ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿನ ಕುಡಿಯುವ ನೀರಿನ ಸಮಸ್ಯೆ ಕುರಿತಂತೆ ಗಂಭೀರ ಚರ್ಚೆ ಮಂಗಳೂರು ಮಹಾನಗರ ಪಾಲಿತೆ ಸಾಮಾನ್ಯ ಸಭೆಯಲ್ಲಿ ನಡೆಯಿತು. ಸಭೆ ಆರಂಭವಾಗುತ್ತಿದ್ದಂತೆ ವಿಷಯ ಪ್ರಸ್ತಾಪಿಸಿದ ವಿಪಕ್ಷ ನಾಯಕ ನವೀನ್ ಡಿಸೋಜ ನಗರದ ಬಹುತೇಕ ವಾರ್ಡ್‍ಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗಿದೆ. ಎತ್ತರದ ಪ್ರದೇಶಗಳಿಗೆ ನೀರು
ಬಂಟ್ವಾಳ: ಧರ್ಮಸ್ಥಳ- ಮಂಗಳೂರು ಸರಕಾರಿ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಮುಂಭಾಗದ ಸೀಟಿನಲ್ಲಿದ್ದ ಮಹಿಳೆಯ ಜಡೆಯನ್ನು ಹಿಂಭಾಗದ ಸೀಟಿನಲ್ಲಿದ್ದ ವ್ಯಕ್ತಿಯೋರ್ವ ಸವರುವ ವಿಡಿಯೋ ತುಣುಕು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಘಟನೆಯ ಬಗ್ಗೆ ಹಿಂದು ಜಾಗರಣ ವೇದಿಕೆ ಬಂಟ್ವಾಳ ತಾಲೂಕು ಘಟಕ ಬಂಟ್ವಾಳ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದು ಆರೋಪಿಯನ್ನು ಶೀಘ್ರವಾಗಿ ಬಂಧಿಸುವಂತೆ ಒತ್ತಾಯಿಸಿದೆ.
ಉಜಿರೆ : ಸಾಹಿತ್ಯದಲ್ಲಿ ಬಳಕೆಯಾಗುವ ಭಾಷೆ ಸಂವಹಿಸುವ ವಿವಿಧ ಬಗೆಯ ಅರ್ಥವಿನ್ಯಾಸಗಳೊಂದಿಗೆ ಅನುಸಂಧಾನ ನಡೆಸುವ ಸಾಮಥ್ರ್ಯ ರೂಢಿಸಿಕೊಳ್ಳಬೇಕು ಎಂದು ವಿಮರ್ಶಕ ಪ್ರೋ. ಟಿ.ಪಿ.ಅಶೋಕ ಅಭಿಪ್ರಾಯಪಟ್ಟರು. ಉಜಿರೆ ಎಸ್. ಡಿ. ಎಂ ಸ್ವಾಯಕ್ತ ಮಹಾವಿದ್ಯಾಲಯದಲ್ಲಿ ಕನ್ನಡ ಸಂಘ ಹಾಗೂ ಹೆಗ್ಗೋಡು ನೀನಾಸಂ ಪ್ರತಿಷ್ಠಾನ ಸಹಯೋಗದಲ್ಲಿ ಆಯೋಜಿತ 25ನೆ ಸಾಹಿತ್ಯ ಶಿಬಿರ ರಜತ ಸಂಭ್ರಮದ ಕಲಾನುಸಂದಾನ ಶಿಬಿರದ ಮೊದಲನೇ ಗೋಷ್ಟಿ ಕಾವ್ಯಾನುಸಂದಾನದಲ್ಲಿ ಅವರು ಮಾತನಾಡಿದರು.
ಹರೀಶ್ ಪೂಂಜ ಅವರು ವೇದಿಕೆಯಲ್ಲಿ ತನಗೆ ಮುಸ್ಲಿಮರ ಮತ ಬೇಡ ಎಂದು ಹೇಳಿ ಹಿಂದುಗಳನ್ನು ದಾರಿತಪ್ಪಿಸಿ ಮುಸ್ಲಿಮರಿಗೆ ಕ್ರೈಸ್ತ ರಿಗೆ ನೆರವಾಗಿದ್ದಾರೆ. ಅವರಿಗೆ ಕೊಡುವ ಬಗ್ಗೆ ನಮ್ಮ ತಕರಾರಿಲ್ಲ. ಆದರೆ ಹಿಂದೂಗಳ ಮುಂದೆ ಬಂದು ಸುಳ್ಳು ಹೇಳುವುದು ಯಾಕೆ ಎಂದು ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆಯ ಸಂಚಾಲಕ ಮಹೇಶ್ ಶೆಟ್ಟಿ ತಿಮರೋಡಿ ಪ್ರಶ್ನಿಸಿದ್ದಾರೆ. ಅವರು ಬೆಳ್ತಂಗಡಿಯಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿ, ಇಂತಹ ಇಬ್ಬಗೆಯ ನೀತಿಯನ್ನು ಅಂದಿನಿಂದಲೂ
ಪತ್ತೂರು: ಪುತ್ತೂರಿನಲ್ಲಿ ಪೊಲೀಸ್ ದೌರ್ಜನ್ಯ ಯಾರು ಮಾಡಿಸಿದ್ದಾರೆಂದು ಇಡೀ ರಾಜ್ಯಕ್ಕೆ ಗೊತ್ತಿದೆ. ಈ ಬಗ್ಗೆ ಅಧಿಕೃತವಾಗಿ ಮಾಹಿತಿ ಕೇಳಿದ್ದೇನೆ. ಮಾಹಿತಿ ಬಂದ ಕೂಡಲೇ ಕೊಡುತ್ತೇನೆ ಎಂದು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಹೇಳಿದ್ದಾರೆ. ಪುತ್ತೂರು ನಗರಸಭೆಯಲ್ಲಿ ಆಯೋಜಿಸಲಾಗಿದ್ದ ಅಧಿಕಾರಿಗಳ ಮತ್ತು ಸಿಬ್ಬಂದಿಗಳ ಸಭೆಗೂ ಮುನ್ನ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದರು. ಇನ್ನು ಮಳೆಗಾಲ ಎದುರಿಸಲು ಎಲ್ಲಾ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಹಂತ ಹಂತವಾಗಿ
ಪುತ್ತೂರು : ದಾಖಲೆ ಪತ್ರಗಳಿಗಾಗಿ ತಾಲೂಕು ಕಛೇರಿಯಲ್ಲಿ ಅಲೆದಾಟ ಮಾಡುತ್ತಿದ್ದ ಮಹಿಳೆಯ ಅಹವಾಲು ಕೇಳಿದ ಶಾಸಕ ಅಶೋಕ್ ಕುಮಾರ್ ರೈ ಅಧಿಕಾರಿಗೆ ಖಡಕ್ ಎಚ್ಚರಿಕೆ ನೀಡಿದ ಘಟನೆ ನಡೆದಿದೆ. ಸಣ್ಣ ದಾಖಲೆಗಾಗಿ ಒಂದು ತಿಂಗಳಿನಿಂದ ಅಲೆಡಾಡಿಸುತ್ತಿದ್ದ ವಿಚಾರ ತಿಳಿದ ಶಾಸಕ ಅಶೋಕ್ ಕುಮಾರ್ ರೈ ಮಹಿಳೆಯೊಂದಿಗೆ ಅಧಿಕಾರಿಯ ಕಛೇರಿಗೆ ತೆರಳಿದ್ದರು. ಮಹಿಳೆಯ ದಾಖಲೆ ಪತ್ರಗಳನ್ನು ತಕ್ಷಣವೇ ನೀಡುವಂತೆ ತಾಕೀತು ಮಾಡಿದ್ದಾರೆ. ಇಂಥ ಕೆಲಸಗಳು ಇಂದಿಗೇ ಕೊನೆಯಾಗಬೇಕು, ಬಡವರಿಗೆ
ಕಡಬದ ಆಲಂಕಾರು ಶ್ರೀ ದುರ್ಗಾಂಬಾ ಜನರಲ್ ಸ್ಟೋರ್‍ನ ಮಾಲಕ, ಆಲಂಕಾರು ನಿವಾಸಿ ಚಂದ್ರಶೇಖರ ಪೂಜಾರಿ ಶಾಂತಿಮೊಗರು ಸೇತುವೆಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇಂದು ಮುಂಜಾನೆ 5 ಗಂಟೆ ವೇಳೆಗೆ ಮನೆಯಲ್ಲಿ ಚೀಟಿ ಬರೆದು ತನ್ನ ಕಾರಿನಲ್ಲಿ ಶಾಂತಿಮೊಗರುಗೆ ಹೋದವರು ಅಲ್ಲಿ ಸೇತುವೆ ಮೇಲೆ ಕಾರು ನಿಲ್ಲಿಸಿ ಬಲೂನ್ ಕಟ್ಟಿಕೊಂಡು ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಚಂದ್ರಶೇಖರ ಅವರು ಆಲಂಕಾರು ಮೂರ್ತೆದಾರರ ಸೇವಾ ಸಹಕಾರಿ
ಮೂಡುಬಿದಿರೆ: ಮಂಗಳೂರು ವಿಶ್ವವಿದ್ಯಾಲಯ ಹಾಗೂ ವಾಮದಪದವು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆಶ್ರಯದಲ್ಲಿ ನಡೆದ ಅಂತರ ಕಾಲೇಜು ಹಗ್ಗ ಜಗ್ಗಾಟದ ಮಹಿಳಾ ವಿಭಾಗದಲ್ಲಿ ಆಳ್ವಾಸ್ ಕಾಲೇಜು ಚಾಂಪಿಯನ್ ಹಾಗೂ ಪುರುಷರ ತಂಡವು ರನ್ನರ್ ಅಪ್ ಸ್ಥಾನ ಪಡೆದುಕೊಂಡಿದೆ.ಮಹಿಳೆಯರ ಫೈನಲ್‌ನಲ್ಲಿ ಆಳ್ವಾಸ್ ಕಾಲೇಜು ತಂಡವು ಅಜ್ಜರಕಾಡು ಡಾ.ಜಿ.ಶಂಕರ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ತಂಡವನ್ನು ಸೋಲಿಸಿದ್ದರೆ, ಸೆಮಿಫೈನಲ್‌ನಲ್ಲಿ ಉಜಿರೆ ಎಸ್‌ಡಿಎಂ ಕಾಲೇಜು ವಿರುದ್ಧ ಜಯ
ಉಪ್ಪುಂದ: ಪದವೀಧರರು ಉದ್ಯೋಗಕ್ಕೆ ಸೇರುವ ಸಂದರ್ಭ ಸಲ್ಲಿಸುವ ಅಂಕಪಟ್ಟಿಯ ಪರಿಶೀಲನೆ (ವೆರಿಫಿಕೇಶನ್) ಕಡ್ಡಾಯ. ಆದರೆ ಅಂಕಪಟ್ಟಿ ಪರಿಶೀಲನೆಗೆ ಮಂಗಳೂರು ವಿ.ವಿ.ಯ ವಿದ್ಯಾರ್ಥಿಗಳು ದುಬಾರಿ ಶುಲ್ಕ ತೆರಬೇಕಾಗಿದ್ದು, ಇದನ್ನು ಇಳಿಸಲು ಕ್ರಮ ಕೈಗೊಳ್ಳಬೇಕು ಎಂದು ವಿ.ವಿ.ಯ ಉಪಕುಲಪತಿಗಳಿಗೆ ನೂತನ ಶಾಸಕ ಬೈಂದೂರಿನ ಗುರುರಾಜ್ ಗಂಟೆಹೊಳೆ ಟ್ವಿಟ್ ಮೂಲಕ ಮನವಿ ಮಾಡಿದ್ದು ಮನವಿಗೆ ಮಂಗಳೂರು ವಿ.ವಿ. ಸ್ಪಂದಿಸಿದೆ. ಪದವೀಧರ ತನ್ನ ೬ ಸೆಮಿಸ್ಟರ್‌ಗಳ ಅಂಕಪಟ್ಟಿಗಳನ್ನು
ಬೈಂದೂರಲ್ಲಿ ನಡೆದ ಕಹಿ ಘಟನೆ ಜನರ ಮನದಿಂದ ಇನ್ನೂ ಮಾಸಿಲ್ಲ…ಇದೀಗ ಅಂಥಹುದೇ ಮರದ ಕಾಲು ಸೇತುವೆಯೊಂದು ಎಲ್ಲೂರು ಪಡುಬೈಲಿನಲ್ಲಿ ಬಲಿಗಾಗಿ ಕಾದು ಕುಳಿತಂತ್ತಿದೆ. ಮರದ ಕಾಲು ಸೇತುವೆಯಲ್ಲಿ ಭಯದಲ್ಲೇ ಹೋಗಬೇಕಾದ ಪರಿಸ್ಥಿತಿ ಇದೆ. ಅಧಿಕಾರಿಗಳು ಎಚ್ಚೆತ್ತು ಕೂಡಲೇ ಸೂಕ್ತ ಪರಿಹಾರ ಕಲ್ಪಿಸುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ. ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಎಲ್ಲೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪಡುಬೈಲಿನ ಜನರ ಬದುಕು ಒಂದು ರೀತಿಯಲ್ಲಿ ಗೃಹ ಬಂಧನವೇ ಸರಿ.




























