ಕರ್ನಾಟಕ ಪ್ರದೇಶ ಜನತಾದಳ ಜಾತ್ಯಾತೀತ ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಚುನಾವಣಾ ಕಚೇರಿಯನ್ನು ವಿಘ್ನೇಶ್ ಸಿಟಿ ಕಾಂಪ್ಲೆಕ್ಸ್ ನಲ್ಲಿ ಉದ್ಘಾಟಿಸಲಾಯಿತು. ಮುಖ್ಯ ಗುರುಗಳಾದ ಸಯ್ಯದ್ ಸಲೀಮ್ ತಂಗಳ್ ಸಬರಬೈಲು ಕಚೇರಿ ಉದ್ಘಾಟಿಸಿದರು. ಜಿಲ್ಲಾ ಜೆಡಿಎಸ್ ಅಧ್ಯಕ್ಷರಾದ ಜಾಕೆ ಮಾಧವ ಗೌಡ ಮಾತನಾಡಿ, ಬೆಳ್ತಂಗಡಿಯಲ್ಲಿ ಜಾತ್ಯಾತೀತ ಜನತಾದಳ ಶಕ್ತಿಯಿದೆ. ಇಂದು ತ್ರಿಕೋನ
ಪುತ್ತೂರು: ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲರಿಂದ ಹಿಂದುತ್ವದ ರಕ್ಷಣೆ ಜೊತೆಗೆ ಭ್ರಷ್ಟಾಚಾರ ರಹಿತ, ಜನಸ್ನೇಹಿ ಅಡಳಿತ ನೀಡುವ ಭರವಸೆಯ ಜೊತೆಗೆ 31 ವಿಷಯಾಧಾರಿತ ಪ್ರಣಾಳಿಕೆ ಬಿಡುಗಡೆಗೊಳಿಸಲಾಯಿತು. ಪುತ್ತೂರು ದರ್ಬೆ ಸುಭದ್ರ ಕಲ್ಯಾಣ ಮಂಟಪದ ಬಳಿ ಪ್ರಣಾಳಿಕೆ ಬಿಡುಗಡೆಗೊಳಿಸಲಾಯಿತು. ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ, ಸುನಿಲ್ ಬೋರ್ಕರ್, ಭಾಸ್ಕರ್ ಆಚಾರ್ಯ ಇಂದಾರು, ಡಾ.ಗಣೇಶ್ ಪ್ರಸಾದ್ ಮುದ್ರಾಜೆ, ಪ್ರಸನ್ನ ಕುಮಾರ್ ಮಾರ್ತಾ, ಸ್ನೇಹ ಸಿಲ್ಕ್ ನ
ದೇಶದ ಪ್ರಧಾನಿ ನರೇಂದ್ ಮೋದಿ ಮಹಿಳೆಯರಿಗೆ ಎಲ್ಲಾ ಕ್ಷೇತ್ರಗಳಲ್ಲಿ ಪ್ರಾತಿನಿದ್ಯ ನೀಡುವ ಮುಖಾಂತರ ಮಹಿಳಾ ಸಬಲೀಕರಣಕ್ಕೆ ಹೆಚ್ಚಿನ ಆದ್ಯತೆ ನೀಡಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ರಾಜ್ಯ ಸಚಿವೆ ಡಾ. ಭಾರತಿ ಪ್ರವೀಣ್ ಪವಾರ್ ಹೇಳಿದರು. ಪುತ್ತೂರಿನ ಜೈನಭವನದಲ್ಲಿ ನಡೆದ ಬಿಜೆಪಿ ಮಹಿಳಾ ಸಮಾವೇಶವನ್ನು ಉದ್ಧೇಶಿಸಿ ಅವರು ಮಾತನಾಡಿದರು. ಕೇಂದ್ರದ ಮೋದಿ ಸರಕಾರ ಮಹಿಳೆಯರಿಗಾಗಿ ಹಲವು ಯೋಜನೆಗಳನ್ನು ಜಾರಿಗೆ ತಂದಿದ್ದು, ಆ ಮೂಲಕ ಮಹಿಳೆಯರ
ಸೋಮೇಶ್ವರ ಸಮುದ್ರ ತೀರದ ರುದ್ರಪಾದೆಯಲ್ಲಿ ಉಳ್ಳಾಲದ ಧರ್ಮನಗರ ನಿವಾಸಿ ಕಾರು ಡೀಲರ್ ಆಗಿರುವ ವ್ಯಕ್ತಿ ಯ ಚಪ್ಪಲಿ, ಮೊಬೈಲ್ ಮತ್ತು ಕಾರು ಪತ್ತೆಯಾಗಿದೆ. ಜಿನ್ನಪ್ಪ ಪೂಜಾರಿ ಎಂಬವರ ಪುತ್ರ ವಸಂತ್ ಅಮೀನ್ (49) ನಾಪತ್ತೆಯಾದವರು. ಮೂಲತ: ಉಳ್ಳಾಲದ ಬಸ್ತಿಪಡ್ಪು ನಿವಾಸಿ ಆಗಿರುವ ಇವರು ಉಳ್ಳಾಲದ ಧರ್ಮನಗರದಲ್ಲಿ ಕೆಲ ತಿಂಗಳುಗಳ ಹಿಂದಷ್ಟೇ ಸುಸಜ್ಜಿತವಾದ ಮನೆಯನ್ನು ಕಟ್ಟಿದ್ದರು. ವಿವಾಹಿತರಾಗಿರುವ ವಸಂತ್ ಅವರಿಗೆ ಎಳೆಯ ಹರೆಯದ ಹೆಣ್ಣು ಮಗುವಿದ್ದಾಳೆ. ಇಂದು
ಬೈಂದೂರು ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬಿಜೆಪಿ ಅಭ್ಯರ್ಥಿ ಗುರುರಾಜ್ ಗಂಟಿಹೊಳೆ ಅವರು ಕಂಡ್ಲೂರಿನ ಸುತ್ತಮುತ್ತಲಿನಲ್ಲಿ ಪ್ರದೇಶಗಳಿಗೆ ಭೇಟಿ ನೀಡಿ ಮತಯಾಚನೆ ಮಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಗುರುರಾಜ್ ಗಂಟಿಹೊಳೆಯವರು ಈ ಬಾರಿ ಬೈಂದೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿಗಳನ್ನಾಗಿ ಪಕ್ಷದವರು ಟಿಕೆಟ್ ನೀಡಿದ್ದಾರೆ. ಈ ಬಾರಿ ಬಿಜೆಪಿ ಪಕ್ಷವನ್ನು ಬೆಂಬಲಿಸಿಬೇಕೆಂದು ಹೇಳಿದರು.
ಮೂಲ್ಕಿ: “ಕಳೆದ 5 ವರ್ಷಗಳ ಹಿಂದೆ ನಾನು ಮೊದಲ ಬಾರಿಗೆ ಮೂಲ್ಕಿ ಮೂಡಬಿದ್ರೆ ಕ್ಷೇತ್ರದ ಶಾಸಕನಾಗಿ ಆಯ್ಕೆಯಾದೆ. ಇದಕ್ಕೆ ನಮ್ಮ ಪಕ್ಷದ ನಿಷ್ಠಾವಂತ ಕಾರ್ಯಕರ್ತರ ಶ್ರಮವೇ ಕಾರಣ. ವಿವಿಧ ಇಲಾಖೆಗಳಿಂದ ಅನುದಾನ ತಂದು ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಯಲ್ಲಿ ಶ್ರಮಿಸಿದ್ದೇನೆ. ಹೀಗಾಗಿ ಮತ ಯಾಚನೆಗೆ ಮನೆ ಮನೆಗೆ ಹೋದಾಗ ಬಹಳ ಒಳ್ಳೆಯ ಸ್ಪಂದನೆ ಜನರಿಂದ ಸಿಗುತ್ತಿದೆ. ಮೇ 3ರಂದು ದೇಶದ ಪ್ರಧಾನಿ ನರೇಂದ್ರ ಮೋದಿಯವರು ಮೂಲ್ಕಿಗೆ ಬರಲಿದ್ದಾರೆ. ಇಲ್ಲಿಯವರೆಗೆ
ದೇಶದಲ್ಲಿ ಸಂವಿಧಾನ ಮತ್ತು ಪ್ರಜಾಪ್ರಭುತ್ವ ಅಪಾಯದಲ್ಲಿದೆ, ಅದನ್ನು ಉಳಿಸಲು ಹೋರಾಟ ಮಾಡಬೇಕಿದೆ : ಮಲ್ಲಿಕಾರ್ಜುನ ಖರ್ಗೆ
ದೇಶದಲ್ಲಿ ಸಂವಿಧಾನ ಮತ್ತು ಪ್ರಜಾಪ್ರಭುತ್ವ ಅಪಾಯದಲ್ಲಿ ಸಿಲುಕಿದೆ. ಇದನ್ನು ಉಳಿಸಲು ಎಲ್ಲರೂ ಹೋರಾಟ ಮಾಡಬೇಕಾಗಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅಭಿಪ್ರಾಯಪಟ್ಟಿದ್ದಾರೆ. ಟಿಎಂಎ ಪೈ ಹಾಲ್‍ನಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಭೆಯನ್ನುದ್ದೇಶಿಸಿ ಮಾತನಾಡಿದರು.ಈಗ ಕೇಂದ್ರದಲ್ಲಿರುವ ಬಿಜೆಪಿ ಸರಕಾರ ಸಂವಿಧಾನ, ಪ್ರಜಾಪ್ರಭುತ್ವದ ಪ್ರಕಾರ ನಡೆದುಕೊಳ್ಳುತ್ತಿಲ್ಲ. ಒಬ್ಬರಿಗೆ ಒಂದು ಕಾನೂನು, ಇನ್ನೊಬ್ಬರಿಗೆ ಇನ್ನೊಂದು ಕಾನೂನು
ಕಾಪು ವಿಧಾನ ಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗುರ್ಮೆ ಸುರೇಶ್ ಶೆಟ್ಟಿ ಶಾಸಕರಾದ ಲಾಲಾಜಿ ಆರ್ ಮೆಂಡನ್ ಅವರು ಕಟಪಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಮತಯಾಚನೆ ಮಾಡಿದರು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಸದಸ್ಯರು ಹಾಗೂ ಪಕ್ಷದ ಪ್ರಮುಖರು ಜೊತೆಗಿದ್ದರು.
ಪುತ್ತೂರು: ನಾನು ಬಿಜೆಪಿ, ಸಂಘ ಪರಿವಾರ ಮತ್ತು ಅದರ ಸಿದ್ಧಾಂತಕ್ಕಾಗಿ ವರ್ಷಾನುಗಟ್ಟಲೆ ಕೆಲಸ ಮಾಡಿದ್ದೇನೆ. ಅದೇ ಸಂಘದ ಶಾಖೆಯಲ್ಲಿ ಕೆಲಸ ಮಾಡಿದವರು ಇವತ್ತು ನನ್ನ ವಿರುದ್ಧ ತೀರಾ ಕೇವಲವಾದ ಆರೋಪಗಳನ್ನು ಮಾಡುತ್ತಿದ್ದಾರೆ. ಸಂಘದ ಸಂಸ್ಕಾರದಲ್ಲಿ ಬೆಳೆದವರ ಬಾಯಿಂದ ಇಂಥ ಮಾತುಗಳೇ ಎಂದು ನನಗೆ ಆಶ್ಚರ್ಯವಾಗುತ್ತಿದೆ. ಈ ಎಲ್ಲ ಆರೋಪಗಳಿಗೆ ನಾನೇನು ಉತ್ತರ ಹೇಳುವುದಿಲ್ಲ. ಆರೋಪ ಮಾಡುವವರು ನೇರವಾಗಿ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಳಕ್ಕೆ ಬರಲಿ. ಅಲ್ಲಿ ಆಣೆ
ಬಂಟ್ವಾಳ: ರಾಜೇಶ್ ನಾಯ್ಕ ಅವರು ಬಂಟ್ವಾಳ ಶಾಸಕರಾದ ಮೇಲೆ ಗಲಭೆಗಳಾಗಿಲ್ಲ. ಅದಕ್ಕೆ ಸಂಬಂಧಿಸಿ ಸೆಕ್ಷನ್, ಕರ್ಪೂ, ನಿಷೇಧಾಜ್ಞೆಗಳನ್ನು ವಿಧಿಸಲಾಗಿಲ್ಲ. ಎಲ್ಲೂ ಕಾನೂನು ಸುವ್ಯವಸ್ಥೆ ಹದಗೆಟ್ಟಿಲ್ಲ. ಅವರು ಶಾಸಕರಾದ ಮೇಲೆ ಶಾಂತಿ, ಸುವ್ಯವಸ್ಥೆ ನೆಲೆಸಿದ್ದು, ದೊಡ್ಡ ಪ್ರಮಾಣದಲ್ಲಿ ಅಭಿವೃದ್ಧಿ ಕಾರ್ಯಗಳೂ ಆಗಿವೆ. ಹೀಗಾಗಿ ಮುಂಬರುವ ಚುನಾವಣೆಯಲ್ಲೂ ಅವರೇ ಶಾಸಕರಾಗಿ ಆಯ್ಕೆಯಾಗಬೇಕು ಎಂದು ಕೇರಳ ರಾಜ್ಯ ಬಿಜೆಪಿ ಖಜಾಂಚಿ ಕೃಷ್ಣದಾಸ್ ಹೇಳಿದರು. ಬಂಟ್ವಾಳದ ಬಿಜೆಪಿ




























