Home Posts tagged V4News (Page 453)

ಅಪಾಯಕ್ಕೆ ಆಹ್ವಾನ ನೀಡುತ್ತಿರುವ ಜಲ್ ಜೀವನ್ ಯೋಜನೆಯ ಪೈಪ್ ಲೈನ್ ಕಾಮಗಾರಿ

ಜನರ ನೀರಿನ ಬವಣೆ ತೀರಿಸಲೆಂದು ಜಿಲ್ಲಾ ಪಂಚಾಯತ್ ಆಶ್ರಯದಲ್ಲಿ ನಡೆಯುತ್ತಿರುವ “ಜಲ್ ಜೀವನ್” ಯೋಜನೆಯ ಪೈಪ್ ಲೈನ್ ಕಾಮಗಾರಿ ಜನರ ಜೀವ ತೆಗೆಯುತ್ತಾ ಎಂಬ ಮಾತು ಕೇಳಿ ಬರುತ್ತಿದೆ. ಬಹುತೇಕ ಕಡೆಗಳಲ್ಲಿ ಈ ಯೋಜನೆಯ ಕಾಮಗಾರಿ ನಡೆಯುತ್ತಿದ್ದು, ಗುತ್ತಿಗೆದಾರನ ನಿರ್ಲಕ್ಷ್ಯ ದಿಂದಾಗಿ ಅಲ್ಲಲ್ಲಿ ಪೈಪ್ ಲೈನ್‌ಗಾಗಿ ರಸ್ತೆಗಳನ್ನು ಅಗೆದು ಹಾಕಿ ಅಪಾಯಕಾರಿ

ಉಳ್ಳಾಲ: ಬಿಪರ್ ಜಾಯ್ ಚಂಡಮಾರುತ: ಬಿರುಸುಗೊಂಡ ಸಮುದ್ರದ ಅಲೆ, ಬೀಚ್‌ಗೆ ತೆರಳದಂತೆ ಮುನ್ನೆಚ್ಚರಿಕೆ

ಉಳ್ಳಾಲ: ಅರಬ್ಬೀ ಸಮುದ್ರದಲ್ಲಿ ಬಿಪರ್ ಜಾಯ್ ಚಂಡಾಮಾರುತ ಹಿನ್ನೆಲೆಯಲ್ಲಿ ಉಳ್ಳಾಲ, ಸೋಮೇಶ್ವರ, ಉಚ್ಚಿಲ ಸಮುದ್ರತೀರದಲ್ಲಿ ಸಮುದ್ರದ ಅಲೆಗಳ ಅಬ್ಬರ ಇಂದು ನಸುಕಿನಿಂದ ಹೆಚ್ಚಾಗಿದೆ. ಜಿಲ್ಲಾಡಳಿತದ ಆದೇಶದಂತೆ ಉಳ್ಳಾಲ, ಸೋಮೇಶ್ವರ ಸಮುದ್ರ ತೀರದಲ್ಲಿ ಬರುವ ಪ್ರವಾಸಿಗರನ್ನು ಬಂದೋಬಸ್ತ್ ನಲ್ಲಿರುವ ಹೋಂಗಾರ್ಡ್ಸ್ ವಾಪಸ್ಸು ಕಳುಹಿಸುತ್ತಿದ್ದಾರೆ. ಇಂದು ನಸುಕಿನಿಂದ ಚಂಡಾಮಾರುತದ ಪ್ರಭಾವ ಉಳ್ಳಾಲದ ಸಮುದ್ರ ತೀರದ ಪ್ರದೇಶಗಳಿಗೆ ಗೋಚರಿಸಲು ಆರಂಭವಾಗಿದೆ. ಬೃಹತ್

ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳಕ್ಕೆ ಡಾ. ಜಿ. ಪರಮೇಶ್ವರ್ ಭೇಟಿ, ವಿಶೇಷ ಪೂಜೆ ಸಲ್ಲಿಕೆ

ರಾಜ್ಯ ಗೃಹಸಚಿವ ಡಾ.ಜಿ.ಪರಮೇಶ್ವರ್ ಕೊಲ್ಲೂರು ಶ್ರೀಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಬೆಳಗ್ಗೆ ಶ್ರೀಮೂಕಾಂಬಿಕಾ ದೇವಳದಲ್ಲಿ ಪ್ರಧಾನ ಅರ್ಚಕ ಕೆ.ಎನ್.ಸುಬ್ರಹ್ಮಣ್ಯ ಅಡಿಗರ ನೇತೃತ್ವದಲ್ಲಿ ನಡೆದ ಚಂಡಿಕಾಹೋಮ ಕಾರ್ಯಕ್ರಮದಲ್ಲಿ ಸಚಿವರು ಕುಟುಂಬ ಸಮೇತರಾಗಿ ಭಾಗಿಯಾದರು. ಇದೇ ಸಂದರ್ಭದಲ್ಲಿ ಸಚಿವರನ್ನು ದೇವಸ್ಥಾನದ ವತಿಯಿಂದ ಗೌರವಿಸಲಾಯಿತು. ಈ ಸಂದರ್ಭದಲ್ಲಿ ದೇವಳದ ಅರ್ಚಕ ರಾಮಚಂದ್ರ ಅಡಿಗ, ಕಾರ್ಯನಿರ್ವಹಣಾಧಿಕಾರಿ ರವಿ

ದ.ಕ. ಜಿಲ್ಲೆಯಲ್ಲಿ ನೀರಿನ ಸಮಸ್ಯೆ ಆಗದಂತೆ ಕ್ರಮ: ಡಿಸಿ ರವಿಕುಮಾರ್

ದಕ್ಷಿಣ ಕನ್ನಡದ ಹಲವೆಡೆ ಮಳೆಯ ಅಭಾವದಿಂದ ನೀರಿನ ಸಮಸ್ಯೆ ಉಲ್ಬಣಗೊಂಡಿದೆ. ಪ್ರತೀ ವರ್ಷ ಜೂನ್ ತಿಂಗಳಲ್ಲಿ ಮಳೆ ಬರಬೇಕಿತ್ತು. ತಡವಾದ ಕಾರಣ ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೂರಿದೆ. ಆದರೂ ಜಿಲ್ಲಾಡಳಿತ ಶಾಲಾ, ಕಾಲೇಜು ಸೇರಿ ಎಲ್ಲಾ ಕಡೆ ನೀರು ಪೂರೈಸಲು ವ್ಯವಸ್ಥೆ ಮಾಡಿದೆ ಎಂದು ಜಿಲ್ಲಾಧಿಕಾರಿ ರವಿಕುಮಾರ್ ತಿಳಿಸಿದ್ದಾರೆ. ಅವರು ಮಂಗಳೂರಿನಲ್ಲಿ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದರು.  ಸದ್ಯ ತುಂಬೆ ಡ್ಯಾಂನಲ್ಲಿ 1.86 ಮೀ. ಮಟ್ಟಕ್ಕೆ ನೀರು

ಉಳ್ಳಾಲ: ನೈತಿಕ ಪೊಲೀಸ್ ಗಿರಿ ಪ್ರಕರಣ – ಉಳ್ಳಾಲ ಪೊಲೀಸ್ ಠಾಣೆಗೆ ಭೇಟಿ ನೀಡಿದ ಅರುಣ್ ಪುತ್ತಿಲ

ಉಳ್ಳಾಲ: ಸೋಮೇಶ್ವರ ನೈತಿಕ ಪೊಲೀಸ್ ಗಿರಿ ಪ್ರಕರಣಕ್ಕೆ ಸಂಬಂಧಿಸಿದ ಮೂವರು ವಿದ್ಯಾರ್ಥಿನಿಯರ ಪೋಷಕರನ್ನು ಠಾಣೆಗೆ ಕರೆಸಿ ವಾಸ್ತವ ವಿಚಾರವನ್ನು ತಿಳಿದುಕೊಳ್ಳಬೇಕಿದೆ. ಹಿಂದೂ ಕಾರ್ಯಕರ್ತರಿಗೆ ಘಟನೆ ಬಗ್ಗೆ ಕಿರುಕುಳ ನೀಡುವುದು, ಠಾಣೆಗೆ ಕರೆಸುವುದು ಮಾಡಬಾರದು ಎಂದು ಹಿಂದೂ ಮುಖಂಡ ಅರುಣ್ ಪುತ್ತಿಲ ಹೇಳಿದ್ದಾರೆ. ಸೋಮೇಶ್ವರ ಪ್ರಕರಣದಲ್ಲಿ ಹಿಂದೂ ಕಾರ್ಯಕರ್ತರ ಬಂಧನ ವಿಚಾರವಾಗಿ ಉಳ್ಳಾಲ ಪೊಲೀಸ್ ಠಾಣೆಗೆ ಭೇಟಿ ನೀಡಿ ಠಾಣಾಧಿಕಾರಿಗಳ ಜೊತೆಗೆ

ಮಣಿಪುರದಲ್ಲಿ ಚರ್ಚ್ ಹಾಗೂ ಕ್ರಿಶ್ಚಿಯನ್ನರ ಮೇಲೆ ದಾಳಿ – ದ.ಕ. ಜಿಲ್ಲಾ ಸಮಾನ ಮನಸ್ಕ ಸಂಘಟನೆಗಳಿಂದ ಪ್ರತಿಭಟನೆ

ಮಣಿಪುರದಲ್ಲಿ ಚರ್ಚ್ ಹಾಗೂ ಕ್ರಿಶ್ಚಿಯನ್ನರ ಮೇಲೆ ನಡೆಯುತ್ತಿರುವ ದಾಳಿಯನ್ನು ಖಂಡಿಸಿ ದ.ಕ. ಜಿಲ್ಲಾ ಸಮಾನ ಮನಸ್ಕ ಸಂಘಟನೆಗಳ ಒಕ್ಕೂಟ, ಕೆಥೋಲಿಕ್ ಸಭಾ ಮಂಗಳೂರು ಪ್ರದೇಶ ಮತ್ತು ಯುನೈಟೆಡ್ ಕ್ರಿಶ್ಚಿಯನ್ ಫೆÇೀರಂ ಮಂಗಳೂರು ಇದರ ವತಿಯಿಂದ ನಗರದ ಕ್ಲಾಕ್‍ಟವರ್ ಬಳಿ ಪ್ರತಿಭಟನೆ ನಡೆಸಿದರು. ಪ್ರತಿಭಟನೆಯಲ್ಲಿ ಜಿಲ್ಲೆಯ ವಿವಿಧ ಕಡೆಗಳಿಂದ ಆಗಮಿಸಿದ ಸಾವಿರಾರು ಮಂದಿ ಕ್ರೈಸ್ತ ಸಮುದಾಯದವರು, ಧರ್ಮಗುರುಗಳು, ಧರ್ಮಭಗಿನಿಯರು, ಇತರ ಸಮುದಾಯ ಮತ್ತು ಸಂಘಟನೆಗಳ

ಪುತ್ತೂರು: ಡಾ. ಬಡೆಕ್ಕಿಲ ಶ್ರೀಧರ ಭಟ್‍ರ ಪುಸ್ತಕ ಲೋಕಾರ್ಪಣೆ ಮತ್ತು ನುಡಿ ನಮನ ಕಾರ್ಯಕ್ರಮ

ಪುತ್ತೂರು ತಾಲ್ಲೂಕು ಶಾಂತಿಗೋಡಿನ ನವಚೇತನ ಹಿರಿಯ ನಾಗರೀಕರ ಸಮುಚ್ಛಯದ ಸಹಯೋಗದಲ್ಲಿ ಬಹುಮುಖ ಪ್ರತಿಭೆಯ ದಿ. ಡಾ. ಬಡೆಕ್ಕಿಲ ಶ್ರೀಧರ ಭಟ್ ಅವರ ಪುಸ್ತಕದ ಲೋಕಾರ್ಪಣೆ ಮತ್ತು ನುಡಿ ನಮನ ಕಾರ್ಯಕ್ರಮವು ನವಚೇತನ ಹಿರಿಯ ನಾಗರೀಕರ ಸಮುಚ್ಛಯದಲ್ಲಿ ನಡೆಯಿತು. ಪುಸ್ತಕ ಅನಾವರಣ ಮಾಡಿದ ಮುಂಬಯಿ ವಿಶ್ವವಿದ್ಯಾಲಯದ ನಿವೃತ್ತ ಪ್ರಾಧ್ಯಾಪಕ ಡಾ. ವಸಂತ ಕುಮಾರ್ ತಾಳ್ತಜೆ ಮಾತನಾಡಿ, ಡಾ. ಬಡೆಕ್ಕಿಲ ಶ್ರೀಧರ್ ಭಟ್ ಅವರದ್ದು ವೃತ್ತಿಯಲ್ಲಿ ವಿಜ್ಞಾನ ಕ್ಷೇತ್ರವಾದರೂ

ಮೂಡುಬಿದಿರೆ : ಅಪಘಾತದಿಂದ ವಿದ್ಯಾರ್ಥಿಯ ಸಾವು – ವಿವಿಧ ಕಾಲೇಜುಗಳ ವಿದ್ಯಾರ್ಥಿಗಳಿಂದ ಪ್ರತಿಭಟನೆ

ಮೂಡುಬಿದಿರೆ: ಖಾಸಗಿ ಬಸ್ ಬೈಕ್‍ಗೆ ಢಿಕ್ಕಿ ಹೊಡೆದು ವಿದ್ಯಾರ್ಥಿ ಕಾರ್ತಿಕ್ ಆಚಾರ್ಯ ಮೃತಪಟ್ಟಿದ್ದು, ಚಾಲಕನ ನಿರ್ಲಕ್ಷ್ಯತನವನ್ನು ಖಂಡಿಸಿ ಮೂಡುಬಿದಿರೆಯ ವಿವಿಧ ಕಾಲೇಜುಗಳ ವಿದ್ಯಾರ್ಥಿಗಳು ವಿದ್ಯಾಗಿರಿ ಜಂಕ್ಷನ್‍ನಲ್ಲಿ ಪ್ರತಿಭಟನೆ ನಡೆಸಿದರು. ಶಾಂತಿ ಪ್ರಸಾದ್ ಹೆಗ್ಡೆ ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿ, ಖಾಸಗಿ ಬಸ್ ಚಾಲಕರ ಅಜಾಗರೂಕತೆ ಹಾಗೂ ನಿರ್ಲಕ್ಷ್ಯದಿಂದಾಗಿ ಮೂಡುಬಿದಿರೆಯಲ್ಲಿ ಕಳೆದ ಒಂದು ವರ್ಷದ ಅವಧಿಯಲ್ಲಿ 10 ಕ್ಕೂ ಅಧಿಕ

ಪಡುಬಿದ್ರಿ: ಉಪಯೋಗವಿಲ್ಲದ ವಿದ್ಯುತ್ ಕಂಬ ತೆರವಿಗೆ ಆಗ್ರಹ

ಕಳೆದ ಎರಡು ವರ್ಷಗಳಿಂದ ಕಲ್ಲಟ್ಟೆ ಬ್ರಹ್ಮಸ್ಥಾನ ರಸ್ತೆಯ ತೀರ ಅಂಚಿನಲ್ಲಿರುವ ಉಪಯೋಗವಿಲ್ಲದ ವಿದ್ಯುತ್ ಕಂಬಗಳನ್ನು ತೆರವುಗೊಳಿಸುವಂತೆ ಗ್ರಾಮಸ್ಥರು ಪಡುಬಿದ್ರಿ ಮೆಸ್ಕಾಂ ಶಾಖಾಧಿಕಾರಿಗಳನ್ನು ಆಗ್ರಹಿಸಿದ್ದಾರೆ. ಈ ಹಿಂದೆ ಪಕ್ಕದ ದೂರವಾಣಿ ಕೇಂದ್ರಕ್ಕೆ ಸಂಪರ್ಕವಿದ್ದು ಇದೀಗ ಅವರು ಬೇರೆಡೆಯಿಂದ ಅವರು ವಿದ್ಯುತ್ ಸಂಪರ್ಕ ಪಡೆದ ಕಾರಣ ಈ ಕಂಬಗಳು ಹಾಗೆಯೇ ಇದೆ. ಸಂಚಾರಕ್ಕೆ ತೊಡಕುಂಟು ಮಾಡುತ್ತಾ ರಸ್ತೆಗೆ ಅಂಟಿಕೊಂಡು ನಿಂತುಕೊಂಡಿದೆ. ಗ್ರಾಹಕರ ಸಮಸ್ಯೆಗಳಿಗೆ

ಜೂನ್ 9ರಂದು ಒಮಾನ್-ಮಸ್ಕತ್‍ನಲ್ಲಿ ಸರ್ಕಸ್ ತುಳು ಸಿನಿಮಾದ ಪ್ರೀಮಿಯರ್ ಶೋ

ಬಿಗ್‍ಬಾಸ್ ಕನ್ನಡ 9ರ ಕಾರ್ಯಕ್ರಮದಲ್ಲಿ ಗೆಲುವಿನ ನಗೆ ಬೀರಿರುವ ತುಳು ಚಿತ್ರರಂಗದ ಪ್ರತಿಭಾನ್ವಿತ ಕಲಾವಿದ ರೂಪೇಶ್ ಶೆಟ್ಟಿ ಅವರ ಮತ್ತೊಂದು ಸಿನಿಮಾ ಸರ್ಕಸ್. ಜೂನ್ 9ರಂದು ಒಮಾನ್-ಮಸ್ಕತ್‍ನಲ್ಲಿ ಮೆಗಾ ಪ್ರೀಮಿಯರ್ ಶೋ ಹಮ್ಮಿಕೊಂಡಿದ್ದಾರೆ. ಗಿರ್ಗಿಟ್ ಎಂಬ ಬ್ಲಾಕ್ ಬಸ್ಟರ್ ತುಳು ಸಿನಿಮಾದ ಮೂಲಕ ಯಶಸ್ಸು ಗಳಿಸಿರುವ ರೂಪೇಶ್ ಶೆಟ್ಟಿ ಇದೀಗ ಸರ್ಕಸ್ ಸಿನಿಮಾದ ಮೂಲಕ ಸುದ್ದಿಯಲ್ಲಿದ್ದಾರೆ. ಸರ್ಕಸ್ ಸಿನಿಮಾದ ಪ್ರೀಮಿಯರ್ ಪ್ರದರ್ಶನ ದುಬೈ,