ಉಡುಪಿ: ಚಿತ್ರನಟ, ನಿರ್ದೇಶಕ ರಕ್ಷಿತ್ ಶೆಟ್ಟಿ ಉಡುಪಿಯಲ್ಲಿ ತಮ್ಮ ಮತದಾನದ ಹಕ್ಕನ್ನು ಚಲಾಯಿಸಿದ್ದಾರೆ. ಈ ವೇಳೆ ಮಾತನಾಡಿದ ಅವರು, “ಮತದಾನ ಮಾಡುವುದು ಬಹಳ ಮುಖ್ಯ. ಅದು ನಮ್ಮ ಜವಾಬ್ದಾರಿ. ನನಗೆ ಪಕ್ಷದ ಮೇಲೆ ಒಲವಿದೆ. ಪ್ರಚಾರಕ್ಕೆ ಹೋಗಲ್ಲ. ಆ ಕ್ಷೇತ್ರದಲ್ಲಿ ಜನರಿಗಾಗಿ ಕೆಲಸ ಮಾಡುವ ನಾಯಕರನ್ನು ಆಯ್ಕೆ ಮಾಡುವುದು ಒಳ್ಳೆಯದು.” ಎಂದು ರಕ್ಷಿತ್ ಶೆಟ್ಟಿ ಹೇಳಿದ್ದಾರೆ.
ಮೂಡುಬಿದಿರೆ ವಿಧಾನಸಭಾ ಕ್ಷೇತ್ರದ ಆಮ್ ಆದ್ಮಿ ಪಕ್ಷದ ಅಭ್ಯರ್ಥಿ ವಿಜಯನಾಥ ವಿಠಲ ಶೆಟ್ಟಿ ಮಿಜಾರು ಬಂಗಬೆಟ್ಟು ಪಬ್ಲಿಕ್ ಶಾಲೆಯಲ್ಲಿ ಮತದಾನ ಮಾಡಿದರು.
ಬೇಲೂರು ತಾಲೂಕಿನ ಕೋಗಿಲೆ ಮನೆ ಗ್ರಾಮ ಪಂಚಾಯಿತಿಯ ವ್ಯಾಪ್ತಿಯ ಚಿಕ್ಕೋಲೆ ಗ್ರಾಮದ ಮತಗಟ್ಟೆ ಸಂಖ್ಯೆ 211 ರಲ್ಲಿ ಮತದಾನ ಮಾಡಿದ ಜಯಣ್ಣ ಎಂಬುವ 48 ವರ್ಷದ ವ್ಯಕ್ತಿ ಮತದಾನದ ನಂತರ ಮತದಾನ ಕೇಂದ್ರದ ಹೊರಗಡೆ ಹೃದಯಘಾತದಿಂದ ಮೃತಪಟ್ಟಿದ್ದಾರೆ
ಕೇಂದ್ರದ ಮಾಜಿ ಸಚಿವರಾಗಿದ್ದ ದಿವಂಗತ ಆಸ್ಕರ್ ಫೆರ್ನಾಂಡಿಸ್ ಅವರ ಪತ್ನಿ ಬ್ಲೋಸಮ್ ಮತ್ತು ಮಗಳು ಓಶಾನಿ ಫರ್ನಾಂಡಿಸ್ ಅವರು ಮತಚಲಾಯಿಸಿದರು. ಸರತಿ ಸಾಲಿನಲ್ಲಿ ನಿಂತು ತಮ್ಮ ಹಕ್ಕನ್ನು ಚಲಾಯಿಸಿದರು.
ಕೋಟ:ಉಡುಪಿ ಜಿಲ್ಲೆಯ ಕುಂದಾಪುರ ವಿಧಾನ ಸಭಾ ಕ್ಷೇತ್ರದ ಕೋಟತಟ್ಟು ಗ್ರಾಮ ಪಂಚಾಯಿತಿನ ಬೂತ್ ನಂಬರ್ 165 ರಲ್ಲಿ ಸರತಿ ಸಾಲಿನಲ್ಲಿ ನಿಂತು ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿಯವರು ಮತದಾನ ಮಾಡಿದರು.
ಬೈಂದೂರು ವಿಧಾನಸಭಾ ಕ್ಷೇತ್ರದ ಕೆರಾಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಬೂತ್ನಲ್ಲಿ ಮತ ಚಲಾಯಿಸಿದ ಅವರು, ಮತದಾನ ನಮ್ಮೆಲ್ಲರ ಹಕ್ಕು, ಪ್ರಜಾಪ್ರಭುತ್ವ ರಾಷ್ಟ್ರದ ಪ್ರಜೆಯಾಗಿರುವುದು ನಮಗೆ ಹೆಮ್ಮೆ. ಹಾಗೆಯೇ, ಮತ ಹಾಕುವುದು ನಮ್ಮ ಹಕ್ಕು ಮಾತ್ರವಲ್ಲ, ಜವಾಬ್ದಾರಿ ಕೂಡ.. ಉತ್ತಮ ಸಮಾಜದ ನಿರ್ಮಾಣಕ್ಕಾಗಿ, ಸಮರ್ಥ ಜನಪ್ರತಿನಿಧಿಯ ಆಯ್ಕೆಗಾಗಿ ತಪ್ಪದೇ ಮತ ಚಲಾಯಿಸಿ ಎಂದು ಕರೆ ನೀಡಿದರು.
ಮತದಾನ ಮಾಡದವರಿಗೆ ರಾಜ್ಯದ ಕೆಲವು ಪ್ರವಾಸಿ ತಾಣಗಳಲ್ಲಿ ಪ್ರವೇಶವನ್ನು ನಿರ್ಬಂಧಿಸಲಾಗಿದೆ. ಮತದಾನ ದಿನದ ಮೊದಲೇ ಕೆಲವು ಸ್ಥಳಗಳಲ್ಲಿ ಮೇ 10ರಂದು ಪ್ರವೇಶವಿಲ್ಲ ಎಂಬ ಬೋರ್ಡ್ ಲಗತ್ತಿಸಲಾಗಿದ್ದು, ಪ್ರಮುಖವಾಗಿ ಚಿಕ್ಕಬಳ್ಳಾಪುರ ಜಿಲ್ಲೆಯ ನಂದಿ ಬೆಟ್ಟಕ್ಕೆ ಪ್ರವೇಶ ನಿರ್ಬಂಧಿಸಿ ಆದೇಶ ಹೊರಡಿಸಲಾಗಿದೆ. ಬೆಳಗ್ಗೆಯಿಂದಲೇ ಇಲ್ಲಿ ಪ್ರವೇಶಕ್ಕೆ ಅವಕಾಶವಿರುವುದಿಲ್ಲ.ಶಿವಮೊಗ್ಗ ಜಿಲ್ಲೆಯ ಜೋಗ ಜಲಪಾತ, ಕುಪ್ಪಳ್ಳಿ ಯಲ್ಲಿರುವ ಕವಿಮನೆ, ಕುವೆಂಪು ಜನ್ಮಸ್ಥಳ,
ಮಾಜಿ ಶಾಸಕರು ಹಾಗೂ ಕೆಪಿಸಿಸಿಯ ಉಪಾಧ್ಯಕ್ಷರಾದ ಶ್ರೀ ಐವನ್ ಡಿಸೋಜ ರವರು ಇಂದು ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ವೇಲೆನ್ಸಿಯಾ ವಾರ್ಡಿನ ತಮ್ಮ ಮತಗಟ್ಟೆಯಲ್ಲಿ ಮತದಾನ ಮಾಡಿದರು.
ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜಾ ಅವರು ಗರ್ಡಾಡಿಯ ಸೈಂಟ್ ಅಂತೋಣಿ ಹಿರಿಯ ಪ್ರಾಥಮಿಕ ಶಾಲೆಯ ಮತಗಟ್ಟೆ ಸಂಖ್ಯೆ 123 ರಲ್ಲಿ ಮತ ಚಲಾಯಿಸಿದರು. ಪ್ರಜಾಪ್ರಭುತ್ವದ ಅತ್ಯಂತ ಪವಿತ್ರ ಹಬ್ಬ ಎಂದು ಕರೆಸಿಕೊಳ್ಳುವ ಮತದಾನ ಸಂಭ್ರಮದಲ್ಲಿ ಕ್ಷೇತ್ರದ ಎಲ್ಲಾ ಮತದಾರರು ಭಾಗಿಯಾಗಬೇಕೆಂದು ಮನವಿ ಮಾಡಿದರು.




























