Home Posts tagged V4News (Page 497)

ಬಿಜೆಪಿ ಕಾರ್ಯಕರ್ತರು ಜೆಡಿಎಸ್‍ಗೆ ಸೇರ್ಪಡೆ

ಚುನಾವಣಾ ಸಂದರ್ಭದಲ್ಲಿ ಪಕ್ಷ ತೊರೆದು ಬೇರೆ ಪಕ್ಷಕ್ಕೆ ಸೇರ್ಪಡೆಯಾಗುವುದು ಮಾಮೂಲಿಯಾಗಿದೆ. ಆದರೆ ಈಗಿನ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿಯ ಕಾರ್ಯ ವೈಖರಿ ಜನರಿಗೆ ಬೇಸತ್ತು ಹೋಗಿದೆ. ಕುಮಾರ ಸ್ವಾಮಿಯ ಪಂಚರತ್ನ ಯೋಜನೆ ಜನರಿಗೆ ಭರವಸೆ ಮೂಡಿದೆ ಇದರಿಂದಾಗಿ ಬೇರೆ ಪಕ್ಷದ ಕಾರ್ಯಕರ್ತರು ಜೆಡಿಎಸ್ ಪಕ್ಷಕ್ಕೆ ಒಲವು ತೋರಿದ್ದರೆ. ಈ ಹಿನ್ನೆಲೆ ಪುತ್ತೂರು

ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ : ಪುತ್ತೂರಿನ ವಿವಿಧೆಡೆ ಮತಪ್ರಚಾರ

ಪುತ್ತೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ಅವರು ಪುತ್ತೂರಿನ ವಿವಿಧೆಡೆ ಮತಯಾಚನೆ ಮಾಡಿದರು. ಸಾರ್ವಜನಿಕ ಸಭೆ ಮತ್ತು ಮನೆ ಮನೆಗೆ ತೆರಳಿ ಮತಯಾಚನೆ ಮಾಡಿದರು. ಈ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿ ಎಂದು ಮತದಾರದಲ್ಲಿ ವಿನಂತಿಸಿದರು. ಅಶೋಕ್ ಕುಮಾರ್ ರೈ ಅವರ ಜೊತೆ ಕಾಂಗ್ರೆಸ್ ಕಾರ್ಯಕರ್ತರು ಭಾಗಿಯಾಗಿದ್ದರು.

ಅನಾರೋಗ್ಯ ಹಿನ್ನೆಲೆ ಆಸ್ಪತ್ರೆಗೆ ದಾಖಲಾದ ಸಚಿವ ಎಸ್. ಅಂಗಾರ

ಅನಾರೋಗ್ಯದಿಂದ ಬಳಲುತ್ತಿದ್ದ ಸಚಿವ ಅಂಗಾರ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಜಠರದ ಅಲ್ಸರ್ ಕಾಯಿಲೆಯಿಂದ ಬಳಲುತ್ತಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದು, ಬುಧವಾರ ಯಶಸ್ವಿಯಾಗಿ ಶಸ್ತ್ರಚಿಕಿತ್ಸೆ ನಡೆಸಲಾಗಿದೆ. ಅವರು ಆರೋಗ್ಯದಿಂದಿದ್ದಾರೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.

ಚುನಾವಣಾ ಪ್ರಚಾರಕ್ಕೆ ಆಗಮಿಸಲಿರುವ ಪ್ರಧಾನಿ ಮೋದಿ : ಕೋಲ್ನಾಡು ರಾ.ಹೆ.ಬಳಿಯ ಜಾಗದಲ್ಲಿ ಚಪ್ಪರ ಮುಹೂರ್ತ

ರಾಜ್ಯ ವಿಧಾನಸಭಾ ಚುನಾವಣಾ ಪ್ರಚಾರಕ್ಕೆ ಸ್ಟಾರ್ ಪ್ರಧಾನಿ ನರೇಂದ್ರ ಮೋದಿ ಮೇ 3ರಂದು ಮೂಲ್ಕಿಗೆ ಆಗಮಿಸುವ ಹಿನ್ನಲೆಯಲ್ಲಿ ಕೋಲ್ನಾಡು ರಾಷ್ಟ್ರೀಯ ಹೆದ್ದಾರಿ ಬಳಿಯ ಜಾಗದಲ್ಲಿ ಇಂದು ಚಪ್ಪರ ಮುಹೂರ್ತ ನಡೆಯಿತು. ಧಾರ್ಮಿಕ ಕಾರ್ಯಕ್ರಮಗಳ ಅಂಗವಾಗಿ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇವಸ್ಧಾನದ ಅರ್ಚಕ ಶ್ರೀಪತಿ ಉಪಾಧ್ಯಾಯ ನೇತೃತ್ವದಲ್ಲಿ ವಿಶೇಷ ಪ್ರಾರ್ಥನೆ ನಡೆದು ಚಪ್ಪರ ಮುಹೂರ್ತಕ್ಕೆ ಚಾಲನೆ ನೀಡಲಾಯಿತು. ಬಳಿಕ ಮಾಧ್ಯಮದೊಂದಿಗೆ ಮಾತನಾಡಿದ ಶಾಸಕ ಉಮಾನಾಥ

ಬಿಜೆಪಿ ಕಾರ್ಯಕರ್ತರೊಂದಿಗೆ ಪ್ರಧಾನಿ ಮೋದಿ ವರ್ಚುವಲ್ ವೇದಿಕೆ ಮೂಲಕ ಸಂವಾದ

ಪ್ರಧಾನಿ ನರೇಂದ್ರ ಮೋದಿ ಅವರು ಬಿಜೆಪಿ ಕಾರ್ಯಕರ್ತರೊಂದಿಗೆ ವರ್ಚುವಲ್ ಮೂಲಕ ಸಂವಾದ ನಡೆಸಿದರು. ಮಂಗಳೂರಿನ ಡೊಂಗರಕೇರಿಯಲ್ಲಿರುವ ಸುದೀಂದ್ರ ಸಭಾಭವನದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್ ಸೇರಿದಂತೆ ಬಿಜೆಪಿಯ ಹಿರಿಯ ನಾಯಕರು ಭಾಗವಹಿಸಿದ್ದರು.

ಕೆನರಾ ಪದವಿಪೂರ್ವ ಕಾಲೇಜು ಮತ್ತು ಕೆನರಾ ವಿಕಾಸ್ ಪಿ.ಯು ಕಾಲೇಜು : ಉನ್ನತ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಸನ್ಮಾನ ಸಮಾರಂಭ

ಕೆನರಾ ಪದವಿಪೂರ್ವ ಕಾಲೇಜು ಮತ್ತು ಕೆನರಾ ವಿಕಾಸ್ ಪಿ.ಯು ಕಾಲೇಜು ಮಂಗಳೂರು ಇಲ್ಲಿ ದ್ವಿತೀಯ ಪಿ.ಯು.ಸಿ ಪರೀಕ್ಷೆಯಲ್ಲಿ ಉನ್ನತ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಗೌರವಿಸಿ ಅಭಿನಂದನೆ ಸಲ್ಲಿಸುವ ಕಾರ್ಯಕ್ರಮವು ಮಂಗಳೂರಿನ ಟಿ .ವಿ. ರಮಣ್ ಪೈ ಕನ್ವೆನ್ಷನ್ ಸಭಾಂಗಣದಲ್ಲಿ ನಡೆಯಿತು.ಕೆನರಾ ವಿಕಾಸ್ ಪಿ.ಯು ಕಾಲೇಜಿನಲ್ಲಿ ವಾಣಿಜ್ಯ ವಿಭಾಗದಲ್ಲಿ 600 ಕ್ಕೆ 596 ಅಂಕಗಳಿಸಿ ಎರಡನೇ ಸ್ಥಾನ ಪಡೆದುಕೊಂಡ ಸ್ವಾತಿ ಎಸ್. ಪೈ ಮತ್ತು ಕೆನರಾ ಪದವಿಪೂರ್ವ

ಸಿದ್ಧಕಟ್ಟೆಯಲ್ಲಿ ಬಿಜೆಪಿಯ ಬೃಹತ್ ರೋಡ್ ಶೋ

ಬಂಟ್ವಾಳ: ಸಿದ್ದಕಟ್ಟೆ ಚರ್ಚ್ ಬಳಿಯಿಂದ ಪೇಟೆಯವರೆಗೆ ಬಂಟ್ವಾಳ ಬಿಜೆಪಿ ಅಭ್ಯರ್ಥಿ, ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿಗುತ್ತು ಅವರು ಬೃಹತ್ ರೋಡ್ ಶೋ ನಡೆಸಿ ಮತಯಾಚನೆಗೈದರು. ಸಹಸ್ರಾರು ಕಾರ್ಯಕರ್ತರೊಂದಿಗೆ ಸಿದ್ದಕಟ್ಟೆಯ ಹೆದ್ದಾರಿಯಲ್ಲಿನ ಪ್ರತಿ ಮಳಿಗೆಗಳು, ರಿಕ್ಷಾಚಾಲಕರು, ಸಾರ್ವಜನಿಕರನ್ನು ಭೇಟಿಯಾಗಿ ಮತಯಾಚಿಸಿದರು. ಬಳಿಕ ಸಿದ್ದಕಟ್ಟೆ ಜಂಕ್ಷನ್ ನಲ್ಲಿ ಸಾರ್ವಜನಿಕ ನಡೆದ ಸಭೆಯನ್ನು ದ್ದೇಶಿಸಿ ಕೇರಳ ರಾಜ್ಯ ಬಿಜೆಪಿ ಖಜಾಂಚಿ ಕೃಷ್ಣದಾಸ್ ಅವರು ಮಾತನಾಡಿ,

ಬಿಜೆಪಿ ಅಭ್ಯರ್ಥಿ ಸುನಿಲ್ ಕುಮಾರ್ : ಕಾರ್ಕಳದ ವಿವಿಧೆಡೆ ಮತಪ್ರಚಾರ

ಚುನಾವಣೆ ದಿನಾಂಕ ಸಮೀಪಿಸುತ್ತಿದ್ದಂತೆ ಚುನಾವಣಾ ಪ್ರಚಾರ ಕಾರ್ಯಗಳಲ್ಲಿ ಕಾವು ಏರತೊಡಗಿದೆ. ಒಂದು ಕಡೆಯಿಂದ ಬಿಸಿಲಿನ ತಾಪ. ಇನ್ನೊಂದು ಕಡೆಯಿಂದ ಚುನಾವಣಾ ಪ್ರಚಾರದ ಕಾವು ಈ ಮಧ್ಯದಲ್ಲಿ ಬಿಜೆಪಿ ಅಭ್ಯರ್ಥಿಯಾದ ವಿ. ಸುನಿಲ್ ಕುಮಾರ್ ಅವರು ಮುಡಾರು ಗ್ರಾಮದ ಬಜೆಗೂಳಿಯಲ್ಲಿ ಪಾದಯಾತ್ರೆ ಮೂಲಕ ಮನೆಗಳಿಗೆ ಹಾಗೂ ಅಂಗಡಿ ಹೋಟೆಲ್ ಗಳಿಗೆ ಮತ್ತು ಗೇರು ಬೀಜದ ಕಾರ್ಖಾನೆಗಳಲ್ಲಿ ದುಡಿಯುತ್ತಿರುವ ಕಾರ್ಮಿಕರ ಬಳಿ ತಮ್ಮ ಅವಧಿಯಲ್ಲಿ ಆದ ಯೋಜನೆಗಳನ್ನು ಮನದಟ್ಟು ಮಾಡಿ ಇನ್ನು

ಬೆಳ್ತಂಗಡಿ ಕ್ಷೇತ್ರದ ಶಾಸಕರು ಪ್ರಚಾರದ ಜೊತೆಗೆ ಹಣ ಹಂಚುತ್ತಿದ್ದಾರೆ : ಮಾಜಿ ಶಾಸಕ ವಸಂತ ಬಂಗೇರ ಅವರಿಂದ ಗಂಭೀರ ಆರೋಪ

ಬೆಳ್ತಂಗಡಿ ಕ್ಷೇತ್ರದ ಶಾಸಕರು ಬಿರುಸಿನ ಪ್ರಚಾರ ಕಾರ್ಯವನ್ನು ಮಾಡುತ್ತಿದ್ದಾರೆ. ಅದರ ಜೊತೆಗೆ ಹಣ ಹಂಚುವ ಕೆಲಸವನ್ನು ಮಾಡುತ್ತಿದ್ದಾರೆ ಎಂದು ಮಾಜಿ ಶಾಸಕ ವಸಂತ ಬಂಗೇರ ಅವರು ಆರೋಪಿಸಿದರು. ಅವರು ಬೆಳ್ತಂಗಡಿಯಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿ ಗಂಭೀರ ಆರೋಪ ಮಾಡಿದರು. ಅವರು ಪ್ರಚಾರ ಮಾಡುವ ಸಂದರ್ಭದಲ್ಲಿ ಬಿಜೆಪಿ ಅಭ್ಯರ್ಥಿಯ ಕಾರಿನ ಹಿಂದೆ 4 ಕಾರುಗಳು ಬೆಂಗಾವಲಾಗಿ ಹೋಗುತ್ತಿದ್ದು ಅದರಲ್ಲಿ ಒಂದು ಕಾರಿನಲ್ಲಿ ಹಣ ಸಾಗಾಟ ಮಾಡುತ್ತಿದ್ದು ಇದನ್ನು ನಾನು

ಮಂಗಳೂರು ಕ್ಷೇತ್ರದಲ್ಲಿ ಅಭಿವೃದ್ಧಿ ಶೂನ್ಯ, ಯು.ಟಿ ಖಾದರ್ ವೈಫಲ್ಯ: ಕುಂಟಾರು ರವೀಶ ತಂತ್ರಿ

ಮಂಗಳೂರು: ಕಳೆದ ಹಲವು ವರ್ಷಗಳಿಂದ ಮಂಗಳೂರು ಕ್ಷೇತ್ರದಿಂದ ಸತತವಾಗಿ ಶಾಸಕರಾಗಿ ಆಯ್ಕೆಯಾದರೂ ಮೂಲಸೌಕರ್ಯವನ್ನು ಒದಗಿಸುವಲ್ಲಿ ಯು.ಟಿ.‌ಖಾದರ್ ಸಂಪೂರ್ಣ ವಿಫಲರಾಗಿದ್ದಾರೆ ಎಂದು ಮಂಗಳೂರು ವಿಧಾನಸಭಾ ಕ್ಷೇತ್ರದ ಕೇರಳ ಭಾಗದ ಉಸ್ತುವಾರಿ ಕುಂಟಾರು ರವೀಶ್ ತಂತ್ರಿ ಹೇಳಿದರು‌. ಮಂಗಳೂರಿನಲ್ಲಿ ಸುದ್ದಿ ಗೋಷ್ಠಿಯಲ್ಲಿ ಮಾತನಾಡಿದ ಅವರು ಹಾಲಿ ಶಾಸಕರು ಉಳ್ಳಾಲದಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಗಳನ್ನು ಮಾಡಿಲ್ಲ ಎಂದರು. ಒಳಚರಂಡಿ ವ್ಯವಸ್ಥೆ ಅಸಮರ್ಪಕ: ಸಾಕಷ್ಟು