ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಘೋಷಣೆ ಮಾಡಿದ್ದು, ನಾನು ಸ್ವಾಗತಿಸುತ್ತೇನೆ. ಆದರೆ ಇದಕ್ಕೆ ಹಣದ ಮೂಲ, ಹಣದ ಕ್ರೋಢೀಕರಣ, ಎಷ್ಟು ವರ್ಷ ಇರುತ್ತದೆ ಎಂಬ ಬಗ್ಗೆ ಶ್ವೇತಪತ್ರ ಹೊರಡಿಸಲಿ ಎಂದು ಸಂಸದ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಆಗ್ರಹಿಸಿದ್ದಾರೆ. ಮಂಗಳೂರಿನಲ್ಲಿ ಮಾತನಾಡಿದ ಅವರು, ಫಲಿತಾಂಶದ 24 ಗಂಟೆ ಅಂತ ಹೇಳಿ ಜನಾಕ್ರೋಶದ ಬಳಿಕ ತಡವಾಗಿ
ದೆಹಲಿ: ಒಡಿಶಾದ ಬಾಲಸೋರ್ ಜಿಲ್ಲೆಯ ಬಹನಾಗಾ ರೈಲು ನಿಲ್ದಾಣದ ಬಳಿ ಶುಕ್ರವಾರ ಭೀಕರ ರೈಲು ದುರಂತಸಂಭವಿಸಿದೆ. ಘಟನೆಯಲ್ಲಿ ನೂರಾರು ಮಂದಿ ಮೃತಪಟ್ಟಿದ್ದು ಸಾವಿನ ಸಂಖ್ಯೆ ಏರುತ್ತಲೇ ಇದೆ. ಅಪಘಾತ ಸಂಬಂಧ ಪ್ರಧಾನಿ ನರೇಂದ್ರ ಮೋದಿ ಅವರು ತುರ್ತು ಸಭೆ ಕರೆದಿದ್ದಾರೆ. ಪರಿಸ್ಥಿತಿಯನ್ನು ಅವಲೋಕಿಸಲು ಸಭೆ ಕರೆಯಲಾಗಿದ್ದು ಸಂಬಂಧಿತ ಅಧಿಕಾರಿಗಳ ಜೊತೆ ಚರ್ಚೆ ನಡೆಯಲಿದೆ.
ಒಡಿಶಾದ ಬಾಲಸೋರ್ ಜಿಲ್ಲೆ ಬಹನಾಗ ಬಳಿ ಸಂಭವಿಸಿದ ರೈಲು ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ರೈಲಿನಲ್ಲಿದ್ದ ಕರ್ನಾಟಕದ ಎಲ್ಲಾ ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ. ಕರ್ನಾಟಕದಿಂದ ಹೋಗಿರುವ ರೈಲಿಗೂ ಸಹ ಹಾನಿಯಾಗಿದೆ. 23 ರೈಲ್ವೆ ಬೋಗಿಗಳ ಪೈಕಿ 3 ಬೋಗಿಗೆ ಮಾತ್ರ ಹಾನಿಯಾಗಿದೆ. ಹಾನಿಯಾದ ಬೋಗಿಯಲ್ಲಿ ಕರ್ನಾಟಕದವರು ಇದ್ದ ಮಾಹಿತಿ ಇಲ್ಲ. ನಿನ್ನೆಯಿಂದಲೂ ರೈಲ್ವೆ ಇಲಾಖೆ ಅಧಿಕಾರಿಗಳು ನಮ್ಮ ಸಂಪರ್ಕದಲ್ಲಿದ್ದಾರೆ ಎಂದು ರೈಲ್ವೆ ಡಿಐಜಿ ಶಶಿಕುಮಾರ್ ಹೇಳಿದ್ದಾರೆ.
ಒಒಡಿಶಾದ ಬಾಲಸೋರ್(Balasore)ಜಿಲ್ಲೆಯ ಬಹನಾಗ ರೈಲು ನಿಲ್ದಾಣದ ಬಳಿ ಎಕ್ಸ್‌ಪ್ರೆಸ್ ರೈಲು ಅಪಘಾತಕ್ಕೀಡಾಗಿದ್ದು, ಮೃತಪಟ್ಟವರ ಸಂಖ್ಯೆ 240ಕ್ಕೆ ಏರಿಕೆಯಾಗಿದೆ. ಘಟನಾ ಸ್ಥಳಕ್ಕೆ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಭೇಟಿ ನೀಡಿ ಪರಿಶೀಲನೆ ನಡೆಸಿ, ಅಧಿಕಾರಿಗಳಿಂದ ಮಾಹಿತಿ ಪಡೆಯುತ್ತಿದ್ದಾರೆ.
ಉಳ್ಳಾಲ: ಟೊಯಿಂಗ್ ವಾಹನ ಢಿಕ್ಕಿ ಹೊಡೆದು ರಸ್ತೆ ದಾಟುತ್ತಿದ್ದ ಪಾದಚಾರಿ ವೃದ್ದರೋರ್ವರು ಸಾವನ್ನಪ್ಪಿರುವ ಘಟನೆ ತೊಕ್ಕೊಟ್ಟು ಕಲ್ಲಾಪು ರಾ.ಹೆ.66 ರಲ್ಲಿ ಶುಕ್ರವಾರ ಸಂಭವಿಸಿದೆ.ಉಳ್ಳಾಲ ಕಡೆಗೆ ತೆರಳುತ್ತಿದ್ದ ಟೋಯಿಂಗ್ ವಾಹನ ಅಪಘಾತ ಸಂಭವಿಸಿದೆ. ಮೃತ ವ್ಯಕ್ತಿ ಅಂದಾಜು 70 ರ ಹರೆಯದವರಾಗಿದ್ದು, ಯಾವುದೇ ಗುರುತಿನ ಚೀಟಿಗಳು ಲಭ್ಯವಾಗಿಲ್ಲ. ವಾರೀಸುದಾರರಿದ್ದಲ್ಲಿ ಮಂಗಳೂರು ದಕ್ಷಿಣ ಸಂಚಾರಿ ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ತಿಳಿಸಲಾಗಿದೆ.
ಕಂಬಳಬೆಟ್ಟುವಿನಲ್ಲಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿಗಳನ್ನು ತಂಡವೊಂದು ಅಡ್ಡಗಟ್ಟಿ ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿದ ಬಗ್ಗೆ ವಿಟ್ಲ ಠಾಣೆಯಲ್ಲಿ ಶನಿವಾರ ಪ್ರಕರಣ ದಾಖಲಾಗಿದೆ. ಮಣಿ ನಾಲ್ಕೂರು ಗ್ರಾಮದ ಅಜಲುಮೊಗೆರು ನಿವಾಸಿ ಮಹಮ್ಮದ್ ಸರ್ವನ್ (27) ಹಾಗೂ ಜತೆಗೆ ಕೆಲಸ ಮಾಡುವ ಫಾರೂಕ್ ಹಲ್ಲೆಗೊಳಗಾದ ವ್ಯಕ್ತಿಗಳು. ಕಂಬಳಬೆಟ್ಟು ಉರಿಮಜಲು ನಿವಾಸಿಗಳಾದ ಜಸೀಲ್, ಇಸುಬು, ಜಿಯಾದ್, ಉಸ್ಮಾನ್, ಶರೀಫ್ ಹಾಗೂ ಇತರೆ ಮೂರು ಜನರು ಹಲ್ಲೆಮಾಡಿದ
ಮಣಿಪುರ ರಾಜ್ಯದಲ್ಲಿ ಮೀಸಲಾತಿ ವಿಚಾರದಲ್ಲಿ ಭುಗಿಲೆದ್ದ ಹಿಂಸಾಚಾರದಲ್ಲಿ ಚರ್ಚ್ ಹಾಗೂ ಕ್ರಿಶ್ಚಿಯನ್ನರ ಮೇಲೆ ನಡೆದ ವ್ಯಾಪಕ ದಾಳಿಯನ್ನು ಖಂಡಿಸಿ ಹಾಗೂ ಮಣಿಪುರದಲ್ಲಿ ಶಾಂತಿ ಸುವ್ಯವಸ್ಥೆಯನ್ನು ಕಾಪಾಡಲು ಒತ್ತಾಯಿಸಿ ದ.ಕ.ಜಿಲ್ಲಾ ಸಮಾನ ಮನಸ್ಕ ಸಂಘಟನೆಗಳ ಒಕ್ಕೂಟ, ಕಥೋಲಿಕ್ ಸಭಾ ಮಂಗಳೂರು ಪ್ರದೇಶ(ರಿ) ಮತ್ತು ಯುನೈಟೆಡ್ ಕ್ರಿಶ್ಚಿಯನ್ ಫೋರಂ ಮಂಗಳೂರು ಇವುಗಳ ಜಂಟಿ ನೇತೃತ್ವದಲ್ಲಿ ತಾ.06-06-2023ರಂದು ಮಂಗಳವಾರ ಸಂಜೆ 4.30ಕ್ಕೆ ನಗರದ ಕ್ಲಾಕ್ ಟವರ್
ಬಂಟ್ವಾಳ ವರ್ತಕರ ವಿವಿಧೋದ್ದೇಶ ಸಹಕಾರಿ ಸಂಘ ನಿಯಮಿತ ಇದರ 13ನೇ ನೂತನ ಶಾಖೆಯು ಬಂಟ್ವಾಳ ತಾಲೂಕಿನ ಪೆರ್ನೆ ಚಂದ್ರ ಆರ್ಕೇಡ್ ಕಟ್ಟಡದಲ್ಲಿ ಶುಭಾರಂಭಗೊಳ್ಳಲಿದೆ. ಜೂನ್ 4ರಂದು ಬೆಳಿಗ್ಗೆ 10 ಗಂಟೆಗೆ ಉದ್ಘಾಟನಾ ಸಮಾರಂಭ ನಡೆಯಲಿದೆ. ಪರಮಪೂಜ್ಯ ಶ್ರಿ ಮೋಹನದಾಸ ಪರಮಹಂಸ ಸ್ವಾಮೀಜಿ ಅವರು ದೀಪ ಪ್ರಜ್ವಲನೆ ಹಾಗೂ ಅಶೀರ್ವಚನ ನೀಡಲಿದ್ದಾರೆ. ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರು ಕಚೇರಿ ಉದ್ಘಾಟಿಸಲಿದ್ದಾರೆ. ಬಂಟ್ವಾಳ ಶಾಸಕ ರಾಜೇಶ್ ನಾಯಕ್ ಅವರು ಭದ್ರತಾ ಕೊಠಡಿ
ಗೋ ಶಾಲೆ ಎಂಬುದು ನೋಡುಗರಿಗೆ ನಾವು ಕೂಡಾ ಎರಡು ದನಗಳನ್ನು ಸಾಕಿ ಅದರಿಂದ ಪ್ರಯೋಜನವನ್ನು ಪಡೆಯಬೇಕು. ಮತ್ತೊಬ್ಬರಿಗೆ ದನಗಳನ್ನು ಸಾಕುವುದಕ್ಕೆ ಪ್ರಚೋದನೆ ನೀಡುವಂತ್ತಿರ ಬೇಕೇ ವಿನಃ ವೃದ್ಧಾಶ್ರಮ ಸಹಿತ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಂತಾಗಬಾರದು ಎಂದು ಅದಮಾರು ಮಠದ ಕಿರಿಯ ಶ್ರೀಗಳಾದ ಈಶ ಪ್ರಿಯ ತೀರ್ಥರು ಹೇಳಿದ್ದಾರೆ. ಅವರು ಎಲ್ಲೂರು ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಕಾಪು ಶಾಸಕ ಸುರೇಶ್ ಶೆಟ್ಟಿ ಗುರ್ಮೆ ನೇತ್ರತ್ವದಲ್ಲಿ ನಡೆದ ಗೋವು ಪೂಜೆ ಹಾಗೂ ಗೋವು
ಕಾಂಜರಕಟ್ಟೆಯಿಂದ ಜಲ್ಲಿಕಲ್ಲು ಹೇರಿಕೊಂಡು ಉಡುಪಿ ಕಡೆಗೆ ಹೋಗುತ್ತಿದ್ದ ಟಿಪ್ಪರೊಂದು ಬಡ ಎರ್ಮಾಳು ಬಳಿ ನಿಯಂತ್ರಣ ತಪ್ಪಿ ರಸ್ತೆ ವಿಭಜಕದ ತಡೆಬೇಲಿಗಳನ್ನು ತುಂಡರಿಸಿಕೊಂಡು ಸಾಗಿ ಮಧ್ಯದಲ್ಲೇ ಸಿಲುಕಿಕೊಂಡಿದೆ. ಯಾವುದೋ ವಾಹನವೊಂದು ಅಡ್ಡ ಬಂದ ಕಾರಣ ಈ ಅಪಘಾತ ಸಂಭವಿಸಿದೆ ಎನ್ನುತ್ತಾರೆ ಟಿಪ್ಪರ್ ಚಾಲಕ, ಅದೃಷ್ಟವಶಾತ್ ಯಾವುದೇ ವಾಹನಗಳಾಗಲೀ ಪಾದಚಾರಿಗಳಾಗಲೀ ಆ ಭಾಗದಲ್ಲಿ ಸಂಚರಿಸದ ಕಾರಣ ಯಾವುದೇ ಅಪಾಯ ಸಂಭವಿಸಿಲ್ಲ. ಜಲ್ಲಿಕಲ್ಲುಗಳು ಹೆದ್ದಾರಿ ಎಲ್ಲೆಡೆ




























