ಮುಂಬಯಿ : ಜಾರ್ಜ್ ಫೆರ್ನಾಂಡಿಸ್ ರವರ 94ನೇ ಜನ್ಮದಿನಾಚರಣೆ ಯಂದು ರಾಷ್ಟ್ರೀಯ ಪ್ರಶಸ್ತಿ ಪ್ರದಾನಿಸುವ ಮೂಲಕ ಮುಂದಿನ ದಿನಗಳಲ್ಲಿ ಅರಣ್ಯ ರಕ್ಷಣೆ ಮಾಡುದರೊಂದಿಗೆ “ಜಾರ್ಜ್ ವನ” ದ ಮೂಲಕ ಅರಣ್ಯ ಸಂರಕ್ಷಣಾ ಪ್ರಶಸ್ತ್ಯ ನೀಡಲು ಪ್ರಯತ್ನಿಸುತ್ತೇವೆ. ರಾಜ್ಯದ ಎಲ್ಲ ಜನನಾಯಕರು ಪಕ್ಷ ಬೇದವಿಲ್ಲದೆ ಮಂಗಳೂರು ವಿಮಾನ ನಿಲ್ಧಾಣಕ್ಕೆ ಜಾರ್ಜ್ ಫೆರ್ನಾಂಡಿಸ್
ಉಳ್ಳಾಲ: ಅಕ್ರಮವಾಗಿ ಜಾನುವಾರು ಸಾಗಾಟ ನಡೆಸುತ್ತಿದ್ದ ವಾಹನ ತಡೆದ ಬಜರಂಗದಳ ಕಾರ್ಯಕರ್ತರು, ಅಮಾನವೀಯವಾಗಿ ಸಾಗಾಟ ನಡೆಸುತ್ತಿದ್ದ ಐದು ಜಾನುವಾರುಗಳನ್ನು ರಕ್ಷಿಸಿ ಪೊಲೀಸರ ವಶಕ್ಕೆ ಒಪ್ಪಿಸಿರುವ ಘಟನೆ ಕುತ್ತಾರು ಸಮೀಪದ ಭಂಡಾರಬೈಲು ಎಂಬಲ್ಲಿ ಸಂಭವಿಸಿದೆ. ಕೇರಳ ನೋಂದಣಿಯ ಏಸ್ ವಾಹನವು ಮುಡಿಪು, ಕೊಣಾಜೆ, ಮದಕ ಮಾರ್ಗವಾಗಿ 5 ಜಾನುವಾರುಗಳನ್ನ ಅಕ್ರಮವಾಗಿ ತುಂಬಿಸಿ ಸಾಗುತ್ತಿದ್ದ ವೇಳೆ ಭಂಡಾರ ಬೈಲು ರಸ್ತೆಯ ಕಡಿದಾದ ಎತ್ತರದ ತಿರುವು ಏರಲಾರದೆ ನಿಂತು
ಉಡುಪಿ : ಉಡುಪಿ ಜಿಲ್ಲೆಯ ಮಣಿಪಾಲದ ಈಶ್ವರನಗರ ಸಮೀಪದಲ್ಲಿರುವ ‘ಹಕುನ ಮಟಾಟ’ ಬಾರ್ ಆ್ಯಂಡ್ ರೆಸ್ಟೋರೆಂಟ್ ನಲ್ಲಿ ಇಂದು ಮುಂಜಾನೆ ಆಕಸ್ಮಿಕವಾಗಿ ಅಗ್ನಿ ಅವಘಡ ಸಂಭವಿಸಿದ್ದು, ಸುಮಾರು 40 ಲಕ್ಷಕ್ಕೂ ಅಧಿಕ ಮೌಲ್ಯದ ನಷ್ಟ ಸಂಭವಿಸಿದೆ. ರೆಸ್ಟೋರೆಂಟ್ ನ ಕಿಚನ್ ರೂಮ್ ನಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಉಂಟಾಗಿ ಬೆಂಕಿ ತಗಲಿದ್ದು, ಅಪಾರ ಪ್ರಮಾಣದ ಉಪಕರಣಗಳು ಬೆಂಕಿಗಾಹುತಿಯಾಗಿದೆ ಎಂದು ತಿಳಿದುಬಂದಿದೆ. ಮಾಹಿತಿ ತಿಳಿದು ಸ್ಥಳಕ್ಕಾಗಮಿಸಿದ
ಉಳ್ಳಾಲ: ಬೈಕ್‍ಗೆ ಕಾರು ಢಿಕ್ಕಿ ಹೊಡೆದು ಪರಾರಿಯಾಗಿರುವ ಘಟನೆ ರಾ.ಹೆ 66ರ ಸಂಕೊಳಿಗೆ ಸಮೀಪ ನಿನ್ನೆ ತಡರಾತ್ರಿ ವೇಳೆ ಸಂಭವಿಸಿದೆ. ಘಟನೆಯಿಂದ ಬೈಕ್ ಸವಾರ ಗಂಭೀರ ಗಾಯಗೊಂಡಿದ್ದು, ಘಟನೆಗೆ ಕಾರಣವಾದ ಕೇರಳ ನೋಂದಾಯಿತ ಇನೋವಾ ಕಾರಿನ ದಾಖಲೆಯನ್ನು ಸಿಸಿಟಿವಿ ಮೂಲಕ ಪತ್ತೆಹಚ್ಚಲಾಗಿದೆ.ಕೋಟೆಕಾರು ವೈದ್ಯನಾಥ ದೇವಸ್ಥಾನ ರಸ್ತೆ ನಿವಾಸಿ ತೇಜಸ್ ರಾಮ ಕುಲಾಲ್ (28) ಗಾಯಾಳು. ಕೋಟೆಕಾರಿನ ಮನೆ ಕಡೆಗೆ ಬರುವ ಸಂದರ್ಭ ಕೇರಳ ಕಡೆಗೆ ತೆರಳುತ್ತಿದ್ದ ಅಪರಿಚಿತ ವಾಹನ
ಉಳ್ಳಾಲ: ಅಕಾಲಿಕವಾಗಿ ಸಾವನ್ನಪ್ಪಿದ ಮುಡಿಪು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಶಾಂತ್ ಕಾಜವ ಅವರ ಸಹೋದರ ಶರತ್ ಕಾಜವ(55) ಅವರ ಅಂತಿಮಯಾತ್ರೆಯಲ್ಲಿ ಭಾಗವಹಿಸಿದ ವಿಧಾನಸಭಾ ಸ್ಪೀಕರ್ ಯು.ಟಿ ಖಾದರ್ ಶವಕ್ಕೆ ಹೆಗಲುಕೊಟ್ಟು ಮಾನವೀಯತೆ ಮೆರೆದರು. ಮುಡಿಪು ಮಿತ್ತಕೋಡಿ ನಿವಾಸಿ ಶರತ್ ಕಾಜವ ಇಂದು ನಸುಕಿನ ಜಾವ ಹೃದಯಾಘಾತಕ್ಕೊಳಗಾಗಿ ಅಕಾಲಿಕವಾಗಿ ಸಾವನ್ನಪ್ಪಿದ್ದರು. ವಿಚಾರ ಬೆಳಕಿಗೆ ಬರುತ್ತಿದ್ದಂತೆ ವಿಧಾನಸಭಾ ಸ್ಪೀಕರ್ ಯು.ಟಿ ಖಾದರ್ ಅವರು ಪೂರ್ವನಿಗದಿ ಪಡಿಸಿದ
ಸುಳ್ಯಪದವು: ಮನೆಯ ಸಮೀಪ ಮರದದಿಮ್ಮಿಯನ್ನು ವಾಹನಕ್ಕೆ ಲೋಡ್ ಮಾಡುತ್ತಿರುವಾಗ ಮರದ ದಿಮ್ಮಿ ಮೈ ಮೇಲೆ ಬಿದ್ದು ಪಡುವನ್ನೂರು ಗ್ರಾಮದ ಸುಳ್ಯ ಪದವು ಬಟ್ಟ್ಯಂಗಳ ನಿವಾಸಿ ಗೋಪಾಲಕೃಷ್ಣ ಎಂಬವರು ಮೃತಪಟ್ಟ ಘಟನೆ ಇಂದು ಮುಂಜಾನೆ ನಡೆದಿದೆ. ತನ್ನ ಮನೆಯ ಸಮೀಪ ಇರುವ ಮಾವಿನ ಮರದ ದಿಮ್ಮಿಗಳನ್ನು ಜೆಸಿಬಿ ಮೂಲಕ ಟಿಪ್ಪರ್ ವಾಹನಕ್ಕೆ ಲೋಡ್ ಮಾಡಲಾಗಿತ್ತು. ಟಿಪ್ಪರ್ ವಾಹನದ ಹಿಂದಿನ ಬಾಗಿಲನ್ನು ಸರಿಪಡಿಸುವ ಸಂದರ್ಭದಲ್ಲಿ ಮರದ ದಿಮ್ಮಿ ಹಿಂದಕ್ಕೆ ಬಂದು ಮೈಮೇಲೆ ಬಿದ್ದು
ಬಂಟ್ವಾಳ ಪುರಸಭೆಯ ವತಿಯಿಂದ ನನ್ನ ಲೈಫ್ – ನನ್ನ ಸ್ವಚ್ಛನಗರ ಕಾರ್ಯಕ್ರಮದ ಅಂಗವಾಗಿ ಸ್ವಚ್ಛತಾ ಕಾರ್ಯಕ್ರಮ ಬಿ.ಸಿ.ರೋಡಿನ ಕೈಕಂಬ ಬಳಿಕ ಪರ್ಲಿಯಾ ಹಾಗೂ ಕೊಡಂಗೆ ಬಳಿ ನಡೆಯಿತು. ಮಂಗಳೂರು ನಗರ ಯೋಜನಾ ಕೋಶದ ಯೋಜನಾ ನಿರ್ದೇಶಕ ಅಭಿದ್ ಗದ್ಯಾಲ್ ಸ್ವಚ್ಛತಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ಸಂದರ್ಭ ಪುರಸಭೆ ಮುಖ್ಯಾಧಿಕಾರಿ ಲೀನಾ ಬ್ರಿಟ್ಟೋ, ಆರೋಗ್ಯ ನಿರೀಕ್ಷಕ ರತ್ನ ಪ್ರಸಾದ್, ಪ್ರಮುಖರಾದ ವಸಂತಿ ಗಂಗಾಧರ್, ಎ. ದಾಮೋದರ ಸಂಚಯಗಿರಿ, ಮಚ್ಚೇಂದ್ರ
ಮೂಡುಬಿದಿರೆ: ನನ್ನ ಲೈಫ್ ನನ್ನ ಸ್ವಚ್ಛ ನಗರ ಕಾರ್ಯಕ್ರಮದಡಿ ವಿಶ್ವಪರಿಸರ ದಿನಾಚರಣೆ ಅಂಗವಾಗಿ ಪುರಸಭೆಯ ನೇತೃತ್ವದಲ್ಲಿ ಬೃಹತ್ ಸ್ವಚ್ಛತಾ ಅಭಿಯಾನಕ್ಕೆ ಸ್ವರಾಜ್ಯ ಮೈದಾನದಲ್ಲಿ ಚಾಲನೆ ನೀಡಲಾಯಿತು. ಮುಖ್ಯಾಧಿಕಾರಿ ಶಿವ ನಾಯ್ಕ್ ಪ್ರತಿಜ್ಞಾವಿಧಿ ಬೋಧಿಸಿದರು. ಪರಿಸರ ಅಭಿಯಂತರೆ ಶಿಲ್ಪಾ ಎಸ್. ಪ್ರಾಸ್ತಾವಿಕವಾಗಿ ಮಾತನಾಡಿ, ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯವು ಸ್ವಚ್ಛ ಭಾರತ್ ಮಿಷನ್ ನಗರ- 2.0 ಯೋಜನೆಯಡಿ ನನ್ನ ಲೈಫ್ ನನ್ನ ಸ್ವಚ್ಛ ನಗರದ
ಬಂಟರ ಸಂಘ ( ರಿ) ಸುರತ್ಕಲ್ 2023-25 ರ ಸಾಲಿನ ಅಧ್ಯಕ್ಷರಾಗಿ ಲೋಕಯ್ಯ ಶೆಟ್ಟಿ ಮುಂಚೂರು, ಪ್ರಧಾನ ಕಾರ್ಯದರ್ಶಿಯಾಗಿ ಲೀಲಾಧರ ಶೆಟ್ಟಿ ಕಟ್ಲ ಆಯ್ಕೆಸುರತ್ಕಲ್ : ಬಂಟರ ಸಂಘ (ರಿ) ಸುರತ್ಕಲ್ ಇದರ 2023-25 ನೇ ಸಾಲಿನ ನೂತನ ಅಧ್ಯಕ್ಷರಾಗಿ ಮುಂಚೂರು ಲೋಕಯ್ಯ ಶೆಟ್ಟಿ ಅವಿರೋಧವಾಗಿ ಆಯ್ಕೆಗೊಂಡರು.ಉಪಾಧ್ಯಕ್ಷರಾಗಿ ಪುಷ್ಪರಾಜ ಶೆಟ್ಟಿ ಕುಡುಂಬೂರು, ಪ್ರಧಾನ ಕಾರ್ಯದರ್ಶಿಯಾಗಿ ಲೀಲಾಧರ ಶೆಟ್ಟಿ ಕಟ್ಲ, ಕೋಶಾಧಿಕಾರಿಯಾಗಿ ಅವಿನಾಶ್ ಶೆಟ್ಟಿ, ಜೊತೆ ಕಾರ್ಯದಶಿಯಾಗಿ
ಬಜಪೆ :ಬಜಪೆ ಪೊಲೀಸ್ ಠಾಣಾ ವ್ಯಾಪ್ತಿಯ ತಾರಿಕಂಬ್ಲ,ಮತ್ತು ಪೊರ್ಕೋಡಿ ದ್ವಾರದ ಬಳಿ ಗಾಂಜಾ ಸೇವನೆ ಮಾಡುತಿದ್ದ ಇಬ್ಬರು ವ್ಯಕ್ತಿಗಳನ್ನು ಬಜಪೆ ಪೊಲೀಸರು ಬಂಧಿಸಿದ್ದಾರೆ.ಬಂಧಿತರನ್ನು ಅಂಬೇಡ್ಕರ್ ನಗರ ಪೊರ್ಕೋಡಿ ಕೆಂಜಾರು ಗ್ರಾಮದ ನಿವಾಸಿಗಳಾದ ಆತೀಕ್ ರೆಹಮಾನ್ (24 ) ಹಾಗೂ ಫಾಜೀಲ್( 25 ) ಎಂದು ಗುರುತಿಸಲಾಗಿದೆ.ಅವರನ್ನು ವಶಕ್ಕೆ ಪಡೆದು ವೈದ್ಯಕೀಯ ತಪಾಸಣೆಯಲ್ಲಿ ಗಾಂಜಾಸೇವನೆ ಮಾಡಿದ ಬಗ್ಗೆ ದೃಡಪಟ್ಟ ಮೇರೆಗೆ ಪ್ರಕರಣ ದಾಖಲಾಗಿದೆ. ಬಜಪೆ ಪೊಲೀಸ್ ಠಾಣಾ




























