ಕರ್ನಾಟಕ ವಿಧಾನಸಭೆಯ ಸ್ಪೀಕರ್ ಸ್ಥಾನಕ್ಕೆ ಮಂಗಳೂರು ಕ್ಷೇತ್ರದ ಶಾಸಕ ಯು.ಟಿ.ಖಾದರ್ ಅವರ ಹೆಸರು ಅಂತಿಮವಾಗಿದೆ.
ವಿಟ್ಲ: ಕೊಳ್ನಾಡು ಸಾಲೆತ್ತೂರು ಗ್ರಾಮದ ಕಟ್ಟತ್ತಿಲ ಶ್ರೀ ಮಹಾಮ್ಮಾಯೀ ದೇವೀ ಹಾಗೂ ಪರಿವಾರ ದೈವಗಳ ಟ್ರಸ್ಟ್ ವತಿಯಿಂದ ಮೇ 23ರಿಂದ 29ರ ವರೆಗೆ ಶ್ರೀ ಕ್ಷೇತ್ರ ಕಟ್ಟತ್ತಿಲದಲ್ಲಿ ಶ್ರೀ ಮಹಾಮ್ಮಾಯೀ ದೈವದ ಪುನರ್ ಪ್ರತಿಷ್ಠೆ ಬ್ರಹ್ಮಕಲಶ ನಡೆಯಲಿದೆ ಎಂದು ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಕೇಶವ ನಾಯ್ಕ್ ದೈಪಲ ಮತ್ತು ಟ್ರಸ್ಟ್ ಅಧ್ಯಕ್ಷ ರವೀಂದ್ರನಾಥ ಕೆ.ಮುಳ್ಳೇರಿಯ ತಿಳಿಸಿದರು. ವಿಟ್ಲದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ಸುಮಾರು 400 ವರ್ಷಗಳ
ಸರ್ಕಾರದ ಯೋಜನೆಗಳನ್ನು ಪ್ರತಿ ಮನೆ ಮನೆಗೆ ತಲುಪಿಸುವ ಕಾರ್ಯ ನಾವು ಮಾಡಬೇಕಾಗಿದೆ. ಎಂದು ಉದಯ ಶೆಟ್ಟಿ ಮುನಿಯಾಲು ಹೇಳಿದರು. ರಾಜ್ಯದಲ್ಲಿ ಕಾಂಗ್ರೆಸ್ ಬಹುಮತದ ದೊರೆತ ಹಿನ್ನೆಲೆಯಲ್ಲಿ ಕಾರ್ಕಳದಲ್ಲಿ ನಡೆದ ವಿಜಯೋತ್ಸವ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ಮುಂಬರುವ ತಾಲೂಕ್ ಪಂಚಾಯತ್, ಜಿಲ್ಲಾ ಪಂಚಾಯತ್ ಚುನಾವಣೆಗೆ ನಾವು ಇಂದಿನಿಂದಲೇ ಸಿದ್ಧತೆ ನಡೆಸಬೇಕಾಗಿದೆ ಗೆಲುವಿಗಾಗಿ ಪ್ರತಿ ಬೂತ್ ಮಟ್ಟದಲ್ಲಿ ಕಾರ್ಯಕರ್ತರು ತಂಡವಾಗಿ ಕಾರ್ಯನಿರ್ವಹಿಸಬೇಕಾಗಿದೆ.
ಉಳ್ಳಾಲ: ಇಲ್ಲಿನ ಪೊಲೀಸ್ ಠಾಣೆಯಲ್ಲಿ ಸ್ಪೆಷಲ್ ಬ್ರಾಂಚ್ ಕಾನ್ಸ್ ಟೇಬಲ್ ಆಗಿದ್ದ ವಾಸುದೇವ ಚೌಹಾಣ್ ಅವರನ್ನು ಪೊಲೀಸ್ ಕಮಿಷನರ್ ಕುಲದೀಪ್ ಜೈನ್ ಅಮಾನತು ಮಾಡಿದ್ದಾರೆ.ಇತ್ತೀಚೆಗೆ ತಲಪಾಡಿ ಗಡಿಭಾಗದಲ್ಲಿ ಜೂಜಾಟ ನಡೆಸುತ್ತಿದ್ದ ತಂಡವನ್ನು ಎಸಿಪಿ ನೇತೃತ್ವದ ಪೊಲೀಸರು ದಾಳಿ ನಡೆಸಿ ಬಂಧಿಸಿದ್ದರು. ಆದರೆ ಈ ಬಗ್ಗೆ ಉಳ್ಳಾಲ ಎಸ್ ಬಿ ಆಗಿದ್ದ ವಾಸುದೇವ್ ಗೆ ಮಾಹಿತಿಗಳಿದ್ದವು. ಅಲ್ಲದೆ, ಆರೋಪಿಗಳ ಜೊತೆ ವಾಸುದೇವ ಶಾಮೀಲಾಗಿದ್ದ ಎನ್ನುವ ಆರೋಪಗಳಿದ್ದವು. ಈ ಬಗ್ಗೆ
ಪ್ರಧಾನಮಂತ್ರಿ ನರೇಂದ್ರ ಮೋದಿಯನ್ನು ಸ್ವಾಗತಿಸಲು ಸಿಡ್ನಿಯ ಇಂಡಿಯನ್ ಆಸ್ಟ್ರೇಲಿಯನ್ ಡಯಾಸ್ಪೊರಾ ಫೌಂಡೇಶನ್ ಭರದಿಂದ ಸಿದ್ಧತೆ ನಡೆಸಿದೆ. ಪ್ರಧಾನಿ ಮೋದಿ ಅವರು ಭಾರತೀಯರನ್ನು ಉದ್ದೇಶಿಸಿ ಮಾತನಾಡಲಿರುವ 20,000ಕ್ಕೂ ಅಧಿಕ ಜನರು ವೀಕ್ಷಿಸಲಿರುವ ಈ ಕಾರ್ಯಕ್ರಮದಲ್ಲಿ ಮಂಗಳೂರು ಮೂಲದ ವಿಧುಷಿ ಪಲ್ಲವಿ ಭಾಗವತ್ ಅವರು ತಮ್ಮ ನೃತ್ಯ ಸಂಸ್ಥೆ ನಾಟ್ಯೋಕ್ತಿ ಶಿಷ್ಯ ವೃಂದದೊಂದಿಗೆ ಕಾಂತಾರ ಸಿನೆಮಾದ ಹಾಡುಗಳ ಮೂಲಕ ಮನರಂಜಿಸಲು ಸಜ್ಜಾಗಿದ್ದಾರೆ. ಮೋದಿ
ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪುತ್ತೂರು ಜಿಲ್ಲಾ ಸಂಘ ಚಾಲಕ, ಸಾಮಾಜಿಕ, ಧಾರ್ಮಿಕ,ಸಹಕಾರಿ ನೇತಾರ ಕೊಡ್ಮಾಣ್ ಕಾಂತಪ್ಪ ಶೆಟ್ಟಿ ( 61)ಅವರು ಅಲ್ಪಕಾಲದ ಅಸೌಖ್ಯದಿಂದ ಮಂಗಳೂರಿನ ಆಸ್ಪತ್ರೆಯಲ್ಲಿ ಸೋಮವಾರ ನಿಧನರಾದರು. ಸದಾ ನಗುಮುಖ, ಗಂಭೀರ ವ್ಯಕ್ತಿತ್ವ,ನೇರ ನಡೆ ನುಡಿಯವರಾಗಿದ್ದ ಕೆಲ ಸಮಯಗಳಿಂದ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು,ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸೋಮವಾರ ಮಧ್ಯಾಹ್ನ 12 ಗಂಟೆಯ ಅವರು ಕೊನೆಯುಸಿರೆಳೆದಿದ್ದಾರೆ ಎಂದು ಆಸ್ಪತ್ರೆಯ ಮೂಲಗಳು
ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಕಾರ್ಡ್ ಬಗೆ ಮಾತನಾಡುವ ನೈತಿಕತೆ ಬಿಜೆಪಿಗಿಲ್ಲ ಎಂದು ಮಾಜಿ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ ಕಿಡಿಕಾರಿದರು. ಅವರು ಮಂಗಳೂರಿನ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈಗಾಗಲೇ ಸಚಿವ ಸಂಪುಟದಲ್ಲಿ ಅನುಮೋದನೆ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ಆಯ್ಕೆ ಪ್ರಕ್ರಿಯೆ ನಡೆದು, ಫಲಾನುಭವಿಗಳಿಗೆ ಯೋಜನೆಗಳು ಸಿಗಲಿದೆ ಎಂದರು. ಗ್ಯಾರಂಟಿ ಕಾರ್ಡ್ ವಿಚಾರದಲ್ಲಿ ಜನರು ಯಾವುದೇ ಗೊಂದಲ ಪಡುವ
ಪುತ್ತೂರಿನಲ್ಲಿ ಪೊಲೀಸ್ ದೌರ್ಜನ್ಯಕ್ಕೊಳಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಹಿಂದೂ ಕಾಯಕರ್ತರ ಆರೋಗ್ಯವನ್ನು ಶಿವಮೊಗ್ಗದ ದಿವಂಗತ ಹರ್ಷನ ಸಹೋದರಿ ಅಶ್ವಿನಿಯವರು ವಿಚಾರಿಸಿದರು. ಬಳಿಕ ಮಾಧ್ಯಮದೊಂದಿಗೆ ಮಾತನಾಡಿದ ಅಶ್ವಿನಿ ಅವರು ಕಾರ್ಯಕರ್ತರ ಸ್ಥಿತಿಯನ್ನ ನೋಡಿ ತುಂಬಾ ಬೇಸರಗೊಂಡಿದ್ದೇನೆ. ಇವತ್ತು ಅರುಣ್ ಪುತ್ತಿಲ ಇಲ್ಲದಿದ್ದರೆ ಕಾರ್ಯಕರ್ತರನ್ನ ಜೀವಂತ ನೋಡುತ್ತಿರಲಿಲ್ಲ. ಕಾರ್ಯಕರ್ತರು ಹಿಂದೂ ಸಮಾಜ ಗಟ್ಟಿಗೊಳಿಸಲು ಹೋರಾಡ್ತಾ ಇದ್ದಾರೆ.
ರಾಜ್ಯದ 16 ನೇ ವಿಧಾನಸಭೆ ನೂತನ ಚುನಾಯಿತರ ಅಧಿವೇಶನ ನಡೆಯುತ್ತಿದ್ದು, ಮೂರು ದಿನಗಳ ಕಾಲ ಅಧಿವೇಶನ ನಡೆಯಲಿದೆ. ಹಂಗಾಮಿ ಸಭಾಧ್ಯಕ್ಷರಾಗಿ ಆಯ್ಕೆಯಾಗಿರುವ ಕಾಂಗ್ರೆಸ್‍ನ ಹಿರಿಯ ಶಾಸಕ ಆರ್.ವಿ. ದೇಶಪಾಂಡೆ ಅವರು ನೂತನ ಶಾಸಕರಿಗೆ ಪ್ರಮಾಣವಚನ ಭೋದಿಸಿದರು. ಕರಾವಳಿಯ ಶಾಸಕರಾದ ಯು.ಟಿ. ಖಾದರ್, ಡಾ. ವೈ ಭರತ್ ಶೆಟ್ಟಿ, ಸುಳ್ಯದ ಶಾಸಕಿ ಭಾಗೀರಥಿ ಮುರುಳ್ಯ, ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ, ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ, ಕಾಪು ಶಾಸಕ ಗುರ್ಮೆ
ಕುಲಾಲರ ಕುಲದೇವರು ಕುಲಶೇಖರ ಕ್ಷೇತ್ರದ ಪ್ರಧಾನ ಶ್ರೀ ವೀರನಾರಾಯಣ ದೇವರ ಪ್ರತಿಷ್ಠೆಯು ಇಂದು ಬೆಳಿಗ್ಗೆ ೯.೧೦ರ ಮಿಥುನಲಗ್ನ ಸುಮುಹೂರ್ತದಲ್ಲಿ ಕ್ಷೇತ್ರದ ತಂತ್ರಿಗಳಾದ ವೇ|ಮೂ| ಬ್ರಹ್ಮಶ್ರೀ ಅನಂತ ಉಪಾಧ್ಯಾಯರ ವೈದಿಕ ನೇತೃತ್ವದಲ್ಲಿ ಮಾಣಿಲ ಶ್ರೀಧಾಮದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿಯವರು ಹಾಗೂ ವಿವಿಧ ಸಮಿತಿ ಪದಾಧಿಕಾರಿಗಳು ಹಾಗೂ ನೂರಾರು ಸಂಖ್ಯೆಯ ಭಕ್ತಾಧಿಗಳ ಉಪಸ್ಥಿತಿಯಲ್ಲಿ ನೆರವೇರಿತು. ವಿಷ್ಣುಸ್ವರೂಪಿ ಶ್ರೀ ವೀರನಾರಾಯಣ ದೇವರ ಸಾನಿಧ್ಯವು ದಕ್ಷಿಣ




























