ಮೂಡುಬಿದಿರೆ: ನಿಟ್ಟೆಯ ಇಂಜಿನಿಯರಿಂಗ್ ವಿದ್ಯಾರ್ಥಿಯೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಘಟನೆ ಮೂಡುಬಿದಿರೆ ಪೊಲೀಸ್ ಠಾಣಾ ವ್ಯಾಪ್ತಿಯ ಆಲಂಗಾರಿನಲ್ಲಿ ಭಾನುವಾರ ನಡೆದಿದೆ. ಪುರಸಭಾ ವ್ಯಾಪ್ತಿಯ ಅಲಂಗಾರು ಆಶ್ರಯ ಕಾಲನಿಯ ನಿವಾಸಿ ಸುರೇಶ್ ಭಂಡಾರಿ ಅವರ ಪುತ್ರ, ನಿಟ್ಟೆಯ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿ ಸಾತ್ವಿಕ್ (೨೧) ಆತ್ಮಹತ್ಯೆ
ಉಳ್ಳಾಲ: ಮದುವೆ ಮೆಹೆಂದಿಯಂದು ನಾಪತ್ತೆಯಾಗಿದ್ದ ವರ ಮನೆಗೆ ವಾಪಸ್ಸಾಗಿದ್ದಾನೆ. ನಾಪತ್ತೆಯಾದ ಹಲವು ದಿನಗಳ ನಂತರ ಬಳ್ಳಾರಿಯಲ್ಲಿ ಇರುವುದಾಗಿ ಸಹೋದರಿಗೆ ಕರೆ ಮಾಡಿ ತಿಳಿಸಿದ ನಂತರ ಜೂ.16 ರಂದು ಕೊಣಾಜೆ ಠಾಣೆಗೆ ಬಂದು ಮನೆಗೆ ವಾಪಸ್ಸಾಗಿದ್ದಾರೆ.ವರ್ಕಾಡಿ ದೇವಂದಪಡ್ಪುವಿನ ಉದ್ಯಮಿ ಐತಪ್ಪ ಶೆಟ್ಟಿ ಎಂಬವರ ಪುತ್ರ ಕಿಶನ್ ಶೆಟ್ಟಿ ಮೇ 31ರಂದು ಮೆಹಂದಿ ಶಾಸ್ತ್ರಕ್ಕೆ ಹಣ್ಣು ತರಲು ತೆರಳಿದ್ದವರು ನಾಪತ್ತೆಯಾಗಿದ್ದರು. ಇದರಿಂದಾಗಿ ನಿಗದಿಯಾಗಿದ್ದ ಮದುವೆಯೂ
ಬಂಟ್ವಾಳ: ಬಲತ್ಕಾರದ ಮತಾಂತರವನ್ನು ತಡೆಗಟ್ಟುವ ಉದ್ದೇಶದಿಂದ ಹಿಂದಿನ ಬಿಜೆಪಿ ಸರಕಾರ ಜಾರಿಗೆ ತಂದಿದ್ದ ಜನಪರವಾದ ಮತಾಂತರ ನಿಷೇಧ ಕಾಯ್ದೆ, ಎಪಿಎಂಸಿ ತಿದ್ದಪಡಿ ರದ್ದತಿ, ಶಾಲಾ ಪಠ್ಯಪುಸ್ತಕದಿಂದ ಸಾವರ್ಕರ್ ಹಾಗೂ ಹೆಗಡೇವಾರ ಅವರ ವಿಷಯವನ್ನು ಕೈ ಬಿಟ್ಟಿರುವ ಕಾಂಗ್ರೆಸ್ ಸರಕಾರದ ತೀರ್ಮಾನವನ್ನು ಖಂಡಿಸುವುದಾಗಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ತಿಳಿಸಿದರು. ಬಿ.ಸಿ.ರೋಡಿನಲ್ಲಿರುವ ಬಿಜೆಪಿ ಪಕ್ಷದ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿಒರ್ವ
ಬೈಂದೂರು ವಿಧಾನಸಭಾ ಕ್ಷೇತ್ರದ ತಲ್ಲೂರಿನಿಂದ ಬೈಂದೂರಿನ ತನಕ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಮಳೆಗಾಲದ ಸಂದರ್ಭ ಸಮಸ್ಯೆ ಉದ್ಭವವಾಗುವ ಪ್ರದೇಶಗಳಿಗೆ ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಭೇಟಿ ನೀಡಿ, ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚಿಸಿದರು. ಹೆಮ್ಮಾಡಿ, ಮುಳ್ಳಿಕಟ್ಟೆ, ತ್ರಾಸಿ, ಮರವಂತೆ, ನಾಗೂರು, ಉಪ್ಪುಂದ, ಬೈಂದೂರು ಭಾಗಗಳಲ್ಲಿ, ಜನಸಾಮಾನ್ಯರ ಸಮಸ್ಯೆ ಬಗ್ಗೆ ವಿಚಾರಿಸಿ, ಸ್ಥಳೀಯರ ಒಂದಿಷ್ಟು ಮನವಿಗಳನ್ನು
ಬಂಟ್ವಾಳ: ರಾಜ್ಯ ಸರ್ಕಾರ ಮತಾಂತರ ನಿಷೇಧ ಕಾಯ್ದೆ ಕೈ ಬಿಡುವ ನಿರ್ಧಾರಕ್ಕೆ ನನ್ನ ವಿರೋಧವಿದೆ ಎಂದು ಆರ್‍ಎಸ್‍ಎಸ್ ಮುಖಂಡ ಡಾ. ಪ್ರಭಾಕರ ಭಟ್ ಕಲ್ಲಡ್ಕ ಹೇಳಿದರು. ಅವರು ಬಂಟ್ವಾಳ ಪ್ರೆಸ್‍ಕ್ಲಬ್‍ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಸರ್ಕಾರಗಳು ಬದಲಾದಾಗ ಹಿಂದಿನ ಸರ್ಕಾರದ ತಪ್ಪುಗಳನ್ನು ಸರಿಪಡಿಸಿ, ಒಳ್ಳೆಯದನ್ನು ಮುಂದುವರೆಸುವ ಕೆಲಸ ಆಗಬೇಕು. ಆದರೆ ಈಗ ಬಂದಿರುವ ಸರ್ಕಾರ ಹಿಂದಿನವರು ಮಾಡಿದ್ದೆಲ್ಲವನ್ನು ತಪ್ಪು ಎನ್ನುವ
ಬಂಟ್ವಾಳ: ಕಲ್ಲಡ್ಕ ಶ್ರೀ ರಾಮ ಪ್ರಥಮದರ್ಜೆ ಮಹಾವಿದ್ಯಾಲಯದಲ್ಲಿ ಸ್ವತ್ವದ ಆಧಾರದ ಮೇಲೆ ಪುನರುತ್ಥಾನ ಎನ್ನುವ ರಾಷ್ಟ್ರೀಯ ವಿಚಾರ ಸಂಕಿರಣ ಜೂ.20 ರಂದು ಮಂಗಳವಾರ ನಡೆಯಲಿದೆ ಎಂದು ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ ಭಟ್ ಕಲ್ಲಡ್ಕ ತಿಳಿಸಿದರು. ಅವರು ಬಿ.ಸಿ.ರೋಡು ಪ್ರೆಸ್‍ಕ್ಲಬ್‍ನಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿ, ಅಂದು ಬೆಳಿಗ್ಗೆ 10 ಗಂಟೆಗೆ ಪತ್ರಕರ್ತ ಅಜಿತ್ ಹನುಮಕ್ಕನವರ್ ವಿಚಾರ ಸಂಕಿರಣ
ಬೆಂಗಳೂರು-ಮಂಗಳೂರು ಹೆದ್ದಾರಿಯ ಮಧ್ಯೆ ನೆಲ್ಯಾಡಿ ಸಮೀಪದ ಎಂಜಿರ ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ರಸ್ತೆಯ ಪಕ್ಕದ ಮೋರಿಗೆ ಬಿದ್ದ ಘಟನೆ ಸಂಭವಿಸಿದೆ. ಬೆಂಗಳೂರು ಆರ್‍ಟಿ ನಗರದ ನಿವಾಸಿಗಳಾದ ಇವರು ಮಂಗಳೂರಿಗೆ ಪ್ರಯಾಣಿಸುತ್ತಿದ್ದರು. ಇದೇ ಸಂದರ್ಭದಲ್ಲಿ ನೆಲ್ಯಾಡಿ ಸಮೀಪದ ಎಂಜಿರ ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಪಕ್ಕದ ಮೋರಿಗೆ ಬಿದ್ದ ಪರಿಣಾಮ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಏಳು ಜನರ ಪೈಕಿ ಮಗು ಹೊರತುಪಡಿಸಿ ಆರು ಮಂದಿ
ದ.ಕ. ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಮುಲ್ಲೈ ಮುಗಿಲನ್ ಶನಿವಾರದಂದು ಅಧಿಕಾರ ಸ್ವೀಕರಿಸಿದರು. ನಿರ್ಗಮನ ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್. ಅವರು ನೂತನ ಜಿಲ್ಲಾಧಿಕಾರಿಗೆ ಅಧಿಕಾರ ಹಸ್ತಾಂತರಿಸಿದರು. ಮೂಲತಃ ತಮಿಳುನಾಡಿನ ಮುಲ್ಲೈ ಮುಗಿಲನ್ 2013ರ ಐಎಎಸ್ ಬ್ಯಾಚ್‍ನವರಾಗಿದ್ದು, ದಿಂಡಿಗಲ್ ಅಣ್ಣಾ ವಿವಿಯ ಪಿಎಸ್‍ಎನ್‍ಎ ಕಾಲೇಜ್ ಆಫ್ ಇಂಜಿನಿಯರಿಂಗ್ ಮತ್ತು ಟೆಕ್ನಾಲಜಿನಲ್ಲಿ ಓದಿ ಕಂಪ್ಯೂಟರ್ ಸಯನ್ಸ್‍ನಲ್ಲಿ ಪದವಿ
ಕರ್ನಾಟಕ ಸರಕಾರದ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ನೂತನ ಸಚಿವರಾದ ಮಂಕಾಳ ಎಸ್. ವೈದ್ಯ ಅವರಿಗೆ ಉಡುಪಿಯ ಸಮಸ್ತ ಮೀನುಗಾರರ ವತಿಯಿಂದ ಅಭಿನಂದನಾ ಸಮಾರಂಭ ನಡೆಯಿತು. ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನದ ಸಭಾಂಗಣದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು.ಶಾಸಕ ಸುರೇಶ್ ಶೆಟ್ಟಿ ಗುರ್ಮೆ ಅವರು ಮಾತನಾಡಿ, ಹೆಜಮಾಡಿ ಬಂದರಿನ 60 ಶೇಕಡಾ ಕಾಮಗಾರಿ ಪೂರ್ಣಗೊಂಡಿದ್ದು, ಬಾಕಿ ಉಳಿದ ಕಾಮಗಾರಿಗೆ ಅನುದಾನವನ್ನು ಶೀಘ್ರದಲ್ಲಿ ಬಿಡುಗಡೆ ಗೊಳಿಸುವಂತೆ
ಮಂಗಳೂರು: ಕಾಂಗ್ರೆಸ್ ಸರಕಾರ ಮತಾಂತರ ತಿದ್ದುಪಡಿ ಕಾಯ್ದೆಯನ್ನು ರದ್ದು ಮಾಡಲು ಹೊರಟಿರುವ ನಿರ್ಧಾರ ಖಂಡನೀಯ ಎಂದು ಜಿಲ್ಲಾ ಬಿಜೆಪಿ ಅಧ್ಯಕ್ಷ ಸುದರ್ಶನ್ ಹೇಳಿದರು. ಅವರು ನಗರದ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದರು. ಎಪಿಎಂಸಿ ಕಾಯ್ದೆಯನ್ನು ರದ್ದು ಮಾಡುವ ಮೂಲಕ ದಳ್ಳಾಲಿಗಳಿಗೆ ಉತ್ತೇಜನ ನೀಡುವ, ಏಜೆಂಟರಿಗೆ ಅವಕಾಶ ಮಾಡಿಕೊಡುವ ಅವಕಾಶ ಕರ್ನಾಟಕ ರೈತರಿಗೆ ಮಾಡಿದ ಮೋಸವಾಗಿದೆ. ಪಠ್ಯಪುಸ್ತಕ ಪರಿಷ್ಕರಣೆ ಸ್ವಾತಂತ್ರ್ಯ ಬಂದ ಕೂಡಲೇ




























