ಅಕ್ಕಿ ನೀಡುವ ಯೋಜನೆಗೆ ಅಡ್ಡಿಪಡಿಸಿರುವ ಕೇಂದ್ರ ಸರ್ಕಾರದ ವಿರುದ್ಧ ಅನ್ನದ ಬಟ್ಟಲು ಬಡಿಯುವ ಮೂಲಕ ಮಂಗಳವಾರ ಪ್ರತಿಭಟನೆ ನಡೆಸಿ ಎಚ್ಚರಿಕೆ ನೀಡಲಿದ್ದೇವೆ ಎಂದು ಮಾಜಿ ಸಚಿವ ರಮಾನಾಥ ರೈ ಹೇಳಿದ್ದಾರೆ. ಅವರು ನಗರದ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದರು. ಬಡವರ ಅನ್ನಕ್ಕೆ ಕಲ್ಲು ಹಾಕುವವರಿಗೆ ಜನರೇ ತಕ್ಕ ಪಾಠ ಕಲಿಸುತ್ತಾರೆ. ದೇಶದಲ್ಲೇ ಬಡವರಿಗೆ ಪ್ರಥಮವಾಗಿ ಉಚಿತವಾಗಿ ಅಕ್ಕಿ ನೀಡಿದ ಕೀರ್ತಿ ಸಿದ್ದರಾಮಯ್ಯ ನೇತೃತ್ವದ

ವಾಮಂಜೂರಿನ ಮಂಗಳಾಜ್ಯೋತಿ ಶಾಲಾ ಮಕ್ಕಳಿಗೆ ಉಚಿತ ಭಗವದ್ಗೀತೆ ಪುಸ್ತಕ ವಿತರಣೆ

ಮೂಡಬೆಟ್ಟು ಕುಳಾಯಿಯ ಇಸ್ಕಾನ್ ಶ್ರೀ ರಾಧಾ ಗೋವಿಂದ ದೇವಸ್ಥಾನದ ವತಿಯಿಂದ ವಾಮಂಜೂರಿನ ಮಂಗಳಾಜ್ಯೋತಿ ಶಾಲಾ ಮಕ್ಕಳಿಗೆ ಭಗವದ್ಗೀತೆ ಪುಸ್ತಕ ಉಚಿತವಾಗಿ ನೀಡಲಾಯಿತು. ಕಾರ್ಯಕ್ರಮದಲ್ಲಿ ಇಸ್ಕಾನ್‍ನ ಸಚ್ಚಿದಾನಂದ ಅದೈತದಾಸ ಅವರು ಭಗವದ್ಗೀತ ತರಗತಿ, ಕೀರ್ತನೆ ನಡೆಸಿಕೊಟ್ಟರು. ನಂತರ ಪ್ರಸಾದ ವಿತರಿಸಲಾಯಿತು.ಕಾರ್ಯಕ್ರಮದಲ್ಲಿ ಉದ್ಯಮಿಗಳಾದ ಸುಬೋದ್ ಮಾರ್ತ, ಪ್ರದೀಪ್ ಮೆಂಡನ್, ಮಾಧವ ಭಂಡಾರಿ, ಅಶ್ವಿನ್ ಅವರು ಭಾಗವಹಿಸಿದ್ದರು.

ಗಂಗೊಳ್ಳಿ : ಸಂಪೂರ್ಣ ನಿರ್ಲಕ್ಷ್ಯಕ್ಕೆ ಒಳಗಾದ ಜೆಟ್ಟಿ ನಿರ್ಮಾಣ ಕಾರ್ಯ

ಕರಾವಳಿಯ ಪ್ರಮುಖ ಮೀನುಗಾರಿಕಾ ಬಂದರುಗಳಲ್ಲಿ ಒಂದಾದ ಗಂಗೊಳ್ಳಿ ಮೀನುಗಾರಿಕಾ ಜೆಟ್ಟಿ ಸಂಪೂರ್ಣ ನಿರ್ಲಕ್ಷ್ಯಕ್ಕೊಗಾದ ಸ್ಥಿತಿಗೆ ತಲುಪಿದೆ. ಕಳೆದ ವರ್ಷದ ಮಳೆಗಾಲದಲ್ಲಿ ಇಲ್ಲಿನ ಜೆಟ್ಟಿಯ ಒಂದು ಭಾಗ ಕುಸಿದು ಮೀನುಗಾರಿಕೆಗೆ ತೊಂದರೆಯಾಗಿದ್ದರೂ ಜೆಟ್ಟಿಯ ಮರು ನಿರ್ಮಾಣದ ಕಾರ್ಯ ಕನಸಾಗಿಯೇ ಉಳಿದಿದೆ. ಗಂಗೊಳ್ಳಿಯಲ್ಲಿ 2013ರಲ್ಲಿ 10 ಕೋಟಿ ವೆಚ್ಚದಲ್ಲಿ ಜೆಟ್ಟಿ ನಿರ್ಮಿಸಲಾಗಿತ್ತು. ಇದು 2016ರಲ್ಲಿ ಹಾನಿಗೊಳಗಾಯಿತು. 2018 ರಲ್ಲಿ ದುರಸ್ತಿಗಾಗಿ ಹೆಚ್ಚುವರಿ 3

ಮಂಜೇಶ್ವರ : ತಿಂಗಳು ಕಳೆಯುವ ಮುನ್ನವೇ ಕಿತ್ತು ಹೋದ ಡಾಮರು

ಮಂಜೇಶ್ವರ ಗ್ರಾಮ ಪಂಚಾಯತ್‍ನ ಎರಡನೇ ವಾರ್ಡು ವ್ಯಾಪ್ತಿಯಲ್ಲಿರುವ ತೂಮಿನಾಡು ಮಹಾಕಾಳಿ ರಸ್ತೆ, ಕಳಪೆ ಕಾಮಗಾರಿಯಿಂದ ತಿಂಗಳು ಕಳೆಯುವ ಮುನ್ನವೇ ಕಿತ್ತು ಹೋಗಿದೆ. ಕಳಪೆ ಮತ್ತು ಅರೆಬರೆ ಕಾಮಗಾರಿ ನಡೆಸಿದ ಗುತ್ತಿಗೆದಾರನ ವಿರುದ್ಧ ವ್ಯಾಪಕ ಆಕ್ರೋಶವನ್ನು ಸ್ಥಳೀಯರು ವ್ಯಕ್ತಪಡಿಸಿದ್ದಾರೆ. ಮಂಜೇಶ್ವರ ಗ್ರಾಮ ಪಂಚಾಯತ್ ಫಂಡ್‍ನಿಂದ 3 ಲಕ್ಷ ರೂ. ಖರ್ಚಿನಲ್ಲಿ ನಿರ್ಮಾಣಗೊಂಡ 120 ಮೀಟರ್ ಅಂತರದ ರಸ್ತೆ ಇದೀಗ ತಿಂಗಳಾಗುವ ಮೊದಲೇ ಕಿತ್ತು ಹೋಗಿದೆ.

ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರಿಗೆ ಅಭಿನಂದನೆ

ಬಂಟರ ಸಂಘಗಳ ವತಿಯಿಂದ ಪುತ್ತೂರಿನ ಶಾಸಕ ಅಶೋಕ್ ಕುಮಾರ್ ರೈ ಅವರಿಗೆ ಅಭಿನಂದನೆ ಕಾರ್ಯಕ್ರಮವು ಪುತ್ತೂರಿನಲ್ಲಿ ನಡೆಯಿತು. ಬಂಟರ ಯಾನೆ ನಾಡವರ ಮಾತೃ ಸಂಘ ಮಂಗಳೂರು ಇದರ ಮಾರ್ಗದರ್ಶನದಲ್ಲಿ ತಾಲೂಕು ಬಂಟರ ಸಂಘದ ಆಶ್ರಯದಲ್ಲಿ ಮಹಿಳಾ ಬಂಟರ ಸಂಘ, ಯುವ ಬಂಟರ ಸಂಘ, ವಿದ್ಯಾರ್ಥಿ ಬಂಟರ ಸಂಘಗಳ ಸಹಯೋಗದೊಂದಿಗೆ ನೂತನ ಶಾಸಕ ಅಶೋಕ್ ಕುಮಾರ್ ರೈ ಅವರಿಗೆ ಅಭಿನಂದನೆ ಹಾಗೂ ವಿದ್ಯಾರ್ಥಿ ವೇತನ ವಿತರಣಾ ಸಮಾರಂಭದಲ್ಲಿ ನಡೆಯಿತು. ಅಭಿನಂದನೆ ಸ್ವೀಕರಿಸಿ ಮಾತನಾಡಿದ ಅಶೋಕ್

ಮೂಡುಬಿದರೆ : ಅಕ್ರಮ ಗೋವು ಸಾಗಾಟ – ಮೂರು ಗೋವುಗಳ ರಕ್ಷಣೆ

ಮೂಡುಬಿದಿರೆ: ಅಕ್ರಮವಾಗಿ ಸಾಗಿಸುತ್ತಿದ್ದ ಮೂರು ಗೋವುಗಳನ್ನು ಬಜರಂಗದಳದ ಕಾರ್ಯಕರ್ತರು ಮತ್ತು ಮೂಡುಬಿದಿರೆ ಪೊಲೀಸರು ರಕ್ಷಿಸಿದ್ದಾರೆ. ಗೋವುಗಳನ್ನು ಅಕ್ರಮವಾಗಿ ಸಾಗಿಸುತ್ತಿದ್ದಾರೆಂಬ ಖಚಿತ ಮಾಹಿತಿ ಪಡೆದ ಬಜರಂಗದಳದ ಕಾರ್ಯಕರ್ತರು ಮೂಡುಬಿದಿರೆ ಪೊಲೀಸರಿಗೆ ಮಾಹಿತಿ ನೀಡಿ ಜಂಟಿ ಕಾರ್ಯಚರಣೆ ನಡೆಸಿ ಕೆಲ್ಲಪುತ್ತಿಗೆ ಬಳಿಯಿಂದ ಕಾರನ್ನು ಹಿಂಬಾಲಿಸಿಕೊಂಡು ಬಂದು ಜಿ.ಕೆ.ಗಾರ್ಡನ್ ಹಿಡಿದಿದ್ದಾರೆ. ಈ ಸಂದರ್ಭ ಕಾರಿನಲ್ಲಿದ್ದ ಇಬ್ಬರು ಪರಾರಿಯಾಗಿದ್ದಾರೆ.