ಧಾರ್ಮಿಕ ಕೇಂದ್ರಗಳು ಭಕ್ತರ ಆಸ್ತಿಯೇ ಹೊರತು ಪಕ್ಷದ ಆಸ್ತಿ ಅಲ್ಲ ಎಂದು ಕಾರ್ಕಳ ಬ್ಲಾಕ್ ಕಾಂಗ್ರೆಸ್ ಪ್ರಚಾರ ಸಮಿತಿಯ ಅಧ್ಯಕ್ಷರಾದ ಶುಭದ ರಾವ್ ಹೇಳಿದರು. ಅವರು ಕಾರ್ಕಳದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದರು. ಕಾರ್ಕಳ ಮಾರಿಗುಡಿಯ ಜೀರ್ಣೋದ್ಧಾರ ಮತ್ತು ಬ್ರಹ್ಮಕಲಶೋತ್ಸವವು ದೇವಿಯ ಇಚ್ಚೆಯಂತೆ ಭಕ್ತಾಭಿಮಾನಿಗಳು ಹಾಗೂ ದಾನಿಗಳ
ಸದಾ ಕೋಮುಹಿಂಸೆಯಿಂದ ನಲುಗುವ ಕರಾವಳಿ ಜಿಲ್ಲೆಗಳಲ್ಲಿ ನಿರುದ್ಯೋಗ, ಶಿಕ್ಷಣ, ಆರೋಗ್ಯದ ವ್ಯಾಪಾರೀಕರಣದಿಂದ ಜನಸಾಮಾನ್ಯರು ತತ್ತರಿಸಿದ್ದಾರೆ. ಬಿಜೆಪಿ ಪರಿವಾರದ ಮತೀಯ ರಾಜಕಾರಣದಿಂದ ಮಂಗಳೂರು ಸಹಿತ ಕರಾವಳಿ ಪ್ರದೇಶಗಳು ಅಭಿವೃದ್ದಿಯಲ್ಲಿ ಹಿಂದೆ ಬಿದ್ದಿದೆ. ಕಲೆ, ಸಂಸ್ಕೃತಿ, ಜನಪರ ಹೋರಾಟಗಳಿಂದ ಸಮೃದ್ದವಾಗಿದ್ದ ಮಂಗಳೂರು ಈಗ ಹಿಂದು, ಮುಸ್ಲಿಂ ವಿಭಜನೆಯ ರಾಜಕಾರಣದ ಮಸಿ ಮೆತ್ತಿಸಿಕೊಂಡಿದೆ. ಕರಾವಳಿಯ ಬ್ಯಾಂಕ್ ಗಳು ವಿಲೀನದ ಹೆಸರಿನಲ್ಲಿ ಕೈ ತಪ್ಪಿದೆ. ವಿಮಾನ
ಕಾರ್ಕಳ : ಕಾರ್ಕಳದ ಇತಿಹಾಸ ಪ್ರಸಿದ್ಧ ಕೋಟೆ ಮಾರಿಯಮ್ಮ ದೇವಸ್ಥಾನದ ಒಳಗೆ ಬಾವಿಯನ್ನು ತೋಡಲು ರಫೀಕ್ ಎನ್ನುವ ಹಿಂದೂಯೇತರರಿಗೆ ಧಾರ್ಮಿಕ ದತ್ತಿ ಇಲಾಖೆಯ ನಿಯಮಗಳನ್ನು ಗಾಳಿಗೆ ತೂರಿ ಸಚಿವ ಸುನೀಲ್ ಕುಮಾರ್ ಅವರು ಬಾವಿ ನಿರ್ಮಾಣ ಮಾಡಿಸಲು ಅವಕಾಶ ಕಲ್ಪಿಸಿದ್ದಾರೆ ಎಂದು ಶ್ರೀ ರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ . ಅವರು ಕಾರ್ಕಳ ಪರಪ್ಪು ಸಮೀಪದ ಪಾಂಚಜನ್ಯಾ ತಮ್ಮ ಚುನಾವಣಾ ಕಛೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ರಫೀಕ್ ಗೋ
ಉಳ್ಳಾಲ: ಬಿಜೆಪಿ ಮಂಗಳೂರು ವಿಧಾನಸಭಾ ಕ್ಷೇತ್ರದ ಬೂತ್ ಮಟ್ಟದಲ್ಲಿ ಕಾರ್ಯಕರ್ತರನ್ನು ಭೇಟಿ ಮಾಡಿ ಚರ್ಚೆ ನಡೆಸಿ , ಉಳ್ಳಾಲ ವಿಧಾಸನಭಾ ಕ್ಷೇತ್ರಕ್ಕೆ ಅವಶ್ಯಕವಿರುವ ಉದ್ದೇಶದ ಪ್ರಣಾಳಿಕೆಯನ್ನು ಬಿಡುಗಡೆಗೊಳಿಸಲಾಗಿದೆ ಎಂದು ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಸಂತೋಷ್ ರೈ ಬೋಳಿಯಾರ್ ಹೇಳಿದರು. ಅವರು ಪಂಡಿತ್ ಹೌಸ್ ಚುನಾವಣಾ ಕಾರ್ಯಾಲಯದಲ್ಲಿ ಬಿಜೆಪಿ ಮಂಗಳೂರು ವಿಧಾನಸಭಾ ಕ್ಷೇತ್ರದ ಪ್ರಣಾಳಿಕೆ ಬಿಡುಗಡೆಗೊಳಿಸಿ ಮಾತನಾಡಿದರು. ಮನೆಮನೆಗಳಿಗೆ ಕುಡಿಯುವ ನೀರಿನ
ಬಂಟ್ವಾಳ: ಇಲ್ಲಿನ ಬಿಜೆಪಿ ಅಭ್ಯರ್ಥಿ ರಾಜೇಶ್ ನಾಯ್ಕ್ ಅವರ ಪರವಾಗಿ ಚುನಾವಣಾ ಪ್ರಚಾರ ಮಾಡಲು ಉತ್ತರ ಪ್ರದೇಶದ ಮುಖ್ಯಮಂತ್ರಿ, ಸ್ಟಾರ್ ಪ್ರಚಾರಕ್ ಆಗಿರುವ ಯೋಗಿ ಆದಿತ್ಯನಾಥ್ ಅವರು ಮೇ.6ರಂದು ಶನಿವಾರ ಬಿ.ಸಿ.ರೋಡಿಗೆ ಆಗಮಿಸಲಿದ್ದು ರೋಡ್ ಶೋನಲ್ಲಿ ಭಾಗವಹಿಸಲಿದ್ದಾರೆ ಎಂದು ಬಿಜೆಪಿ ಬಂಟ್ವಾಳ ಕ್ಷೇತ್ರ ಸಮಿತಿ ಅಧ್ಯಕ್ಷ ದೇವಪ್ಪ ಪೂಜಾರಿ ತಿಳಿಸಿದರು. ಅವರು ಗುರುವಾರ ಬಿಜೆಪಿ ಕಚೇರಿಯುಲ್ಲಿ ಸುದ್ದಿಗೋಷ್ಟಿಯಲ್ಲಿ ಮಾಹಿತಿ ನೀಡಿದ ಅವರು ಸಂಜೆ 4ಗಂಟೆಗೆ ಯೋಗಿಜೀ
ಪುತ್ತೂರು: ಚುನಾವಣೆಗೆ ಸ್ಪರ್ದಿಸುತ್ತಿದ್ದೇನೆ ವೋಟು ಸಿಗಬೇಕು ಎಂದು ಜನತೆಗೆ ಸುಳ್ಳು ಭರವಸೆಯನ್ನು ಕೊಡುವುದಿಲ್ಲ ಮತ್ತು ಮಾತು ಕೊಟ್ಟಿದ್ದರೆ ಅದಕ್ಕೆ ತಪ್ಪಿ ನಡೆಯಲಾರೆ ಎಂದು ಪುತ್ತೂರು ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ರೈಯವರು ಹೇಳಿದರು. ಮಾಣಿಲ ಗ್ರಾಮದ ವಿವಿಧ ದಲಿತ ಕಾಲೊನಿಗಳಿಗೆ ಭೇಟಿ ನೀಡಿ ಮತಯಾಚನೆ ನಡೆಸಿದರು. ಈ ಸಂದರ್ಭದಲ್ಲಿ ಕಾಲನಿಯ ನಿವಾಸಿಗಳು ತಮ್ಮ ಸಮಸ್ಯೆಗಳನ್ನು ಅಶೋಕ್ ರೈ ಬಳಿ ಹೇಳಿಕೊಂಡರು. ಕಳೆದ ಹಲವು ವರ್ಷಗಳಿಂದ ನಾವು ಮನೆ ಮಾಡಿಕೊಂಡಿದ್ದು
ಬಂಟ್ವಾಳ: ಕಾಂಗ್ರೆಸ್ ಪಕ್ಷ ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ಭಜರಂಗದಳವನ್ನು ನಿಷೇಧಿಸಲು ಹೊರಟಿರುವುದು ತೀವ್ರ ಖಂಡನೀಯ ಎಂದು ವಿಶ್ವ ಹಿಂದೂ ಪರಿಷತ್ ಬಂಟ್ವಾಳ ತಾಲೂಕು ಸಮಿತಿ ಅಧ್ಯಕ್ಷ, ನ್ಯಾಯವಾದಿ ಪ್ರಸಾದ್ ಕುಮಾರ್ ರೈ ಹೇಳಿದರು. ಅವರು ಗುರುವಾರ ಬಿ.ಸಿ.ರೋಡಿನಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದರು. ಬಿಟಿಷರು ಹೇಗೆ ಈ ದೇಶದಲ್ಲಿ ಒಡೆದು ಆಳುವ ನೀತಿಯನ್ನು ಅನುಸರಿಸಿದರೋ ಅದೇ ರೀತಿ ಕಾಂಗ್ರೆಸ್ ಕೂಡ ಒಡೆದು ಆಳುವ ನೀತಿಯನ್ನು ಮುಂದುವರೆಸಿಕೊಂಡು
ಪಡುಬಿದ್ರೆಯ ಸಾಂತೂರು ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕಾಪು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗುರ್ವೆ ಸುರೇಶ್ ಶೆಟ್ಟಿ ಅವರು ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿದ್ದಾರೆ.ಬಳಿಕ ಅವರು ಕಾರ್ಯಕರ್ತರೊಂದಿಗೆ ಸಭೆ ನಡೆಸಿದ್ರು. ಮುಂದಿನ ದಿನಗಳಲ್ಲಿ ಈ ಕ್ಷೇತ್ರದಲ್ಲಿ ಇನ್ನಷ್ಟು ಅಭಿವೃದ್ಧಿ ಆಗುವ ನಿಟ್ಟಿನಲ್ಲಿ ನನಗೆ ಅವಕಾಶ ನೀಡಿ ಎಂದು ಮನವಿ ಮಾಡಿದ್ರು. ಈ ವೇಳೆ ಕಾರ್ಯಕರ್ತರು ಸುರೇಶ್ ಶೆಟ್ಟಿ ಜೊತೆಗಿದ್ದರು. ಇದಕ್ಕೂ ಅವರು ಮೊದಲು ಎರ್ಮಾಳ್ ಪರಿಸರ
ಪುತ್ತೂರಿನ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ಅವರಿಂದ ನನ್ನ ಬೂತ್, ನಾನು ಅಭ್ಯರ್ಥಿ.. ಒಂದು ವಿಭಿನ್ನ ಪ್ರಯೋಗ ನಡೆಯಲಿದ್ದು, ಪುತ್ತೂರಿನ ವಿಧಾನಸಭಾ ಕ್ಷೇತ್ರzಗಳಿಗೆ ಕಾಂಗ್ರೆಸ್ ನಾಯಕರಿಂದ ಮತ್ತು ಕಾರ್ಯಕರ್ತರಿಂದ ಎಲ್ಲಾ 220 ಬೂತ್ ಗಳಲ್ಲಿಯೂ ಮನೆ ಮನೆಗಳ ಸಂಪರ್ಕಿಸುವ ಮೂಲಕ ಮತಯಾಚನೆ ನಡೆಯಲಿದೆ.
ಮುಲ್ಕಿ ಮೂಡಬಿದ್ರೆ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾದ ಶ್ರೀ ಮಿಥುನ್ ರೈ ಮುಲ್ಕಿ ನಗರ ಪಂಚಾಯತ್ ವ್ಯಾಪ್ತಿ, ನೆಲ್ಲಿಕಾರು ಗ್ರಾಮ ಪಂಚಾಯಿತಿ ವ್ಯಾಪಿ ಹಾಗೂ ವಾಲ್ಪಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮತದಾರ ಬಾಂಧವರನ್ನು ಭೇಟಿ ಮಾಡಿ ಮತಯಾಚನೆಯನ್ನು ನಡೆಸಿದರು.




























