Home Posts tagged V4News (Page 495)

ಮೂಡುಬಿದಿರೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈ ಮತಯಾಚನೆ

ಮೂಡುಬಿದಿರೆ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈ ಅವರು ವಾಲ್ಪಾಡಿ ಗ್ರಾ.ಪಂಚಾಯತ್ ವ್ಯಾಪ್ತಿಯಲ್ಲಿರುವ ಗೇರು ಬೀಜ ಫ್ಯಾಕ್ಟ್ರಿಗಳಿಗೆ ಭೇಟಿ ನೀಡಿ ಮತಯಾಚನೆ ನಡೆಸಿದರು. ಪುರಸಭಾ ವ್ಯಾಪ್ತಿಯ ಒಂಟಿಕಟ್ಟೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈ ಪರವಾಗಿ ಕಾರ್ಯಕರ್ತರು ಮನೆ ಮನೆಗೆ ಭೇಟಿ ನೀಟಿ ಮತಯಾಚನೆ ನಡೆಸಿದರು. ಈ ಸಂದರ್ಭದಲ್ಲಿ ಯೂತ್

ಅಶ್ವತ್ಥಪುರದ ಶ್ರೀ ಸೀತಾರಾಮಚಂದ್ರ ದೇವಸ್ಥಾನಕ್ಕೆ ಉಮಾನಾಥ್ ಕೋಟ್ಯಾನ್ ಭೇಟಿ

ಮೂಡುಬಿದಿರೆಯ ಅಶ್ವತ್ಥಪುರದ ಶ್ರೀ ಸೀತಾರಾಮಚಂದ್ರ ದೇವಸ್ಥಾನದಲ್ಲಿ ನಡೆದ ಶ್ರೀ ದೇವಸ್ಥಾನದ ಅಷ್ಟೊತ್ತರ ಶತಮಾನೋತ್ಸವ, ಗೋಶಾಲೆ ಉದ್ಘಾಟನೆ, ಶ್ರೀಗುರುಭವನದ ಶಿಲಾನ್ಯಾಸ ಹಾಗೂ ಶ್ರೀ ಶತಚಂಡಿಕಾ ಹವನದಲ್ಲಿ ಮೂಲ್ಕಿ ಮೂಡುಬಿದಿರೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಉಮಾನಾಥ್ ಕೋಟ್ಯಾನ್ ಅವರು ಭಾಗವಹಿಸಿದರು.ಈ ಸಂದರ್ಭದಲ್ಲಿ ಶೃಂಗೇರಿ ಜಗದ್ಗುರು ಪೀಠದ ಶ್ರೀ ಶ್ರೀ ಶ್ರೀ ವಿಧುಶೇಖರ ಭಾರತಿ ಸ್ವಾಮೀಜಿಯವರಿಂದ ಫಲ ಮಂತ್ರಾಕ್ಷತೆ ಸ್ವೀಕರಿಸಿದರು.

ಹೈೂಗೆಬಜಾರ್ ವಾರ್ಡಿನಲ್ಲಿ ಬಿಜೆಪಿ ಅಭ್ಯರ್ಥಿ ಶ್ರೀ ಡಿ.ವೇದವ್ಯಾಸ್ ಕಾಮತ್ ಮನೆ ಮನೆಗೆ ತೆರಳಿ ಮತಯಾಚನೆ

ಅಭಿವೃದ್ಧಿ ವಿಷಯದಲ್ಲಿ ಮಂಗಳೂರು ನಗರ ಸಾಗಿರುವ ಹಾದಿಯೇ, ಮತದಾರರು ನಮ್ಮನ್ನು ಪುನರ್ ಆಯ್ಕೆ ಮಾಡಲು ಇರುವ ಪ್ರಮುಖ ಅಂಶ. ಈ ಬಾರಿಯೂ ಬಿಜೆಪಿ ಅಧಿಕಾರಯುತ ಗೆಲುವು ಸಾಧಿಸುವುದು ನಿಚ್ಚಳ. ಭವಿಷ್ಯದ ಜನಾಂಗ ಮಂಗಳೂರು ನಗರವನ್ನು ಯಾವ ರೀತಿಯಲ್ಲಿ ನೋಡ ಬಯಸುತ್ತಾರೋ ಅಂತಹ ನಗರವನ್ನು ನಿರ್ಮಿಸುವುದು ನಮ್ಮೆಲ್ಲರ ಜವಾಬ್ದಾರಿ. ದಯವಿಟ್ಟು ನಮ್ಮೊಂದಿಗೆ ಕೈ ಜೋಡಿಸಿ” ಎಂದು ಕಾಮತ್ ಅವರು ಮತದಾರರಲ್ಲಿ ಮನವಿ ಮಾಡಿದರು. ಸ್ಥಳೀಯ ಬಿಜೆಪಿ ಮುಖಂಡರು, ವಾರ್ಡಿನ ಹಲವು

ಸುಪ್ರೀಂ ಸಲಿಂಗ ವಿವಾಹಕ್ಕೆ ಮಾನ್ಯತೆ ನೀಡಲು ಹೊರಟ ವಿಚಾರ : ಮಂಗಳೂರಿನಲ್ಲಿ ವಿಶ್ವ ಹಿಂದೂ ಪರಿಷತ್‍ನಿಂದ ಖಂಡನೆ

ಸುಪ್ರೀಂಕೋರ್ಟ್ ಸಲಿಂಗ ವಿವಾಹಕ್ಕೆ ಮಾನ್ಯತೆ ನೀಡಲು ಹೊರಟಿರುವುದು ಸರಿಯಲ್ಲ. ಸುಪ್ರೀಂ ಕೋರ್ಟ್ ಆತುರದಿಂದ ಸಲಿಂಗ ವಿವಾಹಕ್ಕೆ ಪ್ರಾತಿನಿದ್ಯ ಕೊಡಲು ಯೋಚಿಸಿರುವುದು ಇಡೀ ನಾಗರೀಕ ಸಮಾಜಕ್ಕೆ ನೋವಾಗಿದೆ ಎಂದು ವಜ್ರದೇಹಿ ಮಠದ ಶ್ರೀ ರಾಜಶೇಖರಾನಂದ ಸ್ವಾಮೀಜಿ ಹೇಳಿದರು. ಅವರು ಮಂಗಳೂರಿನಲ್ಲಿ ಮಾಧ್ಯಮಗೋಷ್ಟಿಯಲ್ಲಿ ಈ ವಿಚಾರದ ಬಗ್ಗೆ ಮಾತನಾಡಿದರು. ಭಾರತದಲ್ಲಿ ವಿವಾಹಕ್ಕೆ ಶ್ರೇಷ್ಠ ಪ್ರಾಮುಖ್ಯತೆಯನ್ನು ಹೊಂದಿದ್ದು, ಕೌಟುಂಬಿಕ ಸಮಾಜವನ್ನು ನಿರ್ಮಿಸುವುದರದಲ್ಲಿ

ರಾಜ್ಯದಲ್ಲಿ ಸೌಹಾರ್ದತೆಯ ವಾತಾವರಣ ಮತ್ತೆ ಸೃಷ್ಟಿಯಾಗಲಿದೆ : ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್.

ಬಂಟ್ವಾಳ : ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿದ್ದಾಗ ಇದ್ದ ಸೌಹಾರ್ದತೆಯ ವಾತವರಣ ಮತ್ತೆ ರಾಜ್ಯದಲ್ಲಿ ಸೃಷ್ಟಿಯಾಗಲಿದೆ, ಯಾರೂ ಉತ್ತಮ ಆಡಳಿತ ನೀಡಿದ್ದಾರೆ, ಯಾರೂ ಪೆÇಳ್ಳು ಭರವಸೆಗಳನ್ನು ನೀಡಿ ಯಾಮಾರಿಸಿದ್ದಾರೆ ಎನ್ನುವ ತಿಳಿವಳಿಕೆ ಜನರಿಗೆ ಬಂದಿದೆ. ಆದ್ದರಿಂದ ಈ ಭಾರಿ ಕಾಂಗ್ರೆಸ್ ಅಧಿಕಾರಕ್ಕೆ ಬರುವುದರಲ್ಲಿ ಸಂಶಯ ಇಲ್ಲ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್. ಹೇಳಿದರು. ಬಂಟ್ವಾಳ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಚುನಾವಣಾ ಕಚೇರಿಯಲ್ಲಿ

ವಕೀಲರ ಸಂಘ (ರಿ ) ಬಂಟ್ವಾಳ : ವಿಶ್ವ ಭೂ ದಿನಾಚರಣೆ

ವಕೀಲರ ಸಂಘ (ರಿ ) ಬಂಟ್ವಾಳ ಮತ್ತು ತಾಲೂಕು ಕಾನೂನು ಸೇವೆಗಳ ಸಮಿತಿ ಬಂಟ್ವಾಳ ಇದರ ಜಂಟಿ ಆಶ್ರಯದಲ್ಲಿ ದಿನಾಂಕ 28/4/2023 ರಂದು ಮದ್ಯಾಹ್ನ 12.00 ಗಂಟೆಗೆ ವಕೀಲರ ಸಂಘ (ರಿ ) ಬಂಟ್ವಾಳದಲ್ಲಿ ವಿಶ್ವ ಭೂ ದಿನಾಚರಣೆಯನ್ನು ಆಚರಿಸಲಾಯಿತು.ಕಾರ್ಯಕ್ರಮವನ್ನು ಪ್ರಧಾನ ಸಿವಿಲ್ ನ್ಯಾಯಾಧೀಷರು ಹಾಗೂ ತಾಲೂಕು ಕಾನೂನು ಸೇವೆಗಳ ಸಮಿತಿ ಬಂಟ್ವಾಳದ ಕಾರ್ಯದರ್ಶಿ ಶ್ರೀ ಚಂದ್ರಶೇಖರ ತಳವಾರ ಇವರು ಸಸಿಗೆ ನೀರು ಹಾಕುವುದರ ಮುಕಾಂತರ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಕಾರ್ಕಳ : ಸುನಿಲ್ ಪರ ಮುಂಬಯಿ ಸಂಸದ ಗೋಪಾಲ ಶೆಟ್ಟಿ ಮತಯಾಚನೆ

ಕಾರ್ಕಳ ಕ್ಷೇತ್ರದಲ್ಲಿ ಕಳೆದ ೫ ವರ್ಷದ ಅವಧಿಯಲ್ಲಿ ಅಭಿವೃದ್ಧಿಯ ನವ ಶಕ್ತಿಯೇ ನಡೆದಿದೆ. ಅದನ್ನು ಬೈಲೂರಿನ ಉಮಿಕ್ಕಳ ಬೆಟ್ಟದ ಪರಶುರಾಮ ಪ್ರತಿಮೆಯುಳ್ಳ ಥೀಮ್ ಪಾರ್ಕ್‌ಗೆ ಭೇಟಿ ನೀಡಿದೆ. ನಿಜಕ್ಕೂ ಅದನ್ನು ಕಂಡು ದಿಗ್ಬ್ರಮೆಗೊಂಡೆ, ನೂರಕ್ಕೆ ನೂರು ದೂರದೃಷ್ಟಿಯ ದೃಷ್ಟಿಕೋನದ ಯೋಜನೆಯಿದು ಎಂದು ಮುಂಬಯಿ ಬೊರಿವಲಿಯ ಕ್ಷೇತ್ರದ ಸಂಸದ ಗೋಪಾಲ ಶೆಟ್ಟಿ ಅಭಿಪ್ರಾಯಪಟ್ಟರು. ಅವರು ಕಾರ್ಕಳದ ಮಾಳ ಗ್ರಾಮದಲ್ಲಿ ಮತಯಾಚಿಸಿ ಮಾತನಾಡಿದರು ಕೈಗೊಂಡು ಮಾತನಾಡಿದರು.

ಕಾಂಗ್ರೆಸ್ ಗೆಲ್ಲುವುದೇ ಗ್ಯಾರೆಂಟಿ ಇಲ್ಲ : ಬಿಜೆಪಿ ರಾಜ್ಯಧ್ಯಕ್ಷ ನಳಿನ್‌ಕುಮಾರ್ ಕಟೀಲ್ ಟೀಕೆ

ಕಾಂಗ್ರೆಸ್ ಗೆಲ್ಲುವುದೇ ಗ್ಯಾರೆಂಟಿ ಇಲ್ಲ, ಹೀಗಾಗಿ ಗ್ಯಾರೆಂಟಿಗಳನ್ನು ಕೊಡುತ್ತ ಹೋಗುತ್ತಾರೆ. ಇವು ಧಾರವಾಹಿಗಳಿದ್ದ ಹಾಗೆ, ವಾರ ವಾರ ಬಿಡುಗಡೆಯಾಗುತ್ತ ಹೋಗುತ್ತವೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್‌ಕುಮಾರ್ ಕಟೀಲ್ ಟೀಕಿಸಿದ್ದಾರೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕಾಂಗ್ರೆಸ್ ಪಕ್ಷದ ಐದನೇ ಗ್ಯಾರೆಂಟ್ ಘೋಷಿಸಿದ ಹಿನ್ನೆಲೆಯಲ್ಲಿ ಪ್ರತಿಕ್ರಿಯಿಸಿದ ಅವರು, ‘ರಾಜ್ಯದ ಮಹಿಳೆಯರಿಗೆ ಉಚಿತ ಬಸ್ ಸೇವೆಯ ಭರವಸೆ ನೀಡಿದ್ದಾರೆ. ರಾಜ್ಯದ ಬಜೆಟ್ ಗಾತ್ರ

ಕಾಂಗ್ರೆಸ್‍ನ ಐದನೇ ಗ್ಯಾರಂಟಿ ಘೋಷಣೆ : ಮಹಿಳೆಯರಿಗೆ ಸರ್ಕಾರಿ ಬಸ್‍ನಲ್ಲಿ ಉಚಿತ ಪ್ರಯಾಣ

ಕಾಂಗ್ರೆಸ್ ನೇತೃತ್ವದ ಸರ್ಕಾರವು ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ದಿನದಿಂದಲೇ ಮಹಿಳೆಯರಿಗೆ ಸರ್ಕಾರಿ ಬಸ್‍ಗಳಲ್ಲಿ ಉಚಿತ ಪ್ರಯಾಣದ ಸೌಲಭ್ಯ ಒದಗಿಸಲಾಗುವುದು’ ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಘೋಷಿಸಿದರು. ಕಾಂಗ್ರೆಸ್ ಈಗಾಗಲೇ ನಾಲ್ಕು ಭರವಸೆಗಳ ಗ್ಯಾರಂಟಿ ಕಾರ್ಡ್' ಅನ್ನು ಚುನಾವಣಾ ಪ್ರಣಾಳಿಕೆಯ ರೂಪದಲ್ಲಿ ಬಿಡುಗಡೆ ಮಾಡಿದೆ. ಮಂಗಳೂರಿನ ಅಡ್ಯಾರ್ ಗಾರ್ಡನ್‍ನಲ್ಲಿ ನಡೆದ ಪ್ರಚಾರ ಸಭೆಯಲ್ಲಿ ರಾಹುಲ್ ಅವರು ಮಹಿಳೆಯರಿಗೆಉಚಿತ ಬಸ್

Kadaba : ಅಸ್ವಸ್ಥಗೊಂಡಿದ್ದ ಕಾಡಾನೆ ಸಾವು

ಕೊಂಬಾರಿನ ಕೆಂಜಾಳ ಬಗ್ಪುಣಿ ಭಾಗದ ಹೊಳೆಯ ನೀರಿನಲ್ಲಿ ಅಸ್ವಸ್ಥಗೊಂಡ ಸ್ಥಿತಿಯಲ್ಲಿ ಕಂಡು ಬಂದಿದ್ದ ಕಾಡಾನೆ ಗುರುವಾರ ತಡರಾತ್ರಿ ಮೃತಪಟ್ಟಿದೆ.ನಿಶ್ಶಕ್ತಿಯಿಂದಾಗಿ ಮೇಲೆ ಬರಲು ಸಾಧ್ಯವಾಗದೇ ಹೊಳೆಯಲ್ಲಿಯೇ ನಿಂತಿದ್ದ ಆನೆಗೆ ಚಿಕಿತ್ಸೆ ನೀಡುವ ಉದ್ದೇಶದಿಂದ ಕಡಬದ ಪಶು ವೈದ್ಯಾಧಿಕಾರಿ ಡಾ| ಅಜಿತ್ ಹಾಗೂ ಹುಣಸೂರಿನಿಂದ ಅರಣ್ಯ ಇಲಾಖೆಯ ಪಶು ವೈದ್ಯ ಡಾ| ಮುಜೀಬ್ ಅವರನ್ನು ಸ್ಥಳಕ್ಕೆ ಕರೆಸಲಾಗಿತ್ತು. ಆನೆಯನ್ನು ಪರಿಶೀಲಿಸಿದ ಅವರು ಅದಕ್ಕೆ ಸುಮಾರು 50 ವರ್ಷ