Home Posts tagged V4News (Page 466)

ಉಚ್ಚಿಲ ಬಡಾ ಪಂಚಾಯತ್‍ನ ತ್ಯಾಜ್ಯ ಸಂಸ್ಕರಣಾ ಘಟಕಕ್ಕೆ ಬೆಂಕಿ

ಉಚ್ಚಿಲ ಬಡಾ ಗ್ರಾಮ ಪಂಚಾಯತಿಯ ತ್ಯಾಜ್ಯ ಸಂಸ್ಕರಣಾ ಘಟಕದಲ್ಲಿ ಬೆಂಕಿ ಅವಘಡ ಸಂಭವಿಸಿ 8 ಲಕ್ಷಕ್ಕೂ ಅಧಿಕ ಮೌಲ್ಯದ ಸೊತ್ತುಗಳು ಬೆಂಕಿಗೆ ಆಹುತಿಯಾಗಿದೆ. ಪ್ಯಾಡ್ ಬರ್ನರ್ ಮತ್ತು ಪ್ಲಾಸ್ಟಿಕ್ ಮೋಲ್ಡಿಂಡಿಗ್ ಯಂತ್ರಗಳ ಮೌಲ್ಯ ಸುಮಾರು 4 ಲಕ್ಷದ 60 ಸಾವಿರ ಆಗಿದ್ದು, ಅಂತೆಯೇ ಕಟ್ಟಡ ಇನ್ನಿತರ ಪರಿಕರಗಳು ಸೇರಿ 8 ಲಕ್ಷಕ್ಕೂ ಅಧಿಕ ಮೌಲ್ಯದ ಸೊತ್ತು ಬೆಂಕಿಗೆ

‘ದೂರ ಸಂಪರ್ಕ ಸಾಧನಗಳ ಬಳಕೆ ಮಿತವಾಗಿರಲಿ’

ಉಜಿರೆ: ದೂರ ಸಂಪರ್ಕ ಸಾಧನಗಳ ಬಳಕೆ ಮಿತವಾಗಿರಲಿ ಎಂದು ಎಸ್.ಡಿ.ಎಂ ಕಾಲೇಜಿನ ಗಣಕಯಂತ್ರ ವಿಜ್ಞಾನ ವಿಭಾಗದ ಪ್ರೊ. ಶೈಲಜಾ ಅಭಿಪ್ರಾಯಪಟ್ಟರು.ಎಸ್.ಡಿ.ಎಂ. ಪದವಿ ಕಾಲೇಜಿನ ಭೌತಶಾಸ್ತ್ರ ವಿಭಾಗವು ಗುರುವಾರ ‘ವಿಶ್ವ ದೂರ ಸಂಪರ್ಕ ದಿನ ಆಯೋಜಿಸಿದ್ದ ಗುರುತ್ವ-2023 ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು.ದೂರ ಸಂಪರ್ಕ ಸೌಲಭ್ಯದಿಂದಾಗಿ ವಿಶ್ವದ ಗಾತ್ರ ಸಣ್ಣದಾಗಿದೆ. ಪ್ರಪಂಚದ ಯಾವುದೇ ಮೂಲೆಯಲ್ಲಿ ನಡೆಯುತ್ತಿರುವ ವಿದ್ಯಮಾನಗಳನ್ನು ತಕ್ಷಣ ವಿಶ್ವದಾದ್ಯಂತ ಪಸರಿಸುವ

ವಾರಂಬಳ್ಳಿ ಗ್ರಾಮ ಪಂಚಾಯತಿ – ಗ್ರಾಮೀಣ ಮಕ್ಕಳಿಗಾಗಿ ಬೇಸಿಗೆ ಶಿಬಿರ

ವಾರಂಬಳ್ಳಿ ಗ್ರಾಮ ಪಂಚಾಯತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರದ ಮೂಲಕ 7 ದಿನಗಳ ಕಾಲ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ ಗ್ರಾಮಪಂಚಾಯತಿ ಸಭಾಂಗಣದಲ್ಲಿ ಜರುಗಿತು.ಕನ್ನಡ ಮತ್ತು ಆಂಗ್ಲ ಮಾಧ್ಯಮ ಶಿಕ್ಷಣದ 8 ವರ್ಷದಿಂದ 13 ವರ್ಷದ 50 ಮಕ್ಕಳಿಗೆ ಪ್ರತೀ ದಿನ ಬೆಳಿಗ್ಗೆ 10 ಗಂಟೆಯಿಂದ 1-30 ರ ತನಕ ನಾನಾ ಸಂಪನ್ಮೂಲ ವ್ಯಕ್ತಿಗಳಿಂದ ವಿಜ್ಞಾನ , ಗಣಿತ , ನಾಯಕತ್ವ ,ಮನರಂಜನೆ ,ಕ್ರೀಡೆ , ಪರಿಸರ ಸಾಮಾಜಿಕ ಕಾಳಜಿಯ ಕುರಿತು ತರಬೇತಿ ನೀಡಲಾಗಿತ್ತು. ತರಬೇತಿ ಪಡೆದ […]

ಮೇ 27. ಉಳ್ಳಾಲ ಕಪ್-2023 – ವಾಲಿಬಾಲ್ ಪಂದ್ಯಾಟ

ದಕ್ಷಿಣ ಕನ್ನಡ ಜಿಲ್ಲಾ ವಾಲಿಬಾಲ್ ಅಸೋಸಿಯೇಶನ್ ವತಿಯಿಂದ ಉಳ್ಳಾಲ ತಾಲೂಕು ವಾಲಿಬಾಲ್ ಅಸೋಸಿಯೇಶನ್ ಅಶ್ರಯದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಪುರುಷರ ಮತ್ತು ಮಹಿಳೆಯರ ಹಗಲಿರುಳು ವಾಲಿಬಾಲ್ ಪಂದ್ಯಾಟ ಜಿಲ್ಲಾ ಚಾಂಪಿಯನ್ ಶಿಪ್ ಉಳ್ಳಾಲ ಕಪ್-2023 ಮೇ 27ರಂದು ಮುಡಿಪುವಿನ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ನಡೆಯಲಿದೆ. ಈ ಬಗ್ಗೆ ಮಂಗಳೂರಿನ ಪ್ರೆಸ್‍ಕ್ಲಬ್‍ನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ದಕ್ಷಿಣ ಕನ್ನಡ ಜಿಲ್ಲಾ ವಾಲಿಬಾಲ್

ಫೇಸ್ಬುಕ್‍ನಲ್ಲಿ ಶಾಸಕ ಅಶೋಕ್ ಕುಮಾರ್ ರೈಯವರ ನಿಂದನೆ -ಪರಸ್ಪರ ವಾಗ್ವಾದ

ಪುತ್ತೂರು: ಶಾಸಕ ಅಶೋಕ್ ಕುಮಾರ್ ರೈ ಅವರನ್ನು ಪೇಸ್ಬುಕ್‍ನಲ್ಲಿ ನಿಂದಿಸಿದ ವಿಚಾರಕ್ಕೆ ಸಂಬಂಧಿಸಿ ರೈ ಅಭಿಮಾನಿಗಳು ಹಾಗೂ ಯುವಕನ ನಡುವೆ ಪರಸ್ಪರ ವಾಗ್ವಾದ ನಡೆದಿದೆ. ಸುಳ್ಯ ತಾಲೂಕಿನ ಜಯನಗರ ನಿವಾಸಿ ಪ್ರಮೀತ್ ಎಂಬಾತ ಶಾಸಕರನ್ನು ಫೇಸ್ಬುಕ್‍ನಲ್ಲಿ ನಿಂದಿಸಿರುವ ಹಿನ್ನೆಲೆಯಲ್ಲಿ ರಾತ್ರಿ ಅವರ ಮನೆಗೆ ರೈ ಅಭಿಮಾನಿಗಳ ತಂಡ ಭೇಟಿ ನೀಡಿ ಮಾತುಕತೆ ನಡೆಸುವ ಸಂದರ್ಭದಲ್ಲಿ ಮಾತಿಗೆ ಮಾತು ಬೆಳೆದು ವಾಗ್ವಾದ ನಡೆದಿದೆ. ಪುತ್ತೂರು ಪೋಲಿಸ್ ದೌರ್ಜನ್ಯ

ರಸ್ತೆ ಕಾಮಗಾರಿ ಅವ್ಯವಸ್ಥೆ – ಪುತ್ತೂರು ಶಾಸಕರಿಂದ ಅಧಿಕಾರಿಗಳಿಗೆ ತರಾಟೆ

ಪುತ್ತೂರು: ಉಪ್ಪಿನಂಗಡಿ-ಪುತ್ತೂರು ರಸ್ತೆ ಕಾಮಗಾರಿ ವಿಳಂಬವಾದ ಕಾರಣಕ್ಕೆ ಪುತ್ತೂರು ಶಾಸಕ ಅಶೋಕ ಕುಮಾರ್ ರೈ ಅಧಿಕಾರಿ ಮತ್ತು ಗುತ್ತಿಗೆದಾರರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿ ಸ್ಥಳೀಯರ ಸಮಸ್ಯೆ ಆಲಿಸಿದ ಶಾಸಕ ಅಶೋಕ್ ಕುಮಾರ್ ರೈ, ಡ್ರೈನೇಜ್ ಮತ್ತು ಡಿವೈಡರ್ ಕಾಮಗಾರಿ ಅವ್ಯವಸ್ಥೆಯ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದರು. ಮಳೆಗಾಲ ಆರಂಭವಾದರೂ ಡ್ರೈನೇಜ್ ಸಮಸ್ಯೆ ಪರಿಹಾರ ಆಗದಿರುವುದು ಮತ್ತು ಮೂರು ವರ್ಷದಿಂದ ಕಾಮಗಾರಿ

ಮೇ 28ರಂದು ಯಕ್ಷಧ್ರುವ ಪಟ್ಲ ಸಂಭ್ರಮ-2023

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಮಂಗಳೂರು ಇದರ ಆಶ್ರಯದಲ್ಲಿ ಮೇ 27ರಂದು ಹೈಸ್ಕೂಲ್ ಮತ್ತು ಕಾಲೇಜು ವಿದ್ಯಾರ್ಥಿಗಳ ಯಕ್ಷಗಾನ ಸ್ಪರ್ಧೆ ಮೇ 28ರಂದು ಯಕ್ಷಧ್ರುವ ಪಟ್ಲ ಸಂಭ್ರಮವು ಅಡ್ಯಾರ್ ಗಾರ್ಡ್‍ನಲ್ಲಿ ನಡೆಯಲಿದೆ ಎಂದು ಸ್ಥಾಪಕಾಧ್ಯಕ್ಷ ಪಟ್ಲ ಸತೀಶ್ ಶೆಟ್ಟಿ ಹೇಳಿದರು. ಅವರು ನಗರದ ಪ್ರೆಸ್‍ಕ್ಲಬ್‍ನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿ, ಪಟ್ಲ ಫೌಂಡೇಶನ್ ವತಿಯಿಂದ ವಿನೂತನ ಕಾರ್ಯಕ್ರಮಗಳನ್ನು ನಡೆಸಿಕೊಂಡು ಬರಲಾಗುತ್ತಿದೆ. ಈ

ಕರಾವಳಿಯಾದ್ಯಂತ ಪಿರ್ಕಿಲು ಸಿನಿಮಾ ಮೇ 26ರಂದು ಬಿಡುಗಡೆ

ಕರಾವಳಿ ಸಿನಿಮಾಸ್ ಲಾಂಛನದಲ್ಲಿ ಎಚ್.ಡಿ .ಆರ್ಯ ನಿರ್ದೇಶನದಲ್ಲಿ ತಯಾರಾದ `ಪಿರ್ಕಿಲು’ ತುಳು ಸಿನಿಮಾ ಮೇ 26 ರಂದು ಕರಾವಳಿಯಾದ್ಯಂತ ಬಿಡುಗಡೆಯಾಗಲಿದೆ. ಸಿನಿಮಾದ ಪ್ರೀಮಿಯರ್ ಶೋ ನಗರದ ಭಾರತ್ ಸಿನಿಮಾಸ್‍ನಲ್ಲಿ ನಡೆಯಿತು. ಸತೀಶ್ ಪೆರ್ನೆ ಹಾಗೂ ಶಿವಪ್ರಸಾದ್ ಇಜ್ಜಾವು ನಿರ್ಮಾಣದಲ್ಲಿ ತಯಾರಾದ ಈ ಸಿನಿಮಾ ಹಾಸ್ಯಭರಿತ ಕೌಟುಂಬಿಕ ಕತೆಯ ಎಳೆಯನ್ನು ಹೊಂದಿದೆ. ಊರಿನ ಜನರಿಂದ ಪಿರ್ಕಿಲು ಕರೆಸಿಕೊಳ್ಳುವ ಹುಡುಗರು ಏನೆಲ್ಲ ಅವಾಂತರ ಸೃಷ್ಟಿಸುತ್ತಾರೆ

ಭಕ್ತಿಗೀತೆಯ ಮೂಲಕ ಉಚ್ಚಿಲ ದೇವಿಯ ದರುಶನ ಪಡೆದ ಶ್ರೀ ವಿದ್ಯಾಭೂಷಣ್

ಕರಾವಳಿ ತಡಿಯ ಪ್ರಸಿದ್ಧ ಲಕ್ಷ್ಮೀ ದೇವಿಯ ದೇವಸ್ಥಾನ ಹಾಗೂ ಮೊಗವೀರ ಸಮಾಜದ ಕುಲದೇವತೆಯಾದ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ವಿದ್ವಾನ್ ಶ್ರೀ ವಿದ್ಯಾಭೂಷಣರು ಭೇಟಿ ನೀಡಿದರು. ಇದೇ ವೇಳೆ ಅವರು ಭಾಗ್ಯದ ಲಕ್ಷ್ಮೀ ಬಾರಮ್ಮ ಹಾಡನ್ನು ಹಾಡಿ ಶ್ರೀ ದೇವಿಯ ದರ್ಶನವನ್ನು ಪಡೆದರು.

ಮಂಗಳೂರು ; ಟೇಕಾಫ್ ಗೆ ಸಿದ್ದವಾಗಿದ್ದ ವಿಮಾನಕ್ಕೆ ಹಕ್ಕಿ ಢಿಕ್ಕಿ

ಮಂಗಳೂರು : ಟೇಕಾಫ್ ಗೆ ಸಿದ್ದವಾಗಿದ್ದ ವಿಮಾನಕ್ಕೆ ಹಕ್ಕಿಯೊಂದು ಢಿಕ್ಕಿ ಹೊಡೆದಿರುವ ಘಟನೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ.ಇಂಡಿಗೋ ವಿಮಾನವು ಮಂಗಳೂರಿನಿಂದ ದುಬೈಗೆ ಹೊರಟಿತ್ತು. ಟ್ಯಾಕ್ಸಿ ವೇ ದಾಟಿ ರನ್ ವೇನಲ್ಲಿ ಸಾಗುತ್ತಿದ್ದ ವೇಳೆ ರನ್ ವೇನಲ್ಲಿ ವಿಮಾನದ ರೆಕ್ಕೆಗೆ ಹಕ್ಕಿ ಢಿಕ್ಕಿ ಹೊಡೆದಿದೆ ಎಂದು ತಿಳಿದು ಬಂದಿದೆ.  ತಕ್ಷಣ ಅಪಾಯದ ಸೂಚನೆ ಅರಿತು ಎಟಿಸಿಗೆ ಮಾಹಿತಿ ನೀಡಿದ ಪೈಲಟ್, ಟೇಕಾಫ್ ಕ್ಯಾನ್ಸಲ್ ಮಾಡಿ ರನ್ ವೇನಿಂದಲೇ